ಬಿಜೆಪಿ, JDS ಕೆಲಸ ಬಹಳಷ್ಟು ವರ್ಕೌಟ್ ಆಗಿದೆ: ಫಲಿತಾಂಶಕ್ಕೂ ಮುನ್ನವೇ ಯೋಗೇಶ್ವರ್ ಸೋಲೋಪ್ಪಿಕೊಂಡ್ರಾ?

ತೀವ್ರ ಕುತೂಹಲ ಕೆರಳಿಸಿದ್ದ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ (Channapattana Assembly By Election) ಮತದಾನ ಅಂತ್ಯವಾಗಿದೆ. ಇನ್ನೇನಿದ್ದರೂ ಎಲ್ಲರ ಚಿತ್ತ ಫಲಿತಾಂಶದತ್ತ ನೆಟ್ಟಿದ್ದು, ಯಾರು ಗೆಲ್ಲುತ್ತಾರೆ? ಯಾರು ಸೋಲುತ್ತಾರೆ ಎನ್ನುವ ಚರ್ಚೆಗಳು, ಲೆಕ್ಕಾಚಾರಗಳು ಶುರುವಾಗಿವೆ. ಇದರ ಮಧ್ಯ ಕಾಂಗ್ರೆಸ್ ಅಭ್ಯರ್ಥಿ ಸಿಪಿ ಯೋಗೇಶ್ವರ್​ ಸುದ್ದಿಗೋಷ್ಠಿ ನಡೆಸಿ ಉಪಚುನಾವಣೆ ಬಗ್ಗೆ ಮಾತನಾಡಿದ್ದು, ಅವರ ಮಾತುಗಳನ್ನು ಗಮನಿಸಿದ್ರೆ ಸೋಲೋಪ್ಪಿಕೊಂಡಂತಿದೆ. ಹಾಗಾದ್ರೆ, ಅವರು ಏನೆಲ್ಲಾ ಹೇಳಿದ್ದಾರೆ ಎನ್ನುವ ವಿವರ ಇಲ್ಲಿದೆ.

ಬಿಜೆಪಿ, JDS ಕೆಲಸ ಬಹಳಷ್ಟು ವರ್ಕೌಟ್ ಆಗಿದೆ: ಫಲಿತಾಂಶಕ್ಕೂ ಮುನ್ನವೇ ಯೋಗೇಶ್ವರ್ ಸೋಲೋಪ್ಪಿಕೊಂಡ್ರಾ?
ಸಿ.ಪಿ.ಯೋಗೇಶ್ವರ್
Follow us
ಸೈಯ್ಯದ್​ ನಿಜಾಮುದ್ದೀನ್​, ರಾಮನಗರ
| Updated By: ರಮೇಶ್ ಬಿ. ಜವಳಗೇರಾ

Updated on:Nov 14, 2024 | 5:02 PM

ರಾಮನಗರ, (ನವೆಂಬರ್ 14): ಹೈವೋಲ್ಟೇಜ್‌ ಅಖಾಡ ಚನ್ನಪಟ್ಟಣದಲ್ಲಿ ಗೆಲ್ಲೋದ್ಯಾರು ಎಂಬ ಚರ್ಚೆ ಶುರುವಾಗಿದೆ. ಮತದಾನ ಮುಗಿದ ಬೆನ್ನಲ್ಲೇ ರಿಸಲ್ಟ್‌ ಲೆಕ್ಕಾಚಾರಗಳು ನಡೆಯುತ್ತಿದ್ದು, ಎಲ್ಲರ ಚಿತ್ತ ಚನ್ನಪಟ್ಟಣ ಬೈಎಲೆಕ್ಷನ್‌ ರಿಸಲ್ಟ್‌ ಕಡೆ ನೆಟ್ಟಿದೆ. ಇನ್ನು ಉಪಚುನಾವಣೆ ಸಂಬಂಧ ಇಂದು(ನವೆಂಬರ್ 14) ಕಾಂಗ್ರೆಸ್ ಅಭ್ಯರ್ಥಿ ಸಿಪಿ ಯೋಗೇಶ್ವರ್​ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದು, ಯಾರೇ ಗೆದ್ರೂ ಕೂದಲೆಳೆಯ ಅಂತರದಲ್ಲಿ ಫಲಿತಾಂಶ ಬರಬಹುದು. ಬಿಜೆಪಿ, JDS ಕೆಲಸ ಚನ್ನಪಟ್ಟಣದಲ್ಲಿ ಬಹಳಷ್ಟು ವರ್ಕೌಟ್ ಆಗಿದೆ ಎಂದು ಹೇಳುವ ಮೂಲಕ ಸೋಲಿನ ಸುಳಿವು ಕೊಟ್ಟಿದ್ದಾರೆ. ಅಲ್ಲದೇ ಜಮಿರ್ ಅಹಮ್ಮದ್ ಖಾನ್ ಕರಿಯ ಕುಮಾರಸ್ವಾಮಿ ಹೇಳಿಕೆ ಸೋಲಿನ ಕಾರಣವಾಗಬಹುದು ಎನ್ನುವ ಅರ್ಥದಲ್ಲಿ ಹೇಳಿದ್ದಾರೆ.

