AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೈತ್ರಾ ಕುಂದಾಪುರ ವಂಚನೆ ಪ್ರಕರಣ; ಆರೋಪಿಗಳಿಂದ ಶೇ 80ರಷ್ಟು ಹಣ ವಶಪಡಿಸಿಕೊಂಡ ಸಿಸಿಬಿ ಪೊಲೀಸರು

Chaithra Kundapur cheating case: ವಂಚನೆ ಪ್ರಕರಣದ ಎ3 ಆರೋಪಿ ಅಭಿನವ ಹಾಲಶ್ರೀ ಅವರಿಂದ 56 ಲಕ್ಷ ನಗದು ಹಾಗೂ 25 ಲಕ್ಷ ಮೌಲ್ಯದ ಕಾರನ್ನು ಗುರುವಾರ ಸಿಸಿಬಿ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಪೊಲೀಸರು ಇಲ್ಲಿಯವರೆಗೆ 4 ಕೋಟಿ ರೂ.ಗಳನ್ನು ವಶಪಡಿಸಿಕೊಂಡಿದ್ದಾರೆ ಮತ್ತು ಉಳಿದ ಹಣದ ಬಗ್ಗೆ ಆರೋಪಿಗಳನ್ನು ವಿಚಾರಣೆಗೆ ಒಳಪಡಿಸಿದ್ದಾರೆ.

ಚೈತ್ರಾ ಕುಂದಾಪುರ ವಂಚನೆ ಪ್ರಕರಣ; ಆರೋಪಿಗಳಿಂದ ಶೇ 80ರಷ್ಟು ಹಣ ವಶಪಡಿಸಿಕೊಂಡ ಸಿಸಿಬಿ ಪೊಲೀಸರು
ಚೈತ್ರಾ ಕುಂದಾಪುರ & ಅಭಿನವ ಹಾಲಶ್ರೀ
TV9 Web
| Edited By: |

Updated on: Sep 23, 2023 | 4:00 PM

Share

ಬೆಂಗಳೂರು, ಸೆಪ್ಟೆಂಬರ್ 23: ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಉದ್ಯಮಿಗೆ ವಂಚಿಸಿದ ಪ್ರಕರಣದಲ್ಲಿ ಶಾಮೀಲಾಗಿ ಬಂಧನಕ್ಕೊಳಗಾಗಿರುವ ಚೈತ್ರಾ ಕುಂದಾಪುರ (Chaithra Kundapura) ಹಾಗೂ ಇತರರಿಗೆ ಸಂದಾಯವಾಗಿದ್ದ 5 ಕೋಟಿ ರೂ.ಗಳಲ್ಲಿ ಶೇ 80ರಷ್ಟು ಹಣವನ್ನು ಕೇಂದ್ರ ಅಪರಾಧ ವಿಭಾಗದ (CCB Police) ಪೊಲೀಸರು ವಶಪಡಿಸಿಕೊಂಡಿದ್ದಾರೆ. 80 ಲಕ್ಷ ನಗದು, 23 ಲಕ್ಷ ಮೌಲ್ಯದ ಚಿನ್ನಾಭರಣ, ಬ್ಯಾಂಕ್‌ನಿಂದ 1.08 ಕೋಟಿ ಹಣ, ಚೈತ್ರಾ ಅವರ ಬಳಿಯಿದ್ದ 12 ಲಕ್ಷ ಮೌಲ್ಯದ ಕೆಐಎ ಕಾರನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಆರೋಪಿಗಳಾದ ಗಗನ್ ಕಡೂರ್ ಮತ್ತು ದನರಾಶ್ ರಮೇಶ್ ಅವರಿಂದ 26 ಲಕ್ಷ ರೂ. ವಶಪಡಿಸಿಕೊಂಡಿದ್ದಾರೆ.

ವಂಚನೆ ಪ್ರಕರಣದ ಎ3 ಆರೋಪಿ ಅಭಿನವ ಹಾಲಶ್ರೀ ಅವರಿಂದ 56 ಲಕ್ಷ ನಗದು ಹಾಗೂ 25 ಲಕ್ಷ ಮೌಲ್ಯದ ಕಾರನ್ನು ಗುರುವಾರ ಸಿಸಿಬಿ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಪೊಲೀಸರು ಇಲ್ಲಿಯವರೆಗೆ 4 ಕೋಟಿ ರೂ.ಗಳನ್ನು ವಶಪಡಿಸಿಕೊಂಡಿದ್ದಾರೆ ಮತ್ತು ಉಳಿದ ಹಣದ ಬಗ್ಗೆ ಆರೋಪಿಗಳನ್ನು ವಿಚಾರಣೆಗೆ ಒಳಪಡಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇದುವರೆಗೆ ಎಂಟು ಜನರನ್ನು ಬಂಧಿಸಿದ್ದು, ನಾಲ್ವರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಿದ್ದಾರೆ. ಚೈತ್ರಾ, ಗಗನ್, ರಮೇಶ್, ಚೆನ್ನಾನಾಯ್ಕ್, ಧನರಾಜ್ ಮತ್ತು ಶ್ರೀಕಾಂತ್ ಅವರ ಹೇಳಿಕೆಗಳನ್ನು ತನಿಖಾಧಿಕಾರಿಗಳು ದಾಖಲಿಸಿಕೊಂಡಿದ್ದಾರೆ. ಅಭಿನವ ಹಾಲಶ್ರೀ ಅವರನ್ನು ಇನ್ನೂ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಚೈತ್ರಾ ಕುಂದಾಪುರ ಅಂತಹ ಜನರು ಎಲ್ಲಾ ಪಕ್ಷದಲ್ಲೂ ಇರುತ್ತಾರೆ; ಚೈತ್ರಾ ವಿರುದ್ಧ ಪೊಲೀಸರು ಕ್ರಮ ತೆಗೆದುಕೊಳ್ಳಬೇಕು -ಅರವಿಂದ ಬೆಲ್ಲದ್

ಚೈತ್ರಾ ಮತ್ತು ಅವರ ಸಹಚರರಿಂದ ವಂಚನೆಯಾಗಿದೆ ಎಂದು ಆರೋಪಿಸಿ ಉದ್ಯಮಿ ಗೋವಿಂದ್ ಬಾಬು ಪೂಜಾರಿ ಅವರು ಪ್ರಕರಣ ದಾಖಲಿಸಿದ ನಂತರ ಬಿಜೆಪಿ ಶಾಸಕ ಟಿಕೆಟ್ ಹಗರಣ ಬೆಳಕಿಗೆ ಬಂದಿದೆ. ಉಡುಪಿ ಜಿಲ್ಲೆಯ ಬೈಂದೂರಿನಿಂದ ಬಿಜೆಪಿ ಟಿಕೆಟ್ ನೀಡುವ ಭರವಸೆ ನೀಡಿದ ನಂತರ ಚೈತ್ರಾ, ಅಭಿನವ ಹಾಲಶ್ರೀ ಮತ್ತು ಇತರರಿಗೆ ಹಣ ನೀಡಿದ್ದಾಗಿ ಪೂಜಾರಿ ದೂರು ನೀಡಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