AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯ ರಾಜಕಾರಣದಲ್ಲಿ ಸಂಚಲನ: ಒಂದೇ ಕಾರಿನಲ್ಲಿ ತೆರಳಿದ ಡಿಕೆ ಶಿವಕುಮಾರ್- ಸಿಪಿ ಯೋಗೇಶ್ವರ್

ರಾಜಕಾರಣದಲ್ಲಿ ಯಾವ ಸಂದರ್ಭದಲ್ಲಿ ಏನು ಬೇಕಾದರೂ ಆಗಬಹುದು. ಚನ್ನಪಟ್ಟಣ ಉಪಚುನಾವಣೆ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿರುವ ಸಿಪಿ ಯೋಗೇಶ್ವರ್ ಸ್ವತಂತ್ರವಾಗಿ ಸ್ಪರ್ಧೆ ಮಾಡುವುದಾಗಿ ಘೋಷಿಸಿದ್ದರು. ಈ ಮೂಲಕ ಕುಮಾರಸ್ವಾಮಿಗೆ ಟಾಂಗ್ ಕೊಟ್ಟಿದ್ದರು. ಆದ್ರೆ, ಇದೀಗ ಕೊನೆ ಕ್ಷಣದಲ್ಲಿ ಯೋಗೇಶ್ವರ್ ತಮ್ಮ ಹಾದಿ​ ಬದಲಿಸಿದ್ದು, ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದ್ದಾರೆ.

ರಾಜ್ಯ ರಾಜಕಾರಣದಲ್ಲಿ ಸಂಚಲನ: ಒಂದೇ ಕಾರಿನಲ್ಲಿ ತೆರಳಿದ ಡಿಕೆ ಶಿವಕುಮಾರ್- ಸಿಪಿ ಯೋಗೇಶ್ವರ್
TV9 Web
| Edited By: |

Updated on:Oct 23, 2024 | 10:16 AM

Share

ಬೆಂಗಳೂರು, (ಅಕ್ಟೋಬರ್ 23): ಬಿಜೆಪಿ ನಾಯಕ ಸಿಪಿ ಯೋಗೇಶ್ವರ್​​ ಅವರು ವಿಧಾನಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಿ ಸ್ವತಂತ್ರವಾಗಿ ಸ್ಪರ್ಧೆ ಮಾಡುತ್ತೇನೆಂದು ಘೋಷಿಸಿದ್ದರು. ಆದರೂ ಸಹ ಬಿಜೆಪಿ ನಾಯಕರ ಸಲಹೆ ಮೇರೆಗೆ ಎನ್​ಡಿಎ ಟಿಕೆಟ್​ ಸಿಗಬಹುದು ಎಂದು ಕಾದು ಕುಳಿತ್ತಿದ್ದರು. ಆದ್ರೆ, ಇದೀಗ ಡಿಕೆ ಶಿವಕುಮಾರ್​, ಯೋಗೇಶ್ವರ್​ ಅವರನ್ನು ಬಲೆಗೆ ಬೀಳಿಸಿಕೊಂಡಿದ್ದಾರೆ. ಹೌದು… ಸಿಪಿ ಯೋಗೇಶ್ವರ್​ ಅವರು .ಇಂದು(ಅಕ್ಟೋಬರ್ 23) ಬೆಂಗಳೂರಿನಲ್ಲಿ ಡಿಕೆ ಶಿವಕುಮಾರ್ ಅವರನ್ನು ಭೇಟಿಯಾಗಿ ಮಹತ್ವದ ಚರ್ಚೆ ನಡೆಸಿದರು. ಬಳಿಕ ಇಬ್ಬರು ನಾಯಕರು ಒಂದೇ ಕಾರಿನಲ್ಲಿ ತೆರಳಿ ಸಿಎಂ ಸಿದ್ದರಾಯ್ಯನವರನ್ನು ಭೇಟಿಯಾಗಿದ್ದಾರೆ. ಈ ಮೂಲಕ ಯೋಗೇಶ್ವರ್​ ಕಾಂಗ್ರೆಸ್ ಸೇರ್ಪಡೆಯಾಗುವುದು ಬಹುತೇಕ ಖಚಿತವಾಗಿದ್ದು, ಕಾಂಗ್ರೆಸ್​ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ.

ಬಿಜೆಪಿ ನಾಯಕರ ಸಲಹೆ ಮೇರೆಗೆ ಎನ್​ಡಿಎ ಟಿಕೆಟ್​ ಸಿಗಬಹುದು ಎಂದು ಯೋಗೇಶ್ವರ್​ ನಿನ್ನೆಯವರೆಗೂ ಕಾದು ಕುಳಿತ್ತಿದ್ದರು. ಸಂಜೆ ವರೆಗೂ ಕಾಯುತ್ತೇನೆ ಎಂದು ಯೋಗೇಶ್ವರ್​ ಅವರು ಪ್ರಲ್ಹಾದ್ ಜೋಶಿ, ಸಂಸದ ಡಾ.‌ಸಿ.ಎನ್.ಮಂಜುನಾಥ್​​ಗೆ ತಿಳಿಸಿ ಎಂದು ನಿನ್ನೆ ಚನ್ನಪಟ್ಟಣದ ಖಾಸಗಿ ಹೋಟೆಲ್​ನಲ್ಲಿ ತಂಗಿದ್ದರು. ಆದ್ರೆ, ಬಿಜೆಪಿ ಟಿಕೆಟ್ ಘೋಷಣೆ ಆಗದಿರುವ ಕಾರಣ ಸಿಪಿ ಯೋಗೇಶ್ವರ್ ಇಂದು  ಬೆಳ್ಳಂಬೆಳಗ್ಗೆ ಬೆಂಗಳೂರಿನ ಡಿಕೆ ಶಿವಕುಮಾರ್ ನಿವಾಸಕ್ಕೆ ಭೇಟಿ ನೀಡಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ಚರ್ಚಿಸಿದರು. ಬಳಿಕ ಒಂದೇ ಕಾರಿನಲ್ಲಿ ಇಬ್ಬರೂ ಸಿಎಂ ಸಿದ್ದರಾಮಯ್ಯನವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.

