ಚನ್ನಪಟ್ಟಣ ಉಪಚುನಾವಣೆ: ಕಾಂಗ್ರೆಸ್​​ನಿಂದ ಮತ್ತೆ ಬಿಗ್ ಆಪರೇಷನ್

ಚನ್ನಪಟ್ಟಣ ಉಪಚುನಾವಣೆ ಕಣದಲ್ಲಿ ಬಿಜೆಪಿಗೆ ಮತ್ತೊಂದು ಆಘಾತ ಕೊಟ್ಟಿರುವ ಕಾಂಗ್ರೆಸ್, ಕಮಲ ಪಾಳೆಯದಿಂದ ಗೆದ್ದಿದ್ದ 7 ನಗರಸಭಾ ಸದಸ್ಯರಲ್ಲಿ 6 ಮಂದಿಯನ್ನು ತೆಕ್ಕೆಗೆ ಸೆಳೆದುಕೊಂಡಿದೆ. ಇದರಿಂದ ಬಿಜೆಪಿಗೆ ಹಿನ್ನಡೆಯಾಗಿದೆ. ಮತ್ತೊಂದೆಡೆ, ಅವರು ಹೆಚ್​ಡಿ ಕುಮಾರಸ್ವಾಮಿ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿ ಸಿಪಿ ಯೋಗೇಶ್ವರ್ ವಾಗ್ದಾಳಿ ನಡೆಸಿದ್ದಾರೆ.

ಚನ್ನಪಟ್ಟಣ ಉಪಚುನಾವಣೆ: ಕಾಂಗ್ರೆಸ್​​ನಿಂದ ಮತ್ತೆ ಬಿಗ್ ಆಪರೇಷನ್
ಚನ್ನಪಟ್ಟಣ ಉಪಚುನಾವಣೆ: ಕಾಂಗ್ರೆಸ್​​ನಿಂದ ಮತ್ತೆ ಬಿಗ್ ಆಪರೇಷನ್
Edited By:

Updated on: Oct 29, 2024 | 12:40 PM

ರಾಮನಗರ, ಅಕ್ಟೋಬರ್ 29: ಚನ್ನಪಟ್ಟಣ ಉಪಚುನಾವಣೆ ಅಖಾಡದಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಜೆಡಿಎಸ್ ಮೈತ್ರಿ ನಾಯಕರ ಪ್ರಚಾರ ಭರಾಟೆ ಜೋರಾಗಿದೆ. ಬಿಜೆಪಿಯಿಂದ ಟಿಕೆಟ್ ಆಕಾಂಕ್ಷಿಯಾಗಿದ್ದ ಸಿಪಿ ಯೋಗೇಶ್ವರ್ ಅವರನ್ನೇ ಪಕ್ಷಕ್ಕೆ ಸೆಳೆದು ಅಭ್ಯರ್ಥಿಯನ್ನಾಗಿ ಮಾಡಿರುವ ಕಾಂಗ್ರೆಸ್ ಇದೀಗ ಮತ್ತೊಂದು ಆಪರೇಷನ್ ಮಾಡುವ ಮೂಲಕ ಬಿಜೆಪಿಗೆ ಶಾಕ್ ಕೊಟ್ಟಿದೆ.

ಬಿಜೆಪಿಯಿಂದ ಗೆದ್ದಿದ್ದ 7 ಜನ ನಗರಸಭಾ ಸದಸ್ಯರ ಪೈಕಿ 6 ಮಂದಿ ಮಂಗಳವಾರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಚನ್ನಪಟ್ಟಣ ಕಾಂಗ್ರೆಸ್ ಕಚೇರಿಯಲ್ಲಿ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದರು. ನಗರಸಭಾ ಸದಸ್ಯ ಚಂದ್ರು, ಮಂಗಳಮ್ಮ, ಮನೋಹರ್, ಕಮಲ,‌ ಜಯಮಾಲ, ಕಸ್ತೂರಿ ಕಾಂಗ್ರೆಸ್ ಸೇರ್ಪಡೆಯಾದರು. ಇವರೆಲ್ಲ 2021-22 ರಲ್ಲಿ ನಗರಸಭಾ ಸದಸ್ಯರಾಗಿ ಆಯ್ಕೆ ಆಗಿದ್ದರು. ಒಟ್ಟು 31 ನಗರಸಭಾ ಸದಸ್ಯರ ಪೈಕಿ 07 ಜನ ಬಿಜೆಪಿಯಿಂದ ಗೆದ್ದಿದ್ದರು. 16 ಮಂದಿ ಜೆಡಿಎಸ್​​ನಿಂದ ಗೆದ್ದಿದ್ದರು.

