ರಾಮಾಪುರ ಠಾಣೆ ಮೇಲೆ ದಾಳಿ ಪ್ರಕರಣ: ವೀರಪ್ಪನ್ ಗ್ಯಾಂಗ್ ಸದಸ್ಯೆಯಾಗಿದ್ದ ಸ್ಟೆಲ್ಲಾ ಮೇರಿಗೆ ಕ್ಲೀನ್​ಚಿಟ್

| Updated By: Rakesh Nayak Manchi

Updated on: Mar 05, 2024 | 5:08 PM

ರಾಮಾಪುರ ಪೊಲೀಸ್ ಠಾಣೆ ಮೇಲೆ ದಾಳಿ ಆರೋಪಿಯಾಗಿದ್ದ ಸ್ಟೆಲ್ಲಾ ಮೇರಿಗೆ ಚಾಮರಾಜನಗರ ಬಾಲ ನ್ಯಾಯ ಮಂಡಳಿ ಕ್ಲೀನ್​ಚಿಟ್ ನೀಡಿದೆ. 2020ರ ಫೆಬ್ರವರಿಯಲ್ಲಿ ಸ್ಟೆಲ್ಲಾ ಮೇರಿಯನ್ನು ಟಾಡಾ, ಶಸ್ತ್ರಾಸ್ತ್ರ ಕಾಯ್ದೆ, ಸ್ಫೋಟಕ ಕಾಯ್ದೆ ಸೇರಿದಂತೆ ವಿವಿಧ ಕಾಯ್ದೆಯಡಿ ಬಂಧಿಸಲಾಗಿತ್ತು. ಮಾನವ ಹಕ್ಕುಗಳ ಸಂಘಟನೆಗಳು ಸ್ಟೆಲ್ಲಾ ಮೇರಿ ಬಂಧನ ಪ್ರಶ್ನಿಸಿದ್ದವು.

ರಾಮಾಪುರ ಠಾಣೆ ಮೇಲೆ ದಾಳಿ ಪ್ರಕರಣ: ವೀರಪ್ಪನ್ ಗ್ಯಾಂಗ್ ಸದಸ್ಯೆಯಾಗಿದ್ದ ಸ್ಟೆಲ್ಲಾ ಮೇರಿಗೆ ಕ್ಲೀನ್​ಚಿಟ್
ರಾಮಾಪುರ ಠಾಣೆ ಮೇಲೆ ದಾಳಿ ಪ್ರಕರಣ: ವೀರಪ್ಪನ್ ಗ್ಯಾಂಗ್ ಸದಸ್ಯೆಯಾಗಿದ್ದ ಸ್ಟೆಲ್ಲಾ ಮೇರಿಗೆ ಕ್ಲೀನ್​ಚಿಟ್
Follow us on

ಚಾಮರಾಜನಗರ, ಮಾ.5: ರಾಮಾಪುರ ಪೊಲೀಸ್ ಠಾಣೆ ಮೇಲೆ ದಾಳಿ ಆರೋಪಿಯಾಗಿದ್ದ ಸ್ಟೆಲ್ಲಾ ಮೇರಿಗೆ ಚಾಮರಾಜನಗರ (Chamarajanagar) ಬಾಲ ನ್ಯಾಯ ಮಂಡಳಿ ಕ್ಲೀನ್​ಚಿಟ್ ನೀಡಿದೆ. ಪಾಲಾರ್ ಬಾಂಬ್ ಸ್ಫೋಟದ ಆರೋಪಿಯೂ ಆಗಿದ್ದ ಸ್ಟೆಲ್ಲಾ ಮೇರಿಯನ್ನು ಎಲ್ಲಾ ಆರೋಪಗಳಿಂದ ಮುಕ್ತಗೊಳಿಸಿ ಬಾಲ ನ್ಯಾಯಮಂಡಳಿ ಆದೇಶ ಹೊರಡಿಸಿದೆ.

