AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಮರಾಜನಗರ: ರಾಷ್ಟ್ರಗೀತೆ ಹಾಡುವ ವೇಳೆಯೇ ಹೃದಯಾಘಾತದಿಂದ SSLC ವಿದ್ಯಾರ್ಥಿನಿ ಸಾವು

ನಟ ವಿಜಯ ರಾಘವೇಂದ್ರ ಸ್ಪಂದನಾ ಹೃದಯಾಘಾತದಿಂದ ಸಾವನ್ನಪ್ಪಿದ್ದು, ಇಡೀ ಕರುನಾಡು ಶೋಕಾ ಸಾಗರದಲ್ಲಿ ಮುಳುಗಿದೆ. ಇನ್ನು ಅಲ್ಲದೇ ಚಿಕ್ಕ ವಯಸ್ಸಿನಲ್ಲೇ ಹೃದಯಾಘಾತಕ್ಕೆ ಬಲಿಯಾಗುತ್ತಿರುವ ಬಗ್ಗೆ ನಾನಾ ವಿಚಾರಗಳ ಬಗ್ಗೆ ಸಾಮಾಜಿಕ ತಾಲತಾಣಗಳಲ್ಲಿ ಚರ್ಚೆಗಳು ನಡೆಯುತ್ತಿವೆ. ಇದರ ಮಧ್ಯೆ ಚಾಮರಾನಗರ ಜಿಲ್ಲೆಯಲ್ಲಿ ಎಸ್​ಎಸ್​ಎಲ್​ಸಿ ವಿದ್ಯಾರ್ಥಿನಿ ಸಹ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ.

ಚಾಮರಾಜನಗರ: ರಾಷ್ಟ್ರಗೀತೆ ಹಾಡುವ ವೇಳೆಯೇ ಹೃದಯಾಘಾತದಿಂದ SSLC ವಿದ್ಯಾರ್ಥಿನಿ ಸಾವು
ಪೆಲಿಸಾ, ಮೃತ ವಿದ್ಯಾರ್ಥಿನಿ
ಸೂರಜ್ ಪ್ರಸಾದ್ ಎಸ್.ಎನ್
| Updated By: ರಮೇಶ್ ಬಿ. ಜವಳಗೇರಾ|

Updated on: Aug 09, 2023 | 1:19 PM

Share

ಚಾಮರಾಜನಗರ, (ಆಗಸ್ಟ್ 09): ಇತ್ತೀಚೆಗೆ ಚಿಕ್ಕ ಮಕ್ಕಳು (Children) ಹೃದಯಾಘಾತದಿಂದ(heart attack)  ಸಾವನ್ನಪ್ಪುತ್ತಿರುವ ಸಂಖ್ಯೆ ಹೆಚ್ಚಾಗುತ್ತಿದೆ. ಅದರಲ್ಲೂ ಕರ್ನಾಟಕದಲ್ಲಿ ಚಿಕ್ಕ ಚಿಕ್ಕ ವಯಸ್ಸಿನ್ಲಲೇ ಹೃದಯಾಘಾತಕ್ಕೆ ಬಲಿಯಾಗುತ್ತಿದ್ದಾರೆ. ನಟ ವಿಜಯ ರಾಘವೇಂದ್ರ ಸ್ಪಂದನಾ ಹೃದಯಾಘಾತದಿಂದ ಸಾವನ್ನಪ್ಪಿದ್ದು, ಚಿಕ್ಕ ವಯಸ್ಸಿನಲ್ಲೇ ಇಹಲೋಕ ಇಹಲೋಕ ತ್ಯಜಿಸಿದಕ್ಕೆ ಇಡೀ ಕರುನಾಡು ಶೋಕಾ ಸಾಗರದಲ್ಲಿ ಮುಳುಗಿದೆ. ಇದರ ಮಧ್ಯೆ ಶಾಲೆಯಲ್ಲಿ ಬೆಳಗ್ಗೆ ರಾಷ್ಟ್ರಗೀತೆ ಹಾಡುವಾಗ ಹೃದಯಾಘಾತದಿಂದ ಎಸ್ಎಸ್ಎಸ್ ಸಿ ವಿದ್ಯಾರ್ಥಿನಿ(SSLC Student) ಪೆಲಿಸಾ ಮೃತಪಟ್ಟಿದ್ದಾಳೆ. ಚಾಮರಾಜನಗರ(chamarajanagar) ಜಿಲ್ಲೆ ಗುಂಡ್ಲುಪೇಟೆ ತಾಲೂಕಿನಲ್ಲಿ ಈ ಘಟನೆ ನಡೆದಿದೆ. ಇಂದು (ಆಗಸ್ಟ್ 09) ಗುಂಡ್ಲುಪೇಟೆಯ ನಿರ್ಮಲ ಶಾಲೆಯಲ್ಲಿ ರಾಷ್ಟ್ರಗೀತೆ ಹಾಡುವಾಗ ಪೆಲಿಸಾ ಹಠಾತ್ ಕುಸಿದುಬಿದ್ದು ಸಾವನ್ನಪ್ಪಿದ್ದಾಳೆ.

