ಬಂಡೀಪುರದಲ್ಲಿ ಉದ್ಘಾಟನೆಗೆ ಸಿದ್ಧವಾಯ್ತು ಟೈಗರ್ ರಿಸರ್ಚ್ ಮಾನಿಟರಿಂಗ್ ಸೆಲ್: ಪ್ರತಿ ವರ್ಷ ಸುಲಭವಾಗಿ ನಡೆಯಲಿದೆ ಹುಲಿ ಗಣತಿ

ಕರ್ನಾಟಕದಲ್ಲೇ ಅತಿ ಹೆಚ್ಚು ಹುಲಿಗಳನ್ನು ಹೊಂದಿರುವ ಬಂಡೀಪುರದ ಪ್ರಾಕೃತಿಕ ಸೌಂದರ್ಯಕ್ಕೆ ಮನ ಸೋಲದವರೇ ಇಲ್ಲ. ಇಂತಹ ಹುಲಿ ಸಂರಕ್ಷಿತ ಅರಣ್ಯದಲ್ಲಿ ಹುಲಿಗಳ ಕುರಿತು ರಿಸರ್ಚ್ ನಡೆಸಬೇಕಿದ್ದರೆ ಅರಣ್ಯಾಧಿಕಾರಿಗಳು ಪಡಬಾರದ ಪಡಿಪಾಟಲು ಪಡುತ್ತಿದ್ದರು. ಆದರೆ, ಇನ್ನುಮುಂದೆ ಆ ಕಷ್ಟಪಡಬೇಕಿಲ್ಲ. ಆ ಸಂಕಷ್ಟಕ್ಕೆ ಈಗ ಬ್ರೇಕ್ ಬಿದ್ದಿದೆ.

ಬಂಡೀಪುರದಲ್ಲಿ ಉದ್ಘಾಟನೆಗೆ ಸಿದ್ಧವಾಯ್ತು ಟೈಗರ್ ರಿಸರ್ಚ್ ಮಾನಿಟರಿಂಗ್ ಸೆಲ್: ಪ್ರತಿ ವರ್ಷ ಸುಲಭವಾಗಿ ನಡೆಯಲಿದೆ ಹುಲಿ ಗಣತಿ
ಬಂಡೀಪುರದ ಮೇಲುಕಾಮನ ಹಳ್ಳಿಯಲ್ಲಿ ಟೈಗರ್ ರಿಸರ್ಚ್ ಸೆಲ್
Edited By:

Updated on: May 19, 2025 | 12:46 PM

ಚಾಮರಾಜನಗರ, ಮೇ 19: ಚಾಮರಾಜನಗರ (Chamarajanagar) ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನಲ್ಲಿರುವ ಬಂಡೀಪುರ ಟೈಗರ್ ರಿಸರ್ವ್ ಫಾರೆಸ್ಟ್​ನ ಪ್ರಕೃತಿಯ ಸೌಂದರ್ಯಕ್ಕೆ ಮನಸೋಲದವರೇ ಕಡಿಮೆ ಎನ್ನಬಹುದು. ಕರ್ನಾಟಕದಲ್ಲೇ ಅತಿ ಹೆಚ್ಚು ಹುಲಿಗಳು, ಆನೆ ಮತ್ತು ಚಿರತೆಗಳನ್ನ ಹೊಂದಿರುವ ಏಕೈಕ ಹುಲಿ ಸಂರಕ್ಷಿತಾರಣ್ಯ ಇದು. ಇಂತಹ ಬಂಡೀಪುರದಲ್ಲಿ ಹುಲಿ ಗಣತಿ ಕಾರ್ಯ ಅಥವಾ ಯಾವುದಾದರೂ ಸಂಶೋಧನೆ ಮಾಡಬೇಕಾದರೆ ದೂರದ ಬೆಂಗಳೂರಿನ ಕೇಂದ್ರ ಕಚೇರಿಗೆ ತೆರಳಬೇಕಿತ್ತು. ಇದರಿಂದ ಅರಣ್ಯಾಧಿಕಾರಿಗಳಿಗೆ ಭಾರೀ ಸಂಕಷ್ಟ ಎದುರಾಗುತ್ತಿತ್ತು. ಈಗ ಇದಕ್ಕೊಂದು ಪರಿಹಾರ ಸಿಕ್ಕಿದೆ. ಇನ್ನು ಕೆಲವೇ ದಿನಗಳಲ್ಲಿ ಬಂಡೀಪುರದ ಮೇಲುಕಾಮನ ಹಳ್ಳಿಯಲ್ಲಿ ಟೈಗರ್ ರಿಸರ್ಚ್ ಸೆಲ್ ಆರಂಭಗೊಳ್ಳಲಿದೆ.

