ಚಂದ್ರಯಾನ-3 ಯಶಸ್ವಿ; ಬೆಂಗಳೂರಿನಲ್ಲಿರುವ ಇಸ್ರೋ ಕೇಂದ್ರ ಕಚೇರಿಗೆ ಭೇಟಿ ನೀಡಲಿದ್ದಾರೆ ಮೋದಿ

PM Modi to Visit ISRO headquarters; ಪ್ರಸ್ತುತ ಬ್ರಿಕ್ಸ್ ಶೃಂಗಸಭೆಯಲ್ಲಿ ಭಾಗವಹಿಸುವ ಸಲುವಾಗಿ ಮೋದಿ ಅವರು ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿದ್ದು, ಅಲ್ಲಿನ ಜೊಹಾನ್ಸ್‌ಬರ್ಗ್‌ನಲ್ಲಿದ್ದಾರೆ. ಅಲ್ಲಿಂದಲೇ ಅವರು ನೇರವಾಗಿ ಬೆಂಗಳೂರಿಗೆ ಆಗಮಿಸಲಿದ್ದಾರೆ. ಆಗಸ್ಟ್‌ 26ರಂದು ಸಂಜೆ ಇಸ್ರೋ ಕೇಂದ್ರ ಕಚೇರಿಗೆ ಭೇಟಿ ನೀಡಲಿದ್ದಾರೆ. ರಾತ್ರಿ 8 ಗಂಟೆಯವರೆಗೆ ಇಸ್ರೋ ಕಚೇರಿಯಲ್ಲಿ ಪ್ರಧಾನಿ ಮೋದಿ ಸಭೆ ನಡೆಸಲಿದ್ದಾರೆ.

ಚಂದ್ರಯಾನ-3 ಯಶಸ್ವಿ; ಬೆಂಗಳೂರಿನಲ್ಲಿರುವ ಇಸ್ರೋ ಕೇಂದ್ರ ಕಚೇರಿಗೆ ಭೇಟಿ ನೀಡಲಿದ್ದಾರೆ ಮೋದಿ
ಪ್ರಧಾನಿ ನರೇಂದ್ರ ಮೋದಿ
Follow us
| Updated By: ಗಣಪತಿ ಶರ್ಮ

Updated on:Aug 23, 2023 | 10:51 PM

ಬೆಂಗಳೂರು, ಆಗಸ್ಟ್ 23: ಚಂದ್ರಯಾನ-3 ಯಶಸ್ವಿಯಾಗಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಆಗಸ್ಟ್‌ 26ರಂದು ಇಸ್ರೋ (ISRO) ಕಚೇರಿಗೆ ಭೇಟಿ ನೀಡಲಿದ್ದಾರೆ. ಬೆಂಗಳೂರಿನಲ್ಲಿರುವ (Bangalore) ಇಸ್ರೋ ಕೇಂದ್ರ ಕಚೇರಿಗೆ ಭೇಟಿ ನೀಡಲಿದ್ದಾರೆ. ಆಗಸ್ಟ್‌ 26ರಂದು ಸಂಜೆ 5.55ಕ್ಕೆ ಎಚ್​ಎಎಲ್​ ಏರ್‌ಪೋರ್ಟ್‌ಗೆ ಆಗಮಿಸಲಿರುವ ಪ್ರಧಾನಿ, ಸಂಜೆ 6.30ರವರೆಗೆ ಏರ್‌ಪೋರ್ಟ್‌ನಲ್ಲಿ ವಿಶ್ರಾಂತಿ ಪಡೆಯಲಿದ್ದಾರೆ. ರಾತ್ರಿ 7 ಗಂಟೆಗೆ ಇಸ್ರೋ ಕೇಂದ್ರ ಕಚೇರಿಗೆ ಭೇಟಿ ನೀಡಲಿದ್ದಾರೆ. ರಾತ್ರಿ 8 ಗಂಟೆಯವರೆಗೆ ಇಸ್ರೋ ಕಚೇರಿಯಲ್ಲಿ ಪ್ರಧಾನಿ ಮೋದಿ ಸಭೆ ನಡೆಸಲಿದ್ದು, ನಂತರ ರಾತ್ರಿ 8.35ಕ್ಕೆ ಬೆಂಗಳೂರಿನಿಂದ ದೆಹಲಿಗೆ ನಿರ್ಗಮಿಸಲಿದ್ದಾರೆ.

ಪ್ರಸ್ತುತ ಬ್ರಿಕ್ಸ್ ಶೃಂಗಸಭೆಯಲ್ಲಿ ಭಾಗವಹಿಸುವ ಸಲುವಾಗಿ ಮೋದಿ ಅವರು ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿದ್ದು, ಅಲ್ಲಿನ ಜೊಹಾನ್ಸ್‌ಬರ್ಗ್‌ನಲ್ಲಿದ್ದಾರೆ. ಅಲ್ಲಿಂದಲೇ ಅವರು ನೇರವಾಗಿ ಬೆಂಗಳೂರಿಗೆ ಆಗಮಿಸಲಿದ್ದಾರೆ.

