ಸಂವಿಧಾನ ಬದಲಾವಣೆ ಹೇಳಿಕೆ: ಮುಜುಗರ ತಾಳಲಾರದೇ ಮಾಧ್ಯಮಗಳ ವಿರುದ್ಧ ನಾಲಗೆ ಹರಿಬಿಟ್ಟ ಅನಂತಕುಮಾರ್ ಹೆಗಡೆ

Ananth Kumar Hegde Constitution Remark: ಸಂಸದ ಅನಂತ ಕುಮಾರ ಹೆಗಡೆ ಮತ್ತೆ ಸಂವಿಧಾನ ಬದಲಾವಣೆಯ ಮಾತನ್ನ ಆಡಿದ್ದಾರೆ. ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ 400 ಕ್ಕೂ ಹೆಚ್ಚು ಸೀಟು ಗೆಲ್ಲಬೇಕು, ರಾಜ್ಯಸಭೆಯಲ್ಲೂ ನಮಗೆ ಬಹುಮತ ಸಿಕ್ರೆ. ಸಂವಿಧಾನ ತಿದ್ದುಪಡಿ ಮಾಡಲಾಗುತ್ತೆ, ಆಗ ಇದೆ ನೋಡಿ ನಿಜವಾದ ಮಾರಿ ಹಬ್ಬ ಎಂದು ಹೇಳಿದ್ದಾರೆ. ಇದೀಗ ಹೆಗಡೆ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಇದರಿಂದ ಎಚ್ಚೆತ್ತುಕೊಂಡ ಬಿಜೆಪಿ, ಹೆಗಡೆ ಹೇಳಿಕೆಯಿಂದ ಅಂತರ ಕಾಯ್ದುಕೊಂಡಿದೆ. ಇನ್ನು ಈ ಬಗ್ಗೆ ಮಾಧ್ಯಮಗಳು ವರದಿ ಮಾಡಿದ್ದಕ್ಕೆ ಅನಂತ ಕುಮಾರ್ ಹೆಗಡೆ ನಾಲಿಗೆ ಹರಿಬಿಟ್ಟಿದ್ದಾರೆ.

ಸಂವಿಧಾನ ಬದಲಾವಣೆ ಹೇಳಿಕೆ: ಮುಜುಗರ ತಾಳಲಾರದೇ ಮಾಧ್ಯಮಗಳ  ವಿರುದ್ಧ ನಾಲಗೆ ಹರಿಬಿಟ್ಟ ಅನಂತಕುಮಾರ್ ಹೆಗಡೆ
ಸಂಸದ ಅನಂತಕುಮಾರ್​ ಹೆಗಡೆ
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on: Mar 11, 2024 | 3:31 PM

ಕಾರವಾರ, (ಮಾರ್ಚ್ 11): ಸಂಸದ ಅನಂತ ಕುಮಾರ ಹೆಗಡೆ (Ananth Kumar Hegde ) ಮತ್ತೆ ಸಂವಿಧಾನ ಬದಲಾವಣೆಯ(Change Constitution Remark) ಮಾತನ್ನ ಆಡಿದ್ದು, ಇದಕ್ಕೆ ಇದೀಗ ಬಿಜೆಪಿಯಲ್ಲೇ ವಿರೋಧ ವ್ಯಕ್ತವಾಗಿದೆ. ಅಲ್ಲದೇ ಅವರ ಹೇಳಿಕೆ ಪಕ್ಷಕ್ಕೆ ಸಂಬಂಧವಿಲ್ಲ ಎಂದು ರಾಜ್ಯ ಬಿಜೆಪಿ ಸ್ಪಷ್ಟಪಡಿಸಿದೆ. ಈ ಮುಜುಗರ ತಾಳಲಾರದೇ ಅನುಂತಕುಮಾರ್ ಹೆಗಡೆ ಮಾಧ್ಯಮಗಳ ವಿರುದ್ಧ ಆಕ್ರೋಶಗೊಂಡು ನಾಲಿಗೆ ಹರಿಬಿಟ್ಟಿದ್ದಾರೆ. ಉತ್ತರ ಕನ್ನಡ ಜಿಲ್ಲೆ ಅಂಕೊಲಾ ತಾಲೂಕಿನ ಹಿಲ್ಲೂರು ಗ್ರಾಮದಲ್ಲಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿರುವ ಹೆಗಡೆ, ಆನೆ ಹೊಗಿದ್ದೆ ದಾರಿ ಎಂಬಂತೆ ನಾವು ಈರಬೇಕು. ಮಾಧ್ಯಮಗಳು ಏನೂ ಬೆಕಾದ್ರೂ ಬರೆದುಕೊಳ್ಳಲಿ. ಬೇಕಾದ ಬೇವರ್ಸಿಗಳು ಏನೂ ಬೇಕಾದ್ರೂ ವದರಾಡಲಿ ಎಂದು ನಾಲಿಗೆ ಹರಿಬಿಟ್ಟಿದ್ದಾರೆ.

