ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆಗೆ ಅನುಮತಿ ವಿಚಾರ; ಕಂದಾಯ ಇಲಾಖೆಗೆ ಜಿಲ್ಲಾಧಿಕಾರಿ ಪತ್ರ

| Updated By: Rakesh Nayak Manchi

Updated on: Oct 30, 2022 | 1:51 PM

ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಅದ್ದೂರಿ ಕನ್ನಡ ರಾಜ್ಯೋತ್ಸವ ಆಚರಣೆಗೆ ಅನುಮತಿ ಕೋರಿ ನಾಗರಿಕರ ಒಕ್ಕೂಟವು ಮನವಿ ಮಾಡಿಕೊಂಡಿದೆ.

ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆಗೆ ಅನುಮತಿ ವಿಚಾರ; ಕಂದಾಯ ಇಲಾಖೆಗೆ ಜಿಲ್ಲಾಧಿಕಾರಿ ಪತ್ರ
ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಅದ್ದೂರಿ ಕನ್ನಡ ರಾಜ್ಯೋತ್ಸವ ಆಚರಣೆಗೆ ಚಿಂತನೆ
Follow us on

ಬೆಂಗಳೂರು: ಚಾಮರಾಜಪೇಟೆ ಈದ್ಗಾ ಮೈದಾನ (Chamarajpet Idgah Maidan)ದಲ್ಲಿ ಕನ್ನಡ ರಾಜ್ಯೋತ್ಸವ (Kannada Rajyotsava) ಆಚರಣೆಗೆ ಚಾಮರಾಜಪೇಟೆ ನಾಗರಿಕರ ಒಕ್ಕೂಟ ಮಾಡಿದ ಮನವಿ ಕುರಿತು ಜಿಲ್ಲಾಧಿಕಾರಿಯವರು ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ. ಕನ್ನಡ ಸಾಹಿತ್ಯ ಪರಿಷತ್​ನಿಂದ ಮೂರು ದಿನಗಳ ಕಾಲ ಅದ್ದೂರಿ ಕನ್ನಡ ರಾಜ್ಯೋತ್ಸವಕ್ಕೆ ಅನುಮತಿ ಕೋರಿ ಚಾಮರಾಜಪೇಟೆ ನಾಗರಿಕರ ಒಕ್ಕೂಟವು ಪತ್ರ ಬರೆದಿದೆ. ಈ ಬಗ್ಗೆ ಸೂಕ್ತ ಕ್ರಮ ಹಾಗೂ ತಮ್ಮ ನಿರ್ದೇಶನ ನೀಡುವಂತೆ ಕೋರಿ ಜಿಲ್ಲಾಧಿಕಾರಿಯವರು ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿಯವರಿಗೆ ಬರೆದ ಪತ್ರ ಬರೆದಿದ್ದಾರೆ.

ಈದ್ಗಾ ಮೈದಾನದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ವಿಚಾರವಾಗಿ ನಿನ್ನೆ ಜಿಲ್ಲಾಧಿಕಾರಿ ಶ್ರೀನಿವಾಸ್ ಅವರನ್ನು ಭೇಟಿ ಮಾಡಿ ಒಕ್ಕೂಟದಿಂದ ಮತ್ತೊಮ್ಮೆ ಮನವಿ ಮಾಡಲಾಗಿತ್ತು. ಕಂದಾಯ ಇಲಾಖೆಯಿಂದ ಯಾವುದೇ ನಿರ್ಧಾರ ಪ್ರಕಟಗೊಳ್ಳದ ಹಿನ್ನೆಲೆ ನ.1ರಿಂದ ನ.3ರವರೆಗೆ ರಾಜ್ಯೋತ್ಸವಕ್ಕೆ ಅನುಮತಿ ಕೋರಿ ಒಕ್ಕೂಟವು ಮತ್ತೊಮ್ಮೆ ಮನವಿ ಮಾಡಿತ್ತು.  ಈವರೆಗೆ ತಟಸ್ಥ ನಿಲುವು ಹೊಂದಿದ ಬೆಂಗಳೂರು ನಗರ ಡಿಸಿ ಮತ್ತು ಕಂದಾಯ ಸಚಿವ ಆರ್‌.ಅಶೋಕ್ ವಿರುದ್ಧ ಒಕ್ಕೂಟವು ಅಸಮಾಧಾನ ಹೊರಹಾಕಿದೆ.

ಟಿವಿ9 ಜೊತೆ ಮಾತನಾಡಿದ ಒಕ್ಕೂಟದ ಖಜಾಂಚಿ ಯಶವಂತ್, ಸಾಂಸ್ಕೃತಿಕ ಕಾರ್ಯಕ್ರಮಗಳ ರೂಪರೇಷೆ ಸಿದ್ಧಪಡಿಸಲಾಗಿದೆ. ನಮ್ಮ ಮನವಿಗೆ ಇದುವರೆಗೆ ಯಾವುದೇ ಪ್ರತಿಕ್ರಿಯೆ ಸಿಕ್ಕಿಲ್ಲ. ಅಧಿಕಾರಿಗಳಿಗೆ ಸ್ಥಳೀಯ ಶಾಸಕ ಜಮೀರ್ ಖಾನ್ ಒತ್ತಡ ಇದೆ. ಇದೇ ಕಾರಣದಿಂದಾಗಿ ಇನ್ನೂ ಅನುಮತಿ ನೀಡಿಲ್ಲವೆಂದು ಆಕ್ರೋಶ ಹೊರಹಾಕಿದರು. ಅಲ್ಲದೆ ಅನುಮತಿ ಸಿಗದಿದ್ದರೂ ಮೈದಾನದಲ್ಲಿ ಕನ್ನಡ ಧ್ವಜ ಹಾರಿಸುತ್ತೇವೆ ಎಂದು ಹೇಳಿದರು.

ಧಾರ್ಮಿಕ ಆಚರಣೆಗೆಳಿಗೆ ಕೋರ್ಟ್ ತಡೆ ಇದೆ, ಆದರೆ ಇದು ನಾಡಹಬ್ಬ, ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ 3 ದಿನ ಅದ್ದೂರಿಯಾಗಿ ಆಚರಣೆಗೆ ಮನವಿ ಮಾಡಲಾಗಿದೆ. ಕಳೆದ 20 ದಿನಗಳಿಂದ ಕಂದಾಯ ಸಚಿವ ಆರ್‌.ಅಶೋಕ್, ಸಂಸದ ಪಿ.ಸಿ ಮೋಹನ್ ಹಾಗೂ ಇಲಾಖೆ ಅಧಿಕಾರಿಗಳ ಭೇಟಿ ಮಾಡಿ ಮನವಿ ಮಾಡಲಾಗಿದೆ. ನಮ್ಮ ಮನವಿಗೆ ಇದುವರೆಗೆ ಯಾವುದೇ ಪ್ರತಿಕ್ರಿಯೆ ಸಿಕ್ಕಿಲ್ಲ ಎಂದರು.

ಮತ್ತಷ್ಟು ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:13 pm, Sun, 30 October 22