ಬೆಳ್ಳಂದೂರು ಜಮೀನು ಡಿನೋಟಿಫಿಕೇಶನ್ ಕೇಸ್‌: ಸಿಎಂ B.S. ಯಡಿಯೂರಪ್ಪಗೆ ಬಿಗ್‌ ರಿಲೀಫ್‌

| Updated By: ಸಾಧು ಶ್ರೀನಾಥ್​

Updated on: Jan 18, 2021 | 5:50 PM

ಬೆಳ್ಳಂದೂರು ಬಳಿಯ ಜಮೀನು ಡಿನೋಟಿಫಿಕೇಷನ್ ಕೇಸ್​ಗೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರಿಂದ ಬಿ ರಿಪೋರ್ಟ್ ಸಲ್ಲಿಕೆಯಾಗಿದೆ. ಯಡಿಯೂರಪ್ಪ ವಿರುದ್ಧ ಆರೋಪ ಸಾಬೀತಾಗಿಲ್ಲವೆಂದು ಲೋಕಾಯುಕ್ತ ಪೊಲೀಸರಿಂದ ವರದಿ ಸಲ್ಲಿಕೆಯಾಗಿದೆ.

ಬೆಳ್ಳಂದೂರು ಜಮೀನು ಡಿನೋಟಿಫಿಕೇಶನ್ ಕೇಸ್‌: ಸಿಎಂ B.S. ಯಡಿಯೂರಪ್ಪಗೆ  ಬಿಗ್‌ ರಿಲೀಫ್‌
ಸಿಎಂ ಬಿ.ಎಸ್.ಯಡಿಯೂರಪ್ಪ
Follow us on

ಬೆಂಗಳೂರು: ಡಿನೋಟಿಫಿಕೇಶನ್ ಕೇಸ್‌ನಲ್ಲಿ ರಾಜ್ಯದ ಮುಖ್ಯಮಂತ್ರಿ B.S. ಯಡಿಯೂರಪ್ಪಗೆ ಬಿಗ್‌ ರಿಲೀಫ್‌ ಸಿಕ್ಕಿದೆ.

ಬೆಳ್ಳಂದೂರು ಬಳಿಯ ಜಮೀನು ಡಿನೋಟಿಫಿಕೇಶನ್ ಕೇಸ್​ಗೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರಿಂದ ಬಿ ರಿಪೋರ್ಟ್ ಸಲ್ಲಿಕೆಯಾಗಿದೆ. ಯಡಿಯೂರಪ್ಪ ವಿರುದ್ಧ ಆರೋಪ ಸಾಬೀತಾಗಿಲ್ಲವೆಂದು ಲೋಕಾಯುಕ್ತ ಪೊಲೀಸರಿಂದ ವರದಿ ಸಲ್ಲಿಕೆಯಾಗಿದೆ. ಅಂದ ಹಾಗೆ, ಮುಖ್ಯಮಂತ್ರಿ ವಿರುದ್ಧ ಹೈಕೋರ್ಟ್‌ ಕಳೆದ ತಿಂಗಳಷ್ಟೇ ತನಿಖೆಗೆ ಗ್ರೀನ್‌ ಸಿಗ್ನಲ್ ನೀಡಿತ್ತು!

ವಾಸುದೇವರೆಡ್ಡಿ ಎಂಬುವವರು ಖಾಸಗಿ ದೂರು ಸಲ್ಲಿಸಿದ್ದರು. ಮಾಜಿ ಸಚಿವ ಆರ್.ವಿ.ದೇಶಪಾಂಡೆ, ಬಿಎಸ್‌ವೈ ವಿರುದ್ಧ ದೂರು ಸಲ್ಲಿಸಲಾಗಿತ್ತು. ಆದರೆ, R.V.ದೇಶಪಾಂಡೆ ವಿರುದ್ಧದ ಕೇಸ್‌ ಹೈಕೋರ್ಟ್‌ ರದ್ದುಪಡಿಸಿತ್ತು. ಈ ನಡುವೆ, ಪ್ರಕರಣದ ವಿಚಾರಣೆ ಫೆ. 2ಕ್ಕೆ ಮುಂದೂಡಿರುವ ನ್ಯಾಯಾಲಯ ಆಕ್ಷೇಪಣೆ ಸಲ್ಲಿಸಲು ಫೆಬ್ರವರಿವರೆಗೆ ದೂರುದಾರರಿಗೆ ಅವಕಾಶ ನೀಡಿದೆ.

ಡಿನೋಟಿಫಿಕೇಷನ್ ಕೇಸ್​ನಲ್ಲಿ ಸಿಎಂ B.S.ಯಡಿಯೂರಪ್ಪಗೆ ಸಂಕಷ್ಟ: ಪ್ರಕರಣ ರದ್ದುಪಡಿಸಲು ಹೈಕೋರ್ಟ್ ನಕಾರ