ಚನ್ನಪಟ್ಟಣ ಅಖಾಡದಲ್ಲಿ ಕಾಂಗ್ರೆಸ್ ಮಾಸ್ಟರ್ ಪ್ಲ್ಯಾನ್: ‘ಕೈ’ ತಂತ್ರಗಳು ಹೀಗಿವೆ ನೋಡಿ

ಕರ್ನಾಟಕದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಕಣ ರಂಗೇರುತ್ತಿದೆ. ಅದರಲ್ಲೂ ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಷ್ಠೆಯ ಕಣವಾಗಿರುವ ಚನ್ನಪಟ್ಟಣದಲ್ಲಿ ರಣತಂತ್ರಗಳು ಜೋರಾಗುತ್ತಿವೆ. ಅತ್ತ ಬಿಜೆಪಿ, ಎನ್​ಡಿಎಯಲ್ಲಿ ಟಿಕೆಟ್ ಗೊಂದಲ ಹೆಚ್ಚಾಗಿರುವ ಬೆನ್ನಲ್ಲೇ ಅದರ ಲಾಭ ಪಡೆಯಲು ಕಾಂಗ್ರೆಸ್ ತಂತ್ರಗಾರಿಕೆ ರೂಪಿಸುತ್ತಿವೆ. ಆ ಕುರಿತ ವಿವರ ಇಲ್ಲಿದೆ.

ಚನ್ನಪಟ್ಟಣ ಅಖಾಡದಲ್ಲಿ ಕಾಂಗ್ರೆಸ್ ಮಾಸ್ಟರ್ ಪ್ಲ್ಯಾನ್: ‘ಕೈ’ ತಂತ್ರಗಳು ಹೀಗಿವೆ ನೋಡಿ
ಚನ್ನಪಟ್ಟಣ ಅಖಾಡದಲ್ಲಿ ಕಾಂಗ್ರೆಸ್ ಮಾಸ್ಟರ್ ಪ್ಲ್ಯಾನ್: ‘ಕೈ’ ತಂತ್ರಗಳು ಹೀಗಿವೆ ನೋಡಿ
Edited By:

Updated on: Oct 22, 2024 | 7:18 AM

ಬೆಂಗಳೂರು, ಅಕ್ಟೋಬರ್ 22: ಉಪಚುನಾವಣೆ ಅಖಾಡದಲ್ಲಿ ಸದ್ಯಕ್ಕೆ ಮೂರು ಪಕ್ಷಗಳ ಹಾಟ್ ಫೇವರಿಟ್ ಆಗಿರುವುದು ಚನ್ನಪಟ್ಟಣ. ಚನ್ನಪಟ್ಟಣದಲ್ಲಿ ಯಾವ ಪಕ್ಷದಿಂದ ಯಾರು ಅಭ್ಯರ್ಥಿ ಆಗುತ್ತಾರೆ ಎಂಬುದು ಭಾರೀ ರಹಸ್ಯವಾಗಿ ಉಳಿದಿದೆ. ಸಿಪಿ ಯೋಗೇಶ್ವರ್ ಬಂಡಾಯದ ಸುಳಿವು ಕೊಡುತ್ತಿದ್ದಂತೆಯೇ ಕಾಂಗ್ರೆಸ್ ಬಾಗಿಲು ತೆರೆದು ಎದುರು ನೋಡುತ್ತಿದೆ. ಡಿಕೆ ಸಹೋದರರು ಬಿಜೆಪಿ, ಜೆಡಿಎಸ್ ನಾಯಕರ ಮುಂದಿನ ನಡೆಯನ್ನು ಗಮನಿಸುತ್ತಿದ್ದಾರೆ. ಕೊನೆಯ ಕ್ಷಣದವರೆಗೂ ಕಾಂಗ್ರೆಸ್ ತಂತ್ರಗಾರಿಕೆಯ ಗುಟ್ಟು ರಟ್ಟು ಮಾಡದಿರಲು ಡಿಕೆ ಸಹೋದರರು ಪ್ಲ್ಯಾನ್ ಮಾಡಿದಂತಿದೆ. ಚನ್ನಪಟ್ಟಣವನ್ನು ವೈಯಕ್ತಿಕ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಡಿಕೆ ಸಹೋದರರು, ಹೆಚ್​ಡಿಕೆ ವಿರುದ್ಧ ರಾಕಾರಣದಲ್ಲಿ ಶತ್ರುವಿನ ಶತ್ರು ಮಿತ್ರ ಎನ್ನುವ ಚಿಂತನೆ ಮಾಡಿದಂತಿದೆ.‌

ಕಾಂಗ್ರೆಸ್​ನ ತಂತ್ರಗಳೇನು?

