AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೈಕ್​ಗೆ ಟಿಪ್ಪರ್​ಗೆ ಡಿಕ್ಕಿ: ಒಂದೇ ಕುಟುಂಬದ ಮೂವರ ದುರ್ಮರಣ

ಸಂಚಾರಿ ಪೊಲೀಸರು ಎಷ್ಟೇ ಅಗತ್ಯ ಕ್ರಮಕೈಗೊಂಡರು ಅಪಘಾತಗಳ ಸಂಖ್ಯೆ ಏರುತ್ತಲೇ ಇದೆ. ಅದರಂತೆ ಇದೀಗ ಗುಂಡ್ಲುಪೇಟೆ (Gundlupet) ಪಟ್ಟಣದ ಹೊರ ವಲಯದ ಕೇರಳ ರಸ್ತೆಯಲ್ಲಿ ಟಿಪ್ಪರ್ ಹರಿದು ಕೇರಳ ಮೂಲದ ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ ಘಟನೆ ನಡೆದಿದೆ.

ಬೈಕ್​ಗೆ ಟಿಪ್ಪರ್​ಗೆ ಡಿಕ್ಕಿ: ಒಂದೇ ಕುಟುಂಬದ ಮೂವರ ದುರ್ಮರಣ
ರಾಯಚೂರಿನಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ: ಮೂವರು ದುರ್ಮರಣ
ಸೂರಜ್ ಪ್ರಸಾದ್ ಎಸ್ಎನ್
| Edited By: ಕಿರಣ್ ಹನುಮಂತ್​ ಮಾದಾರ್|

Updated on:Sep 17, 2024 | 6:02 PM

Share

ಚಾಮರಾಜನಗರ, ಸೆ.17: ಟಿಪ್ಪರ್ ಹರಿದು ಕೇರಳ ಮೂಲದ ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ ಘಟನೆ ಗುಂಡ್ಲುಪೇಟೆ(Gundlupet) ಪಟ್ಟಣದ ಹೊರ ವಲಯದ ಕೇರಳ ರಸ್ತೆಯಲ್ಲಿ ನಡೆದಿದೆ. ಪತಿ ದನೇಶ್, ಪತ್ನಿ ಅಂಜು ಹಾಗೂ ಮಗ ಇಶಾನ್ ಕೃಷ್ಣ ಮೃತ ರ್ದುದೈವಿಗಳು. ಮೂವರು ಒಂದೇ ಬೈಕ್​ನಲ್ಲಿ ಕೇರಳದಿಂದ ಗುಂಡ್ಲುಪೇಟೆ ಕಡೆಗೆ ಬೈಕ್​ನಲ್ಲಿ ಬರುತ್ತಿದ್ದರು. ಈ ವೇಳೆ ಕೂತನೂರು ಗುಡ್ಡದಿಂದ ಕಲ್ಲು ತುಂಬಿಕೊಂಡು ಬರುತ್ತಿದ್ದ ಕೆ.ಎ.11-ಬಿ 8497 ನೋಂದಣಿಯ ಟಿಪ್ಪರ್ ವಾಹನ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.

