ಚೆಕ್ ಬೌನ್ಸ್ ಪ್ರಕರಣ: ಮಾಜಿ ಬಿಜೆಪಿ ಶಾಸಕ ಸುನಿಲ್ ಹೆಗ್ಡೆಗೆ ಶಿಕ್ಷೆ ವಿಧಿಸಿದ ಕೋರ್ಟ್
ಚೆಕ್ ಬೌನ್ಸ್ ಪ್ರಕರಣದಲ್ಲಿ ರಾಜ್ಯದ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೆ ಜನಪ್ರತಿನಿಧಿಗಳ ನ್ಯಾಯಾಲಯ ಶಿಕ್ಷೆ ವಿಧಿಸಿತ್ತು. ಇದರ ಬೆನ್ನಲ್ಲೇ ಇದೀಗ ಮತ್ತೊಂದು ಚೆಕ್ ಬೌನ್ಸ್ ಪ್ರಕರಣದಲ್ಲಿ ಬಿಜೆಪಿ ಮಾಜಿ ಶಾಸಕರೊಬ್ಬರಿಗೂ ಸಹ ಶಿಕ್ಷೆಯಾಗಿದೆ. ಯಾವ ಪ್ರಕರಣ, ಏನು ಶಿಕ್ಷೆ ಎನ್ನುವ ವಿವರ ಇಲ್ಲಿದೆ
ಬೆಂಗಳೂರು, (ಜನವರಿ 17): ಚೆಕ್ ಬೌನ್ಸ್ ಪ್ರಕರಣದಲ್ಲಿ (cheque bounce cases) ಮಾಜಿ ಬಿಜೆಪಿ ಶಾಸಕ ಸುನಿಲ್ ಹೆಗ್ಡೆಗೆ (Sunil Hegde) ಜನಪ್ರತಿನಿಧಿಗಳ ವಿಶೇಷ ಕೋರ್ಟ್ (special court) ಶಿಕ್ಷೆ ವಿಧಿಸಿದೆ. 60 ಲಕ್ಷದ 10 ಸಾವಿರ ರೂಪಾಯಿ ದಂಡ ವಿಧಿಸಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶೆ ಜೆ.ಪ್ರೀತ್ ಅವರು ಆದೇಶ ಹೊರಡಿಸಿದ್ದಾರೆ. ಒಂದು ವೇಳೆ ದಂಡ ಪಾವತಿಸದಿದ್ದರೆ 1 ವರ್ಷ ಸೆರೆವಾಸ ಅನುಭವಿಸಲು ಆದೇಶಿಸಿದೆ.
ಇನ್ನು ದಂಡದ ಹಣದಲ್ಲಿ 60 ಲಕ್ಷ ರೂಪಾಯಿ ಹಣ ದೂರುದಾರರಿಗೆ ಪರಿಹಾರವಾಗಿ ನೀಡಲು ಕೋರ್ಟ್ ಸೂಚಿಸಿದ್ದು, ಇನ್ನುಳಿದ 10 ಸಾವಿರ ರೂಪಾಯಿ ಸರ್ಕಾರಕ್ಕೆ ದಂಡವಾಗಿ ನೀಡಲು ಹೇಳಿದೆ. ಇನ್ನು ದೂರುದಾರ ಸುಂದರೇಶ್ ಪರ ವಕೀಲ ಕೆ.ಎ.ಚಂದ್ರಶೇಖರ್ ವಾದಿಸಿದ್ದರು.
ಇದನ್ನೂ ಓದಿ: ಚೆಕ್ ಬೌನ್ಸ್ ಕೇಸ್: ಸಚಿವ ಮಧು ಬಂಗಾರಪ್ಪಗೆ ದಂಡ ವಿಧಿಸಿದ ಕೋರ್ಟ್, ಕಟ್ಟದಿದ್ದರೆ ಜೈಲು ಶಿಕ್ಷೆ
ಕಾಳಿ ಇಂಡೇನ್ ಗ್ಯಾಸ್ ಏಜೆನ್ಸಿ ನಡೆಸುತ್ತಿದ್ದ ಸುನಿಲ್ ಹೆಗ್ಡೆ, 40 ಲಕ್ಷ ರೂ. ಸಾಲ ಮರುಪಾವತಿಗೆ ನೀಡಿದ್ದ ಚೆಕ್ ಬೌನ್ಸ್ ಆಗಿತ್ತು. ಈ ಸಂಬಂಧ ಸುಂದರೇಶ್ ಎಂಬುವರು ಚೆಕ್ ಬೌನ್ಸ್ ಕೇಸ್ ದಾಖಲಿಸಿದ್ದರು.
ಶಿಕ್ಷಣ ಸಚಿವ ಮಧು ಬಂಗಾರಪ್ಪ (Madhu bangarappa) ಅವರ 2011ರ ಚೆಕ್‌ಬೌನ್ಸ್ ಪ್ರಕರಣಕ್ಕೆ ಸಬಂಧಿಸಿದಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು 6.96 ಕೋಟಿ ರೂ. ದಂಡವನ್ನು ವಿಧಿಸಿ ಆದೇಶಿಸಿತ್ತು. ಇನ್ನು ದಂಡ ಪಾವತಿ ಮಾಡದಿದ್ದರೆ 6 ತಿಂಗಳು ಜೈಲುವಾಸ ಅನುಭವಿಸುವಂತೆ ಆದೇಶ ಹೊರಡಿಸಿತ್ತು.
ಇನ್ನಷ್ಟುಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 9:18 pm, Wed, 17 January 24