Karnataka High Court: ಕರ್ನಾಟಕ ಹೈಕೋರ್ಟ್​ನ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾ. ಪ್ರಸನ್ನ ಬಿ.ವರಾಳೆ ನೇಮಕ

ಬಾಂಬೆ ಹೈಕೋರ್ಟ್ ನ್ಯಾಯಮೂರ್ತಿ ನ್ಯಾ. ಪ್ರಸನ್ನ ಬಿ.ವರಾಳೆ ಅವರನ್ನು ಕರ್ನಾಟಕದ ಹೈಕೋರ್ಟ್​ನ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕ ಮಾಡಲು ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿದೆ.

Karnataka High Court: ಕರ್ನಾಟಕ ಹೈಕೋರ್ಟ್​ನ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾ. ಪ್ರಸನ್ನ ಬಿ.ವರಾಳೆ ನೇಮಕ
Edited By:

Updated on: Oct 11, 2022 | 11:25 AM

ಬಾಂಬೆ ಹೈಕೋರ್ಟ್ ನ್ಯಾಯಮೂರ್ತಿ ನ್ಯಾ. ಪ್ರಸನ್ನ ಬಿ.ವರಾಳೆ ಅವರನ್ನು ಕರ್ನಾಟಕದ ಹೈಕೋರ್ಟ್​ನ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕ ಮಾಡಲು ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿದೆ.

ಕೊಲಿಜಿಯಂ ಸೆಪ್ಟೆಂಬರ್ 28 ರಂದು ನ್ಯಾಯಮೂರ್ತಿ ವರಾಳೆ ಅವರ ಉನ್ನತಿ ಶಿಫಾರಸು ಮಾಡಿತ್ತು.

1962 ಜೂನ್ 23ರಂದು ಜನಿಸಿದ ನ್ಯಾ. ವರಾಳೆ ಅವರು 1985ರ ಆಗಸ್ಟ್ 12 ರಂದು ವಕೀಲರಾಗಿ ದಾಖಲಾದರು, ಅವರು 1990ರಿಂದ 1992ರವರೆಗೆ ಔರಂಗಾಬಾದ್​ನ ಅಂಬೇಡ್ಕರ್ ಕಾನೂನು ಕಾಲೇಜಿನಲ್ಲಿ ಕಾನೂನು ಉಪನ್ಯಾಸಕರಾಗಿ ಮತ್ತು ಸಹಾಯ ಸರ್ಕಾರಿ ಮತ್ತು ಹೆಚ್ಚುವರಿ ಸರ್ಕಾರಿ ಅಭಿಯೋಜಕರಾಗಿ, ಹೈಕೋರ್ಟ್ ಪೀಠಿದಲ್ಲಿ ಸೇವೆ ಸಲ್ಲಿಸಿದ್ದಾರೆ. ಔರರಂಗಾಬಾದ್ ಮತ್ತು ಭಾರತದ ಒಕ್ಕೂಟಕ್ಕೆ ಹೆಚ್ಚುವರಿ ಸ್ಥಾಯಿ ಸಲಹೆಗಾರರಾಗಿ ಸೇವೆ ಸಲ್ಲಿಸಿದ್ದಾರೆ.