ಗ್ರಾಮ ರಾಜ್ಯದ ಮೂಲಕ ರಾಮ ರಾಜ್ಯವಾಗುವುದೇ ನಮ್ಮ ಗುರಿ: DC, CEOಗಳ ಸಭೆಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಮಾತು

ಜಿಲ್ಲಾಡಳಿತಗಳು ಗ್ರಾಮಗಳಿಗೆ ಹೆಚ್ಚು ಗಮನ ಕೊಡಬೇಕು. ಗ್ರಾಮ ರಾಜ್ಯದ ಮೂಲಕ ರಾಮರಾಜ್ಯವಾಗುವುದೇ ನಮ್ಮ ಗುರಿಯಾಗಿದೆ. ಗ್ರಾಮ, ತಾಲೂಕು, ಜಿಲ್ಲಾ ಮಟ್ಟದಲ್ಲಿ ಎಲ್ಲ ಸಮಸ್ಯೆ ಇತ್ಯರ್ಥ ಮಾಡಬೇಕೆ. ಆಗ ಜನರು ರಾಜಧಾನಿಗೆ ಬರುವುದು ಕಡಿಮೆ ಆಗುತ್ತದೆ. ತಳಮಟ್ಟದ ಆಡಳಿತ ಯಂತ್ರ ಕ್ರಿಯಾಶೀಲವಾಗಬೇಕು. ಇದನ್ನು ನೋಡಿಕೊಳ್ಳುವ ಜವಾಬ್ದಾರಿ ಡಿಸಿಗಳದ್ದು" ಎಂದು ಸಿಎಂ ಸೂಚನೆ ನೀಡಿದ್ದಾರೆ.

ಗ್ರಾಮ ರಾಜ್ಯದ ಮೂಲಕ ರಾಮ ರಾಜ್ಯವಾಗುವುದೇ ನಮ್ಮ ಗುರಿ: DC, CEOಗಳ ಸಭೆಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಮಾತು
ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ
Follow us
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​

Updated on: Jan 20, 2021 | 1:31 PM

ಬೆಂಗಳೂರು: ಕೊವಿಡ್‌ನಿಂದ ಅಭಿವೃದ್ಧಿ ಕುಂಠಿತವಾಗಿರುವ ಹಿನ್ನೆಲೆಯಲ್ಲಿ ಅಭಿವೃದ್ಧಿ ಚಟುವಟಿಕೆಗೆ ಚುರುಕು ಮುಟ್ಟಿಸಲು ಇಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಡಿಸಿ, ಸಿಇಒಗಳ ಜತೆ ಸಭೆ ನಡೆಸುತ್ತಿದ್ದಾರೆ. ಸಭೆಯಲ್ಲಿ ಡಿಸಿಎಂ ಗೋವಿಂದ ಕಾರಜೋಳ, ಸಚಿವರಾದ ಆರ್.ಅಶೋಕ್, ಬಸವರಾಜ ಬೊಮ್ಮಾಯಿ, ವಿ.ಸೋಮಣ್ಣ, ಸಿ.ಸಿ.ಪಾಟೀಲ್, ಪ್ರಭು ಚೌಹಾಣ್ ಭಾಗಿಯಾಗಿದ್ದಾರೆ.

ಕೊರೊನಾ ಹಿನ್ನೆಲೆಯಲ್ಲಿ ಈ ಸಭೆಯನ್ನು ನಡೆಸಲಾಗಿರಲಿಲ್ಲ. ಹೀಗಾಗಿ ಇಂದು ಇಡೀ ದಿವಸ ಎಲ್ಲಾ ಜಿಲ್ಲೆಗಳ ಡಿಸಿ, ಸಿಇಒಗಳ ಜತೆ ಸಿಎಂ ಚರ್ಚಿಸಲಿದ್ದಾರೆ. ಸಭೆಯಲ್ಲಿ ಮಾತನಾಡಿದ ಸಿಎಂ ಬಿಎಸ್​ವೈ “ಜಿಲ್ಲಾಡಳಿತಗಳು ಗ್ರಾಮಗಳಿಗೆ ಹೆಚ್ಚು ಗಮನ ಕೊಡಬೇಕು. ಗ್ರಾಮ ರಾಜ್ಯದ ಮೂಲಕ ರಾಮರಾಜ್ಯವಾಗುವುದೇ ನಮ್ಮ ಗುರಿಯಾಗಿದೆ. ಗ್ರಾಮ, ತಾಲೂಕು, ಜಿಲ್ಲಾ ಮಟ್ಟದಲ್ಲಿ ಎಲ್ಲ ಸಮಸ್ಯೆ ಇತ್ಯರ್ಥ ಮಾಡಬೇಕೆ. ಆಗ ಜನರು ರಾಜಧಾನಿಗೆ ಬರುವುದು ಕಡಿಮೆ ಆಗುತ್ತದೆ. ತಳಮಟ್ಟದ ಆಡಳಿತ ಯಂತ್ರ ಕ್ರಿಯಾಶೀಲವಾಗಬೇಕು. ಇದನ್ನು ನೋಡಿಕೊಳ್ಳುವ ಜವಾಬ್ದಾರಿ ಡಿಸಿಗಳದ್ದು” ಎಂದು ಸಿಎಂ ಸೂಚನೆ ನೀಡಿದ್ದಾರೆ.

