ಚಾಮರಾಜನಗರ, ಸೆಪ್ಟೆಂಬರ್ 27: ಈಗ ಜೆಡಿಎಸ್ನವರು ಯಾರ ಜತೆ ಹೋಗಿದ್ದಾರೆ. ಜೆಡಿಎಸ್ ಅಂದರೆ ಜಾತ್ಯತೀತ ಅಂತಾರೆ, ಈಗ ಆ ಪರಿಸ್ಥಿತಿ ಇದೆಯಾ? ಮೊದಲು ಜಾತ್ಯತೀತ ಪದವನ್ನು ಜೆಡಿಎಸ್ ತೆಗೆದುಹಾಕಬೇಕು. ಜಾತ್ಯತೀತ ಅಂದರೆ ಅದರ ಅರ್ಥವೇನು ಅಂತ ಜೆಡಿಎಸ್ ಹೇಳಲಿ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಕಿಡಿಕಾರಿದ್ದಾರೆ. ಜಿಲ್ಲೆಯ ಹನೂರು ತಾಲೂಕಿನ ಕೋಣನಕೆರೆ ಗ್ರಾಮದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿಯ ಬಿ ಟೀಮ್ ಆಗಿದ್ದರೆ 5 ವರ್ಷ ಸಿಎಂ ಆಗಿರುತ್ತಿದೆ ಎಂಬ ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ ಹೇಳಿಕೆಗೆ ತಿರುಗೇಟು ನೀಡಿದ್ದಾರೆ.
2004ರಲ್ಲಿ ವೆಂಕಯ್ಯ ನಾಯ್ಡು ಭೇಟಿಗೆ ಫ್ಲೈಟ್ ಬುಕ್ಕಿಂಗ್ ವಿಚಾರವಾಗಿ ಪ್ರತಿಕ್ರಿಯಿಸಿದ್ದು, ನಾನು ಅಡ್ವಾಣಿ ಭೇಟಿಯಾಗಿದ್ದು ನಿಜ, ವೆಂಕಯ್ಯ ನಾಯ್ಡುರನ್ನ ಅಲ್ಲ ಎಂದು ಹೇಳಿದ್ದಾರೆ.
ಸೆ.29ರಂದು ಬೆಳಗ್ಗೆ 6ರಿಂದ ಸಂಜೆ 6ರವರೆಗೆ ಕರ್ನಾಟಕ ಬಂದ್ ಹಿನ್ನೆಲೆ ಬೆಂಗಳೂರಿನಲ್ಲಿ ಹೋರಾಟಗಾರ ವಾಟಾಳ್ ನಾಗರಾಜ್ ಪ್ರತಿಕ್ರಿಯಿಸಿದ್ದು, ಮಾಜಿ ಸಿಎಂಗಳಾದ ಬಿಎಸ್ ಯಡಿಯೂರಪ್ಪ ಮತ್ತು ಹೆಚ್ಡಿ ಕುಮಾರಸ್ವಾಮಿ ರಾಜಕೀಯಕ್ಕಾಗಿ ಇಬ್ಬರೂ ಒಂದಾಗಿದ್ದಾರೆ.
ಇದನ್ನೂ ಓದಿ: ಅವತ್ತೇ ಅಮಿತ್ ಶಾ ಮಾತಿಗೆ ಒಪ್ಪಿದ್ದರೆ 5 ವರ್ಷ ಸಿಎಂ ಆಗುತ್ತಿದ್ದೆ: ಶಾ ಕರೆ ಗುಟ್ಟು ಬಿಚ್ಚಿಟ್ಟ ಕುಮಾರಸ್ವಾಮಿ
ಮಾನ ಮರ್ಯಾದೆ ಬಿಟ್ಟು 2 ಪಕ್ಷದವರು ಕೂತು ಮಾತಾಡುತ್ತಿದ್ದಾರೆ. ಡಿಸಿಎಂ ಡಿಕೆ ಶಿವಕುಮಾರ್ ಮಂತ್ರಿಯಾದ್ಮೇಲೆ ಸರ್ವಾಧಿಕಾರಿಯಾಗಿದ್ದಾರೆ. ತಮಿಳುನಾಡಿನಲ್ಲಿ ಸರ್ಕಾರ ಬೆಂಬಲಿಸುತ್ತೆ ಆದರೆ ನಮ್ಮಲ್ಲಿ ಸುಮ್ಮನಾಗುತ್ತಾರೆ ಎಂದು ವಾಗ್ದಾಳಿ ಮಾಡಿದ್ದಾರೆ.
ಟೌನ್ಹಾಲ್ನಿಂದ ಫ್ರೀಡಂ ಪಾರ್ಕ್ವರೆಗೆ ಪ್ರತಿಭಟನಾ ರ‍್ಯಾಲಿ ನಡೆಯಲಿದ್ದು, ಟೋಲ್, ರೈಲು, ಹೆದ್ದಾರಿ, ವಿಮಾನ ಹಾರಾಟ ಬಂದ್ ಆಗಲಿದೆ. ಶುಕ್ರವಾರ ಕರ್ನಾಟಕ ಬಂದ್ 100% ಯಶಸ್ವಿಯಾಗಲಿದೆ. ರಾಜ್ಯಾದ್ಯಂತ ಎಲ್ಲಾ ಸಂಘಟನೆಗಳಿಂದ ಬಂದ್ಗೆ ಬೆಂಬಲ ಸಿಗುತ್ತಿದೆ. ಶಾಂತಿಯುತವಾಗಿ ಚಳವಳಿ ಮಾಡುವಂತೆ ಸಿಎಂ ಸೂಚನೆ ನೀಡಿದ್ದಾರೆ ಎಂದು ತಿಳಿಸಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 3:03 pm, Wed, 27 September 23