ಯಾರೇ ಗೆದ್ರೂ ಕೂದಲೆಳೆಯ ಅಂತರದಲ್ಲಿ ಫಲಿತಾಂಶ ಬರಬಹುದು. ಕಾಂಗ್ರೆಸ್ ಕಾರ್ಯಕರ್ತರು, ಮುಖಂಡರಿಗೆ ಕೃತಜ್ಞತೆ ಅರ್ಪಿಸುತ್ತೇನೆ. ಸಿಎಂ, ಡಿಸಿಎಂ, ಸಚಿವರು, ಡಿ.ಕೆ.ಸುರೇಶ್​ಗೆ ಧನ್ಯವಾದ ಹೇಳುತ್ತೇನೆ. ಮೊಮ್ಮಗ ಗೆಲ್ಲಲೇಬೇಕೆಂದು ದೇವೇಗೌಡರು ಹೋರಾಡಿದ್ದಾರೆ. ಚನ್ನಪಟ್ಟಣ ಕ್ಷೇತ್ರದಲ್ಲಿ ಸಮಬಲದ ಹೋರಾಟ ಅಂತಾ ಅನ್ಸುತ್ತೆ. ಕೆಲವರ ಮಾತುಗಳು ಜನರ ಭಾವನೆಗೆ ಘಾಸಿ ಆಗಿದೆ ಅನ್ನಿಸುತ್ತೆ. ಸಚಿವ ಜಮೀರ್ ಮಾತಿನಿಂದ ಮುಸ್ಲಿಮರಿಂದ ಸ್ವಲ್ಪ ಮತ ಬಂದ್ರೂ. ನನಗೆ ಬರಬೇಕಿದ್ದ ಒಕ್ಕಲಿಗ ಮತಗಳು ಬಂದಿಲ್ಲ ಅನ್ನಿಸುತ್ತೆ ಎಂದು ಪರೋಕ್ಷವಾಗಿ ಜಮೀರ್​ ಅಹಮ್ಮದ್ ಖಾನ್ ಕುಮಾರಸ್ವಾಮಿ ಬಗ್ಗೆ ಆಡಿದ ಮಾತಿನ ಬಗ್ಗೆ ಅಸಮಾಧಾನ ಹೊರಹಾಕಿದರು.

