ಬೆಂಗಳೂರು: ಕರಾವಳಿ ಕರ್ನಾಟಕದಲ್ಲಿ (Coastal Karnataka) ಮಂಗಳವಾರ ಮತ್ತು ಶನಿವಾರದ ನಡುವೆ ಅತಿ ಹೆಚ್ಚು (115.6 ಮಿ.ಮೀ ನಿಂದ 204.4 ಮಿ.ಮೀ) ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ಹೇಳಿದೆ. ಈ ಪ್ರದೇಶದಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಸೂಚಿಸಿದೆ. ಜುಲೈ 3 ರಿಂದ ಜುಲೈ 7 ರವರೆಗೆ ಕರ್ನಾಟಕ ಕರಾವಳಿಯಲ್ಲಿ 40-45 ಕಿಲೋಮೀಟರ್ ಮತ್ತು 55 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ಒಂದು ರೀತಿಯಲ್ಲಿ ಚಂಡಮಾರುತದ ವಾತಾವರಣವಿದೆ ಎಂದು ಅದು ಹೇಳಿದೆ.
24 ಗಂಟೆಗಳ ಅವಧಿಯಲ್ಲಿ ಹೊನ್ನಾವರ ಮತ್ತು ಗೋಕರ್ಣದಲ್ಲಿ ತಲಾ 77.8 ಮಿ.ಮೀ ಮಳೆಯಾಗಿದೆ ಎಂದು ಇಲಾಖೆ ಸೋಮವಾರ ತಿಳಿಸಿದೆ. ಮಂಗಳೂರಿನಲ್ಲಿ 66 ಮಿಮೀ ಮಳೆಯಾಗಿದೆ.
ಇತ್ತೀಚಿನ ಮುನ್ಸೂಚನೆಯ ಪ್ರಕಾರ, ಶುಕ್ರವಾರದವರೆಗೆ ಬೆಂಗಳೂರು ಗ್ರಾಮಾಂತರ ಮತ್ತು ಬೆಂಗಳೂರು ನಗರ ಜಿಲ್ಲೆಗಳು ಮತ್ತು ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಸೇರಿದಂತೆ ದಕ್ಷಿಣ ಒಳನಾಡಿನ ಕರ್ನಾಟಕದ ಇತರ ಭಾಗಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ.
ಇದನ್ನೂ ಓದಿ: ಮಹಾರಾಷ್ಟ್ರದಲ್ಲಿ ಮಳೆ, ಕರ್ನಾಟಕಕ್ಕೆ ಮತ್ತೆ ನೀರು ಬಿಡುಗಡೆ: ಕೃಷ್ಣಾ ನದಿಗೆ ಹರಿದು ಬಂತು 4200 ಕ್ಯೂಸೆಕ್ ನೀರು
ಜುಲೈ 3 ಮತ್ತು ಜುಲೈ 7 ರಂದು ವಿವಿಧೆಡೆ ಗಂಟೆಗೆ 30-40 ಕಿಮೀ ವೇಗದಲ್ಲಿ ಗಾಳಿ ಬೀಸಬಹುದು ಎಂದು ಇಲಾಖೆ ತಿಳಿಸಿದೆ.
ಬಾಗಲಕೋಟೆ, ಯಾದಗಿರಿ, ಹಾವೇರಿ ಮತ್ತು ರಾಯಚೂರು ಸೇರಿದಂತೆ ಉತ್ತರ ಒಳನಾಡಿನಲ್ಲಿ ಬುಧವಾರದಿಂದ ಶುಕ್ರವಾರದವರೆಗೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