AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿಕ್ಷಣ ಮತ್ತು ಆರೋಗ್ಯ ಇಲಾಖೆಗೆ ಸಂಬಂಧಿಸಿದ ವರ್ಗಾವಣೆಗೆ ತಡೆ ನೀಡಿದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ

ಶಿಕ್ಷಣ ಇಲಾಖೆ ಮತ್ತು ಆರೋಗ್ಯ ಇಲಾಖೆಗೆ ಸಂಬಂಧಿಸಿದ ಯಾವುದೇ ವರ್ಗಾವಣೆಯನ್ನು ಮಾಡದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಲಾಖೆಗಳ ಪ್ರಧಾನ ಕಾರ್ಯದರ್ಶಿಗೆ ಸೂಚಿಸಿದ್ದಾರೆ.

ಶಿಕ್ಷಣ ಮತ್ತು ಆರೋಗ್ಯ ಇಲಾಖೆಗೆ ಸಂಬಂಧಿಸಿದ ವರ್ಗಾವಣೆಗೆ ತಡೆ ನೀಡಿದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ
ಶಿಕ್ಷಣ ಮತ್ತು ಆರೋಗ್ಯ ಇಲಾಖೆಗೆ ಸಂಬಂಧಿಸಿದ ವರ್ಗಾವಣೆ ತಡೆ ನೀಡಿದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ
TV9 Web
| Edited By: Rakesh Nayak Manchi|

Updated on:Dec 02, 2022 | 2:30 PM

Share

ಬೆಂಗಳೂರು: ಶಿಕ್ಷಣ ಇಲಾಖೆ ಮತ್ತು ಆರೋಗ್ಯ ಇಲಾಖೆಗೆ ಸಂಬಂಧಿಸಿದ ಯಾವುದೇ ವರ್ಗಾವಣೆಯನ್ನು ಮಾಡದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM Basavaraj Bommai) ಅವರು ಇಲಾಖೆಗಳ ಪ್ರಧಾನ ಕಾರ್ಯದರ್ಶಿಗೆ ಸೂಚಿಸಿದ್ದಾರೆ. ಶಿಕ್ಷಣ ಇಲಾಖೆ ಮತ್ತು ಸಾಕ್ಷರತಾ ಇಲಾಖೆಗೆ (Education Department and Literacy Department) ಸಂಬಂಧಿಸಿದ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ (Department of Health and Family Welfare) ಸಂಬಂಧಿಸಿದ ಯಾವುದೇ ವರ್ಗಾವಣೆ ಪ್ರಸ್ತಾವನೆಗಳನ್ನು ಮುಂದಿನ ಸೂಚನೆಯವರೆಗೆ ಮುಖ್ಯಮಂತ್ರಿಯವರ ಸಚಿವಾಲಯಕ್ಕೆ ಮಂಡಿಸದಂತೆ ಎರಡೂ ಇಲಾಖೆಗಳ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳಿಗೆ ಮುಖ್ಯಮಂತ್ರಿಯವರು ಆದೇಶಿಸಿದ್ದಾರೆ.

ಮುಖ್ಯಮಂತ್ರಿಗಳ ಈ ನಿರ್ಧಾರಕ್ಕೆ ಕಾರಣ ಏನಿರಬಹುದು ಎಂದು ಹಲವು ರೀತಿಯಲ್ಲಿ ವಿಶ್ಲೇಷಿಸಲಾಗುತ್ತಿದೆ. ಹೆಚ್ಚಿನ ಸಂಖ್ಯೆಯ ನೌಕರರಿರುವ ಈ ಎರಡೂ ಇಲಾಖೆಗಳು ಜನರೊಂದಿಗೆ ನೇರ ಸಂಪರ್ಕ ಹೊಂದಿದೆ. ಏಕಾಏಕಿ ಭಾರೀ ಸಂಖ್ಯೆಯಲ್ಲಿ ವರ್ಗಾವಣೆಯಾದರೆ ಕೆಲಸಕ್ಕೆ ಸಮಸ್ಯೆಯಾಗಬಹುದು ಎಂಬ ಕಾರಣಕ್ಕೆ ಮುಖ್ಯಮಂತ್ರಿ ಈ ನಿರ್ಧಾರ ತೆಗೆದುಕೊಂಡಿರಬಹುದು ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: Breaking News: ವಕ್ಫ್​ ಬೋರ್ಡ್​ನ 10 ಮಹಿಳಾ ಕಾಲೇಜು ಆರಂಭ ಪ್ರಸ್ತಾವಕ್ಕೆ ಸಿಎಂ ಬೊಮ್ಮಾಯಿ ತಿರಸ್ಕಾರ

ಈ ವರ್ಗಾವಣೆಯ ಪೂರ್ವಪರ ವಿಶ್ಲೇಷಿಸಲು ಸಿಎಂ ಮುಂದಾಗಿದ್ದಾರೆ ಎನ್ನಲಾಗುತ್ತಿದೆ. ಒಂದು ವೇಳೆ ದಂದೆ ಇದ್ದರೆ ಅದನ್ನು ಪತ್ತೆಹಚ್ಚಲಾಗುವುದು. ಇಲ್ಲದಿದ್ದರೆ ವರ್ಗಾವಣೆ ಪ್ರಕ್ರಿಯೆ ಮತ್ತೆ ಆರಂಭವಾಗಲಿದೆ ಎಂದು ಮೂಲಗಳು ಹೇಳಿವೆ. ಆರೋಗ್ಯ ಸಚಿವ ಸುಧಾಕರ ಅವರು ಸಿಎಂ ಬೊಮ್ಮಾಯಿ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದಾರೆ. ಹೀಗಿದ್ದರೂ ಅವರ ಇಲಾಖೆಯ ವರ್ಗಾವಣೆಗೆ ತಡೆ ನೀಡಿರುವುದು ಹಾಕಿರುವುದು ಕುತೂಹಲಕ್ಕೆ ಎಡೆ ಮಾಡಿಕೊಟ್ಟಿದೆ.

ರಾಜ್ಯ ಚುನಾವಣಾ ಆಯೋಗ ಸಿದ್ಧತೆ ಹಿನ್ನೆಲೆ ವರ್ಗಾವಣೆಗೆ ತಡೆ

ವಿಧಾನಸಭೆ ಚುನಾವಣೆಗೆ ರಾಜ್ಯ ಚುನಾವಣಾ ಆಯೋಗ ಸಿದ್ಧತೆ ಹಿನ್ನೆಲೆ ವಿಧಾನಸಭೆ ಚುನಾವಣಾ ಕರ್ತವ್ಯಕ್ಕೆ ಅಧಿಕಾರಿಗಳನ್ನು ನಿಯೋಜಿಸಲಾಗುತ್ತಿದೆ. ಹೀಗಾಗಿ ನೌಕರರನ್ನು ವರ್ಗಾವಣೆ ಮಾಡದಂತೆ ಸರ್ಕಾರಕ್ಕೆ ಚುನಾವಣಾ ಆಯೋಗದಿಂದ ಮನವಿ ಮಾಡಲಾಗಿದೆ. ಈ ನಿಟ್ಟಿನಲ್ಲಿ ಮುಖ್ಯಮಂತ್ರಿಯವರು ಆರೋಗ್ಯ ಮತ್ತು ಶಿಕ್ಷಣ ಇಲಾಖೆಯ ವರ್ಗಾವಣೆಗೆ ತಡೆ ನೀಡಿದ್ದಾರೆ. ಇನ್ನು ಕೆಲವು ಇಲಾಖೆಗಳಿಗೂ ಸಿಎಂ ಬೊಮ್ಮಾಯಿ ಸೂಚನೆ ನೀಡಿದ್ದಾರೆ. ಕೆಲ ಇಲಾಖೆಗಳ ವರ್ಗಾವಣೆ ಪ್ರಕ್ರಿಯೆಗೆ ತಡೆ ನೀಡಿದ್ದಾರೆ.

ಮತ್ತಷ್ಟು ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:56 am, Fri, 2 December 22

Follow Us
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್