ಚಂದ್ರಯಾನ-3 ರ ವಿಕ್ರಂ ಲ್ಯಾಂಡರ್​​ ಬುಧವಾರ ಸಂಜೆ ಯಶಸ್ವಿಯಾಗಿ ಚಂದ್ರನ ಅಂಗಳದಲ್ಲಿ ಲ್ಯಾಂಡ್ ಆಗಿದೆ. ಆ ಮೂಲಕ ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತವು ಮಹತ್ತರ ಮೈಲಿಗಲ್ಲು ಸಾಧಿಸಿದೆ. ಲ್ಯಾಂಡಿಂಗ್​ ಕ್ಷಣದಲ್ಲಿ ದಕ್ಷಿಣ ಆಫ್ರಿಕಾದಿಂದಲೇ ಇಸ್ರೋ ತಂಡದ ಜತೆ ವರ್ಚುವಲ್ ಆಗಿ ಭಾಗವಹಿಸಿದ್ದ ಮೋದಿ, ಚಂದ್ರಯಾನದ ಯಶಸ್ಸಿನ ಬೆನ್ನಲ್ಲೇ ಇಸ್ರೋ ಅಧ್ಯಕ್ಷ ಸೋಮನಾಥ್ ಅವರಿಗೆ ದೂರವಾಣಿ ಕರೆ ಮಾಡಿ ಅಭಿನಂದನೆ ಸಲ್ಲಿಸಿದ್ದಾರೆ. ಇಡೀ ಇಸ್ರೋ ತಂಡಕ್ಕೆ ಅಭಿನದನೆ ತಿಳಿಸುವಂತೆ ಸೊಮನಾಥ್ ಅವರಿಗೆ ತಿಳಿಸಿದ್ದಾರೆ.

ಇದನ್ನೂ ಓದಿ: Chandrayaan-3: ಸಂವಹನ ನಡೆದಿದೆ; ಚಂದ್ರನಲ್ಲಿ ಇಳಿದ ನಂತರ ಮೊದಲ ಚಿತ್ರ ಹಂಚಿಕೊಂಡ ವಿಕ್ರಮ್ ಲ್ಯಾಂಡರ್

ಜುಲೈ 14 ರಂದು ಉಡಾವಣೆಗೊಂಡ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ಚಂದ್ರಯಾನ-3 ರ ಲ್ಯಾಂಡರ್ ವಿಕ್ರಂ ಬುಧವಾರ ಸಂಜೆ (ಆಗಸ್ಟ್ 23) ಸುಮಾರು 6.04 ಕ್ಕೆ ಚಂದ್ರನ ಮೇಲ್ಮೈಯಲ್ಲಿ ಯಶಸ್ವಿಯಾಗಿ ಲ್ಯಾಂಡಿಂಗ್ ಮಾಡಿದೆ. ಇದರೊಂದಿಗೆ ಬಾಹ್ಯಾಕಾಶ ಸಂಶೋಧನೆ ಕ್ಷೇತ್ರದಲ್ಲಿ ಭಾರತವು ಮಹತ್ವದ ಮೈಲಿಗಲ್ಲು ಸ್ಥಾಪಿಸಿದಂತಾಗಿದೆ. ಈ ಮೂಲಕ ಚಂದ್ರನ ದಕ್ಷಿಣ ಧ್ರುವ ಪ್ರದೇಶವನ್ನು ಅನ್ವೇಷಿಸುವ ಮೊದಲ ದೇಶವಾಗಿ ಭಾರತ ಹೊರಹೊಮ್ಮಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:50 pm, Wed, 23 August 23

