ನಾಳೆ ಚನ್ನಪಟ್ಟಣ ಉಪಚುನಾವಣೆ ಫಲಿತಾಂಶ: ರಾಮನಗರ ಜಿಲ್ಲೆಯಲ್ಲಿ144 ಸೆಕ್ಷನ್ ಜಾರಿ

| Updated By: ಗಂಗಾಧರ​ ಬ. ಸಾಬೋಜಿ

Updated on: Nov 22, 2024 | 8:34 PM

ನವೆಂಬರ್​ 23ರಂದು ಚನ್ನಪಟ್ಟಣ ಕ್ಷೇತ್ರದ ಉಪಚುನಾವಣೆ ಫಲಿತಾಂಶ ಪ್ರಕಟ ಹೊರಬಿಳಲಿದೆ. ಹೀಗಾಗಿ ರಾಮನಗರ ಜಿಲ್ಲೆಯಲ್ಲಿ ಇಂದು ಮಧ್ಯರಾತ್ರಿಯಿಂದ ನಾಳೆ ಮಧ್ಯರಾತ್ರಿ 12 ಗಂಟೆವರೆಗೆ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಯಶವಂತ್ ವಿ.ಗುರುಕರ್ ಆದೇಶ ಹೊರಡಿಸಿದ್ದಾರೆ.

ನಾಳೆ ಚನ್ನಪಟ್ಟಣ ಉಪಚುನಾವಣೆ ಫಲಿತಾಂಶ: ರಾಮನಗರ ಜಿಲ್ಲೆಯಲ್ಲಿ144 ಸೆಕ್ಷನ್ ಜಾರಿ
ನಾಳೆ ಚನ್ನಪಟ್ಟಣ ಉಪಚುನಾವಣೆ ಫಲಿತಾಂಶ: ರಾಮನಗರ ಜಿಲ್ಲೆಯಲ್ಲಿ144 ಸೆಕ್ಷನ್ ಜಾರಿ
Follow us on

ರಾಮನಗರ, ನವೆಂಬರ್​ 22: ಕರ್ನಾಟಕದಲ್ಲಿ 3 ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಬೈ ಎಲೆಕ್ಷನ್​ನ ಫಲಿತಾಂಶ ನಾಳೆ ಹೊರ ಬೀಳಲಿದೆ. ನಾಳೆ ಚನ್ನಪಟ್ಟಣ (Channapatna) ಕ್ಷೇತ್ರದ ಉಪಚುನಾವಣೆ ಫಲಿತಾಂಶ ಪ್ರಕಟಣೆ ಹಿನ್ನೆಲೆ ಜಿಲ್ಲೆಯಲ್ಲಿ ಇಂದು ಮಧ್ಯರಾತ್ರಿಯಿಂದ ನಾಳೆ ಮಧ್ಯರಾತ್ರಿ 12 ಗಂಟೆವರೆಗೆ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಯಶವಂತ್ ವಿ.ಗುರುಕರ್ ಆದೇಶ ಹೊರಡಿಸಿದ್ದಾರೆ.

ಶಾಂತಿ ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಯಾವುದೇ ಬಹಿರಂಗ ಸಭೆ, ಸಾರ್ವಜನಿಕ ಭಾಷಣ ಮತ್ತು ಸಂಭ್ರಮಾಚರಣೆಗೆ ಅವಕಾಶ ಇಲ್ಲ. 5ಕ್ಕಿಂತ‌ ಹೆಚ್ಚು ಜನರು ಗುಂಪುಗೂಡುವಂತಿಲ್ಲ. ಚನ್ನಪಟ್ಟಣ ಕ್ಷೇತ್ರದ ಮತ ಎಣಿಕೆ ರಾಮನಗರದ ಇಂಜಿನಿಯರಿಂಗ್ ಕಾಲೇಜ್‌ನಲ್ಲಿ ನಡೆಯಲಿದೆ. ಬೆಳಗ್ಗೆ 8 ಗಂಟೆಯಿಂದ ಮತ ಎಣಿಕೆ ಕಾರ್ಯ ಶುರುವಾಗಲಿದ್ದು, ಆಯೋಗ ಈಗಾಗಲೇ ಸಕಲ ಸಿದ್ಧತೆ ಮಾಡಿಕೊಂಡಿದೆ.

