ಚನ್ನಪಟ್ಟಣ ಬೈ ಎಲೆಕ್ಷನ್: ಜೆಡಿಎಸ್​ನಿಂದಲೇ ಸ್ಪರ್ಧಿಸುವಂತೆ ಯೋಗೇಶ್ವರ್​ಗೆ ಹೆಚ್​​ಡಿಕೆ ಆಫರ್

ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ ಆಯ್ಕೆ ವಿಚಾರವಾಗಿ ಮಂಡ್ಯದಲ್ಲಿ ಮಾತನಾಡಿದ ಹೆಚ್​ಡಿ ಕುಮಾರಸ್ವಾಮಿ, ನಮ್ಮ ಕುಟುಂಬದವರನ್ನೇ ಬಿಜೆಪಿ ಅಭ್ಯರ್ಥಿಯಾಗಿ ನಿಲ್ಲಿಸಿದ್ದೇವೆ. ಆ ರೀತಿ ಔದಾರ್ಯ ಅವರ ಕಡೆಯಿಂದಲೂ ಬರಬೇಕು. ಆ ಮೂಲಕ ಪರೋಕ್ಷವಾಗಿ ಸಿಪಿ ಯೋಗೇಶ್ವರ್ ಜೆಡಿಎಸ್ ಚಿಹ್ನೆಯಡಿ ಸ್ಪರ್ಧಿಸಲಿ ಎಂದಿದ್ದಾರೆ.

ಚನ್ನಪಟ್ಟಣ ಬೈ ಎಲೆಕ್ಷನ್: ಜೆಡಿಎಸ್​ನಿಂದಲೇ ಸ್ಪರ್ಧಿಸುವಂತೆ ಯೋಗೇಶ್ವರ್​ಗೆ ಹೆಚ್​​ಡಿಕೆ ಆಫರ್
ಚನ್ನಪಟ್ಟಣ ಬೈ ಎಲೆಕ್ಷನ್: ಜೆಡಿಎಸ್​ನಿಂದಲೇ ಸ್ಪರ್ಧಿಸುವಂತೆ ಯೋಗೇಶ್ವರ್​ಗೆ ಹೆಚ್​​ಡಿಕೆ ಆಫರ್
Follow us
| Updated By: ಗಂಗಾಧರ​ ಬ. ಸಾಬೋಜಿ

Updated on: Oct 20, 2024 | 4:28 PM

ಮಂಡ್ಯ, ಅಕ್ಟೋಬರ್​​ 20: ಬಿಜೆಪಿಯಲ್ಲಿ ಚನ್ನಪಟ್ಟಣ ಟಿಕೆಟ್ ಕಗ್ಗಂಟು ದಿನದಿಂದ ದಿನಕ್ಕೆ ಬಿಗಿಯಾಗುತ್ತಿದೆ. ನಿನ್ನೆಯೂ ಮೈತ್ರಿ ಸಭೆ ಮಾಡಿದ್ದು, ಯಾವುದೇ ಫೈನಲ್ ಆಗಿಲ್ಲ. ಹೀಗಾಗಿ ಜೆಡಿಎಸ್ ಚಿಹ್ನೆಯಿಂದ ಯೋಗೇಶ್ವರ್ ಕಣಕ್ಕಿಳಿಸಲು ದಳಪತಿಗಳು ನಿರ್ಧಾರ ಮಾಡಿದ್ದಾರೆ ಎನ್ನಲಾಗಿತ್ತು. ಇದರ ಬೆನ್ನಲ್ಲೇ ಇದೀಗ ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ (HD Kumaraswamy) ಪ್ರತಿಕ್ರಿಯಿಸಿದ್ದು, ಗೆಲ್ಲುವ ದೃಷ್ಟಿಯಿಂದ ಬಿಜೆಪಿಗೆ ಬೆಂಗಳೂರು ಗ್ರಾಮಾಂತರ ಕ್ಷೇತ್ರ ಬಿಟ್ಟುಕೊಟ್ಟಿದ್ದೇವೆ. ನಮ್ಮ ಕುಟುಂಬದವರನ್ನೇ ಬಿಜೆಪಿ ಅಭ್ಯರ್ಥಿಯಾಗಿ ನಿಲ್ಲಿಸಿದ್ದೇವೆ. ಆ ರೀತಿ ಔದಾರ್ಯ ಅವರ ಕಡೆಯಿಂದಲೂ ಬರಬೇಕು ಎಂದಿದ್ದಾರೆ. ಆ ಮೂಲಕ ಪರೋಕ್ಷವಾಗಿ ಜೆಡಿಎಸ್​ನಿಂದಲೇ ಸ್ಪರ್ಧಿಸುವಂತೆ ಯೋಗೇಶ್ವರ್​ಗೆ ಆಫರ್ ನೀಡಿದ್ದಾರೆ.