ಅಭಿವೃದ್ಧಿ ಕಾರ್ಯಗಳನ್ನು ಚುರುಕುಗೊಳಿಸಿ ಜತೆಗೆ 10 ತಿಂಗಳಿಂದ ಬರ, ಪ್ರವಾಹ, ಕೊವಿಡ್ ಸಮಸ್ಯೆ ಇತ್ತು. ಸಂಕಷ್ಟದ ಸಮಯದಲ್ಲಿ ಎಲ್ಲವನ್ನೂ ನಿಭಾಯಿಸಿದ್ದೀರಿ. ಇದಕ್ಕೆಲ್ಲಾ ನಿಮಗೆ ಹೃದಯಪೂರ್ವಕ ಅಭಿನಂದನೆಗಳು ಎಂದು ಸಿಎಂ ಸಭೆಯಲ್ಲಿ ನೆರೆದಿದ್ದ ಡಿಸಿ, ಸಿಇಒಗಳಿಗೆ ಅಭಿನಂದನೆ ಸಲ್ಲಿಸಿದ್ರು. ಮಾತು ಮುಂದುವರೆಸುತ್ತ, ಆತ್ಮ ನಿರ್ಭರ್ ಭಾರತ ನಿರ್ಮಾಣ ಮಾಡುವಂತೆ ಪ್ರಧಾನಿಗಳ ಕರೆಯಂತೆ ನಾವು ಕಾರ್ಯ ನಿರ್ವಹಣೆ ಮಾಡಬೇಕು. ಅಭಿವೃದ್ಧಿ ಕಾರ್ಯಗಳನ್ನು ಚುರುಕುಗೊಳಿಸಬೇಕು.

ಸ್ಥಳದಲ್ಲಿಯೇ ಸಮಸ್ಯೆ ಬಗೆಹರಿಸಲು ಕ್ರಮವಹಿಸಬೇಕು. ಗ್ರಾಮಗಳ ಅಭಿವೃದ್ಧಿಯಿಂದಲೇ ನಾಡಿನ ಅಭಿವೃದ್ಧಿ ಸಾಧ್ಯ. ಕುಡಿಯುವ ನೀರು, ಜಮೀನು ಸಮಸ್ಯೆ, ಸ್ವಚ್ಛತೆ ಸೇರಿದಂತೆ ಮತ್ತಿತ್ತರ ಸಮಸ್ಯೆಗಳನ್ನು ಬಗೆಹರಿಸಬೇಕು. ಜನ ನೆಮ್ಮದಿಯಿಂದ ಜೀವನ ನಡೆಸಲು ಕ್ರಮವಹಿಸಬೇಕು. ಈಗಾಗಲೇ ಶಾಲೆ ಆರಂಭವಾಗಿದೆ ವಿದ್ಯಾರ್ಥಿಗಳು, ಪೋಷಕರ ಸುರಕ್ಷತೆ ಬಗ್ಗೆ ಎಚ್ಚರವಹಿಸಬೇಕು ಎಂದು ಹೇಳಿದ್ರು.

