ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಸಭೆಯಲ್ಲಿ ಗದ್ದಲ; ಪಟ್ಟು ಬಿಡದ ತಮಿಳುನಾಡು ಅಧಿಕಾರಿಗಳು

Kaveri Water Management Authority meeting; ತಮಿಳುನಾಡು ಪಾಲಿನ ನೀರನ್ನು ಕರ್ನಾಟಕ ಬಾಕಿ ಉಳಿಸಿಕೊಂಡಿದೆ. ಜೂನ್ ತಿಂಗಳಿನಿಂದ ಆಗಸ್ಟ್ 9 ರವರೆಗೆ ಹರಿಸುವ ನೀರು ಬಾಕಿ ಉಳಿಸಿಕೊಂಡಿದೆ. 37.9 ಟಿಎಂಸಿ ನೀರು ಕರ್ನಾಟಕ ಬಾಕಿ ಉಳಿಸಿಕೊಂಡಿದೆ. ಕೂಡಲೇ ಬಾಕಿ ಉಳಿಸಿಕೊಂಡ ನೀರನ್ನು ಬಿಡಬೇಕು ಎಂದು ಸಭೆಯಲ್ಲಿ ತಮಿಳುನಾಡು ಅಧಿಕಾರಿಗಳು ಒತ್ತಡ ಹೇರಿದರು. ಆದರೆ, ತಮಿಳುನಾಡು ಅಧಿಕಾರಿಗಳ ಬೇಡಿಕೆಗೆ ಕರ್ನಾಟಕ ಅಧಿಕಾರಿಗಳು ಒಪ್ಪಲಿಲ್ಲ.

ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಸಭೆಯಲ್ಲಿ ಗದ್ದಲ; ಪಟ್ಟು ಬಿಡದ ತಮಿಳುನಾಡು ಅಧಿಕಾರಿಗಳು
ಸಾಂದರ್ಭಿಕ ಚಿತ್ರ
Edited By:

Updated on: Aug 11, 2023 | 8:44 PM

ನವದೆಹಲಿ: ಕಾವೇರಿ ನದಿಯ ನೀರು ಹಂಚಿಕೆ ವಿಚಾರವಾಗಿ ದೆಹಲಿಯ ಜಲ ಆಯೋಗದ ಕಚೇರಿಯಲ್ಲಿ ಶುಕ್ರವಾರ ನಡೆದ ‘ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (Kaveri Water Management Authority)’ ಸಭೆಯಲ್ಲಿ ಗದ್ದಲ ಏರ್ಪಟ್ಟಿತು. ಕರ್ನಾಟಕದ (Karnataka) ಅಧಿಕಾರಿಗಳ ಮಾತು ಕೇಳದೆ, ನೀರು ಬಿಡುಗಡೆಗೆ ಪಟ್ಟು ಹಿಡಿದ ತಮಿಳುನಾಡು (Tamil Nadu) ಅಧಿಕಾರಿಗಳು ಸಭೆಯಿಂದ ಹೊರನಡೆದ ಘಟನೆ ನಡೆಯಿತು. ಕರ್ನಾಟಕ ನೀರು ಬಿಡುತ್ತಿಲ್ಲ. ಕರ್ನಾಟಕದ ಅಧಿಕಾರಿಗಳು ಮನವಿಗೆ ಸ್ಪಂದಿಸುತ್ತಿಲ್ಲ ಎಂದು ತಮಿಳುನಾಡು ಅಧಿಕಾರಿಗಳು ಸಭೆಯಲ್ಲಿ ಆರೋಪ ಮಾಡಿದರು. ಇದೇ ವೇಳೆ, ಮಳೆ ಕೊರತೆಯಿಂದಾಗಿ ಕಾವೇರಿ ನದಿಯಲ್ಲಿ ನೀರು ಕಡಿಮೆ ಇರುವ ಬಗ್ಗೆ ಮನವರಿಕೆ ಮಾಡಿಕೊಡಲು ಕರ್ನಾಟಕದ ಅಧಿಕಾರಿಗಳು ಮುಂದಾದರು. ಕಾವೇರಿ ಕಣಿವೆಯ ವಾಸ್ತವ ಚಿತ್ರಣವನ್ನು ಮುಂದಿಟ್ಟರು. ಮಳೆ ಕೊರೆತೆಯ ಬಗ್ಗೆ ಕರ್ನಾಟಕದ ಅಧಿಕಾರಿಗಳು ಮಾಹಿತಿ ನೀಡಿದಾಗ, ತಮಿಳುನಾಡು ಜಲಸಂಪನ್ಮೂಲ ಕಾರ್ಯದರ್ಶಿ ಸಂದೀಪ್ ಸಕ್ಸೇನಾ ನೇತೃತ್ವದ ಅಧಿಕಾರಿಗಳು ಸಭೆಯಿಂದ ಹೊರನಡೆದರು.

