AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚನ್ನಪಟ್ಟಣ ಬೈ ಎಲೆಕ್ಷನ್: ಮೈತ್ರಿ ಅಭ್ಯರ್ಥಿ ಫೈನಲ್, ಬಿಜೆಪಿಯ ಯೋಗೇಶ್ವರ್​ಗೆ ಜೆಡಿಎಸ್ ಬಿಗ್ ಆಫರ್

ಚನ್ನಪಟ್ಟಣ ಉಪಚುನಾವಣೆಗೆ ಎನ್​ಡಿಎ ಅಭ್ಯರ್ಥಿ ಆಯ್ಕೆ ಕ್ಲೈಮ್ಯಾಕ್ಸ್ ಹಂತಕ್ಕೆ ಬಂದು ನಿಂತಿದೆ. ನಿನ್ನೆ ರಾತ್ರಿ ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ನಡೆದ ಸಭೆಯಲ್ಲಿ ಒಮ್ಮತದ ಅಭ್ಯರ್ಥಿ ಕಣಕ್ಕಿಳಿಸಲು ತೀರ್ಮಾನ ಕೈಗೊಳ್ಳಲಾಗಿದ್ದು, ಇಂದು ಬಹುತೇಕ ಅಭ್ಯರ್ಥಿ ತೀರ್ಮಾನವಾಗುವ ನಿರೀಕ್ಷೆಯಿದೆ. ಸಿಪಿ ಯೋಗೇಶ್ವರ್​ಗೆ ದಳಪತಿಗಳು ಬಿಗ್ ಆಫರ್ ಕೊಟ್ಟಿದ್ದಾರೆ.

ಚನ್ನಪಟ್ಟಣ ಬೈ ಎಲೆಕ್ಷನ್: ಮೈತ್ರಿ ಅಭ್ಯರ್ಥಿ ಫೈನಲ್, ಬಿಜೆಪಿಯ ಯೋಗೇಶ್ವರ್​ಗೆ ಜೆಡಿಎಸ್ ಬಿಗ್ ಆಫರ್
ಸಿಪಿ ಯೋಗೇಶ್ವರ್, ಕುಮಾರಸ್ವಾಮಿ
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on:Oct 20, 2024 | 12:42 PM

ಬೆಂಗಳೂರು, (ಅಕ್ಟೋಬರ್ 20): ಚನ್ನಪಟ್ಟಣ ಕ್ಷೇತ್ರದ ಅಭ್ಯರ್ಥಿ ಆಯ್ಕೆ ಬಗ್ಗೆ ಜೆಡಿಎಸ್ ಹಾಗೂ ಬಿಜೆಪಿ ನಡುವೆ ಕಗ್ಗಂಟಾಗಿದೆ.. ಸಿ.ಪಿ.ಯೋಗೇಶ್ವರ್ ಟಿಕೆಟ್​​ಗಾಗಿ ಪಟ್ಟು ಹಿಡಿದಿದ್ದು, ಜೆಡಿಎಸ್​​ಗೆ ನುಂಗಲಾರದ ತುತ್ತಾಗಿದೆ.. ಜೆಡಿಎಸ್​​ನಿಂದ ನಿಖಿಲ್​ ಕುಮಾರಸ್ವಾಮಿ ಸ್ಪರ್ಧೆ ಮಾತು ಕೇಳಿ ಬರುತ್ತಿದೆಯಾದರೂ, ಸೈನಿಕನ ಹಠವೇ ಮೇಲುಗೈ ಸಾಧಿಸುವ ಸಾಧ್ಯತೆ ಇದೆ.. ಈಗಾಗಲೇ ಹಲವು ಸಭೆ ನಡೆದಿದ್ದು, ಜೆಡಿಎಸ್-ಬಿಜೆಪಿ ಸಮನ್ವಯ ಸಭೆಯಲ್ಲಿ ಅಂತಿಮ ನಿರ್ಧಾರ ಪ್ರಕಟವಾಗಲಿದೆ. ಜೆಡಿಎಸ್​​ ಚಿನ್ಹೆಯಡಿ ಯೋಗೇಶ್ವರ್​ ಸ್ಪರ್ಧಿಸುವುದು ಬಹುತೇಕ ಖಚಿತ ಎಂಬ ಮಾಹಿತಿ ಮೂಲಗಳಿಂದ ದೂರಕಿದೆ..

