ಚನ್ನಪಟ್ಟಣ ಉಪಚುನಾವಣೆ: ಬಿಜೆಪಿ ಜೆಡಿಎಸ್ ಕಾರ್ಯಕರ್ತರಲ್ಲಿ ಮೂಡದ ಒಮ್ಮತ, ಯೋಗೇಶ್ವರ್ ಪರ ವಿಜಯೇಂದ್ರ ಬ್ಯಾಟಿಂಗ್

ಚನ್ನಪಟ್ಟಣ ಉಪ ಚುನಾವಣೆಗೆ ಶೀಘ್ರದಲ್ಲೇ ದಿನಾಂಕ ಪ್ರಕಟಗೊಳ್ಳಲಿದೆ ಎಂಬ ಸುದ್ದಿಗಳ ಮಧ್ಯೆಯೇ ಬಿಜೆಪಿ, ಜೆಡಿಎಸ್ ಮೈತ್ರಿಯಲ್ಲಿ ಟಿಕೆಟ್​ ಲಾಬಿ ಮುಂದುವರಿದಿದೆ. ಅತ್ತ ಟಿಕೆಟ್ ಉಳಿಸಿಕೊಳ್ಳಲು ಜೆಡಿಎಸ್ ಕಸರತ್ತು ನಡೆಸುತ್ತಿದ್ದರೆ ಇತ್ತ ಬಿಜೆಪಿ ನಾಯಕ ಸಿಪಿ ಯೋಗೇಶ್ವರ್​​​ಗೆ ಟಿಕೆಟ್ ನೀಡುವಂತೆ ಕಮಲ ಕಾರ್ಯಕರ್ತರು ಪಟ್ಟುಹಿಡಿದಿದ್ದಾರೆ.

ಚನ್ನಪಟ್ಟಣ ಉಪಚುನಾವಣೆ: ಬಿಜೆಪಿ ಜೆಡಿಎಸ್ ಕಾರ್ಯಕರ್ತರಲ್ಲಿ ಮೂಡದ ಒಮ್ಮತ, ಯೋಗೇಶ್ವರ್ ಪರ ವಿಜಯೇಂದ್ರ ಬ್ಯಾಟಿಂಗ್
ಕುಮಾರಸ್ವಾಮಿ, ಯೋಗೇಶ್ವರ್, ವಿಜಯೇಂದ್ರ (ಸಂಗ್ರಹ ಚಿತ್ರ)
Edited By:

Updated on: Oct 11, 2024 | 7:39 AM

ರಾಮನಗರ, ಅಕ್ಟೋಬರ್ 11: ಬೊಂಬೆನಾಡು ಚನ್ನಪಟ್ಟಣದಲ್ಲಿ ಉಪಚುನಾವಣೆಯ ಕಾದಾಟ ಕಿಚ್ಚು ಹಚ್ಚಿದೆ. ಸಿಪಿ ಯೋಗೇಶ್ವರ್‌ಗೆ ಟಿಕೆಟ್ ನೀಡಬೇಕು ಎಂದು ಬಿಜೆಪಿ ಕಾರ್ಯಕರ್ತರು ಪಟ್ಟು ಹಿಡಿದಿದ್ದಾರೆ. ಅತ್ತ ಟಿಕೆಟ್ ತನ್ನಲ್ಲೇ ಉಳಿಸಿಕೊಳ್ಳಲು ಜೆಡಿಎಸ್‌ ಕಸರತ್ತು ನಡೆಸುತ್ತಿದೆ. ಅದಕ್ಕೆ ಸಾಕ್ಷಿಯೆಂಬಂತೆ ದಿನಾಂಕ ಘೋಷಣೆಗೂ ಮುನ್ನವೇ ಮ್ಯಾರಥಾನ್ ಮೀಟಿಂಗ್​ಗಳು ನಡೆಯುತ್ತಿವೆ. ಬಿಜೆಪಿ ಅಭ್ಯರ್ಥಿಗೆ ಟಿಕೆಟ್ ನೀಡುವಂತೆ ಕೋರಿ ಪಕ್ಷದ ಜಿಲ್ಲಾಧ್ಯಕ್ಷ ಆನಂದ್ ಸ್ವಾಮಿ ನೇತೃತ್ವದಲ್ಲಿ ಗುರುವಾರ ಸಭೆ ನಡೆಸಲಾಯಿತು. ಸಭೆಯಲ್ಲಿ, ಯೋಗೇಶ್ವರ್‌ಗೆ ಟಿಕೆಟ್ ನೀಡಬೇಕೆಂದು ಒತ್ತಾಯಿಸಲಾಯಿತು.