ಆನೆ ಹೊಗಿದ್ದೆ ದಾರಿ ಎಂಬಂತೆ ನಾವು ಈರಬೇಕು. ಮಾಧ್ಯಮಗಳು ಏನೂ ಬೆಕಾದ್ರೂ ಬರೆದುಕೊಳ್ಳಲಿ. ಬೇಕಾದ ಬೇವರ್ಸಿಗಳು ಏನೂ ಬೇಕಾದ್ರೂ ವದರಾಡಲಿ. ಸಾಮಾಜಿಕ ಜಾಲತಾಣದಲ್ಲಿ ಬೇಕಾದ್ದ ಚರ್ಚೆ ಆಗಲಿ. ಆದ್ರೆ ನಿವೆಲ್ಲ ಇದಕ್ಕೆ ವಿಚಲಿತರಾಗಬಾರರು. ನೀವು ಯಾವದೋ ಸಾಮಾನ್ಯ ಪಕ್ಷದ ಕಾಯರ್ತರಲ್ಲ. ದೇಶ ಆಡಳಿತ ಮಾಡುತ್ತಿರುವ ಪಕ್ಷದ ಕಾರ್ಯಕರ್ತರು. ಬೇರೆ ಯಾರೋ ಪತ್ರಿಕೆಯಲ್ಲಿ, ವಾಟ್ಸಪ್ ನಲ್ಲಿ ಎನೆನೋ ಹೇಳಿದ್ರು ಎಂದು ವಿಚಲಿತರಾಗಬಾರದು ಎಂದು ಕಾರ್ಯಕರ್ತರಿಗೆ ಕಿವಿ ಮಾತು ಹೇಳಿದರು.

ಇದನ್ನೂ ಓದಿ: ಸಂವಿಧಾನ ತಿದ್ದುಪಡಿ ಮಾಡಲು ಬಿಜೆಪಿ 400 ಸ್ಥಾನಗಳನ್ನು ಗೆಲ್ಲಬೇಕು: ಅನಂತ್ ಕುಮಾರ್ ಹೆಗಡೆ

ಆನೆ ನಡೆದಿದ್ದೆ ದಾರಿ ಎಂಬಂತೆ ನಾವು ನಡಿಯಬೇಕು ಕಣ್ರಿ. ಆನೆ ನಡೆಯುತ್ತಿದ್ದರೆ ನಾಯಿಗಳು ಬೋಗಳುತ್ತಾ ಇರುತ್ತವೆ. ಆನೆ ನಡೆಯುತ್ತಿದ್ದರೆ ಯಾವಗಲಾದರೂ ನಾಯಿ ಕಡೆ ಗಮನ ಕೊಡುತ್ತಾ? ನಾಯಿಗಳಿಗೂ ಗೊತ್ತು ನಾವು ಎಷ್ಟೆ ಬೊಗಳಿದ್ರು ಆನೆಗೆ ಏನು ಮಾಡುವುದಕ್ಕೂ ಆಗಲ್ಲ. ನಾಯಿಗಳು ಬೋಗಳದೆ ಇದ್ರೆ ಆನೆ ಗಾಂಭೀರ್ಯಕ್ಕೆ ಬೆಲೆ ಇರಲ್ಲ ಎಂದು ವಾಗ್ದಾಳಿ ನಡೆಸಿದರು.