ಕಾಂಗ್ರೆಸ್ ಸೇರಿದ್ದ 13 ಮಂದಿ ಜೆಡಿಎಸ್ ಸದಸ್ಯರು

ಎರಡು ತಿಂಗಳ ಹಿಂದಷ್ಟೇ 13 ಮಂದಿ ಜೆಡಿಎಸ್ ಸದಸ್ಯರು ಕಾಂಗ್ರೆಸ್ ಸೇರ್ಪಡೆ ಆಗಿದ್ದರು. ಕಾಂಗ್ರೆಸ್​ನಿಂದ 7 ಮಂದಿ ನಗರಸಭೆ ಸದಸ್ಯರು ಗೆದ್ದಿದ್ದರು. ಒಬ್ಬರು ಪಕ್ಷೇತರ ಅಭ್ಯರ್ಥಿ ಗೆಲುವು ಸಾಧಿಸಿದ್ದರು. ಅವರೂ ಸಹ ಸೋಮವಾರ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.

ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ವಾಗ್ದಾಳಿ

ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ವಿರುದ್ಧ ಚನ್ನಪಟ್ಟಣ ಕಾಂಗ್ರೆಸ್ ಅಭ್ಯರ್ಥಿ ಸಿಪಿ ಯೋಗೇಶ್ವರ್ ವಾಗ್ದಾಳಿ ನಡೆಸಿದ್ದಾರೆ. ಕುಮಾರಸ್ವಾಮಿ ಚನ್ನಪಟ್ಟಣದಿಂದ ಗೆದ್ದಿದ್ದಾಗ ಏನದರೂ ಕೆಲಸ ಮಾಡಿದ್ದಾರಾ ಎಂದು ಅವರು ಪ್ರಶ್ನಿಸಿದ್ದಾರೆ.

ರಾಮನಗರ ಜಿಲ್ಲೆಯ ಚನ್ನಪಟ್ಟಣ ಕ್ಷೇತ್ರ ವ್ಯಾಪ್ತಿಯ ಮಾಕಳಿ‌ ಗ್ರಾಮದಲ್ಲಿ ಮಾತನಾಡಿದ ಯೋಗೇಶ್ವರ್, ಕಳೆದ ಬಾರಿ ಕುಮಾರಸ್ವಾಮಿಯವರನ್ನು ಚುನಾವಣೆಯಲ್ಲಿ ಗೆಲ್ಲಿಸಿದ್ದೀರಿ. ಆದರೆ ಅವರು ಏನಾದರೂ ಕೆಲಸ ಮಾಡಿದ್ದಾರಾ? ರಾಮನಗರ ಬಳಿಕ ಚನ್ನಪಟ್ಟಣಕ್ಕೆ ಬಂದಿದ್ದರು. ಈಗ ಮಂಡ್ಯಕ್ಕೆ ಹೋಗಿದ್ದಾರೆ. ಈಗ ಮತ್ತೆ ಮಗನನ್ನು ಗೆಲ್ಲಿಸಿಕೊಳ್ಳಲು ಚನ್ನಪಟ್ಟಣಕ್ಕೆ ಕರೆತಂದಿದ್ದಾರೆ. ಹೆಚ್​ಡಿಕೆ ಮಾಡಿದ ಒಂದು ಕೆಲಸವಾದರೂ ನಿಮಗೆ ಸಮಾಧಾನ ತಂದಿದೆಯಾ ಎಂದು ಯೋಗೇಶ್ವರ್ ಪ್ರಶ್ನಿಸಿದರು.

ಇದನ್ನೂ ಓದಿ: ಆಂಬ್ಯುಲೆನ್ಸ್​ನಲ್ಲಿ ಪ್ರಚಾರಕ್ಕೆ ಬರ್ತಾರೆ: ದೇವೇಗೌಡ ವಿರುದ್ಧ ಡಿಕೆ ಸುರೇಶ್ ಹೇಳಿಕೆಯನ್ನೇ ಪ್ರತ್ಯಸ್ತ್ರ ಮಾಡಲು ಮುಂದಾದ ದಳ

ಕಣ್ವ ಜಲಾಶಯದಿಂದ ಏತ ನೀರಾವರಿ ಮಾಡಬೇಕು ಅಂದುಕೊಂಡಿದ್ದೆ. ನಾನು ಹೋದ‌ ಬಳಿಕ ಕಳಪೆ ಕಾಮಗಾರಿ ಆಗಿದೆ. ಕುಮಾರಸ್ವಾಮಿ ಆಡಳಿತದ ಕಾಲದಲ್ಲಿ ಕಳಪೆ ಗುಣಮಟ್ಟದ ಪೈಪ್​ಗಳನ್ನು ಹಾಕಿಸಿದ್ದಾರೆ. ಹಾಗಾಗಿ ಈ ಬಾರಿ ನನಗೆ ನಿಮ್ಮ ಮತ ಕೊಡಿ ಎಂದು ಯೋಗೇಶ್ವರ್ ಮತದಾರರಲ್ಲಿ ಯಾಚಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Syed Nizamuddin

