ವಾಲ್ಮೀಕಿ ಜಯಂತಿ ಹಿನ್ನೆಲೆ ಪ್ರಾರ್ಥನೆ: ಹೃದಯಾಘಾತದಿಂದ ವಿಚಾರಣಾಧೀನ ಕೈದಿ ಸಾವು

ಕೇರಳ ಮೂಲದ  ಜಯಪ್ರಕಾಶ್ ಅಲಿಯಾಸ್ ಪ್ರಕಾಶ್(32) ಮೃತ ರ್ದುದೈವಿ. ಬೇಗೂರು ಠಾಣಾ ವ್ಯಾಪ್ತಿಯಲ್ಲಿ ಕಾರು ಅಡ್ಡಗಟ್ಟಿ 45 ಲಕ್ಷ ರೂ. ದರೋಡೆ ಪ್ರಕರಣದಲ್ಲಿ ಬಂಧಿತನಾಗಿದ್ದ ಜಯಪ್ರಕಾಶ್​ಗೆ ಇಂದು ಹೃದಯಾಘಾತ ಸಂಭವಿಸಿದೆ. ಕೂಡಲೇ ಆತನನ್ನು ಸಿಮ್ಸ್ ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗ ಮಧ್ಯೆ ಕೊನೆಯುಸಿರೆಳೆದಿದ್ದಾನೆ.

ವಾಲ್ಮೀಕಿ ಜಯಂತಿ ಹಿನ್ನೆಲೆ ಪ್ರಾರ್ಥನೆ: ಹೃದಯಾಘಾತದಿಂದ ವಿಚಾರಣಾಧೀನ ಕೈದಿ ಸಾವು
prisoner dies after collapsing due to heart attack during Valmiki Jayanti prayers in Chamarajanagar Sub Jail
Edited By: ಕಿರಣ್ ಹನುಮಂತ್​ ಮಾದಾರ್

Updated on: Oct 28, 2023 | 5:52 PM

ಚಾಮರಾಜನಗರ, ಅ.28: ವಾಲ್ಮೀಕಿ ಜಯಂತಿ ಪ್ರಾರ್ಥನೆ ವೇಳೆ ಚಾಮರಾಜನಗರ (Chamarajanagar)  ಉಪ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯೋರ್ವ ಹೃದಯಾಘಾತ(Heart Attack)ದಿಂದ ಕುಸಿದುಬಿದ್ದು ಸಾವನ್ನಪ್ಪಿದ ಘಟನೆ ನಡೆದಿದೆ. ಕೇರಳ ಮೂಲದ  ಜಯಪ್ರಕಾಶ್ ಅಲಿಯಾಸ್ ಪ್ರಕಾಶ್(32) ಮೃತ ರ್ದುದೈವಿ. ಬೇಗೂರು ಠಾಣಾ ವ್ಯಾಪ್ತಿಯಲ್ಲಿ ಕಾರು ಅಡ್ಡಗಟ್ಟಿ 45 ಲಕ್ಷ ರೂ. ದರೋಡೆ ಪ್ರಕರಣದಲ್ಲಿ ಬಂಧಿತನಾಗಿದ್ದ ಜಯಪ್ರಕಾಶ್​ಗೆ ಇಂದು ಹೃದಯಾಘಾತ ಸಂಭವಿಸಿದೆ. ಕೂಡಲೇ ಆತನನ್ನು ಸಿಮ್ಸ್ ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗ ಮಧ್ಯೆ ಕೊನೆಯುಸಿರೆಳೆದಿದ್ದಾನೆ.

ಜೆಸಿಬಿ ಡಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

ಮಂಡ್ಯ: ಜೆಸಿಬಿ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಹೆಚ್.ಬಸಾಪುರ ಗ್ರಾಮದ ಮಳವಳ್ಳಿ-ಕನಕಪುರ ಹೆದ್ದಾರಿಯಲ್ಲಿ ನಡೆದಿದೆ. ನಿಂಗರಾಜು(35) ಮೃತ ವ್ಯಕ್ತಿ. ಗ್ರಾಮಕ್ಕೆ ತೆರಳುವ ವೇಳೆ ಬೈಕ್-ಜೆಸಿಬಿ ನಡುವೆ ಡಿಕ್ಕಿಯಾಗಿ ಈ ದುರ್ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಹಲಗೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಇದನ್ನೂ ಓದಿ:ಗುಜರಾತ್​ನಲ್ಲಿ ಗಾರ್ಬಾ ನೃತ್ಯದ ವೇಳೆ 10 ಮಂದಿ ಹೃದಯಾಘಾತದಿಂದ ಸಾವು, ವೈದ್ಯರು ಕೊಟ್ಟ ಕಾರಣಗಳಿವು