ಸುದ್ದಿಗಾರರೊಂದಿಗೆ ಮಾತನಾಡಿದ ಸಕ್ಸೇನಾ, ಆಗಸ್ಟ್ 9 ರೊಳಗೆ ಕರ್ನಾಟಕವು 37.9 ಟಿಎಂಸಿ ಕೊರತೆಯ ನೀರನ್ನು ತಕ್ಷಣವೇ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು. ಪ್ರತಿದಿನ ನೀರು ಬಿಡಲು ಪ್ರಾಧಿಕಾರವು ಕರ್ನಾಟಕಕ್ಕೆ ನಿರ್ದೇಶನ ನೀಡಬೇಕು ಎಂದು ಆಗ್ರಹಿಸಿದರು.

ತಮಿಳುನಾಡು ಪಾಲಿನ ನೀರನ್ನು ಕರ್ನಾಟಕ ಬಾಕಿ ಉಳಿಸಿಕೊಂಡಿದೆ. ಜೂನ್ ತಿಂಗಳಿನಿಂದ ಆಗಸ್ಟ್ 9 ರವರೆಗೆ ಹರಿಸುವ ನೀರು ಬಾಕಿ ಉಳಿಸಿಕೊಂಡಿದೆ. 37.9 ಟಿಎಂಸಿ ನೀರು ಕರ್ನಾಟಕ ಬಾಕಿ ಉಳಿಸಿಕೊಂಡಿದೆ. ಕೂಡಲೇ ಬಾಕಿ ಉಳಿಸಿಕೊಂಡ ನೀರನ್ನು ಬಿಡಬೇಕು ಎಂದು ಸಭೆಯಲ್ಲಿ ತಮಿಳುನಾಡು ಅಧಿಕಾರಿಗಳು ಒತ್ತಡ ಹೇರಿದರು. ಆದರೆ, ತಮಿಳುನಾಡು ಅಧಿಕಾರಿಗಳ ಬೇಡಿಕೆಗೆ ಕರ್ನಾಟಕ ಅಧಿಕಾರಿಗಳು ಒಪ್ಪಲಿಲ್ಲ.

ಇದನ್ನೂ ಓದಿ: ಬೆಂಗಳೂರು ಉಪನಗರ ರೈಲ್ವೆ ಕಾರಿಡಾರ್​​ಗಳು 2028ಕ್ಕೆ ಪೂರ್ಣ; ಸಚಿವ ಎಂಬಿ ಪಾಟೀಲ್

ಕರ್ನಾಟಕದ ಅಧಿಕಾರಿಗಳು ಹೇಳಿದ್ದೇನು?

ಕರ್ನಾಟಕದಲ್ಲಿ ಈ ಬಾರಿ ವಾಡಿಕೆ ಮಳೆಯಾಗಿಲ್ಲ. ಅದರಲ್ಲೂ ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಕೊರೆತೆ ಇದೆ. ಈ ಕಾರಣದಿಂದಾಗಿ ಜಲಾಶಯಗಳು ಭರ್ತಿಯಾಗಿಲ್ಲ. ಜಲಾಶಯಗಳಲ್ಲಿ ನೀರು ಇಲ್ಲದಿರುವಾಗ ಎಲ್ಲಿಂದ ಬಿಡುವುದು? ಮುಂಗಾರು ಮಳೆ ಸರಿಯಾಗಿ ಆಗಿದ್ದರೆ ನೀರು ಬಿಡುತ್ತಿದ್ದೆವು. ಇದನ್ನು ಮಳೆ ಕೊರೆತೆಯ ವರ್ಷವೆಂದು ಪರಿಗಣಿಸಬೇಕು ಎಂದು ಕರ್ನಾಟಕದ ಅಧಿಕಾರಿಗಳು ಮನವಿ ಮಾಡಿದರು.