ಶಾಲೆಗಳ ಸ್ವಚ್ಛತೆ, ಕುಡಿಯುವ ನೀರು, ಶೌಚಾಲಯದ ಸಮಸ್ಯೆ ಉದ್ಬವಾಗದಂತೆ ಕ್ರಮ ವಹಿಸಿ. SC, ST, OBC ವಿದ್ಯಾರ್ಥಿಗಳ ನಿಲಯಗಳಲ್ಲಿ ಮಕ್ಕಳ ಆರೋಗ್ಯಕ್ಕೆ ಗಮನ ಹರಿಸಬೇಕು. ಉನ್ನತ ಮಟ್ಟದ ಶುಚಿಯಾದ ಆಹಾರ ಒದಗಿಸಲು ಕ್ರಮ ವಹಿಸಬೇಕು. ಕೋವಿಡ್ ಸಂದರ್ಭದಲ್ಲಿ ಶಾಲೆ ಬಿಟ್ಟ ಮಕ್ಕಳನ್ನು ಪುನಃ ಶಾಲೆಗೆ ಸೇರಿಸುವಂತಾಗಬೇಕು. ಶಾಲೆ ನಡೆಯದ ಕಾರಣ ಬಾಲ್ಯ ವಿವಾಹ ಪ್ರಕರಣ ಹೆಚ್ಚಿವೆ ಈ ಕುರಿತು ಎಚ್ಚರಿಕೆ ವಹಿಸಬೇಕು. ಇದರ ಜತೆಗೆ ಕೊರೊನಾ ಲಸಿಕೆ ಅಭಿಯಾನ ಯಶಸ್ವಿಗೊಳಿಸುವ ಹೊಣೆಗಾರಿಕೆ ನಿಮ್ಮದು ಎಂದು ಸಭೆಯಲ್ಲಿ ಸಿಎಂ ಯಡಿಯೂರಪ್ಪ ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ರು.

ಇನ್ನು ರಾಜ್ಯ ಸರ್ಕಾರದಿಂದ ಅನುದಾನ ಬಿಡುಗಡೆ ವಿಚಾರದ ಕುರಿತು ಮಾತನಾಡಿದ ಸಿಎಂ ಅನುದಾನ ವೆಚ್ಚ ಕುರಿತು ಅವಲೋಕನ ತಂತ್ರಾಂಶ ಬಿಡುಗಡೆ ಮಾಡಿದ್ರು. ಡಿಸಿಗಳ ಜತೆ ಸಭೆಯಲ್ಲಿ 39 ಇಲಾಖೆಗಳ 1800 ಯೋಜನೆಗಳ ವೆಚ್ಚದ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಆಡಳಿತದಲ್ಲಿ ಹೆಚ್ಚು ಪಾರದರ್ಶಕತೆ ತರಲು ಕ್ರಮಕ್ಕೆ ಆಗ್ರಹಿಸಿದ್ದಾರೆ. ಹಾಗೂ ಜಿಲ್ಲೆಯಲ್ಲಿ ನೀವೇ ಸರ್ಕಾರದ ಮುಖವಾಣಿ ಇದ್ದಂತೆ. ನೀವು ಆಸಕ್ತಿವಹಿಸಿ, ಜನಪರ ಕಾಳಜಿ ವಹಿಸಿ.

ಇದರಿಂದ ನಿಮಗೂ ಗೌರವ, ಸರ್ಕಾರಕ್ಕೂ ಗೌರವ. ಇದರಿಂದ ಸರ್ಕಾರದ ಆಶಯ ಕಾರ್ಯಕ್ರಮಗಳು ತಳ ಹಂತದ ನಾಗರಿಕನಿಗೂ ತಲುಪಿಸುವ ಜವಬ್ದಾರಿ ನಿಮ್ಮದು. ಕೊರೊನಾಗೂ ಮುಂಚೆ ನಿಮ್ಮಿಂದ ಹೆಚ್ಚು ನಿರೀಕ್ಷಿಸಲಾಗಿತ್ತು. ಅದಕ್ಕೆ ತಕ್ಕಂತೆ ಕಾರ್ಯನಿರ್ವಹಿಸಿ, ಸರ್ಕಾರಕ್ಕೆ ಒಳ್ಳೆ ಹೆಸರು ತನ್ನಿ. ಸರ್ಕಾರ ಸದಾ ನಿಮ್ಮ ಬೆಂಬಲಕ್ಕೆ ಇರುತ್ತದೆ ಎಂದು ಸಿಎಂ ಸಲಹೆ ನೀಡಿದ್ರು.

ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