ಮೊಪೆಡ್​ಗೆ ಕಾರು ಡಿಕ್ಕಿ, ಮೊಪೆಡ್ ಸವಾರ ಸ್ಥಳದಲ್ಲೇ ಸಾವು

ಶಿವಮೊಗ್ಗ: ಮೊಪೆಡ್​ಗೆ ಕಾರು ಡಿಕ್ಕಿಯಾಗಿ ಮೊಪೆಡ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಕುಂಭತ್ತಿ ಬಳಿ ನಡೆದಿದೆ. ಮಂಜಪ್ಪ (53) ಮೃತ ದುರ್ದೈವಿ. ಘಟನೆ ನಂತರ ಕಾರನ್ನು ಸ್ಥಳದಲ್ಲೇ ನಿಲ್ಲಿಸಿ ಚಾಲಕ ಪರಾರಿಯಾಗಿದ್ದಾನೆ. ಮೇಲ್ನೋಟಕ್ಕೆ ಅಪಘಾತ ಎನಿಸಿದರೂ, ವ್ಯವಸ್ಥಿತ ಕೊಲೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಘಟನಾ ಸ್ಥಳಕ್ಕೆ ಸೊರಬ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸೊರಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹಜ್ ಭವನದಲ್ಲಿ ಅಗ್ನಿ ಅವಘಡ; ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಿಲ್ಲ

ಬೆಂಗಳೂರು: ಯಲಹಂಕ ಥಣಿಸಂದ್ರ ಹಜ್ ಭವನದಲ್ಲಿ ಅಗ್ನಿ ಅವಘಡ ಸಂಭವಿಸಿದೆ. ರ್ಟ್ ಸರ್ಕ್ಯೂಟ್​ನಿಂದ ಹಜ್ ಭವನದ ಮೂರನೇ ಮಹಡಿಯಲ್ಲಿ ಬೆಂಕಿ ಹೊತ್ತಿಕೊಂಡಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಇನ್ನು ಸ್ಥಳಕ್ಕೆ ಫೈರ್ ಎಕ್ಸ್ಟಿಂಗ್ಷರ್ (ಸಿಲಿಂಡರ್) ಬಳಸಿ ಅಗ್ನಿ ಶಾಮಕ  ಸಿಬ್ಬಂದಿಗಳು ಬೆಂಕಿ ನಿಯಂತ್ರಿಸುತ್ತಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:51 pm, Sat, 28 October 23

Suraj Prasad SN

ಸೂರಜ್ ಪ್ರಸಾದ್ ಎಸ್.ಎನ್ ಆದ ನಾನು ಹುಟ್ಟಿದ್ದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ. ಬೆಳೆದಿದ್ದು ದಾವಣಗರೆ ಜಿಲ್ಲೆ ನ್ಯಾಮತಿ ತಾಲೂಕಿನಲ್ಲಿ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ನಲ್ಲಿ ಪತ್ರಿಕೋದ್ಯಮದಲ್ಲಿ ಪದವಿಪೂರ್ವ ಶಿಕ್ಷಣ ಪಡೆದಿದ್ದು 2014ರಿಂದ ನನ್ನ ಎಲೆಕ್ಟ್ರಾನಿಕ್ ಮಾದ್ಯಮದ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದ್ದು ಬೆಂಗಳೂರಿನಲ್ಲಿ 8 ವರ್ಷಗಳ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಹಾಗೂ ಕ್ರೈಂ ಇನ್ವೆಸ್ಟಿಗೇಟಿವ್ ವರದಿಗಾರನಾಗಿ ಹಾಗೂ ಸ್ಟಿಂಗ್ ಅಪರೇಷನ್ ಗಳನ್ನ ಮಾಡಿದ್ದೇನೆ. ಗೌರಿ ಲಂಕೇಶ್ ಕೊಲೆ ಕೇಸನ್ನ ರಾಜ್ಯದಲ್ಲೇ ಮೊದಲು ಬ್ರೇಕ್ ಮಾಡಿ ಈ ಹಿಂದಿನ ಸಂಸ್ಥೆಯಿಂದ ಪ್ರಶಂಸೆ ಪಡೆದಿರುತ್ನೇನೆ2019 ರಲ್ಲಿ ಪಿಎಸ್ಐ ಅಕ್ರಮದ ಸ್ಟಿಂಗ್ ಆಪರೇಷನ್ ಹಾಗೂ ಬೆಂಗಳೂರು ಸಿಂಥಟಿಕ್ ಡ್ರಗ್ ಮಾಫಿಯಾದ ಸ್ಟಿಂಗ್ ಆಪರೇಷನ್ ಮಾಡಿದ್ದು. ಕಳೆದ 10 ವರ್ಷಗಳಿಂದ ಸಕ್ರೀಯವಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೆ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿ ಬಳಿಕ ಚಾಮರಾಜನಗರಕ್ಕೆ ವರ್ಗಾವಣೆಯಾಗಿ ಈಗ ಪ್ರಸ್ಥುತ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಹವ್ಯಾಸ ಅಡಿಗೆ ಮಾಡುವುದು, ಕ್ರಿಕೆಟ್ ಆಡುವುದು ಕ್ರೈಂ ಇನ್ವೆಷ್ಟಿಗೇಷನ್ ನಾವೆಲ್ ಗಳನ್ನ ಓದುವುದು.

Read More
Follow Us