AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಬ್ಬ ವ್ಯಕ್ತಿ ಯುದ್ಧದಲ್ಲಿ ಸೋಲ್ತಿರುವಾಗ ಕೊನೆ ಅಸ್ತ್ರವೇ ಕಣ್ಣೀರು: ನಿಖಿಲ್ ಬಗ್ಗೆ ಯೋಗೇಶ್ವರ್ ವ್ಯಂಗ್ಯ

ಚನ್ನಪಟ್ಟಣದ ಉಪಚುನಾವಣೆಯ ಪ್ರಚಾರದ ವೇಳೆ ಎನ್‌ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಕಣ್ಣೀರು ಹಾಕಿದ್ದಕ್ಕೆ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್ ವ್ಯಂಗ್ಯವಾಡಿದ್ದಾರೆ. ನಿಖಿಲ್ ಕುಮಾರಸ್ವಾಮಿ ಈಗ ತಾನೆ ನನ್ನ ತಾಲೂಕಿಗೆ ಬಂದಿದ್ದಾರೆ. ಏನೂ ಪರಿಚಯವಿಲ್ಲದೆ ಇಲ್ಲಿ ಕಣ್ಣೀರಿಡುವುದು ಪೊಲಿಟಿಕಲ್ ಗಿಮಿಕ್ ಎಂದು ಕಿಡಿಕಾರಿದ್ದಾರೆ.

ಒಬ್ಬ ವ್ಯಕ್ತಿ ಯುದ್ಧದಲ್ಲಿ ಸೋಲ್ತಿರುವಾಗ ಕೊನೆ ಅಸ್ತ್ರವೇ ಕಣ್ಣೀರು: ನಿಖಿಲ್ ಬಗ್ಗೆ ಯೋಗೇಶ್ವರ್ ವ್ಯಂಗ್ಯ
ಒಬ್ಬ ವ್ಯಕ್ತಿ ಯುದ್ಧದಲ್ಲಿ ಸೋಲ್ತಿರುವಾಗ ಕೊನೆ ಅಸ್ತ್ರವೇ ಕಣ್ಣೀರು: ನಿಖಿಲ್ ಬಗ್ಗೆ ಯೋಗೇಶ್ವರ್ ವ್ಯಂಗ್ಯ
ಸೈಯ್ಯದ್​ ನಿಜಾಮುದ್ದೀನ್​, ರಾಮನಗರ
| Edited By: |

Updated on:Nov 01, 2024 | 5:55 PM

Share

ರಾಮನಗರ, ನವೆಂಬರ್ 01: ಇಂದು ಚನ್ನಪಟ್ಟಣದಲ್ಲಿ ಪ್ರಚಾರದ ವೇಳೆ ಎನ್​ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಕಣ್ಣೀರು ಹಾಕಿದ್ದಾರೆ. ಸದ್ಯ ಈ ವಿಚಾರವಾಗಿ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್​ (CP Yogeshwara) ವ್ಯಂಗ್ಯವಾಡಿದ್ದಾರೆ. ಒಬ್ಬ ವ್ಯಕ್ತಿ ಯುದ್ಧದಲ್ಲಿ ಸೋಲುತ್ತಿರುವಾಗ ಅವನ ಕೊನೆ ಅಸ್ತ್ರವೇ ಕಣ್ಣೀರು. ಒಬ್ಬ ನಾಯಕ ಜನರ ಕಣ್ಣೀರು ಒರೆಸಬೇಕೇ ವಿನಃ, ಕಣ್ಣೀರು ಹಾಕಬಾರದು ಎಂದು ಕಿಡಿಕಾರಿದ್ದಾರೆ.

