AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Save Bandipur: ಬಂಡೀಪುರದಲ್ಲಿ ರಾತ್ರಿ ವಾಹನ ಸಂಚಾರ ನಿಷೇಧ ತೆರವು ವಿರೋಧಿಸಿ ಸಾವಿರಾರು ಜನರಿಂದ ಪಾದಯಾತ್ರೆ

ಸೇವ್ ಬಂಡೀಪುರ: ಬಂಡೀಪುರದಲ್ಲಿ ರಾತ್ರಿ ವಾಹನ ಸಂಚಾರ ನಿಷೇಧ ತೆರವುಗೊಳಿಸುವ ಪ್ರಯತ್ನಕ್ಕೆ ತೀವ್ರ ವಿರೋಧ ವ್ಯಕ್ತವಾಗಿದೆ. ಬಂಡೀಪುರ ಉಳಿಸಿ ಅಭಿಯಾನಕ್ಕೆ ಭಾರಿ ಬೆಂಬಲ ವ್ಯಕ್ತವಾಗಿದ್ದು, ಭಾನುವಾರ ನಡೆದ ‘‘ನಮ್ಮ ನಡಿಗೆ ಬಂಡೀಪುರದ ಕಡೆಗೆ’’ ಪಾದಯಾತ್ರೆಗೆ ಅಪಾರ ಪ್ರಮಾಣದಲ್ಲಿ ಜನ ಸೇರಿದ್ದರು. ಸಾವಿರಾರು ಜನರಿಂದ 5 ಕಿಲೋ ಮೀಟರ್ ಪಾದಯಾತ್ರೆ ನೆರವೇರಿತು.

Save Bandipur: ಬಂಡೀಪುರದಲ್ಲಿ ರಾತ್ರಿ ವಾಹನ ಸಂಚಾರ ನಿಷೇಧ ತೆರವು ವಿರೋಧಿಸಿ ಸಾವಿರಾರು ಜನರಿಂದ ಪಾದಯಾತ್ರೆ
ಬಂಡೀಪುರದಲ್ಲಿ ರಾತ್ರಿ ವಾಹನ ಸಂಚಾರ ನಿಷೇಧ ತೆರವು ವಿರೋಧಿಸಿ ಅಭಿಯಾನ ತೀವ್ರ
ಸೂರಜ್ ಪ್ರಸಾದ್ ಎಸ್.ಎನ್
| Updated By: Ganapathi Sharma|

