ನೈಟ್ ಕರ್ಫ್ಯೂ ಅಗತ್ಯವಿಲ್ಲ-CM ಯಡಿಯೂರಪ್ಪ ಸ್ಪಷ್ಟನೆ; Night Curfew ಜಾರಿಗೆ ಸರ್ಕಾರ ಚಿಂತನೆ- ಆರೋಗ್ಯ ಸಚಿವ ಸುಧಾಕರ್
ಈ ವರ್ಷ ಹೊಸ ವರ್ಷ ಆಚರಣೆಯೇ ಇಲ್ಲ. ದೊಡ್ಡ ಪ್ರಮಾಣದಲ್ಲಿ ಹೊಸ ವರ್ಷಾಚರಣೆ ಮಾಡಲು ಬಿಡಲ್ಲ. ಜೊತೆಗೆ, ನಮ್ಮ ರಾಜ್ಯದಲ್ಲಿ ಸದ್ಯಕ್ಕೆ ನೈಟ್ ಕರ್ಫ್ಯೂ ಅಗತ್ಯವಿಲ್ಲ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದರು.

ಬೆಂಗಳೂರು: ಕೊರೊನಾ ರೂಪಾಂತರ ಜನರನ್ನ ಆತಂಕಕ್ಕೀಡು ಮಾಡಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಚೆನ್ನೈ ಮತ್ತು ದೆಹಲಿಗೆ ಬಂದಿರುವ ಪ್ರಯಾಣಿಕರ ಪೈಕಿ ಕೆಲವರಲ್ಲಿ ಹೊಸ ಪ್ರಭೇದದ ಸೋಂಕು ಪತ್ತೆಯಾಗಿದೆ. ಈ ಸಮಯದಲ್ಲಿ ಎಷ್ಟೇ ಕಟ್ಟೆಚ್ಚರ ವಹಿಸಿದರೂ ಕಡಿಮೆಯೇ ಎಂದೂ ಸಹ ಅವರು ಹೇಳಿದರು.
ವಿಮಾನ ನಿಲ್ದಾಣಗಳಲ್ಲಿ ಕಟ್ಟುನಿಟ್ಟಾಗಿ ತಪಾಸಣೆ ಮಾಡಬೇಕು. ದೇಶಾದ್ಯಂತ ಹೊಸ ಪ್ರಭೇದದ ಬಗ್ಗೆ ಅಲರ್ಟ್ ಇದೆ. ಪ್ರಧಾನಿ ಮೋದಿ ಸಹ ಎಚ್ಚರಿಕೆಯಿಂದ ಇರಲು ತಿಳಿಸಿದ್ದಾರೆ. ಹೊಸ ಪ್ರಭೇದದ ಸೋಂಕು ಹರಡದಂತೆ ಎಚ್ಚರವಹಿಸ್ತೇವೆ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದರು.
ಈ ವರ್ಷ ಹೊಸ ವರ್ಷ ಆಚರಣೆಯೇ ಇಲ್ಲ. ದೊಡ್ಡ ಪ್ರಮಾಣದಲ್ಲಿ ಹೊಸ ವರ್ಷಾಚರಣೆ ಮಾಡಲು ಬಿಡಲ್ಲ. ಜೊತೆಗೆ, ನಮ್ಮ ರಾಜ್ಯದಲ್ಲಿ ಸದ್ಯಕ್ಕೆ ನೈಟ್ ಕರ್ಫ್ಯೂ ಅಗತ್ಯವಿಲ್ಲ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದರು.
‘ರಾಜ್ಯದಲ್ಲಿ ನೈಟ್ ಕರ್ಫ್ಯೂ ಜಾರಿಗೆ ಸರ್ಕಾರ ಚಿಂತನೆ’ ಕೊರೊನಾ ಹೊಸ ಪ್ರಭೇದ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ನೈಟ್ ಕರ್ಫ್ಯೂ ಜಾರಿಗೆ ಸರ್ಕಾರ ಚಿಂತನೆ ನಡೆಸಲಾಗುತ್ತಿದೆ ಎಂದು ಆರೋಗ್ಯ ಸಚಿವ ಸುಧಾಕರ್ ಹೇಳಿದರು. ನಮ್ಮ ಸರ್ಕಾರಕ್ಕೆ ಜನರ ಆರೋಗ್ಯವೇ ಮುಖ್ಯ. ಅವರ ರಕ್ಷಣೆಗಾಗಿ ನೈಟ್ ಕರ್ಫ್ಯೂ ಜಾರಿಗೆ ತರುವ ಬಗ್ಗೆ ಸಿಎಂ ಜೊತೆ ಚರ್ಚೆ ಮಾಡಿ ತೀರ್ಮಾನ ಮಾಡ್ತೀವಿ. ಕೇಂದ್ರ ಆರೋಗ್ಯ ಸಚಿವಾಲಯ ನೈಟ್ ಕರ್ಫ್ಯೂ ವಿಧಿಸುವ ಅಧಿಕಾರ ರಾಜ್ಯಗಳಿಗೆ ನೀಡಿದೆ. ಈ ಬಗ್ಗೆ ಸಿಎಂ ಜೊತೆ ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳುತ್ತೇವೆ ಎಂದು ಆರೋಗ್ಯ ಸಚಿವ ಸುಧಾಕರ್ ಹೇಳಿದರು.
ರಾಜ್ಯದಲ್ಲಿ ಸದ್ಯಕ್ಕೆ ಲಾಕ್‌ಡೌನ್ ಬಗ್ಗೆ ಚಿಂತನೆ ಇಲ್ಲ. ವಿದೇಶದಿಂದ ಬಂದ 138 ಜನರನ್ನು ಪತ್ತೆ ಹಚ್ಚಲಾಗಿದೆ. ಅವರನ್ನು ಕ್ವಾರಂಟೈನ್ ಮಾಡಲಾಗಿದೆ ಎಂದು ಡಾ.ಸುಧಾಕರ್ ಹೇಳಿದರು. ಈಗಾಗಲೇ RT-PCR ಟೆಸ್ಟ್ ಮಾಡಿಸಲಾಗಿದೆ. ಪಾಸಿಟಿವ್ ಬಂದರೆ ವೈರಸ್ ಬಗ್ಗೆ ತಿಳಿಯಲು ಸೂಚನೆ ಕೊಟ್ಟಿದ್ದೇವೆ ಎಂದು ಆರೋಗ್ಯ ಸಚಿವ ಸುಧಾಕರ್ ಹೇಳಿದರು.
ಭಾರತಕ್ಕೆ ಬಂತಾ ಬಣ್ಣ ಬದಲಿಸಿದ ಹೆಮ್ಮಾರಿ? ಬ್ರಿಟನ್‌ನಿಂದ ಚೆನ್ನೈ, ದೆಹಲಿಗೆ ಮರಳಿದವರಿಗೆ ಕೊರೊನಾ!
ವೇಗವಾಗಿ ಹರಡುವ ಹೊಸ ಪ್ರಭೇದದ ಕೊರೊನಾ ವೈರಾಣು ಪತ್ತೆ: ಎಚ್ಚರಿಕೆ ವಹಿಸಲು ಜನರಿಗೆ ಸುಧಾಕರ್ ಮನವಿ
Published On - 11:35 am, Tue, 22 December 20