ಕಣ್ಣೀರಿಡುವುದು ಪೊಲಿಟಿಕಲ್ ಗಿಮಿಕ್

ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಅವ್ವೇರಹಳ್ಳಿಯಲ್ಲಿ ಟಿವಿ9 ಜೊತೆಗೆ ಮಾತನಾಡಿದ ಅವರು, ನಿಖಿಲ್ ಕುಮಾರಸ್ವಾಮಿ ಈಗ ತಾನೆ ನನ್ನ ತಾಲೂಕಿಗೆ ಬಂದಿದ್ದಾರೆ. ಏನೂ ಪರಿಚಯವಿಲ್ಲದೆ ಇಲ್ಲಿ ಕಣ್ಣೀರಿಡುವುದು ಪೊಲಿಟಿಕಲ್ ಗಿಮಿಕ್.​ ಯಾವುದೇ ಅಭ್ಯರ್ಥಿ ಕಣ್ಣೀರು ಹಾಕಿ ಮತದಾರರ ಮನಸ್ಸು ಗೆಲ್ಲಲು ಆಗಲ್ಲ. ಅವರ ತಂದೆ ಮಾಡಿದ ಅವ್ಯವಸ್ಥೆಗೆ ಸಾವಿರಾರು ಜನ ಕಣ್ಣೀರಾಕುತ್ತಿದ್ದಾರೆ. ಕಣ್ಣೀರಿಡುವುದು ಒಬ್ಬ ನಾಯಕನ ಗುಣವಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಚನ್ನಪಟ್ಟಣದಲ್ಲಿ ಪ್ರಚಾರ ಮಾಡುವಾಗ ಭಾವುಕರಾಗಿ ಕಣ್ಣೀರು ಹಾಕಿದ ನಿಖಿಲ್ ಕುಮಾರಸ್ವಾಮಿ

ಉಪ ಚುನಾವಣೆ ನನಗೆ ಹಬ್ಬದ ಚುನಾವಣೆ, ಜನ ಬೆಂಬಲಿಸುತ್ತಿದ್ದಾರೆ. ಹೆಚ್​ಡಿ ಕುಮಾರಸ್ವಾಮಿ ಆಡಳಿತ ದೌರ್ಬಲ್ಯ, ನಿಷ್ಕ್ರಿಯತೆಯಿಂದ ಜನ ಬೇಸತ್ತಿದ್ದಾರೆ. ಅವರು ಸಿಎಂ ಆಗಿದ್ದಾಗ ಒಂದೇ ಒಂದು ಮನೆ ನೀಡಿಲ್ಲ. ಕುಮಾರಸ್ವಾಮಿಯವರು ಮೊದಲು ಪತ್ನಿ ಕರೆದುಕೊಂಡು ಬಂದರು. ಈಗ ಮಗನನ್ನು ಚುನಾವಣೆಗೆ ಕರೆತಂದಿದ್ದಾರೆ. ಇವರ ಮೇಲೆಯೇ ವಿಶ್ವಾಸವಿಲ್ಲ, ಇನ್ನು ಮಗನನ್ನು ಯಾರು ನಂಬುತ್ತಾರೆ ಎಂದು ವಾಗ್ದಾಳಿ ಮಾಡಿದ್ದಾರೆ.

ಚನ್ನಪಟ್ಟಣ ಕ್ಷೇತ್ರದಲ್ಲಿ ನೀರಾವರಿ ಯೋಜನೆಗೆ ಡಿವಿಎಸ್​ ಅನುಮತಿ ವಿಚಾರವಾಗಿ ಮಾತನಾಡಿದ್ದು, ಸದಾನಂದಗೌಡರು ಸಿಎಂ ಆಗಿದ್ದಾಗ ಅನುಮೋದನೆ ನೀಡಿದ್ದರು ಅಷ್ಟೇ. ಕೆರೆಗಳಿಗೆ ನೀರು ತುಂಬಿಸುವ ಬಗ್ಗೆ ರೂಪರೇಷೆ ಸಿದ್ಧಪಡಿಸಿದವರು ಯಾರು? ಬಹಳಷ್ಟು ಜನ ಮುಖ್ಯಮಂತ್ರಿಗಳು ಶಾಸಕರಿಗೆ ಸಹಾಯ ಮಾಡುತ್ತಾರೆ. ಯಾರು ಬೇಕಾದರೂ ಕ್ರೆಡಿಟ್ ತೆಗೆದುಕೊಳ್ಳಬಹುದು ಎಂದಿದ್ದಾರೆ.

ಇದನ್ನೂ ಓದಿ: ಮತದಾರರ ಜೊತೆ ರಾಜನಂತೆ ವರ್ತಿಸಿರುವ ಕುಮಾರಸ್ವಾಮಿ ವಿಶ್ವಾಸ ಕಳೆದುಕೊಂಡಿದ್ದಾರೆ: ಯೋಗೇಶ್ವರ್

ನಾನು ಯಾವ ತಪ್ಪು ಮಾಡಿದ್ದೇನೆ ಗೊತ್ತಿಲ್ಲ. ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡರ ಮೊಮ್ಮಗನಾಗಿ ಮತ್ತು ಎರಡು ಬಾರಿ ರಾಜ್ಯದ ಮುಖ್ಯಮಂತ್ರಿಯಾಗಿದ್ದ ಹೆಚ್​ಡಿ ಕುಮಾರಸ್ವಾಮಿ ಅವರ ಮಗನಾಗಿ ಹುಟ್ಟಿದ್ದು ತಪ್ಪಾ ಎಂದು ಹೇಳುತ್ತಾ ಚನ್ನಪಟ್ಟಣ ಪ್ರಚಾರ ವೇಳೆ ಕಣ್ಣೀರು ಹಾಕಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 5:55 pm, Fri, 1 November 24