ಇದಕ್ಕೆ ಪೂರಕವಾಗಿ ನಿಖಿಲ್ ಕುಮಾರಸ್ವಾಮಿ ತ್ಯಾಗದ ಮಾತನಾಡಿದ್ದಾರೆ.. ಇನ್ನು, ಪ್ರೀತಿ, ವಿಶ್ವಾಸದಿಂದ ಎಲೆಕ್ಷನ್​ ನಡೆಯಬೇಕು ಅಂತ ಹೆಚ್​ಡಿಕೆ ಹೇಳಿದ್ರೆ, ಯೋಗೇಶ್ವರ್​​​​ಗೆ ಅನ್ಯಾಯ ಆಗ್ಬಾರದು ಅಂತ ಸೈನಿಕನ ಪರ ವಿಜಯೇಂದ್ರ ಬ್ಯಾಟಿಂಗ್ ಮಾಡಿದ್ದಾರೆ.

ಇದನ್ನೂ ಓದಿ: ಶಿಗ್ಗಾಂವಿ, ಸಂಡೂರು ಬೈ ಎಲೆಕ್ಷನ್: ಭರತ್ ಬೊಮ್ಮಾಯಿ, ಬಂಗಾರು ಹನುಮಂತುಗೆ ಬಿಜೆಪಿ ಟಿಕೆಟ್

ಯೋಗೇಶ್ವರ್ ಕಣಕ್ಕಿಳಿಸಲು ದಳಪತಿಗಳ ಆಫರ್

ಈಗಾಗಲೇ ಬಿಜೆಪಿ ಶಿಗ್ಗಾಂವಿ ಮತ್ತು ಸಂಡೂರು ಕ್ಷೇತ್ರಕ್ಕೆ ಅಭ್ಯರ್ಥಿ ಘೋಷಣೆ ಮಾಡಿದೆ. ಹೀಗಾಗಿ ಇಂದು ಸಂಜೆಯೊಳಗೆ ಚನ್ನಪಟ್ಟಣ ಅಭ್ಯರ್ಥಿ ಘೋಷಣೆ ಮಾಡುವ ಸಾಧ್ಯತೆಗಳು ಹೆಚ್ಚಿವೆ. ಚನ್ನಪಟ್ಟಣದಿಂದ ಬಿಜೆಪಿ ಅಭ್ಯರ್ಥಿಯಾಗಿ ಸಿಪಿವೈ ಸ್ಪರ್ಧೆ ಮಾಡಿದರೆ ಮೂರೂ ಕ್ಷೇತ್ರಗಳಲ್ಲಿ ಬಿಜೆಪಿ ಸ್ಪರ್ಧೆ ಮಾಡಿದಂತೆ ಆಗುತ್ತದೆ . ಇದರಿಂದ ಜೆಡಿಎಸ್ ಕಾರ್ಯಕರ್ತರಲ್ಲಿ ಅಸಮಾಧಾನ ಉಂಟಾಗುತ್ತದೆ. ಹೀಗಾಗಿ ಮೈತ್ರಿ ಧರ್ಮ ಪಾಲನೆ ಮಾಡಲು ಜೆಡಿಎಸ್ ಚಿಹ್ನೆಯಿಂದ ಸಿಪಿ ಯೋಗೇಶ್ವರ್ ಸ್ಪರ್ಧೆ ಸಾಧ್ಯತೆ ಇದೆ. ನಿನ್ನೆ ನೆಡೆದ ಸಮನ್ವಯ ಸಭೆಯಲ್ಲೂ ಕೂಡ ಸಿಪಿ ಯೋಗೇಶ್ವರ್ ಜೆಡಿಎಸ್ ನಿಂದ ಸ್ಪರ್ಧೆ ಮಾಡುವ ಬಗ್ಗೆ ಹೆಚ್ಚಿನ ಚರ್ಚೆಯಾಗಿದೆ. ಹೀಗಾಗಿ ಜೆಡಿಎಸ್ ಅಭ್ಯರ್ಥಿಯಾಗಿ ಸಿಪಿ ಯೋಗೇಶ್ವರ್ ಸ್ಪರ್ಧೆ ಸಾಧ್ಯತೆ ಹೆಚ್ವಿವೆ.