Updated on:Apr 07, 2025 | 1:52 PM

Share

ಚಾಮರಾಜನಗರ, ಏಪ್ರಿಲ್ 7: ಬಂಡೀಪುರ ಅಭಯಾರಣ್ಯದ (Bandipur National Park) ಮೂಲಕ ತಮಿಳುನಾಡು (Tamil Nadu) ಹಾಗೂ ಕೇರಳ ರಾಜ್ಯಗಳಿಗೆ ಎರಡು ರಾಷ್ಟ್ರೀಯ ಹೆದ್ದಾರಿಗಳು (National Highway) ಹಾದು ಹೋಗಿವೆ. ಇಲ್ಲಿ ವಾಹನಗಳಿಗೆ ಸಿಲುಕಿ ವನ್ಯಜೀವಿಗಳು ಸಾವನ್ನಪ್ಪುತ್ತಿದ್ದ ಕಾರಣ ‌2009 ರಲ್ಲಿ ರಾತ್ರಿ ವಾಹನ ಸಂಚಾರ ನಿಷೇಧಿಸಿ ಆದೇಶಿಸಲಾಗಿತ್ತು. ಕೆಲವು ಮಾಫಿಯಾಗಳಿಗೆ ಇದರಿಂದ ಭಾರಿ ಹೊಡೆತ ಬಿದ್ದಿದೆ. ಕೇರಳ ಸರ್ಕಾರವಂತೂ ಇಲ್ಲಿ ವಾಹನ ಸಂಚಾರ ನಿಷೇಧ ತೆರವುಗೊಳಿಸಲು ರಾಜ್ಯ ಸರ್ಕಾರದ ಮೇಲೆ ನಿರಂತರ ಒತ್ತಡ ಹೇರುತ್ತಲೇ ಬಂದಿದೆ. ಇದೀಗ ವಯನಾಡು ಸಂಸದೆ ಪ್ರಿಯಾಂಕಾ ವಾದ್ರಾ ರಾತ್ರಿ ವಾಹನ ಸಂಚಾರ ನಿಷೇಧ ತೆರವಿಗೆ ರಾಜ್ಯ ಕಾಂಗ್ರೆಸ್ ಸರ್ಕಾರದ ಮೇಲೆ ಒತ್ತಡ ಹೇರುತ್ತಿದ್ದಾರೆಂಬ ಮಾತುಗಳು ಕೇಳಿಬರುತ್ತಿವೆ. ಇದರ ಜೊತೆಗೆ ವಯನಾಡ್‌ನಲ್ಲಿ ನಡೆದ ಕಾಂಗ್ರೆಸ್ ಕೃತಜ್ಞತಾ ಸಮಾವೇಶವೊಂದರಲ್ಲಿ ಪಾಲ್ಗೊಂಡಿದ್ದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಹ ಸಹ ರಾತ್ರಯ ಸಂಚಾರ ನಿಷೇಧ ತೆರವು ಮಾಡುವ ಬಗ್ಗೆ ಭರವಸೆ ನೀಡಿದ್ದರು. ಇತ್ತೀಚಿಗೆ ಅರಣ್ಯ ಸಚಿವ ಈಶ್ವರಖಂಡ್ರೆ ಅರಣ್ಯ ಇಲಾಖೆಯ ಹಿರಿಯ ಅಧಿಕಾರೊಗಳೊಡನೆ ಸಭೆಯನ್ನೂ ನಡೆಸಿದ್ದರು. ಈ ಎಲ್ಲ ಬೆಳವಣಿಗೆಗಳನ್ನು ಗಮನಿಸಿದರೆ ರಾಜಕೀಯ ಹಿತಾಸಕ್ತಿಗೋಸ್ಕರ ನಿಷೇಧ ತೆರವುಗೊಳಿಸುವ ಆತಂಕ ಎದುರಾಗಿರುವುದರಿಂದ ಜನ, ಪರಿಸರ ಪ್ರೇಮಿಗಳು ಬೀದಿಗಿಳಿದಿದ್ದಾರೆ. ಬಂಡೀಪುರ ಉಳಿಸಿ ಅಭಿಯಾನ ನಡೆಸುತ್ತಿದ್ದಾರೆ.

‘ನಮ್ಮ ನಡಿಗೆ ಬಂಡೀಪುರ ಕಡೆಗೆ’ ಎಂಬ ಘೋಷಣೆಯೊಂದಿಗೆ ಭಾನುವಾರ ಪಾದಯಾತ್ರೆ ನಡೆಯಿತು. ಗುಂಡ್ಲುಪೇಟೆ ತಾಲೂಕು ಕಗ್ಗಳದ ಹುಂಡಿಯಿಂದ ಮದ್ದೂರು ಚೆಕ್ ಪೋಸ್ಟ್ ವರೆಗೆ ನಡೆದ ಪಾದಯಾತ್ರೆಯಲ್ಲಿ ಪರಿಸರವಾದಿಗಳು, ವನ್ಯಜೀವಿ ಪ್ರೇಮಿಗಳು, ರೈತರು, ಐಟಿ ಬಿಟಿ ನೌಕರರು, ನಿವೃತ್ತ ಅರಣ್ಯಾಧಿಕಾರಿಗಳು ಹೀಗೆ ಎಲ್ಲ ವರ್ಗದ ನೂರಾರು ಮಂದಿ ಭಾಗವಹಿಸಿದ್ದರು. ಕೇರಳದ ಪರಿಸರವಾದಿಗಳು ಸಹ ಈ ಅಭಿಯಾನದಲ್ಲಿ ಪಾಲ್ಗೊಂಡು ತಮ್ಮ ಬೆಂಬಲ ವ್ಯಕ್ತಪಡಿಸಿದರು.