ದೆಹಲಿ ಮಟ್ಟದಲ್ಲಿ ಚನ್ನಪಟ್ಟಣ ಕ್ಷೇತ್ರದ ಟಿಕೆಟ್ ಸಮಸ್ಯೆಯಿಲ್ಲ ಎಂದ ಹೆಚ್​ಡಿಕೆ

ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ ಆಯ್ಕೆ ವಿಚಾರವಾಗಿ ಜಿಲ್ಲೆಯ ಪಾಂಡವಪುರ ತಾಲೂಕಿನ ಸೀತಾಪುರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ದೆಹಲಿ ಮಟ್ಟದಲ್ಲಿ ಚನ್ನಪಟ್ಟಣ ಕ್ಷೇತ್ರದ ಟಿಕೆಟ್ ಸಮಸ್ಯೆಯಿಲ್ಲ ಎಂದು ತಿಳಿಸಿದರು.

ಇದನ್ನೂ ಓದಿ: ಮೈತ್ರಿ ಟಿಕೆಟ್ ಕೈ ತಪ್ಪಿದರೆ ಕಾಂಗ್ರೆಸ್​ ಸೇರುತ್ತಾರಾ ಸಿಪಿ ಯೋಗೇಶ್ವರ್​? ಅಡ್ಡ ಗೋಡೆ ಮೇಲೆ ದೀಪ ಇಟ್ಟ ಮಾಜಿ MLC

ಕಳೆದ ಎರಡು ಚುನಾವಣೆಯಲ್ಲಿ ಚನ್ನಪಟ್ಟಣದಲ್ಲಿ ನಾನು ಪ್ರತಿನಿಧಿಸಿದ್ದೇನೆ. ಚನ್ನಪಟ್ಟಣ ಜೆಡಿಎಸ್ ಕ್ಷೇತ್ರ ಅನ್ನೋದು ದೆಹಲಿಯ ಮಟ್ಟದಲ್ಲಿ ಇದೆ. ಉಪಚುನಾವಣೆಯ 3 ಕ್ಷೇತ್ರ ಪೈಕಿ ಜೆಡಿಎಸ್ ಕಾರ್ಯಕರ್ತರ ಪಡೆ ಇದೆ ಎಂದಿದ್ದಾರೆ.

ಮಂಗಳವಾರ ಅಥವಾ ಬುಧವಾರ ಅಭ್ಯರ್ಥಿ ಫೈನಲ್

ಸಿ.ಪಿ.ಯೋಗೇಶ್ವರ್ ನಾಮಪತ್ರ ಸಲ್ಲಿಸುವ ಬಗ್ಗೆ ಚರ್ಚೆಯಾಗಿಲ್ಲ. ಆ ಬಗ್ಗೆ ನನಗೆ ಗೊತ್ತಿಲ್ಲ. ಸಿ.ಪಿ.ಯೋಗೇಶ್ವರ್ ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡಿದ್ದಾರೆ. ಪಕ್ಷೇತರ ಅಭ್ಯರ್ಥಿಯಾಗ್ತಾರೆಂಬ ವಿಚಾರ 15 ದಿನದಿಂದ ಓಡಾಡುತ್ತಿದ್ದಾರೆ. ಕಾಂಗ್ರೆಸ್​ನವರು ತಮ್ಮ ಪಕ್ಷಕ್ಕೆ ಕರೆದೊಯ್ದು ನಿಲ್ಲಿಸಲು ಕಾಯುತ್ತಿದ್ದಾರೆ. ನಮ್ಮಲ್ಲಿ ಒಡಕು ಮೂಡಲಿ ಎಂದು ಭಕಪಕ್ಷಿಯಂತೆ ಕಾಯುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.

ಇದನ್ನೂ ಓದಿ: ಚನ್ನಪಟ್ಟಣ ಬೈ ಎಲೆಕ್ಷನ್: ಮೈತ್ರಿ ಅಭ್ಯರ್ಥಿ ಫೈನಲ್, ಬಿಜೆಪಿಯ ಯೋಗೇಶ್ವರ್​ಗೆ ಜೆಡಿಎಸ್ ಬಿಗ್ ಆಫರ್

ಚನ್ನಪಟ್ಟಣದಲ್ಲಿ ಕಾಂಗ್ರೆಸ್​ನವರು ಸ್ವತಂತ್ರವಾಗಿ ಗೆಲ್ಲಲು ಸಾಧ್ಯವಿಲ್ಲ. ಅದಕ್ಕಾಗಿ ನಮ್ಮಲ್ಲಿ ಒಡಕು ತರಲು ಕಾಂಗ್ರೆಸ್​ನವರು ಶ್ರಮಿಸ್ತಿದ್ದಾರೆ. ಅಂತಹ ಅವಕಾಶ ಕಲ್ಪಿಸಬಾರದು ಎಂದು ತಾಳ್ಮೆಯಿಂದ ಇದ್ದೇನೆ. ಇನ್ನೂ 4 ದಿನ ಕಾಲಾವಕಾಶವಿದೆ, ಕೂತು ಚರ್ಚೆ ಮಾಡುತ್ತೇವೆ. ಮಂಗಳವಾರ ಅಥವಾ ಬುಧವಾರ ಅಭ್ಯರ್ಥಿ ಫೈನಲ್ ಆಗಲಿದೆ ಎಂದಿದ್ದಾರೆ.

ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.