ಗೆಲ್ಲಬೇಕಾದರೆ 1 ಲಕ್ಷ ಮತ ತೆಗೆದುಕೊಳ್ಳಬೇಕು

ಬಿಜೆಪಿ, JDS ಕೆಲಸ ಚನ್ನಪಟ್ಟಣದಲ್ಲಿ ಬಹಳಷ್ಟು ವರ್ಕೌಟ್ ಆಗಿದೆ. ಯಾಕೆ ಅಂದ್ರೆ ನಾವೇ ಇಲ್ಲಿ ಬಿಜೆಪಿ ಕಾರ್ಯಕರ್ತರನ್ನು ಕಟ್ಟಿದ್ದೇವೆ. ಇದುವರೆಗೂ ತೆಗೆದುಕೊಂಡಿರುವ ಗರಿಷ್ಠ ಮತಗಳು 85 ಸಾವಿರ. ಈ ಚುನಾವಣೆ ಗೆಲ್ಲಬೇಕಾದರೆ 1 ಲಕ್ಷ ಮತ ತೆಗೆದುಕೊಳ್ಳಬೇಕು. ಸೋತಿದ್ದೇನೆ ಅಂತಾ ಅಲ್ಲ, ಇಲ್ಲಿ ಸಮಬಲದ ಹೋರಾಟ ಇದೆ. ಒಕ್ಕಲಿಗ ಮತ ಕ್ರೋಢೀಕರಣ ಆಗಿದ್ದರೆ ಫಲಿತಾಂಶ ಮೇಲೆ ಪರಿಣಾಮ ಬೀರಲಿದೆ. ಚನ್ನಪಟ್ಟಣದಲ್ಲಿ ನಿಖಿಲ್ ಕುಮಾರಸ್ವಾಮಿ ಆರ್ಭಟ ಜೋರಾಗಿತ್ತು. ಅವರ ಸಮುದಾಯದ ಜನರು ಕ್ಷೇತ್ರದಲ್ಲಿದ್ದು ಕೆಲಸ ಮಾಡಿದರು. ಡಿ.ಕೆ.ಸುರೇಶ್, ಡಿ.ಕೆ.ಶಿವಕುಮಾರ್, ‌ನಾನು ಒಕ್ಕಲಿಗನಾಗಿದ್ರೂ ನಮ್ಮ ಜನ ಇನ್ನೂ ಅವರಿಗೆ ಅಂಟಿಕೊಂಡು ಕೂತಿದ್ದಾರೆ ಎಂದು ಹೇಳಿದರು. ಈ ಮೂಲಕ ಯೋಗೇಶ್ವರ್​ ಅವರ ಮಾತುಗಳನ್ನು ಸೂಕ್ಷ್ಮವಾಗಿ ಗಮನಿಸಿದರೆ ಪರೋಕ್ಷವಾಗಿ ತಮ್ಮ ಸೋಲಿನ ಸುಳಿವು ಕೊಟ್ಟಂತಿದೆ.

ಸುದ್ದಿಗೋಷ್ಠಿ ಬಳಿಕ ಟಿವಿ9 ಜತೆ ಪ್ರತ್ಯೇಕವಾಗಿ ಮಾತನಾಡಿದ ಯೋಗೇಶ್ವರ್​, ಗೆದ್ದರೆ ಕಾಂಗ್ರೆಸ್ ಯೋಜನೆ, ಕೆಲಸ ಮಾಡಿದೆ ಅಂತಾ ಅಂದುಕೊಳ್ಳಬೇಕು. ಸೋತರೆ ಪಕ್ಷಾಂತರ ಕಾರಣಕ್ಕೆ ಜನ ಸೋಲಿಸಿದ್ದಾರೆ ಅಂದುಕೊಳ್ಳಬೇಕು. ಪಕ್ಷಾಂತರ ಕಾರಣಕ್ಕೆ ಜನ ಸೋಲಿಸಿದ್ದಾರೆ ಎಂದು ತಿಳಿದುಕೊಳ್ಳಬೇಕು. ಜಮೀರ್ ಅಹ್ಮದ್ ಹೇಳಿಕೆಯನ್ನು ವೈಯಕ್ತಿಕವಾಗಿ ಖಂಡಿಸುತ್ತೇನೆ. ಪ್ರತಿಯೊಬ್ಬ ನಾಯಕನ ಮಾತನ್ನು ಕೇಳುವ ಪರಿಸ್ಥಿತಿಯಲ್ಲಿ ಇರಲಿಲ್ಲ ಎಂದು ಬೇಸರ ಹೊರಹಾಕಿದರು.