ರಾತ್ರಿ ಸಂಚಾರ ತೆರವು ಮಾಡಲ್ಲ: ಕಾಂಗ್ರೆಸ್ ಶಾಸಕ ಭರವಸೆ

ಪಾದಯಾತ್ರೆ ಬಳಿಕ ಮದ್ದೂರು ಚೆಕ್‌ಪೋಸ್ಟ್ ಬಳಿ ನಡೆದ ಸಮಾವೇಶದ ಸ್ಥಳಕ್ಕೆ ಗುಂಡ್ಲುಪೇಟೆ ಕಾಂಗ್ರೆಸ್ ಶಾಸಕ ಗಣೇಶ್ ಪ್ರಸಾದ್ ಭೇಟಿ ನೀಡಿದ್ದರು. ರಾತ್ರಿ ವಾಹನ ಸಂಚಾರ ನಿಷೇಧ ತೆರವು ಮಾಡುವ ಯಾವುದೇ ಪ್ರಸ್ತಾಪ ಸರ್ಕಾರದ ಮುಂದೆ ಇಲ್ಲ, ಯಾರೂ ಸಹ ಆತಂಕಪಡುವ ಅಗತ್ಯ ಇಲ್ಲ ಎಂಬ ಭರವಸೆಯ ‌ಮಾತುಗಳನ್ನಾಡಿದರು. ಕೇರಳದವರು ರಾತ್ರಿ ವೇಳೆ ಹೆಚ್ಚುವರಿ ಬಸ್ ಗಳ ಸಂಚಾರಕ್ಕೆ ಅವಕಾಶ ಕೇಳಿದ್ದಾರೆ ಅಷ್ಟೇ. ವಯನಾಡು ಸಂಸದೆ ಪ್ರಿಯಾಂಕಾ ಗಾಂಧಿ ಅವರಿಂದ ಯಾವುದೇ ಒತ್ತಡ ಇಲ್ಲ. ಅವರು ಯಾವುದೇ ಪತ್ರವನ್ನು ಬರೆದಿಲ್ಲ ಎಂದ ಅವರು, ಯಥಾಸ್ಥಿತಿ ಮುಂದುವರಿಯಲಿ ಎಂಬುದೇ ನನ್ನ ಅಭಿಪ್ರಾಯ ಎನ್ನುವ ಮೂಲಕ ರಾತ್ರಿ ವಾಹನ ಸಂಚಾರ ನಿಷೇಧ ಮುಂದುವರಿಕೆಗೆ ಸಹಮತ ವ್ಯಕ್ತಪಡಿಸಿದರು.

ಇದನ್ನೂ ಓದಿ
Image
ಸೆಕೆಂಡ್ ಪಿಯುಸಿ ಫಲಿತಾಂಶ ಇಂದು, ನೀವು ತಿಳಿಯಲೇಬೇಕಾದ ವಿಚಾರಗಳು ಇಲ್ಲಿವೆ
Image
ನಗ್ನ ವಿಡಿಯೋ ಕರೆ ಮಾಡುವಂತೆ ಒತ್ತಾಯ, ಅನ್ಯ ಕೋಮಿನ ಯುವಕನಿಗೆ ಬಿತ್ತು ಗೂಸಾ
Image
ಬೆಂಗಳೂರಿನಲ್ಲಿ ಚಿಕೂನ್ ಗುನ್ಯಾ, ಡೆಂಗ್ಯೂ ಹೆಚ್ಚಳ: ವಾರದಲ್ಲಿ 100 ಕೇಸ್
Image
ವಿಧಾನಸೌಧದ ಶಾಶ್ವತ ವರ್ಣರಂಜಿತ ದೀಪಾಲಂಕಾರ ನೋಡಿ

ವಿಡಿಯೋ ನೋಡಿ: ಚಾಮರಾಜನಗರ: ಹಳ್ಳದ ನೀರಿನಲ್ಲಿ ಗಜಪಡೆ ಜಲಕ್ರೀಡೆ, ವಿಡಿಯೋ ವೈರಲ್

ಸ್ವಯಂಪ್ರೇರಿತರಾಗಿ ನೂರಾರು ಜನರು ಪಾಲ್ಗೊಳ್ಳುವ ಮೂಲಕ ಬಂಡೀಪುರ ಉಳಿಸಿ ಅಭಿಯಾನ ಸಾರ್ವಜನಿಕ ಚಳವಳಿಯಾಗಿ ರೂಪುಗೊಂಡಿದೆ. ರಾತ್ರಿ ವಾಹನ ಸಂಚಾರ ನಿಷೇಧದ ತೆರವೊಗೊಳಿಸುವುದಿಲ್ಲ ಎಂಬ ಸ್ಪಷ್ಟ ಭರವಸೆ ನೀಡುವವರೆಗೂ ಹಂತ ಹಂತವಾಗಿ ಹೋರಾಟ ತೀವ್ರಗೊಳಿಸಲು ಪರಿಸರವಾದಿಗಳು ನಿರ್ಧರಿಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:17 am, Mon, 7 April 25

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!