ಮಂಡ್ಯ ಬಿಟ್ಟು ಕೊಟ್ಟಿರಲಿಲ್ವಾ: ಪ್ರಶಾಂತ್ ​​​​​ಗೌಡ ಪ್ರಶ್ನೆ

ಮಂಡ್ಯವನ್ನು ನಾವು ಜೆಡಿಎಸ್​​ಗೆ ಬಿಟ್ಟುಕೊಟ್ಟಿರಲಿಲ್ಲವೇ? ಅದೇ ರೀತಿ ಈಗ ಚನ್ನಪಟ್ಟಣದಲ್ಲಿ ನಮ್ಮ ಪಕ್ಷದವರಿಗೆ ಟಿಕೆಟ್ ನೀಡಲಿ ಎಂದು ಬಿಜೆಪಿ ಮುಖಂಡ ಪ್ರಶಾಂತ್ ​​​​​ಗೌಡ ಆಗ್ರಹಿಸಿದರು.

ಕನಕಪುರದಲ್ಲಿ ಕುಮಾರಸ್ವಾಮಿ ಸಭೆ

ಒಂದೆಡೆ, ಬಿಜೆಪಿ ಸಭೆಗಳನ್ನು ಮಾಡುತ್ತಿದ್ದರೆ ಕನಕಪುರ ತಾಲೂಕಿನ ಕೊಲ್ಲಾಪುರದಮ್ಮ ದೇವಾಲಯದ ಆವರಣದಲ್ಲಿ ಜೆಡಿಎಸ್ ಸಭೆ ಕೂಡ ನಡೆಯಿತು. ಕಾರ್ಯಕರ್ತರು, ಮುಖಂಡರ ಜೊತೆ ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ ಸಭೆ ನಡೆಸಿದರು. ಟಿಕೆಟ್ ವಿಚಾರವಾಗಿ ಪ್ರತಿಕ್ರಿಯಿಸಿದ ಹೆಚ್‌ಡಿಕೆ, ಸೂಕ್ತ ಅಭ್ಯರ್ಥಿ ಯಾರು ಎಂಬುದನ್ನು ಬಿಜೆಪಿ-ಜೆಡಿಎಸ್ ಕಾರ್ಯಕರ್ತರ ಅಭಿಪ್ರಾಯ ಪಡೆದೇ ತೀರ್ಮಾನಿಸಲಾಗುತ್ತದೆ ಎಂದರು.

ಇನ್ನೊಂದೆಡೆ ಬೆಳಗಾವಿಯಲ್ಲಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ಕ್ಷೇತ್ರದಲ್ಲಿ ಸಿಪಿ ಯೋಗೇಶ್ವರ್ ಹಿಡಿತ ಇದೆ. ಟಿಕೆಟ್‌ಗಾಗಿ ಪ್ರಯತ್ನ ಮಾಡುತ್ತಿರುವುದು ತಪ್ಪಲ್ಲ ಎಂದರು.

ಇದನ್ನೂ ಓದಿ: ಚನ್ನಪಟ್ಟಣ ಬೈ ಎಲೆಕ್ಷನ್​ ಯಾವಾಗ: ಸುಳಿವು ಕೊಟ್ಟ ಕುಮಾರಸ್ವಾಮಿ

ಒಟ್ಟಿನಲ್ಲಿ ಉಪಚುನಾವಣೆ ದಿನಾಂಕ ಘೋಷಣೆ ಆಗುವ ಮುನ್ನವೇ ದೋಸ್ತಿಗಳ ನಡುವೆ ಚನ್ನಪಟ್ಟಣ ಟಿಕೆಟ್ ಫೈಟ್ ತಾರಕಕ್ಕೇರಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಸೈಯ್ಯದ್​ ನಿಜಾಮುದ್ದೀನ್​, ರಾಮನಗರ

