ಚಾಮರಾಜನಗರ: ಮೂತ್ರ ವಿಸರ್ಜನೆಗೆಂದು ಹೊರ ಬಂದ ವ್ಯಕ್ತಿ ಮೇಲೆ ಹುಲಿ ದಾಳಿ

ಚಾಮರಾಜನಗರ ತಾಲ್ಲೂಕಿನ ಬಿಳಿಗಿರಿರಂಗನ ಬೆಟ್ಟದ ರಾಮಯ್ಯನ ಪೋಡಿ ಎಂಬಲ್ಲಿ ಹುಲಿ ದಾಳಿಯೊಂದು ನಡೆದಿದೆ. ಹುಲಿ ದಾಳಿಯಲ್ಲಿ ಗಾಯಗೊಂಡ ರವಿ ಎಂಬುವರನ್ನು ಚಾಮರಾಜನಗರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅರಣ್ಯ ಇಲಾಖೆ ಸಿಬ್ಬಂದಿ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹುಲಿ ದಾಳಿ ನಡೆದ ಸ್ಥಳದಲ್ಲಿ ವಾಸಿಸುವ ಮೂರು ಕುಟುಂಬಗಳನ್ನು ಸಮೀಪದ ಆಶ್ರಮ ಶಾಲೆಯಲ್ಲಿ ತಾತ್ಕಾಲಿಕವಾಗಿ ಇರಿಸಲಾಗಿದೆ ಎಂದು ವರದಿಯಾಗಿದೆ.

ಚಾಮರಾಜನಗರ: ಮೂತ್ರ ವಿಸರ್ಜನೆಗೆಂದು ಹೊರ ಬಂದ ವ್ಯಕ್ತಿ ಮೇಲೆ ಹುಲಿ ದಾಳಿ
ಹುಲಿ
Updated By: ವಿವೇಕ ಬಿರಾದಾರ

Updated on: Jun 10, 2025 | 5:05 PM

ಚಾಮರಾಜನಗರ, ಜೂನ್​ 10: ಮೂತ್ರ ವಿಸರ್ಜನೆಗೆಂದು ಮನೆಯಿಂದ ಹೊರಗೆ ಬಂದಿದ್ದ ವ್ಯಕ್ತಿ ಮೇಲೆ ಹುಲಿ (Tiger) ದಾಳಿ ಮಾಡಿರುವ ಘಟನೆ ಚಾಮರಾಜನಗರ (Chamarajanagar) ತಾಲೂಕಿನ ಬಿಳಿಗಿರಿರಂಗನ ಬೆಟ್ಟ ಹುಲಿ ಸಂರಕ್ಷಿತ ಅರಣ್ಯದಲ್ಲಿರುವ ರಾಮಯ್ಯನ ಪೋಡಿ ಎಂಬಲ್ಲಿ ನಡೆದಿದೆ. ಹುಲಿ ದಾಳಿಯಿಂದ ರವಿ ಎಂಬುವರ ತಲೆ, ಕೈ, ಕಾಲಿಗೆ ಗಾಯವಾಗಿದೆ. ಗಾಯಗೊಂಡಿರುವ ರವಿ ಅವರನ್ನು ಚಾಮರಾಜನಗರ ಸರ್ಕಾರಿ ಭೋದನಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ಹಬ್ಬಕೆಂದು ರವಿ ಚಿಕ್ಕಮ್ಮನ ಮನೆಗೆ ಬಂದಿದ್ದರು. ಸೋಮವಾರ (ಜೂ.09) ರಾತ್ರಿ ಮೂತ್ರ ವಿಸರ್ಜನೆಗೆ ಮನೆಯಿಂದ ಹೊರ ಬಂದಾಗ ಹುಲಿ ದಾಳಿ ಮಾಡಿದೆ. ಅದೃಷ್ಟವಶಾತ್ ರವಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ರಾಮಯ್ಯನ ಪೋಡಿನಲ್ಲಿ ಹುಲಿ ದಾಳಿಯಿಂದ ರವಿ ಎಂಬುವರು ತೀವ್ರ ಸ್ವರೂಪವಾಗಿ ಗಾಯಗೊಂಡಿದ್ದಾರೆ. ಹುಲಿ ದಾಳಿ ನಡೆಸಿದ ಸ್ಥಳದಲ್ಲಿ ಮೂರು ಕುಟುಂಬಗಳಿವೆ. ಅವರನ್ನು ಸಮೀಪದ ಆಶ್ರಮ ಶಾಲೆಯಲ್ಲಿ ಆಶ್ರಯ ಪಡೆಯಲು ಅವಕಾಶ ಕಲ್ಪಿಸಲಾಗಿದೆ ಎಂದು ವರದಿಯಾಗಿದೆ.

