ಕಾಸರಗೋಡಿನ ಗ್ರಾಮಗಳ ಕನ್ನಡ ಹೆಸರು ಬದಲಾವಣೆ ವಿಚಾರ: ಕೇರಳ ಸರ್ಕಾರಕ್ಕೆ ಪತ್ರ ಬರೆಯುವುದಾಗಿ ಸಿಎಂ ಯಡಿಯೂರಪ್ಪ ಭರವಸೆ

ಕಾಸರಗೋಡು ಮತ್ತು ಮಂಜೇಶ್ವರ ಭಾಗದಲ್ಲಿ ಕನ್ನಡಿಗರು ಮತ್ತು ಮಲಯಾಳ ಭಾಷೆ ಆಡುವವರು ಪರಸ್ಪರ ಸಹಬಾಳ್ವೆಯಿಂದ ಸೋದರರಂತೆ ಬದುಕನ್ನು ನಿರ್ವಹಿಸುತ್ತಿದ್ದು, ಕನ್ನಡ ಭಾಷೆಯ ಸಾಂಸ್ಕೃತಿಕ ಐತಿಹಾಸಿಕ ಮಹತ್ವವುಳ್ಳ ಗ್ರಾಮಗಳ ಹೆಸರುಗಳನ್ನು ಬದಲಾಯಿಸುವುದು ಸೂಕ್ತವಲ್ಲ ಎಂಬ ವಿಷಯವನ್ನು ಕೇರಳ ಸರ್ಕಾರದ ಮಾನ್ಯ ಮುಖ್ಯಮಂತ್ರಿಗಳ ಗಮನಕ್ಕೆ ತರಲಾಗುವುದು.

ಕಾಸರಗೋಡಿನ ಗ್ರಾಮಗಳ ಕನ್ನಡ ಹೆಸರು ಬದಲಾವಣೆ ವಿಚಾರ: ಕೇರಳ ಸರ್ಕಾರಕ್ಕೆ ಪತ್ರ ಬರೆಯುವುದಾಗಿ ಸಿಎಂ ಯಡಿಯೂರಪ್ಪ ಭರವಸೆ
ಬಿ.ಎಸ್.ಯಡಿಯೂರಪ್ಪ
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on: Jun 28, 2021 | 2:42 PM

ಬೆಂಗಳೂರು: ಕಾಸರಗೋಡು ಮತ್ತು ಮಂಜೇಶ್ವರದಲ್ಲಿನ ಕನ್ನಡ ಹೆಸರುಗಳನ್ನು ಹೊಂದಿದ ಕೆಲವು ಗ್ರಾಮಗಳ ಹೆಸರುಗಳನ್ನು ಮಲಯಾಳಂ ಭಾಷೆಯ ಆಧಾರದ ಹೆಸರುಗಳನ್ನಾಗಿ ಬದಲಾಯಿಸಲು ಹೊರಟಿರುವ ಬಗ್ಗೆ ಸೋಮವಾರ   ಕರ್ನಾಟಕ ಪ್ರದೇಶ ಗಡಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಡಾ. ಸಿ.ಸೋಮಶೇಖರ  ಹಾಗೂ ಪ್ರಾಧಿಕಾರದ ಕಾರ್ಯದರ್ಶಿಗಳಾದ ಪ್ರಕಾಶ ಮತ್ತೀಹಳ್ಳಿಯರವರು  ಮುಖ್ಯಮಂತ್ರಿಗಳ ಗೃಹ ಕಛೇರಿ ಕೃಷ್ಣಾದಲ್ಲಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿ ಮಾಡಿ  ವಿಷಯವನ್ನು ಗಮನಕ್ಕೆ ತಂದಿದ್ದಾರೆ. 

ಕೂಡಲೇ ಸಕಾರಾತ್ಮಕವಾಗಿ ಸ್ಪಂದಿಸಿದ ಸಿಎಂ ವಿಷಯವು ತಮ್ಮ ಗಮನಕ್ಕೆ ಈಗಾಗಲೇ ಬಂದಿದ್ದು, ಈ ಬಗ್ಗೆ ಕೂಡಲೇ ಕೇರಳ ಸರ್ಕಾರದ ಮಾನ್ಯ ಮುಖ್ಯಮಂತ್ರಿಗಳ ಗಮನಕ್ಕೆ ತರುವುದಾಗಿ ತಿಳಿಸಿದ್ದಾರೆ ಎಂದು  ಕರ್ನಾಟಕ ಗಡಿಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ಕಾಸರಗೋಡು ಮತ್ತು ಮಂಜೇಶ್ವರ ಭಾಗದಲ್ಲಿ ಕನ್ನಡಿಗರು ಮತ್ತು ಮಲಯಾಳ ಭಾಷೆ ಆಡುವವರು ಪರಸ್ಪರ ಸಹಬಾಳ್ವೆಯಿಂದ ಸೋದರರಂತೆ ಬದುಕನ್ನು ನಿರ್ವಹಿಸುತ್ತಿದ್ದು, ಕನ್ನಡ ಭಾಷೆಯ ಸಾಂಸ್ಕೃತಿಕ ಐತಿಹಾಸಿಕ ಮಹತ್ವವುಳ್ಳ ಗ್ರಾಮಗಳ ಹೆಸರುಗಳನ್ನು ಬದಲಾಯಿಸುವುದು ಸೂಕ್ತವಲ್ಲ ಎಂಬ ವಿಷಯವನ್ನು ಕೇರಳ ಸರ್ಕಾರದ ಮಾನ್ಯ ಮುಖ್ಯಮಂತ್ರಿಗಳ ಗಮನಕ್ಕೆ ತರಲಾಗುವುದು. ಈ ರೀತಿಯ ಗ್ರಾಮಗಳ ಹೆಸರುಗಳ ಬದಲಾವಣೆಯ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಬೇಕೆಂದು ಕೋರಿ ಪತ್ರ ಬರೆಯುವುದಾಗಿ ಯಡಿಯೂರಪ್ಪ  ಭರವಸೆ ನೀಡಿದರು.

ಬಹುಶಃ ಈ ಗ್ರಾಮಗಳ ಹೆಸರುಗಳನ್ನು ಬದಲಾಯಿಸುವ ಪ್ರಯತ್ನ ಕೇರಳ ಸರ್ಕಾರದ ಗಮನಕ್ಕೆ ಬಾರದೆಯೇ ಕೇವಲ ಸ್ಥಳೀಯ ಸಂಸ್ಥೆಗಳ ಹಂತದಲ್ಲಿಯೇ ನಡೆದಿರಬಹುದೆಂಬ ವಿಷಯವನ್ನು ಈ ಸಂಧರ್ಭದಲ್ಲಿ ಪ್ರಾಧಿಕಾರದ ಅಧ್ಯಕ್ಷರು ಮಾನ್ಯ ಮುಖ್ಯಮಂತ್ರಿಗಳ ಗಮನಕ್ಕೆ ತಂದರು.

ಇದನ್ನೂ ಓದಿ:  ಕಾಸರಗೋಡಿನ ಕೆಲ ಊರುಗಳ ಹೆಸರು ಮಲಯಾಳಂಗೆ.. ಪ್ರತಾಪ್ ಸಿಂಹ, ವಾಟಾಳ್ ನಾಗರಾಜ್ ಆಕ್ರೋಶ

(Changing the names of some villages in Kasaragod and Manjeswara in Kerala BS Yediyurappa Assured to write letter to Kerala CM)

ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