ಇದನ್ನೂ ಓದಿ: ರಿಲೇ ಓಟದಲ್ಲಿ ದ್ವಿತೀಯ ಸ್ಥಾನ ಗೆದ್ದ ಕೆಲವೇ ನಿಮಿಷಗಳಲ್ಲಿ 15 ವರ್ಷದ ಬಾಲಕ ಹೃದಯಾಘಾತಕ್ಕೆ ಬಲಿ

ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆಯ ನಿರ್ಮಲ ಶಾಲೆಯಲ್ಲಿ ರಾಷ್ಟ್ರಗೀತೆ ಹಾಡುವಾಗ ಪೆಲಿಸಾ ಏಕಾಏಕಿ ಕುಸಿದುಬಿದ್ದಿದ್ದಾಳೆ. ಕೂಡಲೇ ಶಾಲಾ ಸಿಬ್ಬಂದಿ ಆಕೆಯನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ದುರದೃಷ್ಟವಶಾತ್ ಅಷ್ಟರಾಗಲೇ ಜೀವ ನಿಂತು ಹೋಗಿತ್ತು. ತಂದೆ-ತಾಯಿಯನ್ನು ಕಳೆದುಕೊಂಡು ಅನಾಥಳಾಗಿದ್ದ ಪೆಲಿಸಾ, ಹಾಸ್ಟೆಲ್ ನಲ್ಲಿದ್ದುಕೊಂಡು ವ್ಯಾಸಂಗ ಮಾಡುತ್ತಿದ್ದಳು. ಆದ್ರೆ, ವಿಧಿ ಚಿಕ್ಕ ವಯಸ್ಸಿನಲ್ಲೇ ವಿದ್ಯಾರ್ಥಿನಿಯನ್ನು ಬಲಿ ಪಡೆದುಕೊಂಡಿದೆ.

ಮಕ್ಕಳಲ್ಲಿ ಹೃದಯಾಘಾತಕ್ಕೆ ಕಾರಣ ಏನು?

ಇತ್ತೀಚೆಗೆ ಅಂದರೆ ಕೊರೋನಾ ನಂತರ ಚಿಕ್ಕ ವಯಸ್ಸಿನವರು ಹೃದಯಾಘಾತಕ್ಕೆ ಬಲಿಯಾಗುತ್ತಿರುವ ಪ್ರಕರಣಗಳು ಹೆಚ್ಚುತ್ತಿವೆ. ಇನ್ನು ಇದಕ್ಕೆ ಕಾರವೇನು ಎನ್ನುವುದನ್ನು ನೋಡುವುದಾದರೆ ಬೇರೆ ನುರಿತ ವೈದ್ಯರು ತಮ್ಮ-ತಮ್ಮ ಅಭಿಪ್ರಾಯಗಳನ್ನು ಹೇಳುತ್ತಿದ್ದಾರೆ. ದೇಹದಲ್ಲಿ ರಕ್ತದ ಪೂರೈಕೆಗೆ ಅಡಚಣೆ ಉಂಟಾದಾಗ, ಹೃದಯದ ಸ್ನಾಯುಗಳು ಸರಿಯಾಗಿ ಕಾರ್ಯ ನಿರ್ವಹಿಸುವುದಿಲ್ಲ ಇದರಿಂದ ಹೃದಯಾಘಾತದಂತಹ ಗಂಭೀರ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಕೊರೊನಾ ಸಮಯದಲ್ಲಿ ಪ್ರಪಂಚಾದ್ಯಂತ ಶಾಲೆಗಳನ್ನು ಮುಚ್ಚಲಾಗಿತ್ತು, ಮಕ್ಕಳು ಆಟವಾಡುವುದನ್ನೂ ನಿಲ್ಲಿಸಿದ್ದರು, ಮನೆಯಲ್ಲಿ ಟಿವಿ, ಮೊಬೈಲ್, ಲ್ಯಾಪ್​ಟಾಪ್ ಮುಂದೆ ಕೂತು ಏನಾದರೂ ತಿನ್ನುತ್ತಿದ್ದರು. ಒಂದೇ ಜಾಗದಲ್ಲಿ ದಿನಪೂರ್ತಿ ಕುಳಿತಿದ್ದರೆ ಹೃದ್ರೋಗದ ಅಪಾಯ ಹೆಚ್ಚು. ಈಗಿನ ಮಕ್ಕಳು ಮೊಬೈಲ್ ಫೋನಿನ ಚಟಕ್ಕೆ ಬಿದ್ದಿದ್ದಾರೆ ಅಂದರೆ ಅದಕ್ಕೆ ಅಡಿಕ್ಟ್ ಆಗಿದ್ದು ಅವರ ಮನಸ್ಸನ್ನು ದುರ್ಬಲಗೊಳಿಸುತ್ತಿದೆ. ಬೊಜ್ಜಿನ ಸಮಸ್ಯೆಯೂ ಮಕ್ಕಳಲ್ಲಿ ಹೃದಯಾಘಾತಕ್ಕೆ ಕಾರಣವಾಗಬಹುದು. ಹಾಗಾಗಿ ಪೋಷಕರು ಮಕ್ಕಳ ಈ ಎಲ್ಲಾ ಅಭ್ಯಾಸಗಳತ್ತ ಗಮನ ಹರಿಸಿ ಅವರೊಂದಿಗೆ ಸಮಯ ಕಳೆಯಬೇಕು ಎಂದು ತಜ್ಞರು ಸಲಹೆ ಮಾಡಿದ್ದಾರೆ.

ಇನ್ನಷ್ಟು ಚಾಮರಾಜನಗರ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