ಬೆಂಗಳೂರಿನ ಕೋರಮಂಗಲ ಕಣಿವೆಯನ್ನು ಜಲಮಾರ್ಗವಾಗಿ ಅಭಿವೃದ್ಧಿ ಪಡಿಸುವ ಯೋಜನೆಗೆ ಬಿ.ಎಸ್​.ಯಡಿಯೂರಪ್ಪ ಶಂಕು ಸ್ಥಾಪನೆ

|

Updated on: Mar 25, 2021 | 1:50 PM

ನಗರದ ಕೆ.ಆರ್. ಮಾರುಕಟ್ಟೆಯಿಂದ ಬೆಳ್ಳಂದೂರು ಕೆರೆಗೆ ಹರಿಯುವ ಕೋರಮಂಗಲ ಕಣಿವೆಯನ್ನು ಜಲಮಾರ್ಗವಾಗಿ ಅಭಿವೃದ್ಧಿ ಪಡಿಸುವ ಯೋಜನೆ ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ಶಂಕು ಸ್ಥಾಪನೆ ನೆರವೇರಿಸಿದ್ದಾರೆ.

ಬೆಂಗಳೂರಿನ ಕೋರಮಂಗಲ ಕಣಿವೆಯನ್ನು ಜಲಮಾರ್ಗವಾಗಿ ಅಭಿವೃದ್ಧಿ ಪಡಿಸುವ ಯೋಜನೆಗೆ ಬಿ.ಎಸ್​.ಯಡಿಯೂರಪ್ಪ ಶಂಕು ಸ್ಥಾಪನೆ
ಶಂಕು ಸ್ಥಾಪನೆ ನೆರವೇರಿಸಿದ ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ
Follow us on

ಬೆಂಗಳೂರು: ನಗರದ ಕೆ.ಆರ್. ಮಾರುಕಟ್ಟೆಯಿಂದ ಬೆಳ್ಳಂದೂರು ಕೆರೆಗೆ ಹರಿಯುವ ಕೋರಮಂಗಲ ಕಣಿವೆಯನ್ನು ಜಲಮಾರ್ಗವಾಗಿ ಅಭಿವೃದ್ಧಿ ಪಡಿಸುವ ಯೋಜನೆ ಹಮ್ಮಿಕೊಳ್ಳಲಾಗಿದೆ. ಯೋಜನೆಗೆ ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ಶಂಕು ಸ್ಥಾಪನೆ ನೆರವೇರಿಸಿದ್ದಾರೆ. ಶಾಂತಿನಗರ ಬಿಎಂಟಿಸಿ ಬಸ್ ನಿಲ್ದಾಣದ ಎದುರು ಕಾರ್ಯಕ್ರಮ ನಡೆದಿದೆ. ಕಾರ್ಯಕ್ರಮದಲ್ಲಿ ಬಿಎಂಟಿಸಿ ಅಧ್ಯಕ್ಷ ನಂದೀಶ್ ರೆಡ್ಡಿ, ಶಾಸಕ ಉದಯ ಗರುಡಾಚಾರ್ ಭಾಗಿಯಾಗಿದ್ದಾರೆ.

ಶಂಕು ಸ್ಥಾಪನೆಯ ಬಳಿಕ ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ಮಾತನಾಡಿ ವಿಶ್ವದಲ್ಲಿಯೇ ಅತಿ ವೇಗವಾಗಿ ಬೆಳೆಯುತ್ತಿರುವ ನಗರ ಬೆಂಗಳೂರು. ಇದು ಆರ್ಥಿಕ, ಶಿಕ್ಷಣಕ್ಕೆ ರಾಜಧಾನಿ. ಬೆಂಗಳೂರು ಅಭಿವೃದ್ಧಿಗೆ ರಾಜ್ಯ ಸರ್ಕಾರ ಬದ್ಧವಾಗಿದೆ. ಬೆಂಗಳೂರು ಮಿಷನ್ 2021-22ಯೋಜನೆ ಪ್ರಾರಂಭಿಸುತ್ತೇವೆ. ನಗರದಲ್ಲಿ ರಾಜಕಾಲುವೆಯನ್ನು ನಗರದ ಸೌಂದರ್ಯಕ್ಕೆ ಪೂರಕವಾಗುವಂತೆ ಅಭಿವೃದ್ಧಿ ಮಾಡುತ್ತೇವೆ. ರಾಜಕಾಲುವೆ ಅಭಿವೃದ್ಧಿಯಿಂದ ಕೃತಕ ನೆರೆ ತಪ್ಪಿಸಬಹುದು ಎಂದು ಮಾತನಾಡಿದ್ದಾರೆ.

ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ

ಈ ಜಲಮಾರ್ಗದಿಂದ ರಾಜಕಾಲುವೆಯ ನೀರು ಶುದ್ಧೀಕರಣ ಮಾಡಿ ಬೇರ್ಪಡಿಸಲಾಗುವುದು. 175 ಕೋಟಿ ವೆಚ್ಚದ ಈ ಯೋಜನೆ 10 ತಿಂಗಳಲ್ಲಿ ಆಗಬೇಕಿದೆ. ಇದಕ್ಕೆ ಪೂರಕವಾಗಿ ಬೇಕಾದ ಹಣವನ್ನು ಒದಗಿಸುತ್ತೇವೆ. ಜನರ ಗಮನ ಸೆಳೆಯುವಂತೆ ಅಭಿವೃದ್ಧಿ ಆಗಬೇಕು. ಅದಕ್ಕೆ ಬೇಕಾದ ಎಲ್ಲಾ ವ್ಯವಸ್ಥೆಯನ್ನು ರಾಜ್ಯ ಸರ್ಕಾರ ಮಾಡುತ್ತದೆ. ಇನ್ನಿತರ ಯೋಜನೆಗೂ ಅಧಿಕಾರಿಗಳು ಗಮನ ನೀಡಬೇಕು. ಹಣಕಾಸಿನ ವ್ಯವಸ್ಥೆಯನ್ನು ನಾನು ಮಾಡುತ್ತೇನೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಮಾಚೇನಹಳ್ಳಿ ಕೈಗಾರಿಕೆಗಳ ಸಂಘದ ರಜತ ಮಹೋತ್ಸವ ಕಟ್ಟಡ: ಶಂಕುಸ್ಥಾಪನೆ ನೆರವೇರಿಸಿದ ಮುಖ್ಯಮಂತ್ರಿ​ ಯಡಿಯೂರಪ್ಪ

ಶಿವಮೊಗ್ಗ: ಒಳಾಂಗಣ ಕ್ರೀಡಾಂಗಣಕ್ಕೆ ಕೇಂದ್ರ ಸಚಿವ ಕಿರಣ್​ ರಿಜಿಜು ಶಂಕುಸ್ಥಾಪನೆ

Published On - 1:49 pm, Thu, 25 March 21