Leopard: ಗ್ರಾಮಸ್ಥರು ಮತ್ತು ಅರಣ್ಯಾಧಿಕಾರಿಗಳಿಗೆ ತಲೆ ನೋವಾಗಿದ್ದ ಚಿರತೆ ಕೊನೆಗೂ ಸೆರೆ
Chamarajanagar News: ಚಾಮರಾಜನಗರ ಜಿಲ್ಲೆಯ ಕೊಳ್ಳೆಗಾಲ ತಾಲೂಕಿನ ಕುಂತೂರು ಬೆಟ್ಟದ ಗ್ರಾಮಸ್ಥರು ಮತ್ತು ಅರಣ್ಯಾಧಿಕಾರಿಗಳಿಗೆ ತಲೆ ನೋವಾಗಿದ್ದ ಚಿರತೆಯನ್ನು ಸ್ಪೆಷಲ್ ಲೆಪರ್ಡ್ ಟಾಸ್ಕ್ ಫೋರ್ಸ್ ನೇತೃತ್ವದಲ್ಲಿ ಕೂಂಬಿಂಗ್ ಮೂಲಕ ಬುಧವಾರ ಸೆರೆ ಹಿಡಿಯಲಾಗಿದೆ.
ಚಾಮರಾಜನಗರ, ಆಗಸ್ಟ್ 02: ಕಳೆದ ಒಂದು ವಾರದಿಂದ ಅರಣ್ಯಾಧಿಕಾರಿಗಳಿಗೆ ತಲೆ ನೋವಾಗಿದ್ದ ಚಿರತೆ (leopard) ಕೊನೆಗೂ ಬೋನಿಗೆ ಬಿದ್ದಿದೆ. ಜಿಲ್ಲೆಯ ಕೊಳ್ಳೆಗಾಲ ತಾಲೂಕಿನ ಕುಂತೂರು ಬೆಟ್ಟದಲ್ಲಿ ಸ್ಪೆಷಲ್ ಲೆಪರ್ಡ್ ಟಾಸ್ಕ್ ಫೋರ್ಸ್ ನೇತೃತ್ವದಲ್ಲಿ ಕೂಂಬಿಂಗ್ ಮೂಲಕ ಚಿರತೆ ಸೆರೆ ಹಿಡಿಯಲಾಗಿದ್ದು, ಜನರು ನಿಟ್ಟುಸಿರು ಬಿಟ್ಟಿದ್ದಾರೆ. ಇತ್ತೀಚೆಗೆ ಯಳಂದೂರು ತಾಲೂಕಿನ ಮಲ್ಲಿಗೆಹಳ್ಳಿ ಬಳಿ ಬಾಲಕನ ಮೇಲೆ ಚಿರತೆ ದಾಳಿ ಮಾಡಿದ್ದು, ಈಗಲೂ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಗ್ರಾಮದಲ್ಲಿ ಚಿರತೆ ದಾಳಿ ಹಿನ್ನಲೆ ಮಕ್ಕಳು ಶಾಲೆಗೆ ಹೋಗಲು ಭಯ ಪಡುವಂತ ವಾತಾವರಣ ಸೃಷ್ಠಿಯಾಗಿತ್ತು. ಮೈಸೂರಿನಿಂದ ಆಗಮಿಸಿದ್ದ ಟಾಸ್ಕ್ಫೋರ್ಸ್ ಮಲ್ಲಿಗೆಹಳ್ಳಿ ಸುತ್ತಮುತ್ತ 60 ಸಿಸಿಕ್ಯಾಮರಾ, 2 ದೊಡ್ಡ ಬೋನ್ ಸೇರಿದಂತೆ 9 ಬೋನ್ಗಳನ್ನು ಸಿಬ್ಬಂದಿ ಅಳವಡಿಸಿದ್ದರು.
ಇದನ್ನೂ ಓದಿ: ಮಾನವರ ಮೇಲೆ ಹೆಚ್ಚಾದ ಚಿರತೆ ದಾಳಿ: ಅರಣ್ಯಾಧಿಕಾರಿ ನೇತೃತ್ವದಲ್ಲಿ ಚಿರತೆ ಸೆರೆಗೆ ಮುಂದಾದ ಲೆಪರ್ಡ್ ಟಾಸ್ಕ್ ಫೋರ್ಸ್
ಅರಣ್ಯ ಇಲಾಖೆಯ 70ಕ್ಕೂ ಹೆಚ್ಚು ಸಿಬ್ಬಂದಿಯಿಂದ ಕೂಂಬಿಂಗ್ ಕಾರ್ಯಚರಣೆ ಕೂಡ ಮಾಡಲಾಗಿತ್ತು. ಸದ್ಯ ಚಿರತೆ ಬೋನಿಗೆ ಬಿದ್ದಿದ್ದರಿಂದ ಗ್ರಾಮಸ್ಥರು ಸಂತಸಗೊಂಡಿದ್ದಾರೆ.
8 ಕುರಿಮರಿಗಳ ಮೇಲೆ ದಾಳಿ ಮಾಡಿದ ಚಿರತೆ
ಗಡಿನಾಡು ಚಾಮರಾಜನಗರದಲ್ಲಿ ಚಿರತೆ ದಾಳಿ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ. ಕಳೆದ 4 ವರ್ಷಗಳಿಂದ ಒಂದಲ್ಲ ಒಂದು ಕಡೆ ದಾಳಿ ನಡೆಯುತ್ತಿವೆ. ಅದೇ ರೀತಿ ಇತ್ತೀಚಿಗೆ ಕುರಿಕೊಟ್ಟಿಗೆ ಮೇಲೆ ದಾಳಿ ನಡೆಸಿದ ಚಿರತೆಯೊಂದು ಬರೋಬ್ಬರಿ 8 ಮರಿಗಳನ್ನ ತಿಂದಿರುವಂತಹ ಘಟನೆ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಶಿವಪುರದಲ್ಲಿ ನಡೆದಿತ್ತು.
ಇದನ್ನೂ ಓದಿ: ಚಾಮರಾಜನಗರದಲ್ಲಿ ಮಕ್ಕಳನ್ನು ಭಾದಿಸುತ್ತಿದೆ ವಿಚಿತ್ರ ಚರ್ಮರೋಗ
ಅರಣ್ಯಾಧಿಕಾರಿಗಳಿಗೆ ಸುದ್ದಿ ತಿಳಿಸಿದರೂ ಸಕಾಲಕ್ಕೆ ಅಧಿಕಾರಿಗಳು ಆಗಮಿಸಿಲ್ಲ ಎಂದು ಅರಣ್ಯಾಧಿಕಾರಿಗಳ ವಿರುದ್ದ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದರು. ಕಳೆದ 4 ವರ್ಷದ ಹಿಂದೆಯೂ ಇದೆ ರೀತಿ ದಾಳಿಯಾಗಿತ್ತು. ಆಗ ಬೋನಿಟ್ಟ ಅರಣ್ಯಾಧಿಕಾರಿಗಳು ಚಿರತೆಯನ್ನ ಸೆರೆ ಹಿಡಿದು ಕಾಡಿಗೆ ಹೋಗಿ ಬಿಟ್ಟಿದ್ದರು. ಈಗ ಮತ್ತದೇ ರೀತಿಯ ಸಮಸ್ಯೆ ಎದುರಾಗಿದ್ದು ಗ್ರಾಮಸ್ಥರಲ್ಲಿ ಆತಂಕ ಮನೆ ಮಾಡಿತ್ತು.
ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 3:52 pm, Wed, 2 August 23