ಕಳೆದ ನಾಲ್ಕು ವರ್ಷಗಳಿಂದ ಟಿವಿ9 ವಾಹಿನಿಯಲ್ಲಿ ಕೆಲಸ ಮಾಡುತ್ತಿದ್ದು, ಹಲವು ಬಗೆಯ ಡಿಪಾರ್ಟ್ಮೆಂಟ್ ಗಳಲ್ಲಿ ಕೆಲಸ ಮಾಡಲು ಅವಕಾಶ ಸಿಕ್ಕಿದೆ. ಪ್ರಥಮದಲ್ಲಿ ಟಿವಿ9 ಮುಖ್ಯ ಕಚೇರಿಯಲ್ಲಿಯೇ ಕೆಲಸ ಮಾಡಿ,‌ಮೆಟ್ರೋ,ಪೊಲಿಟಿಕಲ್, ಕ್ರೈಂ ಹಾಗೂ ಲೈಫ್ ಸ್ಟೈಲ್ ನ ವಿಭಾಗದಲ್ಲೂ ಕೆಲಸ ಮಾಡುವ ಅವಕಾಶ ದೊರಕಿತ್ತು. ಕೊರೊನಾ ಸಂದರ್ಭದಲ್ಲಿ ಮಾಡಿದ ಕೇಸ್ ಸ್ಟಡಿಸ್, ನಂತರ ಬ್ಲ್ಯಾಕ್ ಫಂಗಸ್ ಗಾಗಿ ಒಂದು ತಿಂಗಳು ವಿಜಯಪುರ ಜಿಲ್ಲೆ, ಬಳಿಕ ಎರಡು ವರ್ಷ ಆನೆಕಲ್‌ ನಲ್ಲಿ ಕೆಲಸ ಮಾಡಿ ಕಳೆದ ಆರು ತಿಂಗಳಿನಿಂದ ರಾಮನಗರ ಜಿಲ್ಲೆಯಲ್ಲಿ ಕೆಲಸ ನಿಭಾಯಿಸುತ್ತಿದ್ದೇನೆ. ಖುಷಿ ಕೊಟ್ಟ ಸಾವಿರಾರು ಸುದ್ದಿಗಳ ಮಧ್ಯೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಚಿಟ್ ಚಾಟ್ ಬಹಳ ತೃಪ್ತಿ ತಂದ ಹೈಲೇಟ್.. ಆನೇಕಲ್‌ ನ ಡ್ರಗ್ಸ್ ಸ್ಟೋರಿ, ಪರಪ್ಪನ ಅಗ್ರಹಾರದ ಆಫಿಸರ್ಸ್ ಸ್ಕ್ಯಾಂಡಲ್, ಎಲೆಕ್ಟ್ರಾನಿಕ್ ಸಿಟಿ ಯ ಟೋಯಿಂಗ್ ಬಂದ್, ಸರ್ಜಾಪುರದ ಪ್ರವಾಹ ಸಂದರ್ಭ,ಹೀಗೆ ಹತ್ತು ಹಲವು ಸುದ್ದಿಗಳು ಖಷಿ ಕೊಟ್ಟಿವೆ. ಕಳೆದ ನಾಲ್ಕು ವರ್ಷಗಳಲ್ಲಿ ಹಲವು ರಾಜ್ಯಗಳಿಗೆ ತೆರಳಿ ಹಿಂದಿ‌ಹಾಗೂ ಕನ್ನಡಕ್ಕೆ ಕೆಲಸ ಮಾಡೋ ಅವಕಾಶ ನನ್ನ ಇನ್ಪುಟ್ ಟೀಂ ಕೊಟ್ಟಿದೆ. ಇನ್ನು ಹವ್ಯಾಸ ಗ್ಗೆ ಹೇಳೋದಾದ್ರೆ, ಸಂಗೀತ,ಕೇಳೊದು,ಹಾಡೋದು ಇಷ್ಟ. ಕ್ರೀಡೆ ವಿಚಾರಕ್ಕೆ ಬಂದ್ರೆ ಕ್ರಿಕೆಟ್ ಅಂಡ್ ಕಬ್ಬಡ್ಡಿ ಸ್ವಿಮಿಂಗ್. ಸ

Read More
Follow Us