ಚಾಮರಾಜನಗರ: ಮಾರ್ಗಮಧ್ಯೆ ಆಂಬ್ಯುಲೆನ್ಸ್​​ನಲ್ಲಿ ಮಗುವಿಗೆ ಜನ್ಮ ನೀಡಿದ ಗರ್ಭಿಣಿ

| Updated By: ವಿವೇಕ ಬಿರಾದಾರ

Updated on: Feb 15, 2024 | 2:33 PM

ಆಸ್ಪತ್ರೆಗೆ ಕೆರೆದೆಯ್ಯುವ ಮಾರ್ಗಮಧ್ಯೆ ಆಂಬ್ಯುಲೆನ್ಸ್​​ನಲ್ಲಿ ಗರ್ಭಿಣಿ ಮಗುವಿಗೆ ಜನ್ಮ ನೀಡಿರುವ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ವ್ಯಾಪ್ತಿಯಲ್ಲಿ ನಡೆದಿದೆ. ಬಳಿಕ ತಾಯಿ ಹಾಗು ಮಗುವನ್ನು ಗುಂಡ್ಲುಪೇಟೆ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಗುಂಡ್ಲುಪೇಟೆ ಸರ್ಕಾರಿ ಆಸ್ಪತ್ರೆಯಲ್ಲಿ ತಾಯಿ-ಮಗು ಚಿಕಿತ್ಸೆ ಪಡೆಯುತ್ತಿದ್ದಾರೆ.  

ಚಾಮರಾಜನಗರ: ಮಾರ್ಗಮಧ್ಯೆ ಆಂಬ್ಯುಲೆನ್ಸ್​​ನಲ್ಲಿ ಮಗುವಿಗೆ ಜನ್ಮ ನೀಡಿದ ಗರ್ಭಿಣಿ
ಆಂಬ್ಯುಲೆನ್ಸ್​​ನಲ್ಲಿ ಮಗುವಿಗೆ ಜನ್ಮ ನೀಡಿದ ಗರ್ಭಿಣಿ
Follow us on

ಚಾಮರಾಜನಗರ, ಫೆಬ್ರವರಿ 15: ಆಸ್ಪತ್ರೆಗೆ ಕೆರೆದೆಯ್ಯುವ ಮಾರ್ಗಮಧ್ಯೆ ಆಂಬ್ಯುಲೆನ್ಸ್​​ನಲ್ಲಿ (Ambulance) ಗರ್ಭಿಣಿ (Pregnant) ಮಗುವಿಗೆ ಜನ್ಮ ನೀಡಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ವ್ಯಾಪ್ತಿಯಲ್ಲಿ ನಡೆದಿದೆ. ಬಂಡೀಪುರ (Bandipur) ಕಾಡಂಚಿನ ಕಣಿಯನಪುರ ಕಾಲೋನಿ ನಿವಾಸಿಯಾಗಿರುವ ಅನುಶ್ರೀ ಅವರು ಅವರನ್ನು ಸಂಬಂಧಿಕರು ಆಂಬುಲೆನ್ಸ್​ನಲ್ಲಿ ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿದ್ದರು. ಮಾರ್ಗ ಮಧ್ಯದಲ್ಲಿ ಹೆರಿಗೆ ನೋವು ಕಾಣಿಕೊಂಡು, ಅನುಶ್ರೀ ಮಗುವಿಗೆ ಜನ್ಮ ನೀಡಿದ್ದಾರೆ. ಬಳಿಕ ತಾಯಿ ಹಾಗು ಮಗುವನ್ನು ಗುಂಡ್ಲುಪೇಟೆ ಸಾರ್ವಜನಿಕ ಆಸ್ಪತ್ರೆಗೆ (Gundlupet Government Hospital) ದಾಖಲಿಸಲಾಗಿದೆ. ಸದ್ಯ ಗುಂಡ್ಲುಪೇಟೆ ಸರ್ಕಾರಿ ಆಸ್ಪತ್ರೆಯಲ್ಲಿ ತಾಯಿ-ಮಗು ಚಿಕಿತ್ಸೆ ಪಡೆಯುತ್ತಿದ್ದಾರೆ.

