ತನ್ನೀರ್ ಕೊಂಬನ್ ಆನೆ ಸಾವು ಪ್ರಕರಣ; ಹೃದಯ ಸ್ತಂಭನದಿಂದ ಸಾವನ್ನಪ್ಪಿದ ಶಂಕೆ

| Updated By: ಕಿರಣ್ ಹನುಮಂತ್​ ಮಾದಾರ್

Updated on: Feb 03, 2024 | 7:52 PM

ಹಾಸನದ ಬೇಲೂರಿನಲ್ಲಿ ಸೆರೆ ಹಿಡಿಯಲಾಗಿದ್ದ ತಣ್ಣೀರ್ ಕೊಂಬನ್ ಆನೆಗೆ ಅರಣ್ಯ ಇಲಾಖೆ ಅಧಿಕಾರಿಗಳು ರೇಡಿಯೋ ಕಾಲರ್ ಅಳವಡಿಸಿ ಬಂಡೀಪುರದ ಅರಣ್ಯಕ್ಕೆ ಬಿಟ್ಟಿದ್ದರು. ಆನೆ ಕೇರಳದ ವಯನಾಡು ವ್ಯಾಪ್ತಿಯ ಮಾನಂದವಾಡಿ ಪಟ್ಟಣದ ಜನನಿಬೀಡ ಪ್ರದೇಶಕ್ಕೆ ನುಗ್ಗಿತ್ತು. ಈ ವಿಚಾರ ತಿಳಿದು ಕೇರಳದ ಅರಣ್ಯ ಸಿಬ್ಬಂದಿ ಕ್ಷಿಪ್ರ ಕಾರ್ಯಾಚರಣೆ ನಡೆಸಿ ಆನೆಗೆ ಡಾಟಿಂಗ್ ಮಾಡಿ ಸೆರೆ ಹಿಡಿದು, ಲಾರಿಯಲ್ಲಿ ಬಂಡೀಪುರದ ರಾಮಾಪುರ ಆನೆ ಶಿಬಿರಕ್ಕೆ ಶುಕ್ರವಾರ (ಫೆ.02) ರಾತ್ರಿ ಕರೆತಂದಿದ್ದರು.

ತನ್ನೀರ್ ಕೊಂಬನ್ ಆನೆ ಸಾವು ಪ್ರಕರಣ; ಹೃದಯ ಸ್ತಂಭನದಿಂದ ಸಾವನ್ನಪ್ಪಿದ ಶಂಕೆ
ತನ್ನೀರ್ ಕೊಂಬನ್ ಆನೆ ಸಾವು ಪ್ರಕರಣ
Follow us on

ಚಾಮರಾಜನಗರ, ಫೆ.03: ಜಿಲ್ಲೆಯ ಗುಂಡ್ಲುಪೇಟೆ(Gundlupete) ತಾಲೂಕಿನ ಬಂಡೀಪುರ(Bandipur)ದ ರಾಮಾಪುರ ಬಿಡಾರದಲ್ಲಿ ತನ್ನೀರ್ ಕೊಂಬನ್ ಆನೆ (Elephant) ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತ ಆನೆಯ ಮರಣೋತ್ತರ ಪರೀಕ್ಷೆ ವರದಿ ಇದೀಗ ಬಂದಿದ್ದು, ಹೃದಯ ಸ್ತಂಭನ ಹಾಗೂ ಟ್ರಾಮಾ ಕಾರಣದಿಂದ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಇನ್ನುಳಿದಂತೆ ಹೆಚ್ಚಿನ ಮಾಹಿತಿಗಾಗಿ ಆನೆಯ ಅಂಗಾಂಗವನ್ನು ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಅಧಿಕಾರಿಗಳು ರವಾನೆ ಮಾಡಿದ್ದಾರೆ.