ಯೋಗೇಶ್ವರ್ ಬಾಯಿಂದ​ ಸೋಲಿನ ಮಾತುಗಳು

ಬಿಜೆಪಿ, JDS ಕೆಲಸ ಬಹಳಷ್ಟು ವರ್ಕೌಟ್ ಆಗಿದೆ, ಡಿ.ಕೆ.ಸುರೇಶ್, ಡಿ.ಕೆ.ಶಿವಕುಮಾರ್, ‌ನಾನು ಒಕ್ಕಲಿಗನಾಗಿದ್ರೂ ನಮ್ಮ ಜನ ಇನ್ನೂ ಅವರಿಗೆ ಅಂಟಿಕೊಂಡು ಕೂತಿದ್ದಾರೆ, ಈ ಚುನಾವಣೆ ಗೆಲ್ಲಬೇಕಾದರೆ 1 ಲಕ್ಷ ಮತ ತೆಗೆದುಕೊಳ್ಳಬೇಕು. ಆದ್ರೆ, ಇದುವರೆಗೂ ತೆಗೆದುಕೊಂಡಿರುವ ಗರಿಷ್ಠ ಮತಗಳು 85 ಸಾವಿರ. ಹಾಗೇ ಸಚಿವ ಜಮೀರ್ ಮಾತಿನಿಂದ ಮುಸ್ಲಿಮರಿಂದ ಸ್ವಲ್ಪ ಮತ ಬಂದ್ರೂ. ನನಗೆ ಬರಬೇಕಿದ್ದ ಒಕ್ಕಲಿಗ ಮತಗಳು ಬಂದಿಲ್ಲ ಅನ್ನಿಸುತ್ತೆ. ಈ ಮಾತುಗಳು ಎಲ್ಲೋ ಒಂದು ಕಡೆ ಯೋಗೇಶ್ವರ್​ ಸೋಲಿನ ಮಾತುಗಳು ಅನ್ನಿಸುತ್ತೆ. ಚುನಾವಣಾ ವಿಚಾರದಲ್ಲಿ ಯಾರ ಬಾಯಲ್ಲೂ ಸುಖಾಸುಮ್ಮನೆ ನೆಗೆಟಿವ್ ಮಾತುಗಳು ಬರುವುದಿಲ್ಲ. ಅವರು ಕ್ಷೇತ್ರದಾದ್ಯಂತ ಸುತ್ತಿದ್ದಾರೆ. ಯಾವ ಸಮುದಾಯಗಳ ಮತಗಳು ಎಷ್ಟು ಬರಬಹುದು ಎನ್ನುವ ಲೆಕ್ಕಾಚಾರ ಇರುತ್ತೆ. ಹೀಗಾಗಿ ಇಂದಿನ ಯೋಗೇಶ್ವರ್ ಮಾತುಗಳನ್ನು ನೋಡಿದರೆ ಅವರು ಫಲಿತಾಂಶಕ್ಕೂ ಮುನ್ನವೇ ಸೋಲೋಪ್ಪಿಕೊಂಡಂತಿದೆ.

ಒಟ್ಟಿನಲ್ಲಿ ಚನ್ನಪಟ್ಟಣದಲ್ಲಿ ಯಾರ ಗೆಲುವು? ಯಾರ ಸೋಲು ಎಂಬ ಭವಿಷ್ಯ ನವೆಂಬರ್ 23ರಂದು ನಿರ್ಧಾರವಾಗಲಿದ್ದು, ಎಲ್ಲರ ಚಿತ್ತ ಫಲಿತಾಂಶದತ್ತ ನೆಟ್ಟಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 4:38 pm, Thu, 14 November 24