ಸಿಪಿ ಯೋಗೇಶ್ವರ್ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರೆ ಟಿಕೆಟ್ ನೀಡಿ ಗೆಲ್ಲಿಸಿಕೊಂಡು ಬರುವುದು. ಒಂದು ವೇಳೆ, ಸಿಪಿವೈ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದರೆ ಪ್ರಬಲ ಅಭ್ಯರ್ಥಿಯನ್ನು ಕಾಂಗ್ರೆಸ್​ನಿಂದ ಕಣಕ್ಕೆ ಇಳಿಸುವುದು. ಒಂದು ವೇಳೆ ತ್ರಿಕೋನ ಸ್ಪರ್ಧೆ ಏರ್ಪಟ್ಟಲ್ಲಿ ಡಿಕೆ ಸುರೇಶ್ ​ಅವರನ್ನು ಅಖಾಡಕ್ಕೆ ಇಳಿಸುವ ಸಾಧ್ಯತೆ ಇದೆ. ಇಲ್ಲವಾದಲ್ಲಿ ಡಮ್ಮಿ ಅಭ್ಯರ್ಥಿಯನ್ನು ಹಾಕಿ ಕುಮಾರಸ್ವಾಮಿಗೆ ಸೋಲುಣಿಸುವ ತಂತ್ರವನ್ನೂ ಅನುಸರಿಸಬಹುದು. ಎಲ್ಲಾ ಅಂದುಕೊಂಡಂತೆ ಆಗಿ ಎನ್​ಡಿಎ ಅಭ್ಯರ್ಥಿಯೇ ಚುನಾವಣೆಗೆ ಸ್ಪರ್ಧಿಸಿದರೆ, ಕಾಂಗ್ರೆಸ್​ನಿಂದ ರಘುನಂದನ್ ರಾಮಣ್ಣಗೆ ಅವಕಾಶ ಸಿಗುವ ಸಾಧ್ಯತೆಯೂ ಇದೆ.

ಹೀಗೆ ಒಂದೆಡೆ ಒಳಗೊಳಗೆ ರಣತಂದ್ರ ಸಿದ್ಧವಾಗುತ್ತಿದ್ದರೆ, ಮತ್ತೊಂದೆಡೆ ಕಾಂಗ್ರೆಸ್ ಸೇರ್ಪಡೆ ಆಗುವ ಸಾಧ್ಯತೆ ಸುದ್ದಿಗೆ ಪ್ರತಿಕ್ರಿಯೆ ನೀಡಿದ ಯೋಗೇಶ್ವರ್, ಕಾಂಗ್ರೆಸ್​ನವರು ನನ್ನ ಸಂಪರ್ಕಿಸಿಲ್ಲ. ಅಂತಹ ಆಲೋಚನೆಯೂ ನನಗಿಲ್ಲ ಎಂದಿದ್ದಾರೆ. ಸಿಪಿವೈ ಕಾಂಗ್ರೆಸ್ ಸೇರ್ಪಡೆ ಬಗ್ಗೆ ಪಕ್ಷದ ಅಧ್ಯಕ್ಷರು ನಿರ್ಧರಿಸುತ್ತಾರೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದರೆ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮಾತ್ರ ಈ ಬಗ್ಗೆ ಚರ್ಚೆ ಆಗಿಲ್ಲ. ನನಗೆ ಗೊತ್ತಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ: ಜೆಡಿಎಸ್​ಗೆ ಬಿಗ್ ಶಾಕ್: ಬಿಜೆಪಿಗೆ ರಾಜೀನಾಮೆ ನೀಡದೇ ಪಕ್ಷೇತರವಾಗಿ ಸ್ಪರ್ಧೆ ಎಂದ ಯೋಗೇಶ್ವರ್

ಹೀಗೆ ಚನ್ನಪಟ್ಟಣ ಅಖಾಡ ಉಪ ಚುನಾವಣೆ ಅಖಾಡ ಅಂದುಕೊಂಡಷ್ಟು ಸಲೀಸಾಗಿಲ್ಲ ಎಂಬುದು ಮೇಲ್ನೋಟಕ್ಕೆ ಗೊತ್ತಾಗುತ್ತಿದೆ‌. ಆದರೆ, ಇಂದೇ ಚನ್ನಪಟ್ಟಣ ಕ್ಲೈಮ್ಯಾಕ್ಸ್​​ಗೆ ತೆರೆ ಬೀಳುವ ಸಾಧ್ಯತೆಯೂ ಇದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Prasanna Gaonkar

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More
Follow Us