ಈಗಲಾದರೂ ಮೌಢ್ಯದ ಪೊರೆ ಕಳಚಿ ಚಾಮರಾಜನಗರಕ್ಕೆ ಭೇಟಿ ನೀಡ್ತಾರಾ ಮಾನ್ಯ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ

ಜಿಲ್ಲಾಸ್ಪತ್ರೆಯಲ್ಲಿ ಆಮ್ಲಜನಕ ಕೊರತೆ ಉಂಟಾಗಿ 24 ಸಾವು ಘಟಿಸಿರುವ ಹೊತ್ತಿನಲ್ಲಿ ರಾಜ್ಯದ ಮುಖ್ಯಮಂತ್ರಿಯಾಗಿ ಅಲ್ಲಿಗೆ ಭೇಟಿ ನಿಡಬೇಕಿರುವುದು ಯಡಿಯೂರಪ್ಪ ಅವರ ಕರ್ತವ್ಯ. ಆದರೆ, ಚಾಮರಾಜನಗರಕ್ಕೆ ಭೇಟಿ ನೀಡಿದರೆ ಅಧಿಕಾರ ಹೋಗುತ್ತದೆ ಎಂಬ ಮೌಢ್ಯಕ್ಕೆ ಜೋತು ಬಿದ್ದಿರುವ ಯಡಿಯೂರಪ್ಪ ಈಗಲಾದರೂ ಮೌಢ್ಯದ ಪೊರೆ ಕಳಚಿ ಜಿಲ್ಲೆಗೆ ಭೇಟಿ ನೀಡುತ್ತಾರಾ?

  • TV9 Web Team
  • Published On - 8:21 AM, 4 May 2021
ಈಗಲಾದರೂ ಮೌಢ್ಯದ ಪೊರೆ ಕಳಚಿ ಚಾಮರಾಜನಗರಕ್ಕೆ ಭೇಟಿ ನೀಡ್ತಾರಾ ಮಾನ್ಯ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ
ಬಿ.ಎಸ್. ಯಡಿಯೂರಪ್ಪ

ಚಾಮರಾಜನಗರ: ಶಾಪಗ್ರಸ್ಥ ಜಿಲ್ಲೆ ಎಂದೇ ಗುರುತಿಸಿಕೊಂಡಿರುವ ಚಾಮರಾಜನಗರಕ್ಕೆ ಭೇಟಿ ನೀಡಿದರೆ ಅಧಿಕಾರ ಹೋಗುತ್ತದೆ ಎಂಬ ಮೌಢ್ಯವೊಂದು ಕರ್ನಾಟಕ ರಾಜಕೀಯ ವಲಯದಲ್ಲಿ ಚಾಲ್ತಿಯಲ್ಲಿದೆ. ಇದೇ ಕಾರಣದಿಂದ ಬಿ.ಎಸ್.ಯಡಿಯೂರಪ್ಪ ಈ ಹಿಂದೆ ಮುಖ್ಯಮಂತ್ರಿ ಆಗಿದ್ದಾಗ ಚಾಮರಾಜನಗರಕ್ಕೆ ಭೇಟಿ ನೀಡಿರಲಿಲ್ಲ ಮತ್ತು ಈಗ ಅಧಿಕಾರ ಸ್ವೀಕರಿಸಿ 18 ತಿಂಗಳಾದರೂ ಅತ್ತ ಮುಖ ಮಾಡಿಲ್ಲ. ಇದೀಗ ಚಾಮರಾಜನಗರದಲ್ಲಿ ಆಮ್ಲಜನಕ ಪೂರೈಕೆ ಇಲ್ಲದೇ ನಡೆದ ದುರಂತದಿಂದಾಗಿ ಕೊರೊನಾ ಸೋಂಕಿತರೂ ಸೇರಿದಂತೆ 24ರೋಗಿಗಳು ಜಿಲ್ಲಾಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ವ್ಯವಸ್ಥೆಯ ನಿರ್ಲಕ್ಷ್ಯಕ್ಕೆ ಅಮಾಯಕರು ಜೀವ ಕಳೆದುಕೊಂಡಿದ್ದಾರೆ. ಇಂತಹ ಸಂಕಷ್ಟದ ಸಂದರ್ಭದಲ್ಲಾದರೂ ಬಿ.ಎಸ್.ಯಡಿಯೂರಪ್ಪ ಚಾಮರಾಜನಗರಕ್ಕೆ ಭೇಟಿ ನೀಡುತ್ತಾರಾ ಎಂಬ ಪ್ರಶ್ನೆ ಮೂಡಿದೆ.

