AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರ್​ಎಸ್​ಎಸ್​ ಸಿದ್ಧಾಂತದ ವಿರುದ್ಧ ಭಾರತ್ ಜೋಡೋ ಯಾತ್ರೆ: ರಾಹುಲ್ ಗಾಂಧಿ ಪುನರುಚ್ಚಾರ

ಸಂವಿಧಾನ ರಕ್ಷಣೆ ಮಾಡಲು ಭಾರತ್ ಜೋಡೋ ಮಾಡುತ್ತಿದ್ದೇವೆ. ಬಿಜೆಪಿ, ಆರ್​ಎಸ್​ಎಸ್​​ (RSS) ಸಿದ್ಧಾಂತದ ವಿರುದ್ಧ ಈ ಯಾತ್ರೆ ಮಾಡಲಾಗುತ್ತಿದೆ.

ಆರ್​ಎಸ್​ಎಸ್​ ಸಿದ್ಧಾಂತದ ವಿರುದ್ಧ ಭಾರತ್ ಜೋಡೋ ಯಾತ್ರೆ: ರಾಹುಲ್ ಗಾಂಧಿ ಪುನರುಚ್ಚಾರ
ಗುಂಡ್ಲುಪೇಟೆಯಲ್ಲಿ ಕಾಂಗ್ರೆಸ್​ ಭಾರತ್ ಜೋಡೋ ಸಮಾವೇಶ
TV9 Web
| Updated By: ಗಂಗಾಧರ​ ಬ. ಸಾಬೋಜಿ|

Updated on:Sep 30, 2022 | 11:01 AM

Share

ಚಾಮರಾಜನಗರ: ಬಿಜೆಪಿ, ಆರ್​ಎಸ್​ಎಸ್​​ (RSS) ಸಿದ್ಧಾಂತದ ವಿರುದ್ಧ ಈ ಯಾತ್ರೆ ಮಾಡಲಾಗುತ್ತಿದೆ. ಸಂವಿಧಾನ ರಕ್ಷಣೆ ಮಾಡಲು ಭಾರತ್ ಜೋಡೋ ಮಾಡುತ್ತಿದ್ದೇವೆ ಎಂದು ಗುಂಡ್ಲುಪೇಟೆಯ ಕಾಂಗ್ರೆಸ್​ ಭಾರತ್ ಜೋಡೋ ಸಮಾವೇಶದಲ್ಲಿ ಕಾಂಗ್ರೆಸ್​ ನಾಯಕ ರಾಹುಲ್ ಗಾಂಧಿ ಹೇಳಿದರು. ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಈ ಯಾತ್ರೆ ನಡೆಯುತ್ತೆ. ಬಿಸಿಲು, ಮಳೆ ಲೆಕ್ಕಿಸದೇ ಪಾದಯಾತ್ರೆಯನ್ನ ಮಾಡುತ್ತಿದ್ದೇವೆ. ಈ ಪಾದಯಾತ್ರೆಯಲ್ಲಿ ದ್ವೇಷ, ಹಿಂಸೆ ಎಲ್ಲೂ ಕಾಣುವುದಿಲ್ಲ. ಎಲ್ಲ ಧರ್ಮ, ಜಾತಿಯವರೂ ಭಾಗಿಯಾಗಿದ್ದಾರೆ ಎಂದು ಹೇಳಿದರು. ಭಾರತ್ ಜೋಡೋ ಯಾತ್ರೆಯನ್ನು ಯಾರಿಂದಲೂ, ಯಾವ ಶಕ್ತಿಯಿಂದ ನಿಲ್ಲಿಸಲು ಆಗುವುದಿಲ್ಲ. ಭಾರತ್ ಜೋಡೋ ಉದ್ದೇಶ ಭಾಷಣ ಮಾಡುವುದಕ್ಕೆ ಅಲ್ಲ. ಬಿಜೆಪಿಯವರು ವಿಪಕ್ಷಗಳ ಧ್ವನಿ ಹತ್ತಿಕ್ಕುವ ಕೆಲಸ ಮಾಡುತ್ತಿದ್ದಾರೆ. ನಮ್ಮ ಜತೆ ಇಡೀ ದೇಶದ ಜನರು ಇದ್ದಾರೆ. ಕರ್ನಾಟಕದಲ್ಲಿ ಭ್ರಷ್ಟಾಚಾರ, ಬೆಲೆ ಏರಿಕೆ ನಿರುದ್ಯೋಗ ಇದೆ ಎಂದು ರಾಹುಲ್ ಗಾಂಧಿ ಹೇಳಿದರು.