ಠಾಣೆ ಮೇಲಿನ ದಾಳಿ ಪ್ರಕರಣ ಸಂಬಂಧ 2020ರ ಫೆಬ್ರವರಿಯಲ್ಲಿ ಸ್ಟೆಲ್ಲಾ ಮೇರಿಯನ್ನು ಬಂಧಿಸಲಾಗಿತ್ತು. ಟಾಡಾ, ಶಸ್ತ್ರಾಸ್ತ್ರ ಕಾಯ್ದೆ, ಸ್ಫೋಟಕ ಕಾಯ್ದೆ ಸೇರಿದಂತೆ ವಿವಿಧ ಆರೋಪಗಳಡಿ ಸ್ಟೆಲ್ಲಾ ಮೇರಿಯನ್ನು ಪೊಲೀಸರು ಬಂಧಿಸಿದ್ದರು. ಮೇರಿ ಬಂಧನವನ್ನು ಮಾನವ ಹಕ್ಕುಗಳ ಸಂಘಟನೆಗಳು ಪ್ರಶ್ನಿಸಿದ್ದವು.

ಈ ಪ್ರಕರಣವನ್ನು ಚಾಮರಾಜನಗರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಬಾಲ ನ್ಯಾಯಮಂಡಳಿಗೆ ವಹಿಸಿತ್ತು. ಪಾಲಾರ್ ಬಾಂಬ್ ಸ್ಫೋಟ ಮತ್ತು ರಾಮಾಪುರ ಪೊಲೀಸ್ ಠಾಣೆ ಮೇಲೆ ದಾಳಿ ನಡೆದಾಗ ಸ್ಟೆಲ್ಲಾ ಮೇರಿ ಅಪ್ರಾಪ್ತೆಯಾಗಿದ್ದಳು ಎಂದು ಮಾನವ ಹಕ್ಕುಗಳ ಸಂಘಟನೆ ವಾದ ಮಾಡಿತ್ತು.

ಇದನ್ನೂ ಓದಿ: ಅಕ್ರಮ ಹಣ ವರ್ಗಾವಣೆ ಪ್ರಕರಣ: ಡಿಸಿಎಂ ಡಿಕೆ ಶಿವಕುಮಾರ್​​ಗೆ ಸುಪ್ರೀಂ ಕೋರ್ಟ್​ನಲ್ಲಿ ಬಿಗ್ ರಿಲೀಫ್

ಸ್ಟೆಲ್ಲಾ ಮೇರಿಯನ್ನು ವೀರಪ್ಪನ್ ಸಹಚರ ಸುಂಡವಲಿಯಾರ್ ಅಪಹರಿಸಿ ಮದುವೆಯಾಗಿದ್ದ. ಈತ ಪೊಲೀಸ್ ಎನ್​ಕೌಂಟರ್‌ನಲ್ಲಿ ಬಲಿಯಾಗಿದ್ದ ಎಂದು ವಾದಿಸಲಾಗಿದೆ. ಸ್ಟೆಲ್ಲಾಮೇರಿಯನ್ನು ವೀರಪ್ಪನ್ ಸಹಚರ ಸುಂಡವಲಿಯಾರ್ (ಪೊಲೀಸ್ ಎನ್​‌ಕೌಂಟರ್‌ನಲ್ಲಿ ಬಲಿಯಾಗಿದ್ದಾನೆ) ಎಂಬಾತ ಅಪಹರಿಸಿ ಮದುವೆಯಾಗಿದ್ದ ಎಂದು ವಾದಿಸಲಾಗಿದೆ. ವಾದ ಪುರಸ್ಕರಿಸಿದ ಬಾಲ ನ್ಯಾಯ ಮಂಡಳಿ, ಸ್ಟೆಲ್ಲಾ ಮೇರಿಯನ್ನು ಎಲ್ಲಾ ಆರೋಪಗಳಿಂದ ಮುಕ್ತಗೊಳಿಸಿ ಆದೇಶಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