ಆಗಸ್ಟ್ 4 ರಂದು ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದು, ಕಾವೇರಿ ನೀರು ಬಿಡುಗಡೆ ವಿಚಾರದಲ್ಲಿ ಮಧ್ಯ ಪ್ರವೇಶಿಸುವಂತೆ ಮನವಿ ಮಾಡಿದ್ದರು. ಭತ್ತ ಬೆಳೆಗೆ ನೀರಿನ ತುರ್ತು ಅಗತ್ಯ ಇದೆ. ಕಾವೇರಿ ಡೆಲ್ಟಾದ ರೈತರ ಉಳಿವಿಗಾಗಿ ತಕ್ಷಣ ಗಮನಹರಿಸಬೇಕು ಎಂದು ಕೋರಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:36 pm, Fri, 11 August 23

ಹರೀಶ್ ಜಿ.ಆರ್​.

ಹರೀಶ್ ಜಿ.ಆರ್ ಮೂಲತಃ ಚಿಕ್ಕಮಗಳೂರಿನವರಾಗಿದ್ದು, ಪೌಢ ಶಿಕ್ಷಣವನ್ನು ಉಜಿರೆಯ ಎಸ್ ಡಿಎಂ ಸಂಸ್ಥೆಯಲ್ಲಿ ಹಾಗೂ ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ದಲ್ಲಿ ಬಿ.ಎ ಪದವಿಯನ್ನು, ಮಾನಸ ಗಂಗೋತ್ರಿಯ EMMRC ಸಂಸ್ಥೆಯ ಎಲೆಕ್ಟ್ರಾನಿಕ್ ಮೀಡಿಯಾ ವಿಷಯದಲ್ಲಿ ಎಂಎಸ್ಸಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಸಧ್ಯ ಪತ್ರಿಕೋದ್ಯಮದಲ್ಲಿ 14 ವರ್ಷದ ಅನುಭವ ಹೊಂದಿರುವ ಇವರು, ದೆಹಲಿಯಲ್ಲಿಯೇ 10 ವರ್ಷಗಳ ಪತ್ರಿಕೋದ್ಯಮದಲ್ಲಿ ಸೇವೆ ಸಲ್ಲಿಸಿದ್ದಾರೆ. ರಾಜ್ಯ, ರಾಜಕೀಯ, ರಾಷ್ಟ್ರೀಯ, ಅಂತರರಾಷ್ಟ್ರೀಯ, ಸುಪ್ರೀಂಕೋರ್ಟ್ ವರದಿಗಾರಿಕೆಯಲ್ಲಿ ಅಪಾರ ಅನುಭವ ಹೊಂದಿದ್ದಾರೆ. ಅಯೋಧ್ಯೆ ರಾಮಮಂದಿರದ ತೀರ್ಪು ನಿಂದ ಹಿಡಿದು ಮಂದಿರ ಉದ್ಘಾಟನೆವರೆಗೂ ವರದಿ ಮಾಡಿದ ಅನುಭವ ಹೊಂದಿದ್ದಾರೆ. ಪುಲ್ವಾಮ ಉಗ್ರರ ದಾಳಿ, ಪಹಲ್ಗಾಂ ಉಗ್ರರ ದಾಳಿ, ಆದಾದ ನಂತರದ ಆಪರೇಷನ್ ಸಿಂಧೂರ್ ಕಾರ್ಯಾಚರಣೆಗಳನ್ನು ಜಮ್ಮು ಮತ್ತು ಕಾಶ್ಮೀರದಲ್ಲಿ ಗ್ರೌಂಡ್ ರಿಪೋರ್ಟ್ ಮಾಡಿರುವ ಅನುಭವ ಹೊಂದಿದ್ದಾರೆ.. ಉತ್ತರಖಂಡದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪಗಳನ್ನು ಗ್ರೌಂಡ್ ರಿಪೋರ್ಟ್ ಮಾಡಿದ್ದಾರೆ. 2019‌ ಹಾಗೂ 2024ರ ಲೋಕಸಭಾ ಚುನಾವಣೆಯಲ್ಲಿ ವಿವಿಧ ರಾಜ್ಯಗಳನ್ನು ಸುತ್ತಿ ಜನರ ರಾಜಕೀಯ ನಾಡಿಮಿಡಿತದ ವರದಿ ಮಾಡಿದ್ದಾರೆ.. ಸಧ್ಯ ಇವರು ಬೆಂಗಳೂರಿನಲ್ಲಿ ರಾಜಕೀಯ ವರದಿಗಾರರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ.

Read More
Loading...
Unable to load recommendations.
Follow Us