ಕಾಂಗ್ರೆಸ್ ಪಕ್ಷವು ದೇಶವ್ಯಾಪಿ ನಡೆಸಲು ಉದ್ದೇಶಿಸಿರುವ ಭಾರತ್ ಜೋಡೋ ಯಾತ್ರೆ (Bharat Jodo Yatra) ಶುಕ್ರವಾರ (ಸೆ 30) ಮುಂಜಾನೆ ಕರ್ನಾಟಕವನ್ನು ಪ್ರವೇಶಿಸಿತು. ಹುಲಿ ಸಂರಕ್ಷಿತ ಅರಣ್ಯದಲ್ಲಿ ಪಾದಯಾತ್ರೆಗೆ ಅರಣ್ಯ ಇಲಾಖೆ ಅನುಮತಿ ನಿರಾಕರಿಸಿದ್ದ ಹಿನ್ನೆಲೆಯಲ್ಲಿ ತಮಿಳುನಾಡಿನ ಗುಡಲೂರಿನಿಂದ ಕರ್ನಾಟಕದ ಗುಂಡ್ಲುಪೇಟೆಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ  (Rahul Gandhi) ವಾಹನದಲ್ಲಿ ಬಂದರು. ಹುಲಿ ಸಂರಕ್ಷಿತ ಅರಣ್ಯ ಪ್ರದೇಶದಲ್ಲಿ ನಿಯಮ ಉಲ್ಲಂಘಿಸಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaih), ಅರಣ್ಯದಲ್ಲಿಯೇ ಕಾರು ನಿಲ್ಲಿಸಿ ರಾಹುಲ್​ ಗಾಂಧಿ ಅವರನ್ನು ಸ್ವಾಗತಿಸಿದರು.

ಕಾಂಗ್ರೆಸ್ ನಾಯಕರಿಗೆ ಅರಣ್ಯ ಇಲಾಖೆಯು ಕಾರಿನಲ್ಲಿ ತೆರಳಲು ಅವಕಾಶ ನೀಡಿತ್ತು. ರಾಹುಲ್​ ಗಾಂಧಿ ಮತ್ತು ಸಿದ್ದರಾಮಯ್ಯ ಒಂದೇ ಕಾರಿನಲ್ಲಿ ಗುಂಡ್ಲುಪೇಟೆಗೆ ಬಂದರು. ರಾಹುಲ್ ಗಾಂಧಿ ಅವರನ್ನು ಕೆಕ್ಕೆನಹಳ್ಳಿಯ ಕರ್ನಾಟಕ ಗಡಿಯಲ್ಲೇ ಸಿದ್ದರಾಮಯ್ಯ ತಮ್ಮ ಬೆಂಬಲಿಗರೊಂದಿಗೆ ಸ್ವಾಗತಿಸಿದರು. ಈ ವೇಳೆ ಮಹದೇವಪ್ಪ, ಜಾರ್ಜ್, ಪ್ರಕಾಶ್ ರಾಥೋಡ್ ಉಪಸ್ಥಿತರಿದ್ದರು. ಮತ್ತೊಂದೆಡೆ ರಾಹುಲ್ ಗಾಂಧಿ ಸ್ವಾಗತಕ್ಕಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವೇದಿಕೆಯ ಬಳಿಯೇ ಕಾಯುತ್ತಿದ್ದರು. ಗುಂಡ್ಲುಪೇಟೆಯಿಂದ ಕೆಕ್ಕೇನಹಳ್ಳಿ ಸುಮಾರು 25 ಕಿಮೀ ದೂರವಿದೆ.