ಬಂಡೀಪುರ ಸೇರಿದಂತೆ ರಾಜ್ಯದಲ್ಲಿ ಬಿಳಿಗಿರಿ ಟೈಗರ್ ರಿಸರ್ವ್, ಭದ್ರ ಟೈಗರ್ ರಿಸರ್ವ್, ನಾಗರಹೊಳೆ ಟೈಗರ್ ರಿಸರ್ವ್ ಫಾರೆಸ್ಟ್ ಗಳಿವೆ. ರಾಜ್ಯದ ಎಲ್ಲಾ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಒಂದು ಟೈಗರ್ ರಿಸರ್ಚ್ ಆ್ಯಂಡ್ ಮಾನಿಟರಿಂಗ್ ಸೆಲ್​ನ ಅನಿವಾರ್ಯತೆ ಕುರಿತು ಅರಣ್ಯ ಸಚಿವ ಈಶ್ವರ್ ಖಂಡ್ರೆಗೆ ವರದಿ ನೀಡಲಾಗಿತ್ತು. ಈ ವರದಿ ಆದಾರದ ಮೇಲೆ ರಾಜ್ಯದ ಎಲ್ಲಾ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಟೈಗರ್ ಸೆಲ್ ತೆರೆಯಲು ರಾಜ್ಯ ಸರ್ಕಾರ ಮುಂದಾಗಿದ್ದು, ಅದರ ಮೊದಲ ಹಂತವಾಗಿ ಬಂಡೀಪುರದಲ್ಲಿ ಹೊಸ ಕಟ್ಟಡ ನಿರ್ಮಾಣವಾಗಿದೆ. ಇನ್ನು ಕೆಲ ದಿನಗಳಲ್ಲೇ ನೂತನ ಟೈಗರ್ ರಿಸರ್ಚ್ ಆ್ಯಂಡ್ ಮಾನಿಟರಿಂಗ್ ಸೆಲ್ ಲೋಕಾರ್ಪಣೆ ಗೊಳ್ಳಲಿದೆ.

ಟೈಗರ್ ರಿಸರ್ಚ್ ಆ್ಯಂಡ್ ಮಾನಿಟರಿಂಗ್ ಸೆಲ್ ಪ್ರಯೋಜನವೇನು?

ಟೈಗರ್ ರಿಸರ್ಚ್ ಆ್ಯಂಡ್ ಮಾನಿಟರಿಂಗ್ ಸೆಲ್ ನೆರವಿನಿಂದ ಬಂಡೀಪುರದಲ್ಲಿ ಪ್ರತಿಯೊಂದು ಹುಲಿಯ ಮಾನಿಟರಿಂಗ್ ಮಾಡಬಹುದು. ವರ್ಷದಿಂದ ವರ್ಷಕ್ಕೆ ಎಷ್ಟು ಹುಲಿಗಳ ಸಂಖ್ಯೆ ಹೆಚ್ಚಾಗಿದೆ? ಅಥವಾ ಕಡಿಮೆ ಆಗಿದೆ ಎಂಬುದರ ನಿಖರ ಮಾಹಿತಿ ದೊರೆಯಲಿದೆ. ಇದರ ಜೊತೆಗೆ ಕ್ಯಾಪ್ಚರಿಂಗ್ ಕಾರ್ಯ ಹಾಗೂ ಯಾವುದಾದರೂ ಹುಲಿಯ ಮೇಲೆ ಸಂಶೋಧನೆಯನ್ನೂ ಇಲ್ಲೇ ಮಾಡಬಹುದಾಗಿದೆ ಎಂದು ಸಿಎಫ್ ಪ್ರಭಾಕರನ್ ತಿಳಿಸಿದ್ದಾರೆ.

