AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿವಿ9 ಇಂಪ್ಯಾಕ್ಟ್: ಕಾಡಂಚಿನ ಗ್ರಾಮ ಪಾಲಾರ್​ಗೆ ನೀರಿನ ವ್ಯವಸ್ಥೆ

ಒಂದು ಹನಿ ನೀರಿಗಾಗಿ ಕಾಡಿನ ದುರ್ಗಮ ಪ್ರದೇಶದಲ್ಲಿ ಕಿಲೋ ಮೀಟರ್ ಸಾಗಿ ಪಡಬಾರದ ಪರಿಪಾಟಲು ಪಡುತ್ತಿದ್ದ ಹನೂರು ತಾಲೂಕಿನ ಪಾಲಾರ್ ಗ್ರಾಮಸ್ಥರ ಅಳಲನ್ನು ಬಿತ್ತರಿಸಿದ್ದ ಟಿವಿ9 ವರದಿ ಈಗ ಬಿಗ್ ಇಂಪ್ಯಾಕ್ಟ್ ಆಗಿದೆ. ಟಿವಿ9 ವರದಿ ಬೆನ್ನಲ್ಲೇ ಜಿಲ್ಲಾಡಳಿತ ಎಚ್ಚೆತ್ತು, ಈಗ ಕುಡಿಯುವ ನೀರಿನ ವ್ಥವಸ್ಥೆ ಮಾಡಿದೆ ಈ ಕುರಿತಾದ ಸಂಪೂರ್ಣ ಮಾಹಿತಿ ಇಲ್ಲಿದೆ.

ಟಿವಿ9 ಇಂಪ್ಯಾಕ್ಟ್: ಕಾಡಂಚಿನ ಗ್ರಾಮ ಪಾಲಾರ್​ಗೆ ನೀರಿನ ವ್ಯವಸ್ಥೆ
ಕಾಡಂಚಿನ ಗ್ರಾಮ ಪಾಲಾರ್​ಗೆ ನೀರಿನ ವ್ಯವಸ್ಥೆ
ಸೂರಜ್ ಪ್ರಸಾದ್ ಎಸ್.ಎನ್
| Edited By: ಕಿರಣ್ ಹನುಮಂತ್​ ಮಾದಾರ್|

Updated on: Mar 07, 2024 | 5:25 PM

Share

ಚಾಮರಾಜನಗರ, ಮಾ.07: ಕಳೆದ ಭಾನುವಾರ ಟಿವಿ9, ಚಾಮರಾಜನಗರ(Chamarajanagar) ಜಿಲ್ಲೆಯ ಹನೂರು ತಾಲೂಕಿನ ಪಾಲಾರ್ ಗ್ರಾಮಸ್ಥರು ಹನಿ ನೀರಿಗಾಗಿ ಪರದಾಡುವ ವರದಿ ಬಿತ್ತರಿಸಿತ್ತು. ಪಾಲಾರ್ ಗ್ರಾಮದ ಮಹಿಳೆಯರು ಕುಡಿಯಲು ನೀರು ತರಲು ಕಿಲೋ ಮೀಟರ್ ಗಟ್ಟಲೇ ಕಾಡಿನ ದುರ್ಗಮ ಪ್ರದೇಶದಲ್ಲಿ ನಡೆದುಕೊಂಡು ಹೋಗುತ್ತಿದ್ದರು. ಕಾಡು ಪ್ರಾಣಿಗಳ ಭಯದಲ್ಲೇ ಬತ್ತಿದ ನದಿಯಲ್ಲಿ ಮರಳನ್ನ ತೋಡಿ ಅದರಲ್ಲಿ ಬರುವ ನೀರನ್ನ ತೆಗೆದು ಸೋಸಿ ಕುಡಿಯುವ ದೃಶ್ಯ ಕರಳು ಕಿವುಚುವಂತಿತ್ತು. ಈ ಕುರಿತು ಟಿವಿ9, ಬಿಟ್ಟು ಬಿಡದೆ ವರದಿ ಮಾಡಿತ್ತು. ಟಿವಿ9 ವರದಿ ಪ್ರಸಾರ ಮಾಡಿದ ಬೆನ್ನಲ್ಲೇ ಈಗ ಜಿಲ್ಲಾಡಳಿತ ಎಚ್ಚೆತ್ತುಕೊಂಡು ಗ್ರಾಮಸ್ಥರಿಗೆ ಕುಡಿಯುವ ನೀರಿನ ವ್ಯವಸ್ಥೆ ಮಾಡಿದೆ.

ಪಾಲಾರ್ ಗ್ರಾಮಕ್ಕೆ ಜಲ ಜೀವನ್ ಮಿಷನ್ ಅಡಿಯಲ್ಲಿ ನಲ್ಲಿ ವ್ಯವಸ್ಥೆ ಮಾಡಿದರೂ ಅದಕ್ಕೆ ಕನೆಕ್ಷನ್ ನೀಡಿಲ್ಲ. ಆ ನಲ್ಲಿಗಳಲ್ಲಿ ಒಂದೇ ಒಂದು ಹನಿ ನೀರು ಬರುತ್ತಿರಲಿಲಲ್ಲ, ಮತ್ತೊಂದೆಡೆ ಬೋರ್ವೆಲ್​​ನಲ್ಲಿ ನೀರು ಬರುತ್ತಿಲ್ಲ. ಈ ಕುರಿತು ಭಾನುವಾರ ಟಿವಿ9 ಸುದ್ದಿ ಬಿತ್ತರಿಸಿತ್ತು. ಈ ವರದಿ ಬಿತ್ತರವಾದ ಬೆನ್ನಲ್ಲೇ ಈಗ ಜಿಲ್ಲಾಡಳಿತ ಪಾಲಾರ್ ಗ್ರಾಮಕ್ಕೆ ಭೇಟಿ ನೀಡಿ ಬೋರ್​ವೆಲ್ ಸರಿ ಪಡಿಸಿದ್ದು, ಬೋರ್ವೆಲ್​ನಲ್ಲಿ ನೀರು ಬರುವಂತೆ ಮಾಡಿದ್ದಾರೆ.