ಕಳೆದ ನಾಲ್ಕು ವರ್ಷಗಳಿಂದ ಟಿವಿ9 ವಾಹಿನಿಯಲ್ಲಿ ಕೆಲಸ ಮಾಡುತ್ತಿದ್ದು, ಹಲವು ಬಗೆಯ ಡಿಪಾರ್ಟ್ಮೆಂಟ್ ಗಳಲ್ಲಿ ಕೆಲಸ ಮಾಡಲು ಅವಕಾಶ ಸಿಕ್ಕಿದೆ. ಪ್ರಥಮದಲ್ಲಿ ಟಿವಿ9 ಮುಖ್ಯ ಕಚೇರಿಯಲ್ಲಿಯೇ ಕೆಲಸ ಮಾಡಿ,‌ಮೆಟ್ರೋ,ಪೊಲಿಟಿಕಲ್, ಕ್ರೈಂ ಹಾಗೂ ಲೈಫ್ ಸ್ಟೈಲ್ ನ ವಿಭಾಗದಲ್ಲೂ ಕೆಲಸ ಮಾಡುವ ಅವಕಾಶ ದೊರಕಿತ್ತು. ಕೊರೊನಾ ಸಂದರ್ಭದಲ್ಲಿ ಮಾಡಿದ ಕೇಸ್ ಸ್ಟಡಿಸ್, ನಂತರ ಬ್ಲ್ಯಾಕ್ ಫಂಗಸ್ ಗಾಗಿ ಒಂದು ತಿಂಗಳು ವಿಜಯಪುರ ಜಿಲ್ಲೆ, ಬಳಿಕ ಎರಡು ವರ್ಷ ಆನೆಕಲ್‌ ನಲ್ಲಿ ಕೆಲಸ ಮಾಡಿ ಕಳೆದ ಆರು ತಿಂಗಳಿನಿಂದ ರಾಮನಗರ ಜಿಲ್ಲೆಯಲ್ಲಿ ಕೆಲಸ ನಿಭಾಯಿಸುತ್ತಿದ್ದೇನೆ. ಖುಷಿ ಕೊಟ್ಟ ಸಾವಿರಾರು ಸುದ್ದಿಗಳ ಮಧ್ಯೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಚಿಟ್ ಚಾಟ್ ಬಹಳ ತೃಪ್ತಿ ತಂದ ಹೈಲೇಟ್.. ಆನೇಕಲ್‌ ನ ಡ್ರಗ್ಸ್ ಸ್ಟೋರಿ, ಪರಪ್ಪನ ಅಗ್ರಹಾರದ ಆಫಿಸರ್ಸ್ ಸ್ಕ್ಯಾಂಡಲ್, ಎಲೆಕ್ಟ್ರಾನಿಕ್ ಸಿಟಿ ಯ ಟೋಯಿಂಗ್ ಬಂದ್, ಸರ್ಜಾಪುರದ ಪ್ರವಾಹ ಸಂದರ್ಭ,ಹೀಗೆ ಹತ್ತು ಹಲವು ಸುದ್ದಿಗಳು ಖಷಿ ಕೊಟ್ಟಿವೆ. ಕಳೆದ ನಾಲ್ಕು ವರ್ಷಗಳಲ್ಲಿ ಹಲವು ರಾಜ್ಯಗಳಿಗೆ ತೆರಳಿ ಹಿಂದಿ‌ಹಾಗೂ ಕನ್ನಡಕ್ಕೆ ಕೆಲಸ ಮಾಡೋ ಅವಕಾಶ ನನ್ನ ಇನ್ಪುಟ್ ಟೀಂ ಕೊಟ್ಟಿದೆ. ಇನ್ನು ಹವ್ಯಾಸ ಗ್ಗೆ ಹೇಳೋದಾದ್ರೆ, ಸಂಗೀತ,ಕೇಳೊದು,ಹಾಡೋದು ಇಷ್ಟ. ಕ್ರೀಡೆ ವಿಚಾರಕ್ಕೆ ಬಂದ್ರೆ ಕ್ರಿಕೆಟ್ ಅಂಡ್ ಕಬ್ಬಡ್ಡಿ ಸ್ವಿಮಿಂಗ್. ಸ

Read More
Follow Us