ಬೈಕ್ ಸಮೇತ ಸುಮಾರು 300 ಮೀಟರ್ ನಷ್ಟು ಎಳೆದೊಯ್ದ ಚಾಲಕ

ಇನ್ನು ಚಾಲಕ ಕುಡಿದ ಮತ್ತಿನಲ್ಲಿ ಟಿಪ್ಪರ್ ಚಾಲನೆ ಮಾಡಿದ್ದು, ಆತನ ಅಜಾಗರೂಕತೆಯಿಂದ ಮುಂಬದಿ ಹೋಗುತ್ತಿದ್ದ ಕೇರಳ ಮೂಲದ ಬೈಕ್​ಗೆ ಡಿಕ್ಕಿ ಹೊಡೆದಿದ್ದಾನೆ. ಬೈಕ್ ಸವಾರನ ಮೇಲೆ ಲಾರಿ ಹರಿದ ಪರಿಣಾಮ ದೇಹ ರಸ್ತೆಯಲ್ಲೇ ಛಿದ್ರ ಛಿದ್ರವಾಗಿದೆ. ಟಿಪ್ಪರ್ ಕೆಳಗೆ ಸಿಲುಕಿದ ಇನ್ನಿಬ್ಬರನ್ನ ಬೈಕ್ ಸಮೇತ ಸುಮಾರು 300 ಮೀಟರ್ ನಷ್ಟು ಲಾರಿ ಎಳೆದುಕೊಂಡು ಹೋಗಿದ್ದು, ಘಟನಾ ಸ್ಥಳಕ್ಕೆ ಗುಂಡ್ಲುಪೇಟೆ ಪಟ್ಟಣ ಠಾಣೆ ಪೊಲೀಸ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇನ್ನು ಮೃತ ದೇಹಗಳನ್ನು ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಇದನ್ನೂ ಓದಿ:ಪ್ರತ್ಯೇಕ ಘಟನೆ: ಬೆಳಗಾವಿಯಲ್ಲಿ ಸರಣಿ ಅಪಘಾತದಲ್ಲಿ ಇಬ್ಬರು ಸಾವು, ತುಮಕೂರಿನಲ್ಲಿ ಬೈಕ್ ಡಿಕ್ಕಿಯಾಗಿ ಇಬ್ಬರು ಮೃತ

ಕ್ಯಾನ್ಸರ್ ಖಾಯಿಲೆಯಿಂದ ಬಳಲುತ್ತಿದ್ದ ವೃದ್ದೆ 16ನೇ ಮಹಡಿಯಿಂದ ಬಿದ್ದು ಆತ್ಮಹತ್ಯೆ

ಬೆಂಗಳೂರು: ಕ್ಯಾನ್ಸರ್ ಖಾಯಿಲೆಯಿಂದ ಬಳಲುತ್ತಿದ್ದ ವೃದ್ದೆ 16ನೇ ಮಹಡಿಯಿಂದ ಬಿದ್ದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರು ಉತ್ತರ ತಾಲೂಕಿನ ಚಿಕ್ಕಬಿದರಕಲ್ಲುವಿನಲ್ಲಿರುವ ಐಷಾರಾಮಿ ಪ್ರೆಸ್ಟೀಜ್ ಜಿಂದಾಲ್ ಸಿಟಿ ಅಪಾರ್ಟ್ಮೆಂಟ್​ನಲ್ಲಿ ನಡೆದಿದೆ. ಮೃತೆ ಜಯಲಕ್ಷ್ಮಮ್ಮ ಪತಿ ಎರಡು ವರ್ಷದ ಹಿಂದೆ ಅನಾರೋಗ್ಯದಿಂದ ಸಾವನ್ನಪ್ಪಿದ್ದರು. ಇದರಿಂದಾಗಿ ಮಾನಸಿಕವಾಗಿ ನೊಂದಿದ್ದ ವೃದ್ದೆ ಜಯಲಕ್ಷ್ಮಮ್ಮ, ಕಳೆದ ಎರಡು ವರ್ಷದಿಂದ ಕ್ಯಾನ್ಸರ್​ನಿಂದ ಬಳಲುತ್ತಿದ್ದರು. ಮಗ ಡಾ.ರವಿಕುಮಾರ್, ಸೊಸೆ ಡಾ.ರಂಜಿನಿ ಮಣಿಪಾಲ್ ಆಸ್ಪತ್ರೆಗೆ ತೆರಳಿದ್ದರು.  ಈ ವೇಳೆ ಮಾನಸಿಕವಾಗಿ ನೊಂದು 16ನೇ ಮಹಡಿಯ ವಾಸವಿದ್ದ ಮನೆಯ ಕಿಟಕಿ ಮುಖಾಂತರವಾಗಿ ಬಿದ್ದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಸ್ಥಳಕ್ಕೆ ಬಂದ ಮಾದನಾಯಕನಹಳ್ಳಿ ಪೊಲೀಸರು, ಮೃತದೇಹವನ್ನ ಮರಣೋತ್ತರ ಪರೀಕ್ಷೆಗಾಗಿ ನೆಲಮಂಗಲ ಸಾರ್ವಜನಿಕ ಅಸ್ಪತ್ರೆಗೆ ರವಾನೆ ಮಾಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:54 pm, Tue, 17 September 24