ಇದನ್ನೂ ಓದಿ
ಕೇಂದ್ರ ಕೊಟ್ಟ ಹಣ ಬಳಸುವಲ್ಲಿ ಕರ್ನಾಟಕ ಕಾಂಗ್ರೆಸ್ ಸರ್ಕಾರ ವಿಫಲ: ಜೋಶಿ
ಮಳೆ ಅಬ್ಬರಕ್ಕೆ ಶಾಂತಿನಗರದಲ್ಲಿ ಭಾಗಶಃ ಮುಳುಗಿದ ಬಸ್​ಗಳು
ಬೆಂಗಳೂರು ಮಳೆ ಸೃಷ್ಟಿಸಿದ ಅಧ್ವಾನ ಒಂದೆರಡಲ್ಲ; ಎಲ್ಲೆಲ್ಲಿ ಏನೇನಾಯ್ತು ನೋಡಿ
ಭಾರಿ ಮಳೆಗೆ ಬೆಂಗಳೂರು ಹೈರಾಣ, ಹಲವೆಡೆ ಸಂಚಾರಕ್ಕೆ ಅಡಚಣೆ: ಇಲ್ಲಿದೆ ವಿವರ

ಇದನ್ನೂ ಓದಿ: ಚಾಮರಾಜನಗರ: ನೆಲಕಚ್ಚಿದ್ದ ರೇಷ್ಮೆ ಕೃಷಿಗೆ ಸರ್ಕಾರದಿಂದ ಉತ್ತೇಜನ, ರೈತರಿಗೆ ಸಕಲ ಸವಲತ್ತು

ಸದ್ಯ ರಾಜ್ಯ ಸರ್ಕಾರದ ಈ ನಡೆಯಿಂದ ಮುಂಬರುವ ದಿನಗಳಲ್ಲಿ ಕಾಡುಪ್ರಾಣಿಗಳ ಕುರಿತಾದ ನಿಖರ ಹಾಗೂ ಸ್ಪಷ್ಟ ಮಾಹಿತಿ ಸಿಗಲಿದೆ. ಇದರ ಜೊತೆಗೆ, ವನ್ಯ ಮೃಗಗಳ ಕುರಿತ ಹೆಚ್ಚು ನಿಖರವಾದ ಅದ್ಯಯನ ಸಾಧ್ಯವಾಗಲಿದೆ.

ಕರ್ನಾಟಕದ ಇನ್ನಷ್ಟು  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:04 am, Mon, 19 May 25

ಸೂರಜ್ ಪ್ರಸಾದ್ ಎಸ್ಎನ್

ಸೂರಜ್ ಪ್ರಸಾದ್ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯವರು. ಬೆಳೆದಿದ್ದು ದಾವಣಗರೆ ಜಿಲ್ಲೆ ನ್ಯಾಮತಿ ತಾಲೂಕಿನಲ್ಲಿ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ನಲ್ಲಿ ಪತ್ರಿಕೋದ್ಯಮದಲ್ಲಿ ಪದವಿಪೂರ್ವ ಶಿಕ್ಷಣ ಪಡೆದಿದ್ದಾರೆ. 2014ರಿಂದ ನನ್ನ ಎಲೆಕ್ಟ್ರಾನಿಕ್ ಮಾದ್ಯಮದ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದ್ದರು. ಬೆಂಗಳೂರಿನಲ್ಲಿ 8 ವರ್ಷಗಳ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಹಾಗೂ ಕ್ರೈಂ ಇನ್ವೆಸ್ಟಿಗೇಟಿವ್ ವರದಿಗಾರನಾಗಿ ಹಾಗೂ ಸ್ಟಿಂಗ್ ಅಪರೇಷನ್ ಗಳನ್ನ ಮಾಡಿದ್ದಾರೆ. ಟಿವಿ9 ಕನ್ನಡ ಸಂಸ್ಥೆಗೆ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿ ಬಳಿಕ ಚಾಮರಾಜನಗರಕ್ಕೆ ವರ್ಗಾವಣೆಯಾಗಿ ಈಗ ಪ್ರಸ್ಥುತ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ಅಡಿಗೆ ಮಾಡುವುದು, ಕ್ರಿಕೆಟ್ ಆಡುವುದು ಕ್ರೈಂ ಇನ್ವೆಷ್ಟಿಗೇಷನ್ ನಾವೆಲ್ ಗಳನ್ನ ಓದುವುದು ಇವರ ಹವ್ಯಾಸ.

Read More
Loading...
Unable to load recommendations.
Follow Us