ತಾಜಾ ಸುದ್ದಿ
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇ ದಾಟಿ ಕಾರಿಗೆ ಡಿಕ್ಕಿ ಹೊಡೆದ KSRTC ಬಸ
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇ ದಾಟಿ ಕಾರಿಗೆ ಡಿಕ್ಕಿ ಹೊಡೆದ KSRTC ಬಸ
ನಿನ್ನೆ ದೆಹಲಿಯಲ್ಲಿದ್ದ ಕೇಂದ್ರ ಸಚಿವ ಸೋಮಣ್ಣರಿಂದ ಇಂದು ಬೆಂಗಳೂರಲ್ಲಿ ಸಭೆ
ನಿನ್ನೆ ದೆಹಲಿಯಲ್ಲಿದ್ದ ಕೇಂದ್ರ ಸಚಿವ ಸೋಮಣ್ಣರಿಂದ ಇಂದು ಬೆಂಗಳೂರಲ್ಲಿ ಸಭೆ
ದೈವ ಕ್ಷೇತ್ರದಲ್ಲಿ ಪವಾಡ; ಆಫ್ ಮಾಡಿದ್ದರೂ ತನ್ನಂತಾನೆ ಚಲಿಸಿದ ಆಟೋ
ದೈವ ಕ್ಷೇತ್ರದಲ್ಲಿ ಪವಾಡ; ಆಫ್ ಮಾಡಿದ್ದರೂ ತನ್ನಂತಾನೆ ಚಲಿಸಿದ ಆಟೋ
ಸಿಎಂ/ಡಿಸಿಎಂ ಅಗಬೇಕೆನ್ನುವವರು ಮತ್ತೊಮ್ಮೆ ಚುನಾವಣೆ ಎದುರಿಸಲಿ:ಡಿಕೆ ಸುರೇಶ್
ಸಿಎಂ/ಡಿಸಿಎಂ ಅಗಬೇಕೆನ್ನುವವರು ಮತ್ತೊಮ್ಮೆ ಚುನಾವಣೆ ಎದುರಿಸಲಿ:ಡಿಕೆ ಸುರೇಶ್
ಶಿವಕುಮಾರ್ ಸಿಎಂ ಆಗಬೇಕು ಎಂದಷ್ಟೇ ಹೇಳಿದ್ದು: ಚಂದ್ರಶೇಖರನಾಥ ಸ್ವಾಮೀಜಿ
ಶಿವಕುಮಾರ್ ಸಿಎಂ ಆಗಬೇಕು ಎಂದಷ್ಟೇ ಹೇಳಿದ್ದು: ಚಂದ್ರಶೇಖರನಾಥ ಸ್ವಾಮೀಜಿ
ಸೋಲಿಗೆ ಮಾಧ್ಯಮಗಳ ಮೇಲೆ ಗೂಬೆ ಕೂರಿಸುವ ಪ್ರಯತ್ನ ಮಾಡಿದ ಡಿಕೆ ಸುರೇಶ್
ಸೋಲಿಗೆ ಮಾಧ್ಯಮಗಳ ಮೇಲೆ ಗೂಬೆ ಕೂರಿಸುವ ಪ್ರಯತ್ನ ಮಾಡಿದ ಡಿಕೆ ಸುರೇಶ್
ಹಣವನ್ನು ಗಾಳಿಯಲ್ಲಿ ತೂರಿ ಹುಟ್ಟುಹಬ್ಬ ಆಚರಿಸಿಕೊಂಡ ಹುಬ್ಬಳ್ಳಿಯ ಯುವಕ
ಹಣವನ್ನು ಗಾಳಿಯಲ್ಲಿ ತೂರಿ ಹುಟ್ಟುಹಬ್ಬ ಆಚರಿಸಿಕೊಂಡ ಹುಬ್ಬಳ್ಳಿಯ ಯುವಕ
ಯುವಕರ ನೆಚ್ಚಿನ ಸ್ಟೈಲಿಶ್ ಕ್ಯಾಸಿಯೋ G Shock ಸ್ಮಾರ್ಟ್​ವಾಚ್ ಬಿಡುಗಡೆ
ಯುವಕರ ನೆಚ್ಚಿನ ಸ್ಟೈಲಿಶ್ ಕ್ಯಾಸಿಯೋ G Shock ಸ್ಮಾರ್ಟ್​ವಾಚ್ ಬಿಡುಗಡೆ
‘ಎಲ್ಲರಿಗೂ ನೋವಿದೆ’; ದರ್ಶನ್ ಪ್ರಕರಣದಲ್ಲಿ ಸುಮಲತಾ, ರಾಕ್​ಲೈನ್ ಮೌನ ಏಕೆ?
‘ಎಲ್ಲರಿಗೂ ನೋವಿದೆ’; ದರ್ಶನ್ ಪ್ರಕರಣದಲ್ಲಿ ಸುಮಲತಾ, ರಾಕ್​ಲೈನ್ ಮೌನ ಏಕೆ?
ಮನೆಯಲ್ಲಿ ಚಪ್ಪಲಿ ಹಾಕಿಕೊಂಡು ಓಡಾಡಬಾರದು, ಈ ಬಗ್ಗೆ ಆಧ್ಯಾತ್ಮದಲ್ಲೇನಿದೆ?
ಮನೆಯಲ್ಲಿ ಚಪ್ಪಲಿ ಹಾಕಿಕೊಂಡು ಓಡಾಡಬಾರದು, ಈ ಬಗ್ಗೆ ಆಧ್ಯಾತ್ಮದಲ್ಲೇನಿದೆ?