Follow Us
ಸೂರಜ್ ಪ್ರಸಾದ್ ಎಸ್ಎನ್
ಸೂರಜ್ ಪ್ರಸಾದ್ ಎಸ್ಎನ್

ಸೂರಜ್ ಪ್ರಸಾದ್ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯವರು. ಬೆಳೆದಿದ್ದು ದಾವಣಗರೆ ಜಿಲ್ಲೆ ನ್ಯಾಮತಿ ತಾಲೂಕಿನಲ್ಲಿ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ನಲ್ಲಿ ಪತ್ರಿಕೋದ್ಯಮದಲ್ಲಿ ಪದವಿಪೂರ್ವ ಶಿಕ್ಷಣ ಪಡೆದಿದ್ದಾರೆ. 2014ರಿಂದ ನನ್ನ ಎಲೆಕ್ಟ್ರಾನಿಕ್ ಮಾದ್ಯಮದ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದ್ದರು. ಬೆಂಗಳೂರಿನಲ್ಲಿ 8 ವರ್ಷಗಳ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಹಾಗೂ ಕ್ರೈಂ ಇನ್ವೆಸ್ಟಿಗೇಟಿವ್ ವರದಿಗಾರನಾಗಿ ಹಾಗೂ ಸ್ಟಿಂಗ್ ಅಪರೇಷನ್ ಗಳನ್ನ ಮಾಡಿದ್ದಾರೆ. ಟಿವಿ9 ಕನ್ನಡ ಸಂಸ್ಥೆಗೆ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿ ಬಳಿಕ ಚಾಮರಾಜನಗರಕ್ಕೆ ವರ್ಗಾವಣೆಯಾಗಿ ಈಗ ಪ್ರಸ್ಥುತ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ಅಡಿಗೆ ಮಾಡುವುದು, ಕ್ರಿಕೆಟ್ ಆಡುವುದು ಕ್ರೈಂ ಇನ್ವೆಷ್ಟಿಗೇಷನ್ ನಾವೆಲ್ ಗಳನ್ನ ಓದುವುದು ಇವರ ಹವ್ಯಾಸ.