ಆಂಬ್ಯುಲೆನ್ಸ್​ನಲ್ಲೇ ಗಂಡು ಮಗುವಿಗೆ ಜನ್ಮ ನೀಡಿದ ಮಹಿಳೆ

2023ರ ಡಿಸೆಂಬರ್​ನಲ್ಲಿ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬೆಳಗೋಡು ಗ್ರಾಮದ ತೀವ್ರ ಹೆರಿಗೆ ನೋವಿನಿಂದ ಬಳಲುತ್ತಿದ್ದ ಮಹಿಳೆಯನ್ನ ಹೆರಿಗೆಗೆಂದು 108 ಆಂಬ್ಯುಲೆನ್ಸ್​ನಲ್ಲಿ ಮೂಡಿಗೆರೆ ತಾಲೂಕು ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗಮಧ್ಯದಲ್ಲೇ ಮಹಿಳೆ ಗಂಡು ಮಗುವಿಗೆ ಜನ್ಮ ನೀಡಿದ್ದರು. ಬೆಳಗೋಡು ಗ್ರಾಮದ ಮಹಿಳೆಯನ್ನ 108 ಆಂಬ್ಯುಲೆನ್ಸ್​ನಲ್ಲಿ ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದಾಗ ಮಹಿಳೆಗೆ ವಿಪರೀತ ಹೆರಿಗೆ ನೋವು ಕಾಣಿಸಿಕೊಂಡಿತ್ತು. ಆಸ್ಪತ್ರೆ ತಲುಪಲು ಇನ್ನೂ 15 ಕಿ.ಮೀ. ದೂರವಿರುವಾಗಲೇ ಆಕೆಗೆ ನೋವು ಹೆಚ್ಚಾಗಿದ್ದರಿಂದ ಚಾಲಕ ಗಂಗಾಧರನಾಯ್ಕ ವಾಹನವನ್ನು ಅತಿವೇಗವಾಗಿ ಚಲಾಯಿಸಿದ್ದರು. ಗರ್ಭೀಣಿ ಮಹಿಳೆಯನ್ನ ಆಸ್ಪತ್ರೆಗೆ ತಲುಪಿಸಲು ಮುಂದಾದರೂ ನೋವು ತಡೆಯಲಾಗದೆ ಮಹಿಳೆ ಕೂಗಾಡಿದ್ದರು. ಆಗ ಬೇರೆ ದಾರಿ ಕಾಣದೆ ಶುಶ್ರೂಕಿ ಮಂಜುಳಾ ಆಂಬ್ಯುಲೆನ್ಸ್​ನಲ್ಲೇ ಹೆರಿಗೆ ಮಾಡಿಸುವಲ್ಲಿ ಯಶಸ್ವಿಯಾಗಿದ್ದರು.

ಇದನ್ನೂ ಓದಿ: ಜಮ್ಮು ಕಾಶ್ಮೀರದಲ್ಲಿ ಹಿಮಪಾತ, ದಿಕ್ಕೇ ತೋಚದ ಸ್ಥಿತಿಯಲ್ಲಿದ್ದಾಗ ಗರ್ಭಿಣಿ ನೆರವಿಗೆ ದೇವರಂತೆ ಧಾವಿಸಿದ ಸೈನಿಕರು

ಮಹಿಳೆ ಮಗುವಿಗೆ ಜನ್ಮ ನೀಡುತ್ತಿದ್ದಂತೆ ಚಾಲಕ ವಾಹನವನ್ನು ನಿಲ್ಲಿಸಿದ್ದು ಮಹಿಳೆಗೆ ಪ್ರಥಮ ಚಿಕಿತ್ಸೆ ನೀಡಿದ ಬಳಿಕ ಆಸ್ಪತ್ರೆಗೆ ಸಾಗಿಸಲಾಗಿತ್ತು. ತಾಯಿ ಮಗು ಆರೋಗ್ಯವಾಗಿದ್ದಾರೆಂದು ಮಹಿಳೆಯ ಜೊತೆಗಿದ್ದ ಅವರ ಪತಿ ಮಾಹಿತಿ ನೀಡಿದ್ದರು. 108 ಆಂಬ್ಯುಲೆನ್ಸ್​ನಲ್ಲಿ ಮಹಿಳೆಯ ಜೊತೆಗಿದ್ದ ಶುಶ್ರೂಕಿ ಮಂಜುಳಾ ಮತ್ತು ಚಾಲಕ ಗಂಗಾಧರ್ ಅವರ ಸಮಯ ಹಾಗೂ ಕರ್ತವ್ಯಪ್ರಜ್ಞೆಯನ್ನು ಸಾರ್ವಜನಿಕರು ಶ್ಲಾಘಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 1:49 pm, Thu, 15 February 24