ಚಾಮರಾಜನಗರ: ಜಿಲ್ಲೆಯ ಹನೂರು (Hanur) ತಾಲೂಕಿನ ಕುರಟ್ಟಿಹೊಸೂರು, ಭದ್ರಯ್ಯನಹಳ್ಳಿ ಗ್ರಾಮಗಳಲ್ಲಿ ವಿಚಿತ್ರ ಚರ್ಮರೋಗ (Skin disease) ಕಾಣಿಸಿಕೊಂಡಿದೆ. ಈ ವಿಚಿತ್ರ ಚರ್ಮರೋಗದಿಂದ ನಾಲ್ವರು ಮಕ್ಕಳು ಬಳಲುತ್ತಿದ್ದಾರೆ. ಈ ಚರ್ಮರೋಗ ಆರು ತಿಂಗಳ ಮಗುವಾಗಿದ್ದಾಗಲೇ ಕಾಣಿಸಿಕೊಳ್ಳುತ್ತಿದೆ. ದೇಹದ ಚರ್ಮದ ಮೇಲೆ ಚುಕ್ಕಿಗಳಾಗಾಗುತ್ತವೆ.
ಇದರಿಂದ ಕಾಲಕ್ರಮೇಣ ಮಕ್ಕಳಲ್ಲಿ ದೃಷ್ಟಿದೋಷ ಹಾಗೂ ಶ್ರವಣದೋಷ ಸಮಸ್ಯೆ ಉಂಟಾಗುತ್ತಿದೆ. ಕಳೆದ 20-25 ವರ್ಷಗಳ ಹಿಂದೆಯೂ ಕೆಲವು ಮಕ್ಕಳಲ್ಲಿ ಈ ಚರ್ಮರೋಗ ಕಾಣಿಸಿಕೊಂಡಿತ್ತು. ರಕ್ತ ಸಂಬಂಧದಲ್ಲೇ ವಿವಾಹದ ಕಾರಣ ಈ ಸಮಸ್ಯೆ ಕಾಣಿಸಿಕೊಳ್ಳುತ್ತಿದೆ ಅನುಮಾನ ವ್ಯಕ್ತವಾಗಿದೆ. ಈ ಹಿನ್ನೆಲೆ ಗ್ರಾಮಕ್ಕೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ಭೇಟಿ ನೀಡಿದ್ದಾರೆ.
ಇದನ್ನೂ ಓದಿ: ಚಾಮರಾಜನಗರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಕುರುಡು ಕಾಂಚಾಣ ತಾಂಡವ? ಆಡಿಯೋ ಹೇಳುತ್ತಿದೆ ಲಂಚಾವತಾರದ ಕಥೆ
ಕೈ ಕಾಲು, ಮುಖದ ಮೇಲೆ ಕಪ್ಪು ಬಿಳಿ ಚುಕ್ಕೆಗಳು ಕಾಣಿಸಿಕೊಳ್ಳುವ ರೋಗಕ್ಕೆ ಚುಕ್ಕಿ ಚರ್ಮರೋಗ ಎಂದು ಕರೆಯಲಾಗುತ್ತದೆ. ಮಕ್ಕಳಿಗೆ ಒಂಬತ್ತು ವರ್ಷ ತುಂಬಿದ ನಂತರ ಚರ್ಮದಲ್ಲಿ ಹುಣ್ಣು, ಬಿಳಿ ಮಚ್ಚೆ, ಚರ್ಮ ಕಪ್ಪು ಬಣ್ಣಕ್ಕೆ ತಿರುಗುವುದು, ಕಣ್ಣು ಊದಿಕೊಳ್ಳುವಿಕೆ ಈ ರೀತಿ ನಾನಾ ಲಕ್ಷಣಗಳು ಕಾಣಿಸಿಕೊಳ್ಳುತ್ತವೆ. ಸದ್ಯ ಹನೂರು ಸುತ್ತಲಿನ ನಾಲ್ಕಕ್ಕೂ ಹೆಚ್ಚಿನ ಮಕ್ಕಳಲ್ಲಿ ರೋಗ ಲಕ್ಷಣ ಪತ್ತೆಯಾಗಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