ಚಾಮರಾಜನಗರ ಕ್ಷೇತ್ರದಲ್ಲಿ ಮೂವರ ನಾಮಪತ್ರ ತಿರಸ್ಕೃತ: ಕಾಂಗ್ರೆಸ್ ಅಭ್ಯರ್ಥಿ ನಾಮಪತ್ರ ಏನಾಯ್ತು?

ಚಾಮರಾಜನಗರ ಕ್ಷೇತ್ರದಲ್ಲಿ ಮೂವರ ನಾಮಪತ್ರ ತಿರಸ್ಕೃತಗೊಂಡಿದ್ದು, 22 ಅಭ್ಯರ್ಥಿಗಳ ಉಮೇದುವಾರಿಕೆಗಳು ಕ್ರಮಬದ್ಧವಾಗಿವೆ ಎಂದು ಜಿಲ್ಲಾಧಿಕಾರಿ ಶಿಲ್ಪನಾಗ್ ಮಾಹಿತಿ ನೀಡಿದ್ದಾರೆ. ಇನ್ನು ಮುಖ್ಯವಾಗಿ ವಿವಾದಕ್ಕೆ ಕಾರಣವಾಗಿದ್ದ ಕಾಂಗ್ರೆಸ್ ಅಭ್ಯರ್ಥಿ ಸಚಿವ ಡಾ ಎಚ್​ಸಿ ಮಹದೇವಪ್ಪ ಅವರ ಪುತ್ರ ಸುನೀಲ್ ಬೋಸ್ ಅವರ ನಾಮಪತ್ರ ಕಥೆ ಏನಾಯ್ತು ಎನ್ನುವ ವಿವರ ಇಲ್ಲಿದೆ.

ಚಾಮರಾಜನಗರ ಕ್ಷೇತ್ರದಲ್ಲಿ ಮೂವರ ನಾಮಪತ್ರ ತಿರಸ್ಕೃತ: ಕಾಂಗ್ರೆಸ್ ಅಭ್ಯರ್ಥಿ ನಾಮಪತ್ರ ಏನಾಯ್ತು?
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on: Apr 05, 2024 | 10:14 PM

ಚಾಮರಾಜನಗರ, (ಏಪ್ರಿಲ್, 5): ಚಾಮರಾಜನಗರ ಎಸ್​​ಸಿ ಲೋಕಸಭಾ(chamarajanagar Loksabha constituency) ಕ್ಷೇತ್ರಕ್ಕೆ ಅಭ್ಯರ್ಥಿಗಳು ಸಲ್ಲಿಸಿದ್ದ ನಾಮಪತ್ರಗಳ ಪರಿಶೀಲನೆ ಮಾಡಲಾಗಿದ್ದು, ಮೂವರ ನಾಮಪತ್ರ ತಿರಸ್ಕೃತಗೊಂಡಿವೆ. ಇನ್ನು 22 ಅಭ್ಯರ್ಥಿಗಳದ್ದು ಕ್ರಮಬದ್ಧವಾಗಿವೆ ಎಂದು ಚಾಮರಾಜನಗರ ಜಿಲ್ಲಾ ಚುನಾವಣಾಧಿಕಾರಿ ಶಿಲ್ಪನಾಗ್ ಮಾಹಿತಿ ನೀಡಿದ್ದಾರೆ. ಇನ್ನು ಮುಖ್ಯವಾಗಿ ಕಾಂಗ್ರೆಸ್ ಅಭ್ಯರ್ಥಿ ಮಹದೇವಪ್ಪ ಪುತ್ರ ಸುನೀಲ್ ಬೋಸ್ ಅವರ ನಾಮಪತ್ರವೂ ಸಹ ಕ್ರಮಬದ್ಧವಾಗಿದೆ. ಸುನೀಲ್ ಬೋಸ್ ಅವರು ತಮ್ಮ ನಾಮಪತ್ರದಲ್ಲಿ ಸರಿಯಾದ ಮಾಹಿತಿ ನೀಡಿಲ್ಲ. ಹೀಗಾಗಿ ಅವರ ಉಮೇದುವಾರಿಕೆ ತಿರಸ್ಕೃತಗೊಳಿಸಬೇಕೆಂದು ಬಿಜೆಪಿ ದೂರು ನೀಡಿತ್ತು. ಆದ್ರೆ, ಚುನಾವಣಾಧಿಕಾರಿ ಎಲ್ಲಾ ಪರಿಶೀಲನೆ ನಡೆಸಿದ್ದು, ಎಲ್ಲವೂ ಸರಿಯಾಗಿದೆ ಎಂದು ಸುನೀಲ್ ಬೋಸ್ ಅವರ ನಾಮಪತ್ರವನ್ನು ಅಂಗೀಕರಿಸಿದ್ದಾರೆ. ಇದರಿಂದ ಕಾಂಗ್ರೆಸ್ ನಾಯಕರು ನಿಟ್ಟುಸಿರುಬಿಟ್ಟಿದ್ದಾರೆ. ಇನ್ನು ಆರೋಪ ಮಾಡಿದ್ದ ಬಿಜೆಪಿ ನಾಯಕರಿಗೆ ಮುಖಭಂಗವಾಗಿದೆ.