ನಿನ್ನೆ ರಾತ್ರಿ ಬೆಂಗಳೂರಿನಲ್ಲಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ, ವಿಧಾನಸಭೆ ವಿಪಕ್ಷ ನಾಯಕ ಆರ್.ಅಶೋಕ್ ಮತ್ತು ಬಿ.ವೈ. ವಿಜಯೇಂದ್ರ ಚರ್ಚೆ ನಡೆಸಿದ್ದಾರೆ. ಸಭೆಯಲ್ಲಿ ಅಭ್ಯರ್ಥಿ ವಿಚಾರವಾಗಿ ತಾವು ಯಾವುದೇ ಡಿಮ್ಯಾಂಡ್ ಇಡುವುದಿಲ್ಲ ಎಂದು ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದರೆ. ನಿಮ್ಮ ಕ್ಷೇತ್ರವಾಗಿರುವ ಕಾರಣ ನೀವೇ ಚರ್ಚಿಸಿ ತೀರ್ಮಾನ ಮಾಡಿ ಎಂದು ವಿಜಯೇಂದ್ರ ಮತ್ತು ಅಶೋಕ್‌ ಹೇಳಿದ್ದಾರೆ.

ಬಿಜೆಪಿ ಹೈಕಮಾಂಡ್ ಸರ್ವೇ ಬೇಕಾದರೂ ನಡೆಸಲಿ ನಂತರ ತೀರ್ಮಾನ ಮಾಡಲಿ ಎಂದು ಸಭೆಯಲ್ಲಿ ಕುಮಾರಸ್ವಾಮಿ ಬಿಜೆಪಿ ನಾಯಕರಿಗೆ ಹೇಳಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.‌ ಚನ್ನಪಟ್ಟಣ ಕ್ಷೇತ್ರ ಬಾಕಿ ಇರಿಸಿರುವ ಕಾರಣ ಜೆಡಿಎಸ್ ಅಭ್ಯರ್ಥಿ ಸ್ಪರ್ಧೆ ಬಹುತೇಕ ಖಚಿತವಾಗಿದೆ.

ಇನ್ನು, ಕಾಂಗ್ರೆಸ್​ ಅಭ್ಯರ್ಥಿ ಆಯ್ಕೆ ಕುರಿತು, ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಕ್ಲೋಸ್ಡ್​ ಡೋರ್ ಸಭೆ ನಡೆಸಿದ್ದ, ಈ ಸಭೆಯಲ್ಲಿ ಡಿಕೆ ಸುರೇಶ್​ರತ್ತ ಮುಖಂಡರು ಒಲವು ತೋರಿದ್ದಾರೆ. ಸಭೆ ಬಳಿಕ ನಗುತ್ತಲೇ ಡಿಕೆಶಿ ಹೊರಬಂದು ಮಾಧ್ಯಮಗಳ ಜೊತೆ ಮಾತನಾಡಿದ ಡಿಕೆಶಿ, ಜೆಡಿಎಸ್​ನವರು ಹೆದರಿಕೊಂಡು ಶರಣಾಗಿದ್ದಾರೆ ಎಂದು ಚನ್ನಪಟ್ಟಣದಲ್ಲಿ ಯೋಗೇಶ್ವರ್ ಸ್ಪರ್ಧೆ ಬಗ್ಗೆ ಸುಳಿವು ಕೊಟ್ಟರು. ಅಷ್ಟೇ ಅಲ್ಲ ಚನ್ನಪಟ್ಟಣದಲ್ಲಿ ಡಿಕೆ ಸುರೇಶ್ ಅವರನ್ನೇ ಅಭ್ಯರ್ಥಿಯನ್ನಾಗಿಸಬೇಕು ಎನ್ನುವ ಪ್ರಶ್ನೆಗೆ ಉತ್ತರಿಸಿದ ಡಿಕೆ, ನಾವು ಯಾರನ್ನ ಅಭ್ಯರ್ಥಿ ಎಂದು ಹೇಳುತ್ತೇವೋ ಅವರೇ ಫೈನಲ್ ಎಂದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 12:39 pm, Sun, 20 October 24