ಲಾಕ್​ಡೌನ್​ ಸಮಯದಲ್ಲಿ ಜನರ ಸಹಾಯಕ್ಕೆ ನಿಂತ ಚನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸರು

ಚನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸರು ಕರ್ತವ್ಯ ಜೊತೆ ಹಸಿವು ನೀಗಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಕತ್ರಿಗುಪ್ಪೆ, ಬನಶಂಕರಿ, ಇಟ್ಟಮಡು ವ್ಯಾಪ್ತಿಯಲ್ಲಿ ಪ್ರತಿನಿತ್ಯ ಆಹಾರ ವಿತರಣೆ ಮಾಡುತ್ತಿದ್ದಾರೆ. ಸ್ವಂತ ಖರ್ಚಿನಲ್ಲಿ ಪ್ರತಿನಿತ್ಯ ಸಾವಿರ ಜನರಿಗೆ ಮಧ್ಯಾಹ್ನ ಮತ್ತು ರಾತ್ರಿ ಊಟ ವಿತರಣೆ ಮಾಡುತ್ತಿದ್ದಾರೆ.

ಲಾಕ್​ಡೌನ್​ ಸಮಯದಲ್ಲಿ ಜನರ ಸಹಾಯಕ್ಕೆ ನಿಂತ ಚನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸರು
ಜನರಿಗೆ ಊಟ ನೀಡುತ್ತಿರುವ ಚನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸರು
Follow us
sandhya thejappa
|

Updated on: May 22, 2021 | 12:12 PM

ಬೆಂಗಳೂರು: ಕೊರೊನಾ ನಿಯಂತ್ರಿಸಲು ಕಠಿಣ ನಿಯಮಗಳನ್ನು ಜಾರಿಗೊಳಿಸಿದ ಕಾರಣ ರಾಜ್ಯದ ಪೊಲೀಸರು ತಮ್ಮ ಕರ್ತವ್ಯವನ್ನು ಅಚ್ಚುಕಟ್ಟಾಗಿ ನಿರ್ವಹಿಸುತ್ತಿದ್ದಾರೆ. ಜೀವದ ಹಂಗು ತೊರೆದು ಕರ್ತವ್ಯದಲ್ಲಿ ನಿರತರಾಗಿದ್ದಾರೆ. ಲಾಕ್​ಡೌನ್​ ಜಾರಿಯಾದ ದಿನದಿಂದ ಪೊಲೀಸರು ತಮ್ಮ ಕೆಲಸದಲ್ಲಿ ಮಗ್ನರಾಗಿದ್ದಾರೆ. ಅನಗತ್ಯವಾಗಿ ಓಡಾಡುವ ಜನರಿಗೆ ಲಾಠಿ ಚಾರ್ಜ್ ಮಾಡುತ್ತಿದ್ದಾರೆ. ಈ ನಡುವೆ ಚನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸರು ಜನರಿಗೆ ಆಹಾರ ವಿತರಣೆ ಮಾಡುವ ಮೂಲಕ ಜನರ ಸಹಾಯಕ್ಕೆ ನಿಂತಿದ್ದಾರೆ.

ಚನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸರು ಕರ್ತವ್ಯ ಜೊತೆ ಹಸಿವು ನೀಗಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಕತ್ರಿಗುಪ್ಪೆ, ಬನಶಂಕರಿ, ಇಟ್ಟಮಡು ವ್ಯಾಪ್ತಿಯಲ್ಲಿ ಪ್ರತಿನಿತ್ಯ ಆಹಾರ ವಿತರಣೆ ಮಾಡುತ್ತಿದ್ದಾರೆ. ಸ್ವಂತ ಖರ್ಚಿನಲ್ಲಿ ಪ್ರತಿನಿತ್ಯ ಸಾವಿರ ಜನರಿಗೆ ಮಧ್ಯಾಹ್ನ ಮತ್ತು ರಾತ್ರಿ ಊಟ ವಿತರಣೆ ಮಾಡುತ್ತಿದ್ದಾರೆ. ಇನ್ಸ್​ಪೆಕ್ಟರ್​ ಜರ್ನಾಧನ್ ಹಾಗೂ ಸಬ್ ಇನ್ಸ್​ಪೆಕ್ಟರ್​ ಮನೋಜ್​ರಿಂದ ಈ ಮಾನವೀಯ ಕಾರ್ಯ ನಡೆಯುತ್ತಿದೆ.

