ಎರಡು ಪ್ರತ್ಯೇಕ ಘಟನೆ: ಚಾಮರಾಜನಗರ, ಬೆಂಗಳೂರಿನಲ್ಲಿ ಕಾರು ಅಡ್ಡಗಟ್ಟಿ ದುಷ್ಕರ್ಮಿಗಳಿಂದ ಹಲ್ಲೆ; ದೂರು ದಾಖಲು

ನಡುರಸ್ತೆಯಲ್ಲಿ ಕಾರು ಅಡ್ಡಗಟ್ಟಿ ಪುಂಡರು ಸವಾರರಿಗೆ ಹಲ್ಲೆ ಮಾಡಿರುವ ಎರಡು ಪ್ರತ್ಯೇಕ ಘಟನೆಗಳು ಚಾಮರಾಜನಗರ ಮತ್ತು ಬೆಂಗಳೂರಿನಲ್ಲಿ ನಡೆದಿವೆ.

ಎರಡು ಪ್ರತ್ಯೇಕ ಘಟನೆ: ಚಾಮರಾಜನಗರ, ಬೆಂಗಳೂರಿನಲ್ಲಿ ಕಾರು ಅಡ್ಡಗಟ್ಟಿ ದುಷ್ಕರ್ಮಿಗಳಿಂದ ಹಲ್ಲೆ; ದೂರು ದಾಖಲು
ಕಾರು ಅಡ್ಡಗಟ್ಟಿದ ದುಷ್ಕರ್ಮಿಗಳು
Follow us
ವಿವೇಕ ಬಿರಾದಾರ
|

Updated on:Aug 08, 2023 | 12:28 PM

ಬೆಂಗಳೂರು: ನಡುರಸ್ತೆಯಲ್ಲಿ ಕಾರು ಅಡ್ಡಗಟ್ಟಿ ಪುಂಡರು ಸವಾರರಿಗೆ ಹಲ್ಲೆ ಮಾಡಿರುವ ಎರಡು ಪ್ರತ್ಯೇಕ ಘಟನೆಗಳು ಚಾಮರಾಜನಗರ (Chmarajnagar) ಮತ್ತು ಬೆಂಗಳೂರಿನಲ್ಲಿ (Bengaluru) ನಡೆದಿವೆ. ಗುಂಡ್ಲುಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ಬಂಡಿಪುರದಲ್ಲಿ (Bandipur) ದಂಪತಿ ಕಾರಿನಲ್ಲಿ ತೆರಳುತ್ತಿದ್ದರು. ಈ ವೇಳೆ ಕಿಡಿಗೇಡಿಗಳ ಗುಂಪೊಂದು ಕಾರಿನಲ್ಲಿ ಬಂದು ದಂಪತಿ ಸಾಗುತ್ತಿದ್ದ ಕಾರನ್ನು ಅಡ್ಡಗಟ್ಟಿದ್ದಾರೆ. ನಂತರ ದಂಪತಿ ಇದ್ದ ಕಾರಿನ ಬಳಿ ಬಂದು, ಕಾರಿನಲ್ಲಿದ್ದ ಮಹಿಳೆಯ ಕೈಗಳನ್ನು ಹೊರಗೆ ಎಳೆದಿದ್ದಾರೆ. ಇದರಿಂದ ಮಹಿಳೆ ಗಾಯಗೊಂಡಿದ್ದಾರೆ. ಅಲ್ಲದೇ ಕಾರಿನ ಡ್ಯಾಶ್‌ಕ್ಯಾಮ್‌ ಅನ್ನು ಹಾನಿ ಮಾಡಲು ಯತ್ನಿಸಿದ್ದಾರೆ.

ಘಟನೆ ದೃಶ್ಯ ಕಾರಿನ ಡ್ಯಾಶ್​ಕ್ಯಾಮ್​​ನಲ್ಲಿ ರೆಕಾರ್ಡ್​ ಆಗಿದೆ. ಈ ವಿಡಿಯೋವನ್ನು ಥರ್ಡ್​​ ಐ ಎಂಬ ಟ್ವಿಟರ್​ ಖಾತೆ ಬಳೆಕೆದಾರರು ಆ.6 ರಂದು ಟ್ವೀಟ್ ​ಮಾಡಿದ್ದಾರೆ. “ನಾವು ದೂರು ಸಲ್ಲಿಸಲು ಬಯಸಿದ್ದೇವು. ಆದರೆ ನಾವು ತಮಿಳುನಾಡು ಗಡಿಗೆ ಹತ್ತಿರದಲ್ಲಿದ್ದರಿಂದ ಪೊಲೀಸರು ನಮಗೆ ಸಹಾಯ ಮಾಡಲಿಲ್ಲ. ದಯವಿಟ್ಟು ಈ ಪ್ರಕರಣವನ್ನು ಸಂಪೂರ್ಣವಾಗಿ ತನಿಖೆ ಮಾಡಿ. ಅವರು ದಂಪತಿಯನ್ನು ಅಡ್ಡಗಟ್ಟಲು ಕಾರಣವೇನು ? ಅಂತ ತಿಳಿಸಿ” ಎಂದು ಟ್ವೀಟ್​ ಮಾಡಿದ್ದಾರೆ.

