ಯುಗಾದಿ ಆಚರಣೆ; ಕೊರೊನಾ ಸಾಂಕ್ರಾಮಿಕ ಹಿನ್ನೆಲೆ ಮಲೆ ಮಹದೇಶ್ವರ ದೇವಾಲಯದಲ್ಲಿ ಭಕ್ತರಿಗೆ ನಿರ್ಬಂಧ

ಕೊರೊನಾ ವೈರಸ್ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಯುಗಾದಿ ಜಾತ್ರಾ ಮಹೋತ್ಸವದ ವೇಳೆ ಭಕ್ತರು ಬಾರದಂತೆ ಕ್ರಮ ಕೈಗೊಳ್ಳಲಾಗಿದ್ದು, ಮಲೆ ಮಹದೇಶ್ವರ ದೇವಾಲಯಕ್ಕೆ ಭಕ್ತರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ.

  • TV9 Web Team
  • Published On - 16:37 PM, 4 Apr 2021
ಯುಗಾದಿ ಆಚರಣೆ; ಕೊರೊನಾ ಸಾಂಕ್ರಾಮಿಕ ಹಿನ್ನೆಲೆ ಮಲೆ ಮಹದೇಶ್ವರ ದೇವಾಲಯದಲ್ಲಿ ಭಕ್ತರಿಗೆ ನಿರ್ಬಂಧ
ಪ್ರಾತಿನಿಧಿಕ ಚಿತ್ರ

ಚಾಮರಾಜನಗರ: ಕೊರೊನಾ ವೈರಸ್ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಯುಗಾದಿ ಜಾತ್ರಾ ಮಹೋತ್ಸವದ ವೇಳೆ ಭಕ್ತರು ಬಾರದಂತೆ ಕ್ರಮ ಕೈಗೊಳ್ಳಲಾಗಿದ್ದು, ಮಲೆ ಮಹದೇಶ್ವರ ದೇವಾಲಯಕ್ಕೆ ಭಕ್ತರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ. ಈ ಬಗ್ಗೆ ಜಿಲ್ಲಾಧಿಕಾರಿ ಎಂ.ಆರ್​. ರವಿ ಆದೇಶ ಹೊರಡಿಸಿದ್ದಾರೆ. ಏಪ್ರಿಲ್​ ತಿಂಗಳ 10ನೇ ತಾರೀಕಿನಿಂದ 13ನೇ ತಾರೀಕಿನವರೆಗೆ ಭಕ್ತರಿಗೆ ನಿರ್ಬಂಧ ಹೇರಲಾಗಿದ್ದು, ಜಾತ್ರಾ ಮಹೋತ್ಸವದಲ್ಲಿ 200 ಭಕ್ತರಿಗಷ್ಟೇ ಅವಕಾಶ ಕಲ್ಪಿಸಲಾಗಿದೆ.

ಹಲವೆಡೆ ಕೊರೊನಾ ಭಯವೇ ಇಲ್ಲ
ವಿಜಯಪುರ: ಜನರು ಉದ್ಯಾನವನಗಳಲ್ಲಿ ಸರ್ಕಾರದ ಮಾರ್ಗಸೂಚಿಗಳನ್ನು ಪಾಲಿಸುತ್ತಿಲ್ಲ. ಕೆಲವರು ಮಾಸ್ಕ್ ಹಾಕಿದರೆ ಹಲವಾರು ‌ಜನರು ಮಾಸ್ಕ್ ಧರಿಸದೇ ಎಲ್ಲೆಡೆ ಓಡಾಡುತ್ತಿದ್ದಾರೆ. ಸಾಮಾಜಿಕ ಅಂತರ ಪಾಲಿಸದೇ ಗುಂಪು ಗುಂಪಾಗಿ ಜನರು ಉದ್ಯಾನವನಗಳಿಗೆ ಬರುತ್ತಿದ್ದಾರೆ. ಹೀಗಿದ್ದಾಗಲೂ ಸರ್ಕಾರ ನಿಗದಿ ಮಾಡಿದ ಪ್ರಮಾಣಕ್ಕಿಂತ ಹೆಚ್ಚು ಜನರನ್ನು ಪಾರ್ಕ್​ಗಳ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗುತ್ತಿದೆ.

ಹಾಸನದಲ್ಲಿ 104 ಜನರಿಗೆ ಕೊರೊನಾ ದೃಢ
ಜಿಲ್ಲೆಯಲ್ಲಿ ಇಂದು (ಏಪ್ರಿಲ್​ 05) 104 ಜನರಿಗೆ ಕೊರೊನಾ ದೃಢಪಟ್ಟಿದೆ. ಇಂದು ಒಬ್ಬರು ಕೊನಾಕ್ಕೆ ಬಲಿಯಾಗಿದ್ದಾರೆ. 5 ತಿಂಗಳ ಬಳಿಕ ಜಿಲ್ಲೆಯಲ್ಲಿ ಅತಿ ಹೆಚ್ಚು ಪ್ರಕರಣಗಳು ಪತ್ತೆಯಾಗಿದೆ. ಒಟ್ಟು ಈವರೆಗೆ ಕೊರೊನಾ ಸೋಂಕಿಗೆ 476 ಜನ ಬಲಿಯಾಗಿದ್ದಾರೆ.

ಸರ್ಕಾರದ ನಿರ್ಲಕ್ಷ್ಯದಿಂದ ರಾಜ್ಯದಲ್ಲಿ ಕೊರೊನಾ ಹೆಚ್ಚಾಗಿದೆ; ವಾಟಾಳ್ ನಾಗರಾಜ್
ಸರ್ಕಾರದ ನಿರ್ಲಕ್ಷ್ಯದಿಂದ ರಾಜ್ಯದಲ್ಲಿ ಕೊರೊನಾ ಹೆಚ್ಚಾಗಿದೆ. ಸಿಎಂ ಬಿ.ಎಸ್​ ಯಡಿಯೂರಪ್ಪ ಅವರಿಗೆ ಕೊರೊನಾ ನಿಯಂತ್ರಣಕ್ಕಿಂತ ಅಧಿಕಾರ ಮುಖ್ಯವಾಗಿದೆ ಎಂದು ಚಿಕ್ಕಬಳ್ಳಾಪುರದಲ್ಲಿ ಕನ್ನಡ ಹೋರಾಟಗಾರ ವಾಟಾಳ್​​​ ನಾಗರಾಜ್​ ವಾಗ್ದಾಳಿ ನಡೆಸಿದ್ದಾರೆ.

ಇದನ್ನೂ ಓದಿ: India Coronavirus Update: ಕಳೆದ 24 ಗಂಟೆಯಲ್ಲಿ ದೇಶದಲ್ಲಿ 93,249 ಜನರಿಗೆ ಕೊರೊನಾ ಸೋಂಕು, 513 ಬಲಿ

Akshay Kumar: ನಟ ಅಕ್ಷಯ್​ ಕುಮಾರ್​ಗೆ ಕೊರೊನಾ ಪಾಸಿಟಿವ್​! ಹೋಮ್​ ಕ್ವಾರಂಟೈನ್​ನಲ್ಲಿ ಕಿಲಾಡಿ

(yugadi festival Devotees are not allowed to enter the Male Mahadeshwara Temple from Corona at chamrajnagar)