ಇದನ್ನೂ ಓದಿ: ನಾಮಪತ್ರ ಸಲ್ಲಿಕೆಗೆ ಯೋಗೇಶ್ವರ್​ ಸಿದ್ಧತೆ: ಟ್ವಿಸ್ಟ್ ಕೊಟ್ಟ ಕುಮಾರಸ್ವಾಮಿಗೆ ಬಂದ ದೆಹಲಿ ಕರೆ

ಯೋಗೇಶ್ವರ್​ ಸೇರಿಸಿಕೊಳ್ಳಲು ಸಿಎಂಗೆ ಜೆಡಿಎಸ್​ ಹಿರಿಯ ನಾಯಕ ಸಲಹೆ

ಇನ್ನು ಜೆಡಿಎಸ್ ನ ಹಿರಿಯ ನಾಯಕರೊಬ್ಬರೇ ಸಿಎಂಗೆ ಯೋಗೇಶ್ವರ್ ಸೇರ್ಪಡೆ ಬಗ್ಗೆ ಸಲಹೆ ನೀಡಿದ್ದರು. ಈ ಹಿನ್ನಲೆ ಸಿದ್ದರಾಮಯ್ಯ ಸಹ ಯೋಗೇಶ್ವರ್​​ಗೆ ಸ್ವಾಗತ ಕೋರಿದ್ದ. ಇದರ ಬೆನ್ನಲ್ಲೇ ಇದೀಗ ಯೋಗೇಶ್ವರ್​, ಡಿಕೆ ಶಿವಕುಮಾರ್ ಜೊತೆಯಾಗಿ ಸಿಎಂ ಸಿದ್ದರಾಮಯ್ಯನವರನ್ನು ಭೇಟಿಯಾಗಿದ್ದು, ಕಾಂಗ್ರೆಸ್​ ಸೇರ್ಪಡೆಗೆ ಒಪ್ಪಿಗೆ ನೀಡಿದ್ದಾರೆ ಎಂದು ತಿಳಿದುಬಂದಿದೆ.

ಸಿಪಿ ಯೋಗೇಶ್ವರ್ ಕಾಂಗ್ರೆಸ್ ಸೇರ್ಪಡೆಯಾಗುತ್ತಾರೆ ಎನ್ನುವ ನಿನ್ನೆ ರಾತ್ರಿಯೇ ಸಿಎಂಗೆ ಸುಳಿವು ಸಿಕ್ಕಿದೆ. ಹೀಗಾಗಿ ಅವರು ವಯನಾಡಿಗೆ ಹೋಗುವುದನ್ನು ಬಿಟ್ಟು ನೇರವಾಗಿ ಮೈಸೂರಿನಿಂದ ಬೆಂಗಳೂರಿಗೆ ಆಗಮಿಸಿದ್ದಾರೆ. ಇದೀಗ ಅಂದುಕೊಂಡತೆ ಯೋಗೇಶ್ವರ್ ಕಾಂಗ್ರೆಸ್ ಮನೆ ಬಾಗಿಲಿಗೆ ಬಂದು ನಿಂತಿದ್ದು, ಯಾವುದೇ ಕ್ಷಣದಲ್ಲೂ ಯೋಗೇಶ್ವರ್​ ಅವರನ್ನು ಕಾಂಗ್ರೆಸ್​ ಮನೆಯೊಳಗೆ ಅಧಿಕೃತವಾಗಿ ಬರಮಾಡಿಕೊಳ್ಳಬಹುದು.​

ಇತ್ತ ಯೋಗೇಶ್ವರ್​ ಕಾಂಗ್ರೆಸ್​ ಮನೆ ಸೇರುವುದು ಗೊತ್ತಾಗುತ್ತಿದ್ದಂತೆಯೇ ಅತ್ತ ಕುಮಾರಸ್ವಾಮಿ ಸಹ ಚನ್ನಪಟ್ಟಣ ಜೆಡಿಎಸ್ ಮುಖಂಡರ ಸಭೆ ಕರೆದಿದ್ದಾರೆ. ಇಂದು ಮಧ್ಯಾಹ್ನ ಸಭೆ ಕರೆದಿದ್ದು, ಸಭೆಯಲ್ಲಿ ಚರ್ಚಿಸಿ ಜೆಡಿಎಸ್​ ಅಭ್ಯರ್ಥಿ ಘೋಷಣೆ ಮಾಡಲಿದ್ದಾರೆ. ಈ ಹಿನ್ನೆಲೆಯಲ್ಲಿ ಚನ್ನಟಟ್ಟಣ ಉಪಚುನಾವಣೆ ಅಖಾಡ ಮತ್ತಷ್ಟು ರಂಗೇರಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 10:13 am, Wed, 23 October 24