ಹಿಂದೊಮ್ಮೆ ಅನಂತ್ ಕುಮಾರ್ ಹೆಗಡೆ ಸಂವಿಧಾನ ಬದಲಾವಣೆ ಮಾತನಾಡಿ ವ್ಯಾಪಕ ಟೀಕೆಗೆ ಗುರಿಯಾಗಿದ್ದರು. ಅಲ್ಲದೇ ಸಚಿವ ಸ್ಥಾನವನ್ನೂ ಸಹ ಕಳೆದುಕೊಂಡಿದ್ದರು. ಇದೀಗ ಮತ್ತೆ ಲೋಕಸಭಾ ಚುನಾವಣೆ ಹೊಸ್ತಿಲಲ್ಲೇ ಸಂವಿಧಾನ ಬದಲಾವಣೆ ಬಗ್ಗೆ ಮಾತನಾಡಿದ್ದು, ರಾಜ್ಯದಲ್ಲಿ ಬಿಜೆಪಿಗೆ ಮುಜುಗರ ಉಂಟು ಮಾಡಿದ್ದಾರೆ. ಅಲ್ಲದೇ ಕಾಂಗ್ರೆಸ್​ ಪ್ರಬಲ ಅಸ್ತ್ರವನ್ನು ನೀಡಿದ್ದು, ಇದನ್ನೇ ಉಲ್ಲೇಖಿಸಿ ಸಿದ್ದರಾಮಯ್ಯ ಆದಿಯಾಗಿ ಸಚಿವರು, ಶಾಸಕರು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ,

ಇದರಿಂದ ಎಚ್ಚೆತ್ತುಕೊಂಡ ಬಿಜೆಪಿ, ಅನಂತಕುಮಾರ್ ಅವರು ಸಂವಿಧಾನ ಬದಲಾವಣೆ ಹೇಳಿಕೆ ಪಕ್ಷಕ್ಕೆ ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸಿದೆ. ಅಲ್ಲದೇ ಬಿಜೆಪಿ ನಾಯಕರು ಅನಂತಕುಮಾರ್ ಹೆಗಡೆ ವಿರುದ್ಧ ಕಿಡಿಕಾರಿದ್ದಾರೆ. ಇದರ ಮುಜುಗರ ತಾಳಲಾರದೇ ಹೆಗಡೆ ಮಾಧ್ಯಮಗಳ ವಿರುದ್ಧ ಆಕ್ರೋಶಗೊಂಡಿದ್ದು, ಮಾಧ್ಯಮಗಳ ವಿರುದ್ಧ ನಾಲಿಗೆ ಹರಿಬಿಟ್ಟಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸರ್ಕಾರೀ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನಡೆಸಲು ಸಿಎಸ್​ಗೆ ಸಿಎಂ ಸೂಚನೆ
ಸರ್ಕಾರೀ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನಡೆಸಲು ಸಿಎಸ್​ಗೆ ಸಿಎಂ ಸೂಚನೆ
ಡಿಸೆಂಬರ್ 29ರಂದು ನಿಧನರಾದ ದಿವಿನ್ ಫೆಬ್ರುವರಿ 22ರಂದು ಮದುವೆಯಾಗಲಿದ್ದರು
ಡಿಸೆಂಬರ್ 29ರಂದು ನಿಧನರಾದ ದಿವಿನ್ ಫೆಬ್ರುವರಿ 22ರಂದು ಮದುವೆಯಾಗಲಿದ್ದರು
ಬಿಗ್​ ಬಾಸ್ ಮನೆಗೆ ಬಂದ ಗೌತಮಿ ಜಾದವ್ ಪತಿ​; ಹೇಗಿತ್ತು ಮಂಜು ರಿಯಾಕ್ಷನ್?
ಬಿಗ್​ ಬಾಸ್ ಮನೆಗೆ ಬಂದ ಗೌತಮಿ ಜಾದವ್ ಪತಿ​; ಹೇಗಿತ್ತು ಮಂಜು ರಿಯಾಕ್ಷನ್?
ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!
ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು