ಬೈಕ್​ಗೆ ಟಿಪ್ಪರ್​ಗೆ ಡಿಕ್ಕಿ: ಒಂದೇ ಕುಟುಂಬದ ಮೂವರ ದುರ್ಮರಣ

| Updated By: ಕಿರಣ್ ಹನುಮಂತ್​ ಮಾದಾರ್

Updated on: Sep 17, 2024 | 6:02 PM

ಸಂಚಾರಿ ಪೊಲೀಸರು ಎಷ್ಟೇ ಅಗತ್ಯ ಕ್ರಮಕೈಗೊಂಡರು ಅಪಘಾತಗಳ ಸಂಖ್ಯೆ ಏರುತ್ತಲೇ ಇದೆ. ಅದರಂತೆ ಇದೀಗ ಗುಂಡ್ಲುಪೇಟೆ (Gundlupet) ಪಟ್ಟಣದ ಹೊರ ವಲಯದ ಕೇರಳ ರಸ್ತೆಯಲ್ಲಿ ಟಿಪ್ಪರ್ ಹರಿದು ಕೇರಳ ಮೂಲದ ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ ಘಟನೆ ನಡೆದಿದೆ.

ಬೈಕ್​ಗೆ ಟಿಪ್ಪರ್​ಗೆ ಡಿಕ್ಕಿ: ಒಂದೇ ಕುಟುಂಬದ ಮೂವರ ದುರ್ಮರಣ
ರಾಯಚೂರಿನಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ: ಮೂವರು ದುರ್ಮರಣ
Follow us on

ಚಾಮರಾಜನಗರ, ಸೆ.17: ಟಿಪ್ಪರ್ ಹರಿದು ಕೇರಳ ಮೂಲದ ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ ಘಟನೆ ಗುಂಡ್ಲುಪೇಟೆ(Gundlupet) ಪಟ್ಟಣದ ಹೊರ ವಲಯದ ಕೇರಳ ರಸ್ತೆಯಲ್ಲಿ ನಡೆದಿದೆ. ಪತಿ ದನೇಶ್, ಪತ್ನಿ ಅಂಜು ಹಾಗೂ ಮಗ ಇಶಾನ್ ಕೃಷ್ಣ ಮೃತ ರ್ದುದೈವಿಗಳು. ಮೂವರು ಒಂದೇ ಬೈಕ್​ನಲ್ಲಿ ಕೇರಳದಿಂದ ಗುಂಡ್ಲುಪೇಟೆ ಕಡೆಗೆ ಬೈಕ್​ನಲ್ಲಿ ಬರುತ್ತಿದ್ದರು. ಈ ವೇಳೆ ಕೂತನೂರು ಗುಡ್ಡದಿಂದ ಕಲ್ಲು ತುಂಬಿಕೊಂಡು ಬರುತ್ತಿದ್ದ ಕೆ.ಎ.11-ಬಿ 8497 ನೋಂದಣಿಯ ಟಿಪ್ಪರ್ ವಾಹನ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.

