ಚಾಮರಾಜನಗರ: 5 ವರ್ಷದ ಮಗಳ ಮೇಲೆ ಅತ್ಯಾಚಾರ ಎಸಗಿದ್ದ ತಂದೆಗೆ 20 ವರ್ಷ ಜೈಲು ಶಿಕ್ಷೆ

5 ವರ್ಷದ ಮಗಳ(Daughter) ಮೇಲೆ ಅತ್ಯಾಚಾರ ಎಸಗಿದ್ದ ತಂದೆ(Father)ಗೆ 20 ವರ್ಷ ಜೈಲು ಶಿಕ್ಷೆ ನೀಡಿ ಮಕ್ಕಳ ಸ್ನೇಹಿ ಮತ್ತು 1 ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಧೀಶರು ಆದೇಶಿಸಿದ್ದಾರೆ. ಹೌದು, ನೊಂದ ಬಾಲಕಿಯ ತಾಯಿಯನ್ನು ಮೂರನೇ ಮದುವೆಯಾಗಿದ್ದ ಆರೋಪಿ ಸೈಯದ್ ಮುಜಾಮಿಲ್( 45), ಈ ಕೃತ್ಯ ಎಸಗಿದ್ದ.

ಚಾಮರಾಜನಗರ: 5 ವರ್ಷದ ಮಗಳ ಮೇಲೆ ಅತ್ಯಾಚಾರ ಎಸಗಿದ್ದ ತಂದೆಗೆ 20 ವರ್ಷ ಜೈಲು ಶಿಕ್ಷೆ
ಮಗಳ ಮೇಲೆಯೇ ಅತ್ಯಾಚಾರವೆಸಗಿದ್ದ ತಂದೆಗೆ ಜೈಲು ಶಿಕ್ಷೆ
Edited By: ಕಿರಣ್ ಹನುಮಂತ್​ ಮಾದಾರ್

Updated on: Nov 07, 2023 | 5:12 PM

ಚಾಮರಾಜನಗರ, ನ.07: 5 ವರ್ಷದ ಮಗಳ(Daughter) ಮೇಲೆ ಅತ್ಯಾಚಾರ ಎಸಗಿದ್ದ ತಂದೆ(Father)ಗೆ 20 ವರ್ಷ ಜೈಲು ಶಿಕ್ಷೆ ನೀಡಿ ಮಕ್ಕಳ ಸ್ನೇಹಿ ಮತ್ತು 1 ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಧೀಶರು ಆದೇಶಿಸಿದ್ದಾರೆ. ಹೌದು, ನೊಂದ ಬಾಲಕಿಯ ತಾಯಿಯನ್ನು ಮೂರನೇ ಮದುವೆಯಾಗಿದ್ದ ಆರೋಪಿ ಸೈಯದ್ ಮುಜಾಮಿಲ್( 45), ಹೆಂಡತಿ ಮನೆಯಲ್ಲಿಯೇ ಯಾರೂ ಇಲ್ಲದ ವೇಳೆ ಅತ್ಯಾಚಾರ ಎಸಗಿದ್ದ. ಈ ಘಟನೆಗೆ ಸಂಬಂಧಪಟ್ಟಂತೆ ಚಾಮರಾಜನಗರ ಜಿಲ್ಲೆಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ವಿಚಾರಣೆ ಬಳಿಕ ಜೈಲು ಶಿಕ್ಷೆ ವಿಧಿಸಿ, ನೊಂದ ಬಾಲಕಿಗೆ 6 ಲಕ್ಷ ರೂಪಾಯಿ ಪರಿಹಾರ ಕೊಡಲೂ ಆದೇಶ  ನೀಡಿದ್ದಾರೆ.

ಇನ್ನು ಇಂತಹುದೇ ಘಟನೆಗೆ ಸಂಬಂಧಿಸಿದಂತೆ ದಾವಣಗೆರೆ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ಕೋರ್ಟ್ ಎಫ್​ಟಿಎಸ್​ಪಿ (ಪೋಕ್ಸೋ ಕೋರ್ಟ) ಮಗಳ ಮೇಲೆಯೇ ಅತ್ಯಾಚಾರ ಎಸಗಿದ್ದ ಅಪರಾಧಿ ತಂದೆಗೆ 20 ವರ್ಷ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿತ್ತು.ಹೌದು, ಜಿಲ್ಲೆಯ ಹರಿಹರ ತಾಲೂಕಿನ ನಿವಾಸಿ ಅಪರಾಧಿ ತಂದೆ. ರಾಷ್ಟ್ರೀಯ ಹೆದ್ದಾರಿ ಪಕ್ಕದ ತಗಡಿನ ಶೀಟ್ ಮನೆಯಲ್ಲಿ ಮಗಳ ಮೇಲೆ ಬಟ್ಟೆ ಹಾಗೂ ತಿಂಡಿ ಕೊಡುತ್ತಾ ನಿರಂತರ ಅತ್ಯಾಚಾರ ನಡೆಸುತ್ತಿದ್ದ. ಈ ವಿಚಾರ ತಿಳಿದ ಬಳಿಕ ಹರಿಹರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಇದನ್ನೂ ಓದಿ:ದೆಹಲಿ: ಬಾಡಿಗೆ ಮನೆ ತೋರಿಸುವ ನೆಪದಲ್ಲಿ ಕರೆದೊಯ್ದು ಮಹಿಳೆ ಮೇಲೆ ಪ್ರಾಪರ್ಟಿ ಡೀಲರ್ ಮತ್ತವನ ಸ್ನೇಹಿತನಿಂದ ಸಾಮೂಹಿಕ ಅತ್ಯಾಚಾರ