ಜಿಲ್ಲಾಸ್ಪತ್ರೆಯಲ್ಲಿ ಆಮ್ಲಜನಕ ಕೊರತೆ ಉಂಟಾಗಿ 24 ಸಾವು ಘಟಿಸಿರುವ ಹೊತ್ತಿನಲ್ಲಿ ರಾಜ್ಯದ ಮುಖ್ಯಮಂತ್ರಿಯಾಗಿ ಅಲ್ಲಿಗೆ ಭೇಟಿ ನೀಡಬೇಕಿರುವುದು ಯಡಿಯೂರಪ್ಪ ಅವರ ಕರ್ತವ್ಯ. ಆದರೆ, ಚಾಮರಾಜನಗರಕ್ಕೆ ಭೇಟಿ ನೀಡಿದರೆ ಅಧಿಕಾರ ಹೋಗುತ್ತದೆ ಎಂಬ ಮೌಢ್ಯಕ್ಕೆ ಜೋತು ಬಿದ್ದಿರುವ ಯಡಿಯೂರಪ್ಪ ಈಗಲಾದರೂ ಮೌಢ್ಯದ ಪೊರೆ ಕಳಚಿ ಜಿಲ್ಲೆಗೆ ಭೇಟಿ ನೀಡುತ್ತಾರಾ? ಅಥವಾ ದೂರವೇ ಉಳಿಯುತ್ತಾರಾ? ಎಂದು ನೋಡಬೇಕಿದೆ. ಏತನ್ಮಧ್ಯೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಇಂದು (ಮೇ.4) ದುರ್ಘಟನೆಯ ಬಗ್ಗೆ ತಿಳಿದುಕೊಳ್ಳಲು ಚಾಮರಾಜನಗರಕ್ಕೆ ಭೇಟಿ ನೀಡಲಿದ್ದಾರೆ.

ಚಾಮರಾಜನಗರ ಜಿಲ್ಲಾಸ್ಪತ್ರೆ ದುರಂತ: ಐಎಎಸ್​ ಅಧಿಕಾರಿ ಶಿವಯೋಗಿ ಕಳಸದ್​ ಮೂಲಕ ತನಿಖೆಗೆ ಸರಕಾರ ಆದೇಶ
ಚಾಮರಾಜನಗರ ಜಿಲ್ಲಾ ಆಸ್ಪತ್ರೆಯಲ್ಲಿ ಆಮ್ಲಜನಕದ ಕೊರತೆಯಿಂದ 24 ರೋಗಿಗಳು ಮೃತಪಟ್ಟಿರುವ ಹಿನ್ನೆಲೆಯಲ್ಲಿ ಸರಕಾರ ಹಿರಿಯ ಐಎಎಸ್ ಶಿವಯೋಗಿ ಕಳಸದ್ ಅವರನ್ನು ವಿಚಾರಣಾಧಿಕಾರಿಯನ್ನು ನೇಮಿಸಿ ಆದೇಶ ಹೊರಡಿಸಿದೆ. ಸಾವಿನ ಹಿಂದಿನ ಕಾರಣಗಳನ್ನು ಹುಡುಕಿ ಮೂರು ದಿನಗಳೊಳಗೆ ವರದಿ ನೀಡುವಂತೆ ಸೂಚನೆ ನೀಡಿದೆ. ಆಸ್ಪತ್ರೆಯಲ್ಲಿ ಆಮ್ಲಜನಕ ಉತ್ಪಾದನಾ ಘಟಕ ನಿಂತಿದ್ದ ಕಾರಣಕ್ಕೆ ಆಮ್ಲಜನಕದ ಕೊರತೆ ಉಂಟಾಗಿತ್ತು. ಅದಾದ ಮೇಲೆ ಚಾಮರಾಜನಗರವು ಮೈಸೂರಿನಿಂದ ಆಮ್ಲಜನಕ ತರಿಸಿಕೊಳ್ಳಲು ಪ್ರಯತ್ನಿಸಿತ್ತು. ಆದರೆ, ಅದು ಬರಲೇ ಇಲ್ಲ. ತಡ ರಾತ್ರಿ ಆಮ್ಲಜನಕ ಹೊತ್ತ ಲಾರಿ ಬರುವಷ್ಟರಲ್ಲಿ ದುರಂತ ನಡೆದು ಹೋಗಿತ್ತು. ಈ ಬಗ್ಗೆ ಆಡಳಿತ ವ್ಯವಸ್ಥೆ ವಿರುದ್ಧ ವ್ಯಾಪಕ ಖಂಡನೆಯೂ ವ್ಯಕ್ತವಾಗುತ್ತಿದೆ.

ಇದನ್ನೂ ಓದಿ:
Chamarajanagar Incident: ಚಾಮರಾಜನಗರದ ಆಸ್ಪತ್ರೆ ಎದುರು ಕಟ್ಟೆಯೊಡೆದ ಜನಾಕ್ರೋಶ

ಆಕ್ಸಿಜನ್ ವ್ಯತ್ಯಯ: ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಕೊವಿಡ್ ಸೋಂಕಿತರೂ ಸೇರಿ 22 ರೋಗಿಗಳ ಸಾವು