ಪೋಸ್ಟ್ ವೈರಲ್​​ ಆಗುತ್ತಿದ್ದಂತೆ ಸಂಚಾರ ಮತ್ತು ರಸ್ತೆ ಸುರಕ್ಷತೆ ಎಡಿಜಿಪಿ ಅಲೋಕ್ ಕುಮಾರ್ ಟ್ವೀಟ್​ ಮಾಡಿ ದಂಪತಿ ಗುಂಡ್ಲುಪೇಟೆ ಪೊಲೀಸ್​ ಠಾಣೆಗೆ ತೆರಳಿ ದೂರು ನೀಡುವಂತೆ ಸೂಚಿಸಿದರು. ಅಲ್ಲದೇ ಸರ್ಕಲ್ ಪೊಲೀಸ್ ಇನ್ಸ್‌ಪೆಕ್ಟರ್ ಅವರ ದೂರವಾಣಿ ನಂಬರ್​ ಅನ್ನು ಸಹ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ಬೆಂಗಳೂರು ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿನ್ನು ಕೆಎಸ್​ಆರ್​ಟಿಸಿ ಬಸ್​​ಗಳು ಎಡ ಬದಿಯ ಲೇನ್​ನಲ್ಲೇ ಸಂಚರಿಸಬೇಕು

ಅದೇ ದಿನ ರಾತ್ರಿ 9.21ಕ್ಕೆ ಗುಂಡ್ಲುಪೇಟೆ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಹೆಚ್ಚಿನ ತನಿಖೆ ನಡೆಸುತ್ತಿದ್ದೇವೆ ಎಂದು ಚಾಮರಾಜನಗರ ಪೊಲೀಸ್ ವರಿಷ್ಠಾಧಿಕಾರಿ (SP) ಪದ್ಮಿನಿ ಸಾಹೂ ಅವರು ಟ್ವೀಟ್​ ಮಾಡಿ ತಿಳಿಸಿದ್ದಾರೆ.

ಎರಡನೇ ಘಟನೆ ವೈಟ್‌ಫೀಲ್ಡ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೆಂಗಳೂರಿನಲ್ಲಿ ನಡೆದಿದೆ. ಆ. 5 ರಂದು ವ್ಯಕ್ತಿಯೊಬ್ಬರು ಕಾರಿನಲ್ಲಿ ಹೋಗುತ್ತಿದ್ದರು. ಈ ವೇಳೆ ಬೈಕ್​​ನಲ್ಲಿ ಹಿಂಬಾಲಿಸಿಕೊಂಡ ಬಂದ ಕೆಲ ಯುವಕರು ಸಿದ್ದಾಪುರ ಬಳಿ ಕಾರನ್ನು ಅಡ್ಡಗಟ್ಟಿದ್ದಾರೆ. ನಂತರ ಕಲ್ಲಿನಿಂದ ಕಾರಿನ ಗಾಜನ್ನು ಒಡೆಯಲು ಯತ್ನಿಸಿದ್ದಾರೆ. ನಂತರ ವಿಂಡ್‌ಶೀಲ್ಡ್ ಒಡೆಯಲು ಯತ್ನಿಸಿದ್ದಾರೆ ಎಂದು ನಾನು ವಾಚಿಂಗ್​ ಎಂಬುವರು ಟ್ವೀಟ್​ ಮಾಡಿದ್ದಾರೆ.

ಈ ಟ್ವೀಟ್​ ಗಮನಿಸಿದ ವೈಟ್​ಫೀಲ್ಡ್​ ಪೊಲೀಸರು ಕೆಲ ಗಂಟೆಗಳಲ್ಲೇ ಆರೋಪಿಗಳನ್ನು ಬಂಧಿಸಿದ್ದಾರೆ. ಈ ವಿಷಯ ತಿಳಿದು ವೈಟ್​ಫಿಲ್ಡ್​​ ಪೊಲೀಸರು ಉತ್ತಮ ಕೆಲಸ ಮಾಡಿದ್ದಾರೆ ಎಂದು NaNu Watching ಪೋಸ್ಟ್ ಮಾಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:53 pm, Mon, 7 August 23

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್