ಬೈಕ್ ಸಮೇತ ಸುಮಾರು 300 ಮೀಟರ್ ನಷ್ಟು ಎಳೆದೊಯ್ದ ಚಾಲಕ

ಇನ್ನು ಚಾಲಕ ಕುಡಿದ ಮತ್ತಿನಲ್ಲಿ ಟಿಪ್ಪರ್ ಚಾಲನೆ ಮಾಡಿದ್ದು, ಆತನ ಅಜಾಗರೂಕತೆಯಿಂದ ಮುಂಬದಿ ಹೋಗುತ್ತಿದ್ದ ಕೇರಳ ಮೂಲದ ಬೈಕ್​ಗೆ ಡಿಕ್ಕಿ ಹೊಡೆದಿದ್ದಾನೆ. ಬೈಕ್ ಸವಾರನ ಮೇಲೆ ಲಾರಿ ಹರಿದ ಪರಿಣಾಮ ದೇಹ ರಸ್ತೆಯಲ್ಲೇ ಛಿದ್ರ ಛಿದ್ರವಾಗಿದೆ.
ಟಿಪ್ಪರ್ ಕೆಳಗೆ ಸಿಲುಕಿದ ಇನ್ನಿಬ್ಬರನ್ನ ಬೈಕ್ ಸಮೇತ ಸುಮಾರು 300 ಮೀಟರ್ ನಷ್ಟು ಲಾರಿ ಎಳೆದುಕೊಂಡು ಹೋಗಿದ್ದು,
ಘಟನಾ ಸ್ಥಳಕ್ಕೆ ಗುಂಡ್ಲುಪೇಟೆ ಪಟ್ಟಣ ಠಾಣೆ ಪೊಲೀಸ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇನ್ನು ಮೃತ ದೇಹಗಳನ್ನು ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಇದನ್ನೂ ಓದಿ:ಪ್ರತ್ಯೇಕ ಘಟನೆ: ಬೆಳಗಾವಿಯಲ್ಲಿ ಸರಣಿ ಅಪಘಾತದಲ್ಲಿ ಇಬ್ಬರು ಸಾವು, ತುಮಕೂರಿನಲ್ಲಿ ಬೈಕ್ ಡಿಕ್ಕಿಯಾಗಿ ಇಬ್ಬರು ಮೃತ

ಕ್ಯಾನ್ಸರ್ ಖಾಯಿಲೆಯಿಂದ ಬಳಲುತ್ತಿದ್ದ ವೃದ್ದೆ 16ನೇ ಮಹಡಿಯಿಂದ ಬಿದ್ದು ಆತ್ಮಹತ್ಯೆ

ಬೆಂಗಳೂರು: ಕ್ಯಾನ್ಸರ್ ಖಾಯಿಲೆಯಿಂದ ಬಳಲುತ್ತಿದ್ದ ವೃದ್ದೆ 16ನೇ ಮಹಡಿಯಿಂದ ಬಿದ್ದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರು ಉತ್ತರ ತಾಲೂಕಿನ ಚಿಕ್ಕಬಿದರಕಲ್ಲುವಿನಲ್ಲಿರುವ ಐಷಾರಾಮಿ ಪ್ರೆಸ್ಟೀಜ್ ಜಿಂದಾಲ್ ಸಿಟಿ ಅಪಾರ್ಟ್ಮೆಂಟ್​ನಲ್ಲಿ ನಡೆದಿದೆ. ಮೃತೆ ಜಯಲಕ್ಷ್ಮಮ್ಮ ಪತಿ ಎರಡು ವರ್ಷದ ಹಿಂದೆ ಅನಾರೋಗ್ಯದಿಂದ ಸಾವನ್ನಪ್ಪಿದ್ದರು. ಇದರಿಂದಾಗಿ ಮಾನಸಿಕವಾಗಿ ನೊಂದಿದ್ದ ವೃದ್ದೆ ಜಯಲಕ್ಷ್ಮಮ್ಮ, ಕಳೆದ ಎರಡು ವರ್ಷದಿಂದ ಕ್ಯಾನ್ಸರ್​ನಿಂದ ಬಳಲುತ್ತಿದ್ದರು. ಮಗ ಡಾ.ರವಿಕುಮಾರ್, ಸೊಸೆ ಡಾ.ರಂಜಿನಿ ಮಣಿಪಾಲ್ ಆಸ್ಪತ್ರೆಗೆ ತೆರಳಿದ್ದರು.  ಈ ವೇಳೆ ಮಾನಸಿಕವಾಗಿ ನೊಂದು
16ನೇ ಮಹಡಿಯ ವಾಸವಿದ್ದ ಮನೆಯ ಕಿಟಕಿ ಮುಖಾಂತರವಾಗಿ ಬಿದ್ದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಸ್ಥಳಕ್ಕೆ ಬಂದ ಮಾದನಾಯಕನಹಳ್ಳಿ ಪೊಲೀಸರು, ಮೃತದೇಹವನ್ನ ಮರಣೋತ್ತರ ಪರೀಕ್ಷೆಗಾಗಿ ನೆಲಮಂಗಲ ಸಾರ್ವಜನಿಕ ಅಸ್ಪತ್ರೆಗೆ ರವಾನೆ ಮಾಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:54 pm, Tue, 17 September 24