ಠಾಣೆ ಆವರಣದಲ್ಲಿ ಊಟ ತಯಾರಿಸಿ ಪ್ರತಿನಿತ್ಯ ಸಾವಿರ ಪುಡ್ ಕಿಟ್ಗಳನ್ನು ವಿತರಣೆ ಮಾಡುವ ಮೂಲಕ ಬಡ ಜನರು, ನಿರ್ಗತಿಕರು, ಬೀದಿ ಬದಿ ವ್ಯಾಪಾರಿಗಳ ಹಸಿವನ್ನು ನೀಗಿಸುತ್ತಿದ್ದಾರೆ. ಪೊಲೀಸರ ಈ ಕಾರ್ಯಕ್ಕೆ ಹಿರಿಯ ಅಧಿಕಾರಿಗಳು ಹಾಗೂ ಹಸಿವು ನೀಗಿದವರಿಂದ ಮೆಚ್ಚುಗೆ ವ್ಯಕ್ತವಾಗಿದೆ.

ಅನಗತ್ಯವಾಗಿ ಓಡಾಡುತ್ತಿದ್ದ ವಾಹನಗಳ ಜಪ್ತಿ ಬೆಂಗಳೂರಿನಲ್ಲಿ ಅನಗತ್ಯವಾಗಿ ಓಡಾಡುತ್ತಿದ್ದ ವಾಹನಗಳನ್ನು ಪೊಲೀಸರು ಜಪ್ತಿ ಮಾಡುತ್ತಿದ್ದಾರೆ. ಕೆ.ಆರ್.ಮಾರ್ಕೆಟ್​ನಲ್ಲಿ 50ಕ್ಕೂ ಹೆಚ್ಚು ವಾಹನಗಳು, ಕೆ.ಆರ್.ಪುರಂ ಟಿನ್ ಫ್ಯಾಕ್ಟರಿ ಬಳಿ 15ಕ್ಕೂ ಹೆಚ್ಚು ವಾಹನಗಳು, ಏರ್ ಪೋರ್ಟ್ ರಸ್ತೆಯ ಹುಣಸಮಾರನಹಳ್ಳಿಯಲ್ಲಿ 10ಕ್ಕೂ ಹೆಚ್ಚು ವಾಹನಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಜೊತೆಗೆ ಮಾಸ್ಕ್ ಧರಿಸದೆ, ದೈಹಿಕ ಅಂತರ ಉಲ್ಲಂಘಿಸಿದವರಿಗೆ ದಂಡ ವಿಧಿಸಿದ್ದಾರೆ.

ಇಬ್ಬರು ಯುವತಿಯರು ವಶಕ್ಕೆ ಅನಗತ್ಯವಾಗಿ ರಸ್ತೆಗಳಿದ ಇಬ್ಬರು ಯುವತಿಯರನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಬೆಂಗಳೂರಿನ ಕಾರ್ಪೊರೇಷನ್ ಸರ್ಕಲ್​ನಲ್ಲಿ ಈ ಘಟನೆ ನಡೆದಿದೆ. ಬೈಕ್​ನಲ್ಲಿ ಬಂದಿದ್ದ ಯುವತಿಯರನ್ನು ತಡೆದು ಪ್ರಶ್ನಿಸಿದಾಗ ಯುವತಿಯರು ಸೂಕ್ತ ಕಾರಣ ತಿಳಿಸಿಲ್ಲ. ಹೀಗಾಗಿ ಯುವತಿಯರನ್ನು ವಶಕ್ಕೆ ಪಡೆದು ಹಲಸೂರು ಗೇಟ್ ಪೊಲೀಸ್ ಠಾಣೆಗೆ ಕರೆದೊಯ್ದಿದ್ದಾರೆ.

ಹೋಟೆಲ್ ಮಾಲೀಕ ವಶ ಬೆಳಿಗ್ಗೆ 10.30ರ ಬಳಿಕವೂ ಹೋಟೆಲ್ ತೆರೆದಿದ್ದ ಹಿನ್ನೆಲೆ ಹೋಟೆಲ್ ಮಾಲೀಕನನ್ನು ಚಿಕ್ಕಜಾಲ ಠಾಣೆ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಹೋಟೆಲ್ ಬಳಿ ಟೀ ಕುಡಿಯುತ್ತಿದ್ದ ವ್ಯಕ್ತಿಗೆ ಲಾಠಿ ಏಟು ನೀಡಿ, ಹೋಟೆಲ್ ಕ್ಲೋಸ್ ಮಾಡಿಸಿದ್ದಾರೆ.

ಇದನ್ನೂ ಓದಿ

ಪುರುಷರಲ್ಲಿ ಹಾಗೂ ಮಧುಮೇಹಿಗಳಲ್ಲಿ ಮ್ಯೂಕೋರ್ಮೈಕೋಸಿಸ್ ಸಾಧ್ಯತೆ ಹೆಚ್ಚು: ಅಧ್ಯಯನ

ಅನ್ನದಾತರಿಗೆ ಲಾಕ್​ಡೌನ್​ ಎಫೆಕ್ಟ್: ಜನರಿಗೆ ಉಚಿತವಾಗಿ ಟೊಮ್ಯಾಟೊ ನೀಡಿದ ರೈತ

chennammanakere police are providing free food to people at Bengaluru

ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM