ಫೆಂಗಲ್ ಚಂಡಮಾರುತ ಎಫೆಕ್ಟ್: ವರ್ಷದಲ್ಲೇ ಎರಡೆರಡು ಬಾರಿ ತುಂಬಿದ ಸುವರ್ಣಾವತಿ ಡ್ಯಾಂ

ಚಾಮರಾಜನಗರದ ಸುವರ್ಣಾವತಿ ಜಲಾಶಯವು ಫೆಂಗಲ್ ಚಂಡಮಾರುತದ ಪ್ರಭಾವದಿಂದ ಎರಡನೇ ಬಾರಿ ತುಂಬಿದೆ. ಕಳೆದ ವರ್ಷ ಮತ್ತು ಮುಂಗಾರು ಮಳೆಯಲ್ಲಿ ಜಲಾಶಯ ಖಾಲಿಯಾಗಿದ್ದು ರೈತರನ್ನು ಆತಂಕಕ್ಕೀಡುಮಾಡಿತ್ತು. ಈಗಿನ ನೀರಿನಿಂದ ಅಂತರ್ಜಲ ಮಟ್ಟ ಹೆಚ್ಚಳ ಮತ್ತು ಹಿಂಗಾರು ಬೆಳೆಗೆ ನೀರಾವರಿ ಸಾಧ್ಯವಾಗಲಿದೆ. ನದಿ ಪಾತ್ರದ ಜನರು ಎಚ್ಚರಿಕೆಯಿಂದಿರಬೇಕು ಎಂದು ಕಾವೇರಿ ನೀರಾವರಿ ನಿಗಮ ಸೂಚಿಸಿದೆ.

ಫೆಂಗಲ್ ಚಂಡಮಾರುತ ಎಫೆಕ್ಟ್: ವರ್ಷದಲ್ಲೇ ಎರಡೆರಡು ಬಾರಿ ತುಂಬಿದ ಸುವರ್ಣಾವತಿ ಡ್ಯಾಂ
ಫೆಂಗಲ್ ಚಂಡಮಾರುತ ಎಫೆಕ್ಟ್: ವರ್ಷದಲ್ಲೇ ಎರಡೆರಡು ಬಾರಿ ತುಂಬಿದ ಸುವರ್ಣಾವತಿ ಡ್ಯಾಂ
Edited By:

Updated on: Dec 02, 2024 | 7:24 PM

ಚಾಮರಾಜನಗರ, ಡಿಸೆಂಬರ್​​ 02: ಆ ಜಲಾಶಯ ಕಳೆದ ವರ್ಷ ತುಂಬದೇ ರೈತರನ್ನು ಸಂಕಷ್ಟಕ್ಕೀಡು ಮಾಡಿತ್ತು. ಈ ವರ್ಷದ ಮುಂಗಾರು ಮಳೆಯಲ್ಲೂ ಜಲಾಶಯಕ್ಕೆ ನೀರು ಬರಲೇ ಇಲ್ಲ. ಆದರೆ ಇದೀಗ ಫೆಂಗಲ್ ಚಂಡಮಾರುತದ ಎಫೆಕ್ಟ್​ಯಿಂದಾಗಿ ಎರಡನೇ ಬಾರಿ ಸುವರ್ಣಾವತಿ ಜಲಾಶಯ (suvarnavati Dam) ತುಂಬಿದ್ದು ಸ್ಥಳೀಯ ಶಾಸಕ ಬಾಗಿನ ಅರ್ಪಿಸಿದ್ದಾರೆ.

ಎರಡನೇ ಬಾರಿ ತುಂಬಿದ ಸುವರ್ಣಾವತಿ ಡ್ಯಾಂ

ಜಿಲ್ಲೆಯ ಸುವರ್ಣಾವತಿ ಜಲಾಶಯ ಕಳೆದ ವರ್ಷ ಅಷ್ಟೇ ಅಲ್ಲ ಮುಂಗಾರಿನಲ್ಲೂ ತುಂಬದೆ ರೈತರನ್ನು ಚಿಂತೆಗೀಡು ಮಾಡಿತ್ತು. ಆದರೆ ಜಿಲ್ಲೆಯ ಗಡಿಭಾಗ ಫೆಂಗಲ್ ಚಂಡಮಾರುತದ ಎಫೆಕ್ಟ್​ನಿಂದ ದಿಂಬಂ ಘಾಟ್‌ನಲ್ಲಿ ಕಳೆದ ಕೆಲ ದಿನಗಳಿಂದ ಉತ್ತಮ ಮಳೆಯಾದ ಕಾರಣ ಸುವರ್ಣಾವತಿ ಡ್ಯಾಂ ವರ್ಷದಲ್ಲಿ ಎರಡನೇ ಬಾರಿ ತುಂಬಿದ್ದು, ಇಂದು ಸ್ಥಳೀಯ ಶಾಸಕ ಪುಟ್ಟರಂಗಶೆಟ್ಟಿ ಬಾಗಿನವನ್ನ ಅರ್ಪಣೆ ಮಾಡಿದ್ದಾರೆ.

ಇದನ್ನೂ ಓದಿ: Chikmagalur Rains: ಮಳೆಯಿಂದ ಚಿಕ್ಕಮಗಳೂರಿನಲ್ಲಿ ನಾಳೆಯಿಂದ ಹಳದಿ ಅಲರ್ಟ್ ಘೋಷಣೆ; ಶಾಲೆಗಳಿಗೆ ರಜೆ

55 ಅಡಿ ಸಾಮರ್ಥ್ಯದ ಜಲಾಶಯ ಸದ್ಯ 55 ಅಡಿ ಭರ್ತಿಯಾಗಿದೆ. ಒಳ ಹರಿವು ಹೆಚ್ಚಾಗಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ನದಿಗೆ 150 ಕ್ಯೂಸೆಕ್ ಬಿಡುಗಡೆ ಮಾಡಲಾಗಿದೆ. ಯಾವುದೇ ಕ್ಷಣದಲ್ಲಿ ಒಳ ಹಾಗೂ ಹೊರ ಹರಿವು ಹೆಚ್ಚಳ ಸಾಧ್ಯತೆ ಇರುವುದರಿಂದ ನದಿ ಪಾತ್ರದ ಗ್ರಾಮಸ್ಥರು ಎಚ್ಚರಿಕೆಯಿಂದಿರಲು ಕಾವೇರಿ ನೀರಾವರಿ ನಿಗಮ ಸೂಚಿಸಿದೆ.

ಸದ್ಯ ನದಿಯಿಂದ ಕರಿನಂಜನಪುರದ ದೊಡ್ಡಕೆರೆ, ಚಿಕ್ಕಕೆರೆ, ಸಿಂಡಗೆರೆ, ಬಂಡೀಗೆರೆ ನಲ್ಲೂರು, ನಾಗವಳ್ಳಿ ಸೇರಿದಂತೆ ಹತ್ತಾರು ಕೆರೆ ಕಟ್ಟೆಗಳಿಗೆ ನೀರು ಹರಿಯುತ್ತಿದ್ದು ಈ ಕೆರೆಕಟ್ಟೆಗಳು ತುಂಬತೊಡಗಿವೆ. ಇದರಿಂದ ಚಾಮರಾಜನಗರ, ಯಳಂದೂರು ಹಾಗೂ ಕೊಳ್ಳೇಗಾಲ ತಾಲೂಕಿನ ಹಲವೆಡೆ ಅಂತರ್ಜಲ ವೃದ್ದಿಯಾಗುತ್ತಿದ್ದು ರೈತರ ಮೊಗದಲ್ಲಿ ಮಂದಹಾಸ ಮೂಡಿದೆ.

