ಅಮುಲ್ ಜತೆ ನಂದಿನಿ ವಿಲೀನ ಎನ್ನುವ ಅಮಿತ್ ಶಾ ಹೇಳಿಕೆ ಸುದ್ದಿಗೆ ಸ್ಪಷ್ಟನೆ ನೀಡಿದ ಸಿಎಂ ಬೊಮ್ಮಾಯಿ

ಗುಜರಾತ್‌ನ ಅಮುಲ್ ಜತೆ ಕರ್ನಾಟಕದ ನಂದಿನಿಯನ್ನು ವಿಲೀನ ಮಾಡುವುದಿಲ್ಲ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟನೆ ನೀಡಿದರು.

ಅಮುಲ್ ಜತೆ ನಂದಿನಿ ವಿಲೀನ ಎನ್ನುವ ಅಮಿತ್ ಶಾ ಹೇಳಿಕೆ ಸುದ್ದಿಗೆ ಸ್ಪಷ್ಟನೆ ನೀಡಿದ ಸಿಎಂ ಬೊಮ್ಮಾಯಿ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
Follow us
| Updated By: ವಿವೇಕ ಬಿರಾದಾರ

Updated on: Jan 01, 2023 | 5:30 PM

ಬೆಂಗಳೂರು: ಗುಜರಾತ್‌ನ ಅಮುಲ್ (Amul) ಜತೆ ಕರ್ನಾಟಕದ ನಂದಿನಿ (Nandini)ಯನ್ನು ಒಂದುಗೂಡಿಸಲು ಮುಂದಿನ ದಿನಗಳಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂಬ ಕೇಂದ್ರ ಸಚಿವ ಅಮಿತ್ ಶಾ (Amit Shah) ಹೇಳಿಕೆ ಸುದ್ದಿಗೆ ಸಾಕಷ್ಟು ವಿರೋಧ ಪಕ್ಷದ ನಾಯಕರು ಸಾಕಷ್ಟು ಟೀಕೆ ಮಾಡುತ್ತಿದ್ದಾರೆ. ಈ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಮಾತನಾಡಿ ನಂದಿನಿ ಮತ್ತು ಅಮುಲ್ ವಿಲೀನ ಮಾಡುವುದಿಲ್ಲ. ಅಮಿತ್​ ಶಾ ಪರಸ್ಪರ ಸಹಕರಿಸಿಕೊಂಡು ತಾಂತ್ರಿಕವಾಗಿ ಸಹಾಯ ಮಾಡಬೇಕು ಎಂದು ಸ್ಪಷ್ಟವಾಗಿ ಹೇಳಿದ್ದಾರೆ ಎಂದು ಬೆಂಗಳೂರಲ್ಲಿ ಸಿಎಂ ಬೊಮ್ಮಾಯಿ ತಿಳಿಸಿದರು.

ಬೆಂಗಳೂರಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ ಅದನ್ನೇ ತಪ್ಪು ಕಲ್ಪನೆ, ಊಹಿಸಿಕೊಂಡು ಟೀಕೆ ಮಾಡುತ್ತಿದ್ದಾರೆ. ಅಂಥವರಿಗೆ ಏನ್ ಹೇಳಬೇಕು. ಎರಡೂ ದೊಡ್ಡ ಸಂಸ್ಥೆಗಳು ಸೇರಿಕೊಂಡು ಕೆಲಸ ಮಾಡಬೇಕು. ಇನ್ನೂ 100 ವರ್ಷ ನಂದಿನಿ ಶಾಶ್ವತವಾಗಿ ಇದ್ದೇ ಇರುತ್ತದೆ. ಕೆಲವು ಏರಿಯಾದಲ್ಲಿ ಒಟ್ಟಾಗಿ ಕೆಲಸ ಮಾಡಿದರೆ ನಮಗೆ ಲಾಭ ಇದೆ. ತಪ್ಪು ಅರ್ಥ ಕಲ್ಪಿಸುವುದು ಬೇಡ ಎಂದು ಸ್ಪಷ್ಟನೆ ನೀಡಿದರು.