Read More
ಕುಮಾರಿ ವೇಸ್ಟ್​ ಪೀಸ್ ಎಂದ ಸೌಂದರ್ಯಾ ಶೆಟ್ಟಿ; ನಡೆಯಿತು ದೊಡ್ಡ ಜಗಳ
ಕುಮಾರಿ ವೇಸ್ಟ್​ ಪೀಸ್ ಎಂದ ಸೌಂದರ್ಯಾ ಶೆಟ್ಟಿ; ನಡೆಯಿತು ದೊಡ್ಡ ಜಗಳ
ಸೀಗೆ ಹುಣ್ಣಿಮೆ: ಕೊಪ್ಪಳ ಹುಲಿಗೆಮ್ಮ ದೇವಸ್ಥಾನಕ್ಕೆ ಭಕ್ತರ ಮಹಾಪೂರ, ಜನಸಾಗರ
ಸೀಗೆ ಹುಣ್ಣಿಮೆ: ಕೊಪ್ಪಳ ಹುಲಿಗೆಮ್ಮ ದೇವಸ್ಥಾನಕ್ಕೆ ಭಕ್ತರ ಮಹಾಪೂರ, ಜನಸಾಗರ
ಇಂದು ಸೀಗೆ ಹುಣ್ಣಿಮೆ; ಈ ರಾಶಿಯವರಿಗೆ ಶುಭ ದಿನ
ಇಂದು ಸೀಗೆ ಹುಣ್ಣಿಮೆ; ಈ ರಾಶಿಯವರಿಗೆ ಶುಭ ದಿನ
ವಾಯವ್ಯ ಕರ್ನಾಟಕ ಸಾರಿಗೆ ಸಂಸ್ಥೆ ಇನ್ಮುಂದೆ ರಾಣಿ ಚನ್ನಮ್ಮ ಸಾರಿಗೆ ಸಂಸ್ಥೆ
ವಾಯವ್ಯ ಕರ್ನಾಟಕ ಸಾರಿಗೆ ಸಂಸ್ಥೆ ಇನ್ಮುಂದೆ ರಾಣಿ ಚನ್ನಮ್ಮ ಸಾರಿಗೆ ಸಂಸ್ಥೆ
ಭುವನೇಶ್ವರದಲ್ಲಿ ಆರ್‌ಬಿಐನ 169 ಕೋಟಿ ರೂ. ಮೌಲ್ಯದ ಡೇಟಾ ಸೆಂಟರ್ ಉದ್ಘಾಟನೆ
ಭುವನೇಶ್ವರದಲ್ಲಿ ಆರ್‌ಬಿಐನ 169 ಕೋಟಿ ರೂ. ಮೌಲ್ಯದ ಡೇಟಾ ಸೆಂಟರ್ ಉದ್ಘಾಟನೆ
ಕಾಮಗಾರಿ ವೀಕ್ಷಣೆಗೆ ಬಂದಿದ್ದ ಶಾಸಕ ವಿಠ್ಠಲ್ ಹಲಗೇಕರ್​​​ಗೆ ಜನರಿಂದ ಕ್ಲಾಸ್
ಕಾಮಗಾರಿ ವೀಕ್ಷಣೆಗೆ ಬಂದಿದ್ದ ಶಾಸಕ ವಿಠ್ಠಲ್ ಹಲಗೇಕರ್​​​ಗೆ ಜನರಿಂದ ಕ್ಲಾಸ್
‘ಪ್ರೇಮದ ಊರಲಿ’ ಸಿನಿಮಾ ಬಗ್ಗೆ ಸಾಯಿಕುಮಾರ್ ಮಾತು: ನಟ ಹೇಳಿದ್ದೇನು?
‘ಪ್ರೇಮದ ಊರಲಿ’ ಸಿನಿಮಾ ಬಗ್ಗೆ ಸಾಯಿಕುಮಾರ್ ಮಾತು: ನಟ ಹೇಳಿದ್ದೇನು?
‘ಪ್ರೇಮದ ಊರಲಿ’ ಎಫೆಕ್ಟ್: ಚಿತ್ರೀಕರಣ ನಡೆದ ಸೀಗೆಗುಡ್ಡದಲ್ಲಿ ಜನಸಾಗರ
‘ಪ್ರೇಮದ ಊರಲಿ’ ಎಫೆಕ್ಟ್: ಚಿತ್ರೀಕರಣ ನಡೆದ ಸೀಗೆಗುಡ್ಡದಲ್ಲಿ ಜನಸಾಗರ
ವಾರಾಣಸಿಯ ನಮೋ ಘಾಟ್‌ನಲ್ಲಿ ಪ್ರಧಾನಿ ಮೋದಿಯ ಮನಸೆಳೆದ ಏರ್ ಶೋ
ವಾರಾಣಸಿಯ ನಮೋ ಘಾಟ್‌ನಲ್ಲಿ ಪ್ರಧಾನಿ ಮೋದಿಯ ಮನಸೆಳೆದ ಏರ್ ಶೋ
ರಾಹುಲ್ ಗಾಂಧಿ ಭೇಟಿಗೆ ಸಮಯ ಕೇಳಿದ ಸಿದ್ದರಾಮಯ್ಯ
ರಾಹುಲ್ ಗಾಂಧಿ ಭೇಟಿಗೆ ಸಮಯ ಕೇಳಿದ ಸಿದ್ದರಾಮಯ್ಯ