ಇದನ್ನೂ ಓದಿ
ಚಾಮರಾಜನಗರದಲ್ಲಿ ಅತಿ ಶೀಘ್ರದಲ್ಲಿ ಕಾನೂನು ಕಾಲೇಜು ಆರಂಭ
ಅಕ್ರಮ ಸಂಬಂಧ: ಪತ್ನಿಯನ್ನು ಪೊಲೀಸ್ ಠಾಣೆಯ ಸಮೀಪವೇ ಕೊಂದ ಪತಿ
ಚಾಮರಾಜನಗರ: ಗ್ಯಾಸ್ ಕೊಡುವ ನೆಪದಲ್ಲಿ ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನ
ಬಂಡೀಪುರದಲ್ಲಿ ಉದ್ಘಾಟನೆಗೆ ಸಿದ್ಧವಾಯ್ತು ಟೈಗರ್ ರಿಸರ್ಚ್ ಮಾನಿಟರಿಂಗ್ ಸೆಲ್

ಬೆಂಗಳೂರಿನಲ್ಲಿ ಚಿರತೆ ಪ್ರತ್ಯಕ್ಷ

ಇತ್ತೀಚಿಗೆ ಬೆಂಗಳೂರಿನ ತಲಘಟ್ಟಪುರ ಮತ್ತು ಮಲ್ಲಸಂದ್ರ ಸುತ್ತಮುತ್ತ ಕಾಣಿಸಿಕೊಂಡಿತ್ತು. ಚಿರತೆ ಓಡಾಡಿದ್ದರ ಬಗ್ಗೆ ಸ್ಥಳೀಯರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದರು. ಸ್ಥಳೀಯರ ಮಾಹಿತಿ ಹಿನ್ನೆಲೆ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಬಂದು ಪರಿಶೀಲನೆ ಮಾಡಿದ್ದರು. ಚಿರತೆ ಪತ್ತೆಹಚ್ಚಲು ಅರಣ್ಯ ಇಲಾಖೆ ಅಧಿಕಾರಿಗಳು ನಾಲ್ಕೈದು ಕಡೆ‌ ಕ್ಯಾಮರಾ ಅಳವಡಿಸಿದ್ದರು.

ಇದನ್ನೂ ಓದಿ: ವರ್ಷದ ಮೊದಲ ಮಳೆಗೆ ಬಂಡೀಪುರ ಹಸಿರುಮಯ: ಕೆರೆಗಳು ಭರ್ತಿ, ಸಫಾರಿಗೆ ಒಳ್ಳೆ ಸಮಯ

ಇನ್ನು ಕೋಲಾರ ಜಿಲ್ಲೆಯ ಮಾಲೂರು ತಾಲ್ಲೂಕು ಚಿಕ್ಕ ತಿರುಪತಿ ಗ್ರಾಮ ಪಂಚಾಯತ್​ನ ಚಿಕ್ಕತಿರುಪತಿ, ಆಲಂಬಾಡಿ ಸುತ್ತಮುತ್ತ ಚಿರತೆ ಕಾಣಿಸಿಕೊಂಡಿತ್ತು. ಚಿರತೆ ಓಡಾಟದಿಂದಾಗಿ ಸುತ್ತಮುತ್ತಲಿನ ಗ್ರಾಮಸ್ಥರಲ್ಲಿ ಆತಂಕ ಶುರುವಾಗಿತ್ತು, ಕಳೆದ ಕೆಲ ದಿನಗಳಿಂದ ಈ ಭಾಗದಲ್ಲಿ ಆಗಾಗ ಚಿರತೆ ಪ್ರತ್ಯಕ್ಷವಾಗುತ್ತಿತ್ತು. ನಾಯಿ, ಹಸುಗಳ ಮೇಲೆ ದಾಳಿ ಮಾಡುತ್ತಿತ್ತು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