ಇದನ್ನೂ ಓದಿ: ಮೈಸೂರು-ಬೆಂಗಳೂರು ಹೆದ್ದಾರಿಗೆ ಒಡೆಯರ್ ಹೆಸರಿಡುವಂತೆ ಕೇಂದ್ರ ಸಚಿವರಿಗೆ ಪತ್ರ ಬರೆದ ಮಾಜಿ ಸಿಎಂ ಎಸ್.ಎಂ.ಕೃಷ್ಣ

ಅಮಿತ್​ ಶಾ ವಿರುದ್ಧ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ವಾಗ್ದಾಳಿ

ನೆಲ, ಜಲ, ನುಡಿಯ ಬಗ್ಗೆ ಕನ್ನಡ ಮತ್ತು ಕರ್ನಾಟಕದ ಮೇಲೆ ಸದಾ ಪ್ರಹಾರ ನಡೆಸುತ್ತಿರುವ ಬಿಜೆಪಿ ಕನ್ನಡಿಗರ ವಿರುದ್ಧ ತನ್ನ ರಕ್ಕಸ ನೀತಿಗಳನ್ನು ಮುಂದುವರಿಸಿದೆ. ಈಗ ಕರ್ನಾಟಕದ ಹಾಲಿನಲ್ಲೂ ಗುಜರಾತಿನ ಹುಳಿ ಹಿಂಡಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೊರಟಿದ್ದಾರೆ ಎಂದು ವಾಗ್ದಾಳಿ ಮಾಡಿದ್ದಾರೆ.

ಕರ್ನಾಟಕ ರಾಜ್ಯವನ್ನು ಗುಜರಾತ್ ಮಾಡುವ ಧೂರ್ತ ಹುನ್ನಾರ

ಕನ್ನಡದ ಮೇಲೆ ಹಿಂದಿ ಹೇರಿಕೆ ಮಾಡಲು ಹೊರಟ ವ್ಯಕ್ತಿ, ಗಡಿ ವಿಚಾರದಲ್ಲಿ ಮಹಾರಾಷ್ಟ್ರದ ಕಿವಿ ಹಿಂಡದ ವ್ಯಕ್ತಿ ಈಗ ಕನ್ನಡ ನೆಲದ ಮಣ್ಣಿನ ಮಕ್ಕಳ ಜೀವನಾಡಿ ಕರ್ನಾಟಕ ಹಾಲು ಮಹಾ ಮಂಡಳಿ (KMF- ನಂದಿನಿ) ಯನ್ನು ಗುಜರಾತಿನ ಅಮುಲ್​ನಲ್ಲಿ ವಿಲೀನ ಮಾಡುವ ಹೇಳಿಕೆ ನೀಡಿರುವುದು ಕನ್ನಡಿಗರಿಗೆ ಮಾಡಲು ಹೊರಟಿರುವ ಘೋರ ಅನ್ಯಾಯ. ಕರ್ನಾಟಕ ರಾಜ್ಯವನ್ನು ಗುಜರಾತ್ ಮಾಡುವ ಧೂರ್ತ ಹುನ್ನಾರ ಇದು. ಅಷ್ಟೇ ಅಲ್ಲ, ಗುಜರತ್​ಗೆ ಕರ್ನಾಟಕವೇ ಪ್ರತಿಸ್ಪರ್ಧಿ ಎನ್ನುವ ಕಾರಣಕ್ಕೆ ಅಭಿವೃದ್ಧಿಯಲ್ಲಿ ಕರ್ನಾಟಕವನ್ನು ಮುಗಿಸೇಬೀಡಬೇಕು ಎನ್ನುವ ದುರಾಲೋಚನೆ ಅಮಿತ್ ಶಾ ಅವರಿಗೆ ಸ್ಪಷ್ಟವಾಗಿ ಇದ್ದಂತಿದೆ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.