ಸಮಾವೇಶದಲ್ಲಿ ಭರ್ಜರಿ ಊಟ:

ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆಯಲ್ಲಿ ಕಾಂಗ್ರೆಸ್ ಸಮಾವೇಶ ಆಯೋಜಿಸಿದ್ದು ಸುಮಾರು 30 ಸಾವಿರ​ ಕಾರ್ಯಕರ್ತರಿಗೆ ಊಟದ ವ್ಯವಸ್ಥೆ ಮಾಡಿದೆ. ವೆಜ್ ಪಲಾವ್, ಅನ್ನ ಸಾಂಬಾರ್, ಜಿಲೇಬಿ, ಹಪ್ಪಳ, ಉಪ್ಪಿನಕಾಯಿ ಸಿದ್ಧವಾಗುತ್ತಿದೆ. ವಿಐಪಿ, ವಿವಿಐಪಿಗಳಿಗೆ ಇದರ ಜೊತೆಗೆ ಶ್ಯಾವಿಗೆ ಪಾಯಸ ಹಾಗೂ ಮುದ್ದೆ ಇರುತ್ತದೆ. ಗುಂಡ್ಲುಪೇಟೆ ಪಟ್ಟಣದ ವೀರನಪುರದಲ್ಲಿ ಊಟದ ವ್ಯವಸ್ಥೆ ಮಾಡಲಾಗಿದೆ. ಬೆಳಿಗ್ಗೆ 11ರಿಂದಲೇ ಊಟದ ಬಡಿಸುವ ಕೆಲಸ ಆರಂಭವಾಗಲಿದೆ. ಗುಂಡ್ಲುಪೇಟೆಯ ಅಂಬೇಡ್ಕರ್ ಭವನದ ಮುಂಭಾಗದಲ್ಲಿ ಅದ್ಧೂರಿ ಸ್ವಾಗತ ಕೋರಲಾಗುವುದು. ಕಾರ್ಯಕ್ರಮದಲ್ಲಿ ಸುಮಾರು 250 ಗಣ್ಯರು ಪಾಲ್ಗೊಳ್ಳಲುವ ಸಾಧ್ಯತೆಯಿದೆ. ಸ್ವಾಗತದ ಬಳಿಕ ವೇದಿಕೆ ಕಾರ್ಯಕ್ರಮ ನಡೆಯಲಿದೆ, ಅನಂತರ ಭಾರತ್ ಜೋಡೋ ಯಾತ್ರೆಯ ಸಂಚಾರ ಆರಂಭವಾಗಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 10:52 am, Fri, 30 September 22