ಇದನ್ನೂ ಓದಿ: ಕೃಷ್ಣಾ ನದಿ ಕೂಗಳತೆ ದೂರದಲ್ಲೇ ನೀರಿಗಾಗಿ ಪರದಾಟ; ಜನಪ್ರತಿನಿಧಿಗಳ ವಿರುದ್ದ ಆಕ್ರೋಶ ಹೊರ ಹಾಕುತ್ತಿರುವ ಗ್ರಾಮಸ್ಥರು

ಟ್ಯಾಂಕರ್ ಮುಖಾಂತರ ನೀರು ಪೂರೈಸಿ, ಕೊಳಾಯಿಗಳಲ್ಲಿ ನೀರು ಬರುವಂತೆ ಮಾಡಿದೆ. ನೀರು ಬರುತ್ತಿದ್ದಂತೆ ಪಾಲಾರ್ ಜನತೆ ಖುಷಿ ಪಟ್ಟಿದ್ದು ಟಿವಿ9 ವರದಿ ಈಗ ಪಲಶೃತಿ ನೀಡಿದೆ. ಅದೇನೆ ಹೇಳಿ ಕಾಡಿನ ಮಕ್ಕಳು ಕುಡಿಯುವ ನೀರಿಗೆ ಪರಿತಪಿಸುವ ಪರಿಸ್ಥಿತಿ ಟಿವಿ9 ವರದಿಯಿಂದ ಬದಲಾಗಿದೆ. ಗ್ರಾಮಸ್ಥರಿಗೆ ಕುಡಿಯುವ ನೀರಿನ ಸೌಕರ್ಯ ಸಿಕ್ಕಿದೆ. ಟಿವಿ9 ವರದಿಯಿಂದ ಕಾಡಿನ ದುರ್ಗಮ ಪ್ರದೇಶದಲ್ಲಿ ಕಿಲೋ ಮೀಟರ್ ತಿರುಗುವುದಕ್ಕೆ ಬ್ರೇಕ್ ಬಿದ್ದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Suraj Prasad SN
Suraj Prasad SN

ಸೂರಜ್ ಪ್ರಸಾದ್ ಎಸ್.ಎನ್ ಆದ ನಾನು ಹುಟ್ಟಿದ್ದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ. ಬೆಳೆದಿದ್ದು ದಾವಣಗರೆ ಜಿಲ್ಲೆ ನ್ಯಾಮತಿ ತಾಲೂಕಿನಲ್ಲಿ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ನಲ್ಲಿ ಪತ್ರಿಕೋದ್ಯಮದಲ್ಲಿ ಪದವಿಪೂರ್ವ ಶಿಕ್ಷಣ ಪಡೆದಿದ್ದು 2014ರಿಂದ ನನ್ನ ಎಲೆಕ್ಟ್ರಾನಿಕ್ ಮಾದ್ಯಮದ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದ್ದು ಬೆಂಗಳೂರಿನಲ್ಲಿ 8 ವರ್ಷಗಳ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಹಾಗೂ ಕ್ರೈಂ ಇನ್ವೆಸ್ಟಿಗೇಟಿವ್ ವರದಿಗಾರನಾಗಿ ಹಾಗೂ ಸ್ಟಿಂಗ್ ಅಪರೇಷನ್ ಗಳನ್ನ ಮಾಡಿದ್ದೇನೆ. ಗೌರಿ ಲಂಕೇಶ್ ಕೊಲೆ ಕೇಸನ್ನ ರಾಜ್ಯದಲ್ಲೇ ಮೊದಲು ಬ್ರೇಕ್ ಮಾಡಿ ಈ ಹಿಂದಿನ ಸಂಸ್ಥೆಯಿಂದ ಪ್ರಶಂಸೆ ಪಡೆದಿರುತ್ನೇನೆ2019 ರಲ್ಲಿ ಪಿಎಸ್ಐ ಅಕ್ರಮದ ಸ್ಟಿಂಗ್ ಆಪರೇಷನ್ ಹಾಗೂ ಬೆಂಗಳೂರು ಸಿಂಥಟಿಕ್ ಡ್ರಗ್ ಮಾಫಿಯಾದ ಸ್ಟಿಂಗ್ ಆಪರೇಷನ್ ಮಾಡಿದ್ದು. ಕಳೆದ 10 ವರ್ಷಗಳಿಂದ ಸಕ್ರೀಯವಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೆ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿ ಬಳಿಕ ಚಾಮರಾಜನಗರಕ್ಕೆ ವರ್ಗಾವಣೆಯಾಗಿ ಈಗ ಪ್ರಸ್ಥುತ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಹವ್ಯಾಸ ಅಡಿಗೆ ಮಾಡುವುದು, ಕ್ರಿಕೆಟ್ ಆಡುವುದು ಕ್ರೈಂ ಇನ್ವೆಷ್ಟಿಗೇಷನ್ ನಾವೆಲ್ ಗಳನ್ನ ಓದುವುದು.

Read More
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