ರಸ್ತೆ ಮೇಲೆಯೇ ರಾಗಿ ಕಣ: ಜಾರಿಬಿದ್ದು ಸಾವನ್ನಪ್ಪಿದ ಬೈಕ್ ಸವಾರ, ಇನ್ನಾದ್ರು ಎಚ್ಚೆತ್ಕೊಳ್ಳಿ!

ಚಾಮರಾಜನಗರ: ರಸ್ತೆಯ ಮೇಲೆ ಹಾಕಿದ್ದ ರಾಗಿ ಹುಲ್ಲಿನಿಂದಾಗಿ ನಿಯಂತ್ರಣ ತಪ್ಪಿ ಬೈಕ್ ಸವಾರ ಮೃತಪಟ್ಟಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಕರಕಲಮಾದಹಳ್ಳಿ ಬಳಿ ನಡೆದಿದೆ. ಅನಿಲ್ ಕುಮಾರ್ (45) ಮೃತ ಬೈಕ್ ಸವಾರ. ಒಕ್ಕಣೆಗೆ ರಸ್ತೆ ಮೇಲೆ ಹಾಕಿದ್ದ ರಾಗಿ ಹುಲ್ಲಿನ ಮೇಲೆ ಚಲಿಸುವಾಗ ನಿಯಂತ್ರಣ ತಪ್ಪಿ ಟೆಂಪೋಗೆ ಬೈಕ್ ಡಿಕ್ಕಿಹೊಡೆದಿದೆ. ಅಪಘಾತದಲ್ಲಿ ಬೈಕ್ ಸವಾರ ಅನಿಲ್ ಕುಮಾರ್ ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಸ್ಥಳೀಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಓಮ್ನಿ ಸುಟ್ಟು ಹೋಗಿತ್ತು.. ಯಾಕೆ ಗೊತ್ತಾ!? […]

ರಸ್ತೆ ಮೇಲೆಯೇ ರಾಗಿ ಕಣ: ಜಾರಿಬಿದ್ದು ಸಾವನ್ನಪ್ಪಿದ ಬೈಕ್ ಸವಾರ, ಇನ್ನಾದ್ರು ಎಚ್ಚೆತ್ಕೊಳ್ಳಿ!
Follow us
ಸಾಧು ಶ್ರೀನಾಥ್​
|

Updated on:Jan 15, 2020 | 11:26 AM

ಚಾಮರಾಜನಗರ: ರಸ್ತೆಯ ಮೇಲೆ ಹಾಕಿದ್ದ ರಾಗಿ ಹುಲ್ಲಿನಿಂದಾಗಿ ನಿಯಂತ್ರಣ ತಪ್ಪಿ ಬೈಕ್ ಸವಾರ ಮೃತಪಟ್ಟಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಕರಕಲಮಾದಹಳ್ಳಿ ಬಳಿ ನಡೆದಿದೆ. ಅನಿಲ್ ಕುಮಾರ್ (45) ಮೃತ ಬೈಕ್ ಸವಾರ.

ಒಕ್ಕಣೆಗೆ ರಸ್ತೆ ಮೇಲೆ ಹಾಕಿದ್ದ ರಾಗಿ ಹುಲ್ಲಿನ ಮೇಲೆ ಚಲಿಸುವಾಗ ನಿಯಂತ್ರಣ ತಪ್ಪಿ ಟೆಂಪೋಗೆ ಬೈಕ್ ಡಿಕ್ಕಿಹೊಡೆದಿದೆ. ಅಪಘಾತದಲ್ಲಿ ಬೈಕ್ ಸವಾರ ಅನಿಲ್ ಕುಮಾರ್ ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಸ್ಥಳೀಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಓಮ್ನಿ ಸುಟ್ಟು ಹೋಗಿತ್ತು.. ಯಾಕೆ ಗೊತ್ತಾ!? ಎರಡು ದಿನಗಳ ಹಿಂದೆಯಷ್ಟೇ ಮಾರುತಿ ಓಮ್ನಿ ಕಾರು ಹೊತ್ತಿ ಉರಿದಿತ್ತು. ಗುಂಡ್ಲುಪೇಟೆ ತಾಲೂಕಿನ ಭೀಮನಬೀಡು ಗ್ರಾಮದ ಬಳಿ ರಸ್ತೆಯ ಮೇಲೆ ಹಾಕಿದ್ದ ಹುರುಳಿ ಸಿಪ್ಪೆಯಿಂದ ಕಾರಿನ ಎಂಜಿನ್​ ಹೀಟ್​ ಆಗಿ ಓಮ್ನಿ ಸುಟ್ಟು ಹೋಗಿತ್ತು. ರಸ್ತೆಯ ಮೇಲೆಯೇ ಹೀಗೆ ಕಣ ಹಾಕುವುದರಿಂದ ಇಂತಹ ಘಟನೆಗಳು ಮರುಕಳಿಸುತ್ತಿವೆ. ಹೀಗಾಗಿ ಇನ್ನಾದ್ರು ನಮ್ಮ ರೈತಾಪಿ ಜನ ಎಚ್ಚೆತ್ತುಕೊಳ್ಳಬೇಕಾಗಿದೆ.

Published On - 12:10 pm, Tue, 31 December 19

ಆಟವೆಲ್ಲ ರಂಪಾಟವಾದಾಗ; ಹದ್ದುಮೀರಿ ನಡೆದುಕೊಂಡ ಸ್ಪರ್ಧಿಗಳು
ಆಟವೆಲ್ಲ ರಂಪಾಟವಾದಾಗ; ಹದ್ದುಮೀರಿ ನಡೆದುಕೊಂಡ ಸ್ಪರ್ಧಿಗಳು
ಕೈ ತುತ್ತಿನ ಹಿಂದಿರುವ ಮಹತ್ವದ ಬಗ್ಗೆ ನಿಮಗೆ ಗೊತ್ತಾ?
ಕೈ ತುತ್ತಿನ ಹಿಂದಿರುವ ಮಹತ್ವದ ಬಗ್ಗೆ ನಿಮಗೆ ಗೊತ್ತಾ?
ವಿಷ್ಣು, ಗಣೇಶನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ
ವಿಷ್ಣು, ಗಣೇಶನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ
2025ರ ಸರ್ಕಾರಿ ಕ್ಯಾಲೆಂಡರ್ ಹೇಗಿರುತ್ತದೆ? ಇಲ್ಲಿದೆ ನೋಡಿ ವಿಡಿಯೋ
2025ರ ಸರ್ಕಾರಿ ಕ್ಯಾಲೆಂಡರ್ ಹೇಗಿರುತ್ತದೆ? ಇಲ್ಲಿದೆ ನೋಡಿ ವಿಡಿಯೋ
ಹಿಮದಿಂದ ತುಂಬಿದ ಕಣಿವೆಯಲ್ಲಿ ಚಿರತೆಗಳ ಕುಣಿದಾಟ
ಹಿಮದಿಂದ ತುಂಬಿದ ಕಣಿವೆಯಲ್ಲಿ ಚಿರತೆಗಳ ಕುಣಿದಾಟ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