ಶಿಬಿರಕ್ಕೆ ಆಗಮಿಸುವ ಮುನ್ನವೇ ಸಾವನ್ನಪ್ಪಿದ ಕಾಡಾನೆ

ಇನ್ನು ಈ ಕಾಡಾನೆಯನ್ನು ಮೂರು ಡಿಸಿಎಫ್ ಅಧಿಕಾರಿಗಳ ಜೊತೆಗೆ ಕೇರಳ ಅರಣ್ಯಾಧಿಕಾರಿಗಳು ತಂದಿದ್ದರು. ಆದರೆ, ರಾಮಾಪುರ ಸಾಕಾನೆ ಶಿಬಿರಕ್ಕೆ ಆಗಮಿಸುವ ಮುನ್ನವೇ ಕಾಡಾನೆ ಸಾವನ್ನಪ್ಪಿದೆ. ಅಂದರೆ, ಕೇರಳದಿಂದ ಸೆರೆಹಿಡಿದು ತರುವ  ಮಾರ್ಗ ಮಧ್ಯೆಯೇ ಕೊನೆಯುಸಿರೆಳೆದಿದೆ. ಆದರೆ, ಕಾಡಾನೆ ಸಾವಿನ ಬಗ್ಗೆ ಅಧಿಕಾರಿಗಳ ವಿರುದ್ಧ ಆರೋಪ ಕೇಳಿಬಂದಿತ್ತು. ಈ ಹಿನ್ನಲೆ ಅಧಿಕಾರಿಗಳ ಸಮ್ಮುಖದಲ್ಲಿಯೇ ಕಾಡಾನೆ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ.

ಇದನ್ನೂ ಓದಿ:ಚಾಮರಾಜನಗರ: ಕಾರ್ಯಾಚರಣೆಯಲ್ಲಿ ಸೆರೆ ಹಿಡಿಯಲಾಗಿದ್ದ ಆನೆ ಬಂಡೀಪುರದ ರಾಮಾಪುರ ಬಿಡಾರದಲ್ಲಿ ಸಾವು

ಘಟನೆ ವಿವರ

ಇಂದು ಬಂಡೀಪುರದ ರಾಮಾಪುರ ಆನೆ ಬಿಡಾರದಲ್ಲಿ ಆನೆ ಮೃತಪಟ್ಟಿತ್ತು. ಹಾಸನದ ಬೇಲೂರಿನಲ್ಲಿ ಸೆರೆ ಹಿಡಿಯಲಾಗಿದ್ದ ತಣ್ಣೀರ್ ಕೊಂಬನ್ ಆನೆಗೆ ಅರಣ್ಯ ಇಲಾಖೆ ಅಧಿಕಾರಿಗಳು ರೇಡಿಯೋ ಕಾಲರ್ ಅಳವಡಿಸಿ ಬಂಡೀಪುರದ ಅರಣ್ಯಕ್ಕೆ ಬಿಟ್ಟಿದ್ದರು. ಆನೆ ಕೇರಳದ ವಯನಾಡು ವ್ಯಾಪ್ತಿಯ ಮಾನಂದವಾಡಿ ಪಟ್ಟಣದ ಜನನಿಬೀಡ ಪ್ರದೇಶಕ್ಕೆ ನುಗ್ಗಿತ್ತು. ಈ ವಿಚಾರ ತಿಳಿದು ಕೇರಳದ ಅರಣ್ಯ ಸಿಬ್ಬಂದಿ ಕ್ಷಿಪ್ರ ಕಾರ್ಯಾಚರಣೆ ನಡೆಸಿ ಆನೆಗೆ ಡಾಟಿಂಗ್ ಮಾಡಿ ಸೆರೆ ಹಿಡಿದು, ಲಾರಿಯಲ್ಲಿ ಬಂಡೀಪುರದ ರಾಮಾಪುರ ಆನೆ ಶಿಬಿರಕ್ಕೆ ಶುಕ್ರವಾರ (ಫೆ.02) ರಾತ್ರಿ ಕರೆತಂದಿದ್ದರು. ಬಳಿಕ ಆನೆ ಸಾವಿಗೆ ನಿಖರ ಕಾರಣ ತಿಳಿಯಲಿದೆ ಎಂದು ಟಿವಿ9ಗೆ ಅರಣ್ಯ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:51 pm, Sat, 3 February 24