ಮಹಾರಾಷ್ಟ್ರದಲ್ಲಿ ವ್ಯಕ್ತಿ ಮೇಲೆ 7 ಬೀದಿ ನಾಯಿಗಳ ದಾಳಿ
ಮಹಾರಾಷ್ಟ್ರದಲ್ಲಿ ವ್ಯಕ್ತಿ ಮೇಲೆ 7 ಬೀದಿ ನಾಯಿಗಳ ದಾಳಿ
ಧರ್ಮಾಧಿಕಾರಿ ಡಾ ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಲಿರುವ ವಕೀಲರು
ಧರ್ಮಾಧಿಕಾರಿ ಡಾ ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಲಿರುವ ವಕೀಲರು
ರಾಜಣ್ಣ ಕ್ಯಾಬಿನೆಟ್​ಗೆ ವಾಪಸ್ಸಾದರೆ ನನ್ನ ಸ್ವಾಗತವಿದೆ: ಡಿಕೆ ಸುರೇಶ್
ರಾಜಣ್ಣ ಕ್ಯಾಬಿನೆಟ್​ಗೆ ವಾಪಸ್ಸಾದರೆ ನನ್ನ ಸ್ವಾಗತವಿದೆ: ಡಿಕೆ ಸುರೇಶ್
ಸಿದ್ದರಾಮಯ್ಯ ತಮ್ಮಿಂದಾದ ತಪ್ಪಿಗೆ ಬೆಲೆ ತೆರಬೇಕಾಗುತ್ತದೆ: ವಿ ಸೋಮಣ್ಣ
ಸಿದ್ದರಾಮಯ್ಯ ತಮ್ಮಿಂದಾದ ತಪ್ಪಿಗೆ ಬೆಲೆ ತೆರಬೇಕಾಗುತ್ತದೆ: ವಿ ಸೋಮಣ್ಣ
ಮುಸುಕುಧಾರಿ​ ಬಂಧನ: ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಮೊದಲ ಪ್ರತಿಕ್ರಿಯೆ
ಮುಸುಕುಧಾರಿ​ ಬಂಧನ: ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಮೊದಲ ಪ್ರತಿಕ್ರಿಯೆ
ಚಿನ್ನಯ್ಯನ ಅಣ್ಣ ತಾನಾಸಿಯ ವಿಚಾರಣೆಯನ್ನೂ ನಡೆಸುತ್ತಿರುವ ಎಸ್ಐಟಿ
ಚಿನ್ನಯ್ಯನ ಅಣ್ಣ ತಾನಾಸಿಯ ವಿಚಾರಣೆಯನ್ನೂ ನಡೆಸುತ್ತಿರುವ ಎಸ್ಐಟಿ
ನನ್ನನ್ನು ಎಸ್​ಐಟಿ ವಿಚಾರಣೆಗೆ ಕರೆದರೆ ಹೋಗುತ್ತೇನೆ: ಗಿರೀಶ್ ಮಟ್ಟಣ್ಣನವರ್
ನನ್ನನ್ನು ಎಸ್​ಐಟಿ ವಿಚಾರಣೆಗೆ ಕರೆದರೆ ಹೋಗುತ್ತೇನೆ: ಗಿರೀಶ್ ಮಟ್ಟಣ್ಣನವರ್
ಒಂದೇ ಓವರ್​ನಲ್ಲಿ 6 ಸಿಕ್ಸ್ ಸಿಡಿಸಿದ ರಾಸ್ ಟೇಲರ್
ಒಂದೇ ಓವರ್​ನಲ್ಲಿ 6 ಸಿಕ್ಸ್ ಸಿಡಿಸಿದ ರಾಸ್ ಟೇಲರ್
ಅವನ ತಂದೆ-ತಾಯಿ ತಮಿಳುನಾಡಿಂದ ಬಂದು ನಮ್ಮೂರಲ್ಲಿ ನೆಲೆಸಿದ್ದರು: ಗ್ರಾಮಸ್ಥರು
ಅವನ ತಂದೆ-ತಾಯಿ ತಮಿಳುನಾಡಿಂದ ಬಂದು ನಮ್ಮೂರಲ್ಲಿ ನೆಲೆಸಿದ್ದರು: ಗ್ರಾಮಸ್ಥರು
ಮಾಸ್ಕ್​​​ಮ್ಯಾನ್​​ ಚಿನ್ನಯ್ಯ ಎಸ್​ಐಟಿ ವಶಕ್ಕೆ, ಬೆಳ್ತಂಗಡಿ ಕೋರ್ಟ್ ಆದೇಶ
ಮಾಸ್ಕ್​​​ಮ್ಯಾನ್​​ ಚಿನ್ನಯ್ಯ ಎಸ್​ಐಟಿ ವಶಕ್ಕೆ, ಬೆಳ್ತಂಗಡಿ ಕೋರ್ಟ್ ಆದೇಶ