Video: ಜಾರ್ಖಂಡ್​ನಲ್ಲಿ ಬಸ್ ಪಲ್ಟಿ, 7 ಮಂದಿ ಸಾವು
Video: ಜಾರ್ಖಂಡ್​ನಲ್ಲಿ ಬಸ್ ಪಲ್ಟಿ, 7 ಮಂದಿ ಸಾವು
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಗೆಲ್ಲೋದು: ಕುಮಾರಸ್ವಾಮಿ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಗೆಲ್ಲೋದು: ಕುಮಾರಸ್ವಾಮಿ
6,6,6,6,6,6,6,6: ಸಿಕ್ಸರ್​ಗಳ ಸುರಿಮಳೆ, 8 ಎಸೆತಗಳಲ್ಲಿ 8 ಸಿಕ್ಸ್​
6,6,6,6,6,6,6,6: ಸಿಕ್ಸರ್​ಗಳ ಸುರಿಮಳೆ, 8 ಎಸೆತಗಳಲ್ಲಿ 8 ಸಿಕ್ಸ್​
ಬೈಂದೂರಲ್ಲಿ ಲ್ಯಾಂಡ್ ಆದ ಬಳಿಕ ಶಿವಕುಮಾರ್​ಗೆ ಶೆಡ್ಯೂಲ್ ಮರೆತುಹೋಯಿತೇ?
ಬೈಂದೂರಲ್ಲಿ ಲ್ಯಾಂಡ್ ಆದ ಬಳಿಕ ಶಿವಕುಮಾರ್​ಗೆ ಶೆಡ್ಯೂಲ್ ಮರೆತುಹೋಯಿತೇ?
ಯಾರದ್ದೋ ಪಿಂಚಣಿ ಹಣ, ಇನ್ನಯಾರದ್ದೋ ಖಾತೆಗೆ ಜಮೆ: ವೃದ್ಧ ದಂಪತಿ ಕಣ್ಣೀರು
ಯಾರದ್ದೋ ಪಿಂಚಣಿ ಹಣ, ಇನ್ನಯಾರದ್ದೋ ಖಾತೆಗೆ ಜಮೆ: ವೃದ್ಧ ದಂಪತಿ ಕಣ್ಣೀರು
ಕೇವಲ 2 ತಿಂಗಳು ಹಿಂದೆ ಚಿಕ್ಕಬಳ್ಳಾಪುರದಿಂದ ಟ್ರಾನ್ಸ್​ಫರ್ ಆಗಿರುವ ಅಧಿಕಾರಿ
ಕೇವಲ 2 ತಿಂಗಳು ಹಿಂದೆ ಚಿಕ್ಕಬಳ್ಳಾಪುರದಿಂದ ಟ್ರಾನ್ಸ್​ಫರ್ ಆಗಿರುವ ಅಧಿಕಾರಿ
ಸಿಎಂ ಇವತ್ತು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್​ರನ್ನು ಭೇಟಿಯಾಗಲಿದ್ದಾರೆ
ಸಿಎಂ ಇವತ್ತು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್​ರನ್ನು ಭೇಟಿಯಾಗಲಿದ್ದಾರೆ
ಕೇವಲ 27 ದಿನಗಳಲ್ಲೇ ಮತ್ತೆ ಕೋಟ್ಯಧಿಪತಿಯಾದ ಮಾದಪ್ಪ
ಕೇವಲ 27 ದಿನಗಳಲ್ಲೇ ಮತ್ತೆ ಕೋಟ್ಯಧಿಪತಿಯಾದ ಮಾದಪ್ಪ
ಪ್ರಧಾನಿ ಮೋದಿಗೆ ಗಾಯಾನಾದ ಅತ್ಯುನ್ನತ ನಾಗರಿಕ ಪ್ರಶಸ್ತಿ
ಪ್ರಧಾನಿ ಮೋದಿಗೆ ಗಾಯಾನಾದ ಅತ್ಯುನ್ನತ ನಾಗರಿಕ ಪ್ರಶಸ್ತಿ
ಶಿಕ್ಷಣ ಮಂತ್ರಿಗೆ ಕನ್ನಡ ಬರಲ್ಲ ಎಂದ ವಿದ್ಯಾರ್ಥಿ ಮೇಲೆ ಮಧು ಅಸ್ತ್ರ
ಶಿಕ್ಷಣ ಮಂತ್ರಿಗೆ ಕನ್ನಡ ಬರಲ್ಲ ಎಂದ ವಿದ್ಯಾರ್ಥಿ ಮೇಲೆ ಮಧು ಅಸ್ತ್ರ