Follow Us
Syed Nizamuddin
Syed Nizamuddin

ಕಳೆದ ನಾಲ್ಕು ವರ್ಷಗಳಿಂದ ಟಿವಿ9 ವಾಹಿನಿಯಲ್ಲಿ ಕೆಲಸ ಮಾಡುತ್ತಿದ್ದು, ಹಲವು ಬಗೆಯ ಡಿಪಾರ್ಟ್ಮೆಂಟ್ ಗಳಲ್ಲಿ ಕೆಲಸ ಮಾಡಲು ಅವಕಾಶ ಸಿಕ್ಕಿದೆ. ಪ್ರಥಮದಲ್ಲಿ ಟಿವಿ9 ಮುಖ್ಯ ಕಚೇರಿಯಲ್ಲಿಯೇ ಕೆಲಸ ಮಾಡಿ,‌ಮೆಟ್ರೋ,ಪೊಲಿಟಿಕಲ್, ಕ್ರೈಂ ಹಾಗೂ ಲೈಫ್ ಸ್ಟೈಲ್ ನ ವಿಭಾಗದಲ್ಲೂ ಕೆಲಸ ಮಾಡುವ ಅವಕಾಶ ದೊರಕಿತ್ತು. ಕೊರೊನಾ ಸಂದರ್ಭದಲ್ಲಿ ಮಾಡಿದ ಕೇಸ್ ಸ್ಟಡಿಸ್, ನಂತರ ಬ್ಲ್ಯಾಕ್ ಫಂಗಸ್ ಗಾಗಿ ಒಂದು ತಿಂಗಳು ವಿಜಯಪುರ ಜಿಲ್ಲೆ, ಬಳಿಕ ಎರಡು ವರ್ಷ ಆನೆಕಲ್‌ ನಲ್ಲಿ ಕೆಲಸ ಮಾಡಿ ಕಳೆದ ಆರು ತಿಂಗಳಿನಿಂದ ರಾಮನಗರ ಜಿಲ್ಲೆಯಲ್ಲಿ ಕೆಲಸ ನಿಭಾಯಿಸುತ್ತಿದ್ದೇನೆ. ಖುಷಿ ಕೊಟ್ಟ ಸಾವಿರಾರು ಸುದ್ದಿಗಳ ಮಧ್ಯೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಚಿಟ್ ಚಾಟ್ ಬಹಳ ತೃಪ್ತಿ ತಂದ ಹೈಲೇಟ್.. ಆನೇಕಲ್‌ ನ ಡ್ರಗ್ಸ್ ಸ್ಟೋರಿ, ಪರಪ್ಪನ ಅಗ್ರಹಾರದ ಆಫಿಸರ್ಸ್ ಸ್ಕ್ಯಾಂಡಲ್, ಎಲೆಕ್ಟ್ರಾನಿಕ್ ಸಿಟಿ ಯ ಟೋಯಿಂಗ್ ಬಂದ್, ಸರ್ಜಾಪುರದ ಪ್ರವಾಹ ಸಂದರ್ಭ,ಹೀಗೆ ಹತ್ತು ಹಲವು ಸುದ್ದಿಗಳು ಖಷಿ ಕೊಟ್ಟಿವೆ. ಕಳೆದ ನಾಲ್ಕು ವರ್ಷಗಳಲ್ಲಿ ಹಲವು ರಾಜ್ಯಗಳಿಗೆ ತೆರಳಿ ಹಿಂದಿ‌ಹಾಗೂ ಕನ್ನಡಕ್ಕೆ ಕೆಲಸ ಮಾಡೋ ಅವಕಾಶ ನನ್ನ ಇನ್ಪುಟ್ ಟೀಂ ಕೊಟ್ಟಿದೆ. ಇನ್ನು ಹವ್ಯಾಸ ಗ್ಗೆ ಹೇಳೋದಾದ್ರೆ, ಸಂಗೀತ,ಕೇಳೊದು,ಹಾಡೋದು ಇಷ್ಟ. ಕ್ರೀಡೆ ವಿಚಾರಕ್ಕೆ ಬಂದ್ರೆ ಕ್ರಿಕೆಟ್ ಅಂಡ್ ಕಬ್ಬಡ್ಡಿ ಸ್ವಿಮಿಂಗ್. ಸ

Read More