ಈ ಕುರಿತು ವಿಚಾರಣೆ ನಡೆಸಿದ ನ್ಯಾಯ ಮೂರ್ತಿ ಶ್ರೀಪಾದ ಎನ್ ಅವರು ಆರೋಪಿ ತಂದೆಗೆ ಬರೊಬ್ಬರಿ 20 ವರ್ಷ ಜೈಲು ಶಿಕ್ಷೆ, 12 ಸಾವಿರ ದಂಡ ಹಾಗೂ ಸಂತ್ರಸ್ತೆಗೆ ಸರ್ಕಾರದಿಂದ ಐದು ಲಕ್ಷ ರೂಪಾಯಿ ಪರಿಹಾರ ನೀಡುವಂತೆ ತೀರ್ಪು ನೀಡಿದ್ದರು. ಇದಾದ ಬಳಿಕ ಇಂತಹ ಘಟನೆ ಚಾಮರಾಜನಗರದಲ್ಲಿ ಬೆಳಕಿಗೆ ಬಂದಿದ್ದು, ಅಪ್ಪ-ಮಗಳ ಬಾಂಧವ್ಯಕ್ಕೆ ಚ್ಯುತಿ ಬರುವಂತಿದೆ. ಇನ್ನು ಆರೋಪಿ ತಂದೆಗೆ 20 ವರ್ಷಗಳ ಕಾಲ ಜೈಲು ಶಿಕ್ಷೆ ವಿಧಿಸಿದ್ದು, 5 ಲಕ್ಷ ದಂಡ ವಿಧಿಸಿದೆ. ಇನ್ನಾದರೂ ಇಂತಹ ಘಟನೆಗಳು ನಡೆಯದೆ ಇರಲಿ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Suraj Prasad SN

ಸೂರಜ್ ಪ್ರಸಾದ್ ಎಸ್.ಎನ್ ಆದ ನಾನು ಹುಟ್ಟಿದ್ದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ. ಬೆಳೆದಿದ್ದು ದಾವಣಗರೆ ಜಿಲ್ಲೆ ನ್ಯಾಮತಿ ತಾಲೂಕಿನಲ್ಲಿ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ನಲ್ಲಿ ಪತ್ರಿಕೋದ್ಯಮದಲ್ಲಿ ಪದವಿಪೂರ್ವ ಶಿಕ್ಷಣ ಪಡೆದಿದ್ದು 2014ರಿಂದ ನನ್ನ ಎಲೆಕ್ಟ್ರಾನಿಕ್ ಮಾದ್ಯಮದ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದ್ದು ಬೆಂಗಳೂರಿನಲ್ಲಿ 8 ವರ್ಷಗಳ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಹಾಗೂ ಕ್ರೈಂ ಇನ್ವೆಸ್ಟಿಗೇಟಿವ್ ವರದಿಗಾರನಾಗಿ ಹಾಗೂ ಸ್ಟಿಂಗ್ ಅಪರೇಷನ್ ಗಳನ್ನ ಮಾಡಿದ್ದೇನೆ. ಗೌರಿ ಲಂಕೇಶ್ ಕೊಲೆ ಕೇಸನ್ನ ರಾಜ್ಯದಲ್ಲೇ ಮೊದಲು ಬ್ರೇಕ್ ಮಾಡಿ ಈ ಹಿಂದಿನ ಸಂಸ್ಥೆಯಿಂದ ಪ್ರಶಂಸೆ ಪಡೆದಿರುತ್ನೇನೆ2019 ರಲ್ಲಿ ಪಿಎಸ್ಐ ಅಕ್ರಮದ ಸ್ಟಿಂಗ್ ಆಪರೇಷನ್ ಹಾಗೂ ಬೆಂಗಳೂರು ಸಿಂಥಟಿಕ್ ಡ್ರಗ್ ಮಾಫಿಯಾದ ಸ್ಟಿಂಗ್ ಆಪರೇಷನ್ ಮಾಡಿದ್ದು. ಕಳೆದ 10 ವರ್ಷಗಳಿಂದ ಸಕ್ರೀಯವಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೆ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿ ಬಳಿಕ ಚಾಮರಾಜನಗರಕ್ಕೆ ವರ್ಗಾವಣೆಯಾಗಿ ಈಗ ಪ್ರಸ್ಥುತ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಹವ್ಯಾಸ ಅಡಿಗೆ ಮಾಡುವುದು, ಕ್ರಿಕೆಟ್ ಆಡುವುದು ಕ್ರೈಂ ಇನ್ವೆಷ್ಟಿಗೇಷನ್ ನಾವೆಲ್ ಗಳನ್ನ ಓದುವುದು.

Read More
Follow Us