ಇದನ್ನೂ ಓದಿ: ಚನ್ನಪಟ್ಟಣ ಉಪಚುನಾವಣೆ: ತಮ್ಮ ಮತದ ಬಗ್ಗೆ ಮಾತಾಡದ 13 ಪ್ರತಿಶತ ಮತದಾರರಿಂದ ಭವಿಷ್ಯ ನಿರ್ಧಾರ-ಲೋಕನೀತಿ ಸಮೀಕ್ಷೆ

ನಿಖಿಲ್ ಕುಮಾರಸ್ವಾಮಿ ಮತ್ತು ಸಿಪಿ ಯೋಗೇಶ್ವರ್ ನಡುವೆ ಭರ್ಜರಿ ಪೈಪೋಟಿ ಇದೆ. ಆದರೆ ಸಿಪಿ ಯೋಗೇಶ್ವರ್ ಹತಾಶ ಮಾತು, ಸಮೀಕ್ಷೆಗಳ ಬಳಿಕ ಟ್ರೆಂಡ್ ಬದಲಾಗಿದೆ. ಬೆಟ್ಟಿಂಗ್ ಕಟ್ಟೋರಿಗೆ ನಿಖಿಲ್ ಹಾಟ್ ಫೇವರೇಟ್ ಆಗಿದ್ದಾರೆ. ಕೇವಲ ಚನ್ನಪಟ್ಟಣ ಮಾತ್ರವಲ್ಲ ಮಂಡ್ಯದಲ್ಲೂ ನಿಖಿಲ್ ಪರವಾಗಿ ಕೋಟಿ ಕೋಟಿ ರೂ. ಬೆಟ್ಟಿಂಗ್ ಕಟ್ತಿದ್ದಾರೆ. ಕಳೆದ 2 ದಿನದಲ್ಲಿ 150ಕೋಟಿಗೂ ಹೆಚ್ಚು ಬೆಟ್ಟಿಂಗ್ ನಡೆದಿದೆ ಎನ್ನಲಾಗ್ತಿದೆ. ಹಲವೆಡೆ ಜಮೀನು, ಕಾರು,‌ ಆಭರಣ, ಕುರಿ, ಕೋಳಿಗಳನ್ನೂ ಇಟ್ಟು ಬೆಟ್ಟಿಂಗ್ ಕಟ್ಟಿದ್ದಾರೆ.

ಇದನ್ನೂ ಓದಿ: ಚನ್ನಪಟ್ಟಣ, ಶಿಗ್ಗಾಂವಿ ಮತ್ತು ಸಂಡೂರು ಕ್ಷೇತ್ರಗಳ ಉಪಚುನಾವಣೆ ಚುನಾವಣೋತ್ತರ ಸಮೀಕ್ಷೆ: NDA, ಕೈಗೆ ಎಷ್ಟು ಸ್ಥಾನ?

ಈ ನಡುವೆ ನಿಖಿಲ್ ಕುಮಾರಸ್ವಾಮಿ ಗೆಲ್ಲಲಿ ಅಂತಾ ಮಂಡ್ಯದಲ್ಲಿ ಅಭಿಮಾನಿಗಳು ಹರಕೆ ಹೊತ್ತಿದ್ದಾರೆ. ಶಕ್ತಿ ದೇವತೆ ಆರತಿ ಉಕ್ಕಡದ ಅಹಲ್ಯದೇವಿಗೆ ವಿಶೇಷ ಪೂಜೆ ಸಲ್ಲಿಸಿದ ಬೆಂಬಲಿಗರು, ನಿಖಿಲ್ ಗೆದ್ದರೆ ಮೇಕೆ ಬಲಿ ಕೊಟ್ಟು, ಅನ್ನದಾನ ಮಾಡುವುದಾಗಿ ಹರಕೆ ಹೊತ್ತಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:32 pm, Fri, 22 November 24