ಇದನ್ನೂ ಓದಿ: ಅಧಿಕಾರಿಗಳಿಗೂ ತಟ್ಟಿದ ಫೆಂಗಲ್ ಚಂಡಮಾರುತ ಎಫೆಕ್ಟ್: ಸಭೆ ವೇಳೆ ಒಳ ನುಗ್ಗಿದ ಮಳೆ ನೀರು

ಸುವರ್ಣಾವತಿ ಜಲಾಶಯ 7000 ಹೆಕ್ಟೇರ್ ಅಚ್ಚುಕಟ್ಟು ಪ್ರದೇಶ ಹೊಂದಿದೆ. ಹಿಂಗಾರು ಬೆಳೆ ಬೆಳೆಯಲು ಜಲಾಶಯದಿಂದ ಚಾನೆಲ್‌ಗಳಿಗೆ ನೀರು ಬಿಡುಗಡೆ ಮಾಡಬೇಕು ಎಂಬುದು ರೈತರ ಆಗ್ರಹವಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Suraj Prasad SN

ಸೂರಜ್ ಪ್ರಸಾದ್ ಎಸ್.ಎನ್ ಆದ ನಾನು ಹುಟ್ಟಿದ್ದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ. ಬೆಳೆದಿದ್ದು ದಾವಣಗರೆ ಜಿಲ್ಲೆ ನ್ಯಾಮತಿ ತಾಲೂಕಿನಲ್ಲಿ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ನಲ್ಲಿ ಪತ್ರಿಕೋದ್ಯಮದಲ್ಲಿ ಪದವಿಪೂರ್ವ ಶಿಕ್ಷಣ ಪಡೆದಿದ್ದು 2014ರಿಂದ ನನ್ನ ಎಲೆಕ್ಟ್ರಾನಿಕ್ ಮಾದ್ಯಮದ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದ್ದು ಬೆಂಗಳೂರಿನಲ್ಲಿ 8 ವರ್ಷಗಳ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಹಾಗೂ ಕ್ರೈಂ ಇನ್ವೆಸ್ಟಿಗೇಟಿವ್ ವರದಿಗಾರನಾಗಿ ಹಾಗೂ ಸ್ಟಿಂಗ್ ಅಪರೇಷನ್ ಗಳನ್ನ ಮಾಡಿದ್ದೇನೆ. ಗೌರಿ ಲಂಕೇಶ್ ಕೊಲೆ ಕೇಸನ್ನ ರಾಜ್ಯದಲ್ಲೇ ಮೊದಲು ಬ್ರೇಕ್ ಮಾಡಿ ಈ ಹಿಂದಿನ ಸಂಸ್ಥೆಯಿಂದ ಪ್ರಶಂಸೆ ಪಡೆದಿರುತ್ನೇನೆ2019 ರಲ್ಲಿ ಪಿಎಸ್ಐ ಅಕ್ರಮದ ಸ್ಟಿಂಗ್ ಆಪರೇಷನ್ ಹಾಗೂ ಬೆಂಗಳೂರು ಸಿಂಥಟಿಕ್ ಡ್ರಗ್ ಮಾಫಿಯಾದ ಸ್ಟಿಂಗ್ ಆಪರೇಷನ್ ಮಾಡಿದ್ದು. ಕಳೆದ 10 ವರ್ಷಗಳಿಂದ ಸಕ್ರೀಯವಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೆ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿ ಬಳಿಕ ಚಾಮರಾಜನಗರಕ್ಕೆ ವರ್ಗಾವಣೆಯಾಗಿ ಈಗ ಪ್ರಸ್ಥುತ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಹವ್ಯಾಸ ಅಡಿಗೆ ಮಾಡುವುದು, ಕ್ರಿಕೆಟ್ ಆಡುವುದು ಕ್ರೈಂ ಇನ್ವೆಷ್ಟಿಗೇಷನ್ ನಾವೆಲ್ ಗಳನ್ನ ಓದುವುದು.

Read More
Follow Us