ಡಿಕೆ ಶಿವಕುಮಾರ್ ಅಸಮಾಧಾನ ಬೆನ್ನಲ್ಲೇ ಕೆಪಿಸಿಸಿ ಪದಾಧಿಕಾರಿಗಳ ನೇಮಕದಲ್ಲಿ ಬದಲಾವಣೆ

ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಗೆ ಹೊಸ ಪದಾಧಿಕಾರಿಗಳನ್ನು ನೇಮಕ ಮಾಡಿತ್ತು. ಆದರೆ ತಾವು ಕೊಟ್ಟಿದ್ದ ಪಟ್ಟಿಯಲ್ಲಿ ಬದಲಾವಣೆ ಆಗಿದ್ದಕ್ಕೆ ಡಿಸಿಎಂ ಡಿಕೆ ಶಿವಕುಮಾರ್​ ಬೇಸರಗೊಂಡಿದ್ದರು. ಹೀಗಾಗಿ ಇದೀಗ ಎಐಸಿಸಿ ಮತ್ತೆ ಪಟ್ಟಿಯಲ್ಲಿ ಕೆಲವು ಬದಲಾವಣೆ ಮಾಡಲಾಗಿದೆ.

ಡಿಕೆ ಶಿವಕುಮಾರ್ ಅಸಮಾಧಾನ ಬೆನ್ನಲ್ಲೇ ಕೆಪಿಸಿಸಿ ಪದಾಧಿಕಾರಿಗಳ ನೇಮಕದಲ್ಲಿ ಬದಲಾವಣೆ
ಡಿ.ಕೆ.ಶಿವಕುಮಾರ್
Edited By:

Updated on: Apr 03, 2024 | 8:38 PM

ಬೆಂಗಳೂರು, ಮಾರ್ಚ್​ 03: ಲೋಕಸಭಾ ಚುನಾವಣೆಯಲ್ಲಿ (Loksabha Elections 2024) ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಗೆ (KPCC) ಹೊಸ ಪದಾಧಿಕಾರಿಗಳನ್ನು ನೇಮಕ ಮಾಡಿತ್ತು. ಆದರೆ ತಾವು ಕೊಟ್ಟಿದ್ದ ಪಟ್ಟಿಯಲ್ಲಿ ಬದಲಾವಣೆ ಆಗಿದ್ದಕ್ಕೆ ಡಿಸಿಎಂ ಡಿಕೆ ಶಿವಕುಮಾರ್​ ಬೇಸರಗೊಂಡಿದ್ದರು. ಹೀಗಾಗಿ ಇದೀಗ ಎಐಸಿಸಿ ಮತ್ತೆ ಪಟ್ಟಿಯಲ್ಲಿ ಕೆಲವು ಬದಲಾವಣೆ ಮಾಡಿದ್ದು, ಹೊಸದಾಗಿ ಕೆಲವು ನಾಯಕರ ಹೆಸರನ್ನು ಸೇರಿಸಲಾಗಿದೆ. ಪ್ರಧಾನ ಕಾರ್ಯದರ್ಶಿ 138 ಇದ್ದಿದ್ದನ್ನು 140ಕ್ಕೆ ಹೆಚ್ಚಿಸಿ ಎಐಸಿಸಿ ಆದೇಶ ಹೊರಡಿಸಿದೆ.

ರಾಜಾಜಿನಗರದ ರಘುವೀರ್ ಗೌಡ ಬಿಟ್ಟು ಭವ್ಯಾ ನರಸಿಂಹಮೂರ್ತಿ ಪ್ರಧಾನ ಕಾರ್ಯದರ್ಶಿ ಸ್ಥಾನ ನೀಡಲಾಗಿದೆ. B.R.ನಾಯ್ಡು, ಶಿವಕುಮಾರ್, ಸಂಜಯ್ ಜಾಗಿದಾರ್, ಸುಶುತ್ ಗೌಡ, ರಾಬರ್ಟ್ ದೊಡ್ಡಪುರ, ಅನಿಲ್ ಕುಮಾರ್​ಗೆ ಪ್ರಧಾನ ಕಾರ್ಯದರ್ಶಿ ಸ್ಥಾನ ನೀಡಲಾಗಿದೆ.

ಇದನ್ನೂ ಓದಿ: ಕೆಪಿಸಿಸಿ ನೂತನ ತಂಡ ರಚನೆ: 7 ಜಿಲ್ಲಾಧ್ಯಕ್ಷ, ರಾಜ್ಯ ಉಪಾಧ್ಯಕ್ಷರ ನೇಮಕ: ಇಲ್ಲಿದೆ ನೂತನ ಪದಾಧಿಕಾರಿಗಳ ಪಟ್ಟಿ

ಲೋಕಸಭಾ ಚುನಾವಣೆ ಹೊಸ್ತಿಲಲ್ಲೇ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯಲ್ಲಿ ಇತ್ತೀಚೆಗೆ ಮಹತ್ವದ ಬದಲಾವಣೆ ಮಾಡಲಾಗಿತ್ತು. ಹಳೆಬರನ್ನು ಕೈಬಿಟ್ಟು ಹೊಸ-ಹೊಸ ಮುಖಗಳಿಗೆ ಕೆಪಿಸಿಸಿ ನೂತನ ತಂಡಕ್ಕೆ ಸೇರಿಸಿಕೊಳ್ಳಲಾಗಿತ್ತು.

ಇದನ್ನೂ ಓದಿ: ಕರ್ನಾಟಕದಲ್ಲಿ ಬಿಜೆಪಿಗೆ ಕಡಿಮೆ ಸ್ಥಾನ ಬಂದ್ರೆ ರಾಜ್ಯಾಧ್ಯಕ್ಷ ಬದಲಾವಣೆ: ಅಂತೆ-ಕಂತೆಗಳಿಗೆ ಉಸ್ತುವಾರಿ ಸ್ಪಷ್ಟನೆ

43 ರಾಜ್ಯ ಉಪಾಧ್ಯಕ್ಷರು, 138 ಪ್ರಧಾನ ಕಾರ್ಯದರ್ಶಿಗಳನ್ನು ನೇಮಕ ಮಾಡಲಾಗಿತ್ತು. ಇದರ ಜೊತೆಗೆ ಮಾಧ್ಯಮ ಮತ್ತು ಸಂವಹನ ಮುಖ್ಯಸ್ಥರಾಗಿ ರಮೇಶ್ ಬಾಬು ನೇಮಕವಾಗಿದ್ದರೆ, ಸಾಮಾಜಿಕ‌ ಜಾಲತಾಣ ಸಹ – ಮುಖ್ಯಸ್ಥರಾಗಿ ವಿನಯ್ ಮತ್ತಿಕಟ್ಟಿ ಮತ್ತು ನಿಕೇತ್ ರಾಜ್ ಮೌರ್ಯ ಅವರನ್ನು ನೇಮಿಸಲಾಗಿತ್ತು. ಇನ್ನು ಕೆಪಿಸಿಸಿ ಪ್ರಚಾರ ಸಮಿತಿ ಸಹ- ಮುಖ್ಯಸ್ಥರಾಗಿ ಪಿ.ಟಿ ಪರಮೇಶ್ವರ್ ನಾಯಕ್ ಅವರನ್ನ ನೇಮಕ ಮಾಡಲಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Prasanna Gaonkar

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More
Follow Us