ಬೆಂಗಳೂರು: ಶಿಕ್ಷಣ ಇಲಾಖೆ ಮತ್ತು ಆರೋಗ್ಯ ಇಲಾಖೆಗೆ ಸಂಬಂಧಿಸಿದ ಯಾವುದೇ ವರ್ಗಾವಣೆಯನ್ನು ಮಾಡದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM Basavaraj Bommai) ಅವರು ಇಲಾಖೆಗಳ ಪ್ರಧಾನ ಕಾರ್ಯದರ್ಶಿಗೆ ಸೂಚಿಸಿದ್ದಾರೆ. ಶಿಕ್ಷಣ ಇಲಾಖೆ ಮತ್ತು ಸಾಕ್ಷರತಾ ಇಲಾಖೆಗೆ (Education Department and Literacy Department) ಸಂಬಂಧಿಸಿದ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ (Department of Health and Family Welfare) ಸಂಬಂಧಿಸಿದ ಯಾವುದೇ ವರ್ಗಾವಣೆ ಪ್ರಸ್ತಾವನೆಗಳನ್ನು ಮುಂದಿನ ಸೂಚನೆಯವರೆಗೆ ಮುಖ್ಯಮಂತ್ರಿಯವರ ಸಚಿವಾಲಯಕ್ಕೆ ಮಂಡಿಸದಂತೆ ಎರಡೂ ಇಲಾಖೆಗಳ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳಿಗೆ ಮುಖ್ಯಮಂತ್ರಿಯವರು ಆದೇಶಿಸಿದ್ದಾರೆ.
ಮುಖ್ಯಮಂತ್ರಿಗಳ ಈ ನಿರ್ಧಾರಕ್ಕೆ ಕಾರಣ ಏನಿರಬಹುದು ಎಂದು ಹಲವು ರೀತಿಯಲ್ಲಿ ವಿಶ್ಲೇಷಿಸಲಾಗುತ್ತಿದೆ. ಹೆಚ್ಚಿನ ಸಂಖ್ಯೆಯ ನೌಕರರಿರುವ ಈ ಎರಡೂ ಇಲಾಖೆಗಳು ಜನರೊಂದಿಗೆ ನೇರ ಸಂಪರ್ಕ ಹೊಂದಿದೆ. ಏಕಾಏಕಿ ಭಾರೀ ಸಂಖ್ಯೆಯಲ್ಲಿ ವರ್ಗಾವಣೆಯಾದರೆ ಕೆಲಸಕ್ಕೆ ಸಮಸ್ಯೆಯಾಗಬಹುದು ಎಂಬ ಕಾರಣಕ್ಕೆ ಮುಖ್ಯಮಂತ್ರಿ ಈ ನಿರ್ಧಾರ ತೆಗೆದುಕೊಂಡಿರಬಹುದು ಎಂದು ಹೇಳಲಾಗುತ್ತಿದೆ.
ಇದನ್ನೂ ಓದಿ: Breaking News: ವಕ್ಫ್ ಬೋರ್ಡ್ನ 10 ಮಹಿಳಾ ಕಾಲೇಜು ಆರಂಭ ಪ್ರಸ್ತಾವಕ್ಕೆ ಸಿಎಂ ಬೊಮ್ಮಾಯಿ ತಿರಸ್ಕಾರ
ಈ ವರ್ಗಾವಣೆಯ ಪೂರ್ವಪರ ವಿಶ್ಲೇಷಿಸಲು ಸಿಎಂ ಮುಂದಾಗಿದ್ದಾರೆ ಎನ್ನಲಾಗುತ್ತಿದೆ. ಒಂದು ವೇಳೆ ದಂದೆ ಇದ್ದರೆ ಅದನ್ನು ಪತ್ತೆಹಚ್ಚಲಾಗುವುದು. ಇಲ್ಲದಿದ್ದರೆ ವರ್ಗಾವಣೆ ಪ್ರಕ್ರಿಯೆ ಮತ್ತೆ ಆರಂಭವಾಗಲಿದೆ ಎಂದು ಮೂಲಗಳು ಹೇಳಿವೆ. ಆರೋಗ್ಯ ಸಚಿವ ಸುಧಾಕರ ಅವರು ಸಿಎಂ ಬೊಮ್ಮಾಯಿ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದಾರೆ. ಹೀಗಿದ್ದರೂ ಅವರ ಇಲಾಖೆಯ ವರ್ಗಾವಣೆಗೆ ತಡೆ ನೀಡಿರುವುದು ಹಾಕಿರುವುದು ಕುತೂಹಲಕ್ಕೆ ಎಡೆ ಮಾಡಿಕೊಟ್ಟಿದೆ.
ರಾಜ್ಯ ಚುನಾವಣಾ ಆಯೋಗ ಸಿದ್ಧತೆ ಹಿನ್ನೆಲೆ ವರ್ಗಾವಣೆಗೆ ತಡೆ
ವಿಧಾನಸಭೆ ಚುನಾವಣೆಗೆ ರಾಜ್ಯ ಚುನಾವಣಾ ಆಯೋಗ ಸಿದ್ಧತೆ ಹಿನ್ನೆಲೆ ವಿಧಾನಸಭೆ ಚುನಾವಣಾ ಕರ್ತವ್ಯಕ್ಕೆ ಅಧಿಕಾರಿಗಳನ್ನು ನಿಯೋಜಿಸಲಾಗುತ್ತಿದೆ. ಹೀಗಾಗಿ ನೌಕರರನ್ನು ವರ್ಗಾವಣೆ ಮಾಡದಂತೆ ಸರ್ಕಾರಕ್ಕೆ ಚುನಾವಣಾ ಆಯೋಗದಿಂದ ಮನವಿ ಮಾಡಲಾಗಿದೆ. ಈ ನಿಟ್ಟಿನಲ್ಲಿ ಮುಖ್ಯಮಂತ್ರಿಯವರು ಆರೋಗ್ಯ ಮತ್ತು ಶಿಕ್ಷಣ ಇಲಾಖೆಯ ವರ್ಗಾವಣೆಗೆ ತಡೆ ನೀಡಿದ್ದಾರೆ. ಇನ್ನು ಕೆಲವು ಇಲಾಖೆಗಳಿಗೂ ಸಿಎಂ ಬೊಮ್ಮಾಯಿ ಸೂಚನೆ ನೀಡಿದ್ದಾರೆ. ಕೆಲ ಇಲಾಖೆಗಳ ವರ್ಗಾವಣೆ ಪ್ರಕ್ರಿಯೆಗೆ ತಡೆ ನೀಡಿದ್ದಾರೆ.
ಮತ್ತಷ್ಟು ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 11:56 am, Fri, 2 December 22