ಸಮಾಜವಾದಿ ಪಕ್ಷದ ಚಾಮದಾಸ್, ಪಕ್ಷೇತರ ಅಭ್ಯರ್ಥಿಗಳಾದ ಗುರುಲಿಂಗಯ್ಯ ಮತ್ತು ಸಿ.ರಾಜು ಅವರ ನಾಮಪತ್ರ ತಿರಸ್ಕೃತವಾಗಿದೆ. ಇನ್ನುಳಿದಂತೆ ಬಿಜೆಪಿ ಅಭ್ಯರ್ಥಿ ಬಾಲರಾಜು, ಕಾಂಗ್ರೆಸ್ ‌ ಅಭ್ಯರ್ಥಿ ಸುನೀಲ್ ಬೋಸ್ ಸೇರಿದಂತೆ ಒಟ್ಟು 22 ಅಭ್ಯರ್ಥಿಗಳ ನಾಮಪತ್ರ ಕ್ರಮಬದ್ಧವಾಗಿವೆ ಎಂದು ಜಿಲ್ಲಾ ಚುನಾವಣಾಧಿಕಾರಿ ಶಿಲ್ಪನಾಗ್ ಸ್ಪಷ್ಟಪಡಿಸಿದ್ದಾರೆ. ಇನ್ನೂ ನಾಮಪತ್ರ ವಾಪಸ್ ಪಡೆದುಕೊಳ್ಳುವುದಕ್ಕೂ ಸಮಯವಕಾಶ ಇದ್ದು, ಯಾರೆಲ್ಲ ವಾಪಸ್ ಪಡೆಯುತ್ತಾರೆ, ಯಾರೆಲ್ಲಾ ಕಣದಲ್ಲಿ ಉಳಿಯಲಿದ್ದಾರೆ ಎನ್ನುವುದನ್ನು ಕಾದುನೋಡಬೇಕಿದೆ.

ಇದನ್ನೂ ಓದಿ: ಚಾಮರಾಜನಗರ ಕಾಂಗ್ರೆಸ್ ಅಭ್ಯರ್ಥಿ ಸುನೀಲ್ ಬೋಸ್ ನಾಮಪತ್ರ ತಿರಸ್ಕೃತವಾಗುತ್ತಾ?

ಇನ್ನು ಮುಖ್ಯವಾಗಿ ಎಲ್ಲರೂ ಆತಂಕ ಮೂಡಿಸಿದ್ದು ಅಂದರೆ ಕಾಂಗ್ರೆಸ್ ಅಭ್ಯರ್ಥಿ ಸುನೀಲ್ ಬೋಸ್ ಅವರ ನಾಮಪತ್ರದ ಬಗ್ಗೆ. ಯಾಕಂದ್ರೆ, ಸುನೀಲ್ ಬೋಸ್ ಅವರು ತಮ್ಮ ವೈವಾಹಿಕ ಜೀವನ ಬಗ್ಗೆ ನಾಮಪತ್ರದಲ್ಲಿ ಮಾಹಿತಿ ನೀಡದೇ ಮುಚ್ಚಿಟ್ಟಿದ್ದಾರೆ ಎಂದು ಬಿಜೆಪಿ ನಾಯಕರು ಆರೋಪಿಸಿದ್ದರು. ಅಲ್ಲದೇ ಅವರ ನಾಮಪತ್ರ ತಿರಸ್ಕೃತ ಮಾಡುವಂತೆ ಬಿಜೆಪಿ ಅಭ್ಯರ್ಥಿ ಬಾಲರಾಜ ಅವರು ಚುನಾವಣಾಧಿಕಾರಿಗೆ ದೂರು ನೀಡಿದ್ದರು. ಆದ್ರೆ, ಇದೀಗ ಸುನೀಲ್ ಬೋಸ್ ಅವರ ನಾಮಪತ್ರ ಸರಿಯಾಗಿದೆ ಎಂದು ಚುನಾವಣಾಧಿಕಾರಿ ಅಂಗೀಕರಿಸಿದ್ದಾರೆ. ಹೀಗಾಗಿ ಕಾಂಗ್ರೆಸ್ ನಾಯಕರು ನಿರಾಳರಾಗಿದ್ದಾರೆ.

ಬಿಜೆಪಿ ಆರೋಪವೇನಾಗಿತ್ತು?

ಕಾಂಗ್ರೆಸ್ ಅಭ್ಯರ್ಥಿ ಸುನೀಲ್ ಬೋಸ್ ಅವರು ತಮ್ಮ ನಾಮಪತ್ರದಲ್ಲಿ ಹೆಂಡತಿ, ಮಕ್ಕಳ, ಕುಟುಂಬದ ಮಾಹಿತಿ ಮುಚ್ಚಿಟ್ಟಿದ್ದಾರೆ. ಅಲ್ಲದೇ ಪತ್ನಿ, ಮಕ್ಕಳು, ತಂದೆ-ತಾಯಿ ಆಸ್ತಿ ವಿವರ ಘೋಷಿಸಿಲ್ಲ. ಹೀಗಾಗಿ ಸುನೀಲ್ ಬೋಸ್ ಅವರ ನಾಮಪತ್ರವನ್ನು ಅಸಿಂಧುಗೊಳಿಸುವಂತೆ ಚಾಮರಾಜನಗರ ಜಿಲ್ಲಾ ಬಿಜೆಪಿ ಮಾಜಿ ಅಧ್ಯಕ್ಷ, ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಾಲರಾಜು ಅವರು ಜಿಲ್ಲಾ ಚುನಾವಣಾಧಿಕಾರಿಗೆ ದೂರು ನೀಡಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಸಚಿನ್ ಕುಟುಂಬಕ್ಕೆ ರಾಜ್ಯ ಸರ್ಕಾರದ ಮೇಲೆ ನಂಬಿಕೆ ಇಲ್ಲ: ಆರ್ ಅಶೋಕ
ಸಚಿನ್ ಕುಟುಂಬಕ್ಕೆ ರಾಜ್ಯ ಸರ್ಕಾರದ ಮೇಲೆ ನಂಬಿಕೆ ಇಲ್ಲ: ಆರ್ ಅಶೋಕ
ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ
ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್