ಲಸಿಕೆಯೇ ನಮ್ಮ ಸುರಕ್ಷಾ ಕವಚ: 18 ವರ್ಷ ಮೇಲ್ಪಟ್ಟವರಿಗಾಗಿ ಲಸಿಕಾ ಅಭಿಯಾನಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಚಾಲನೆ

Karnataka Vaccination Drive: 2 ಕೋಟಿ ಲಸಿಕೆ ಖರೀದಿಗೆ ನಾವು ಹಣವನ್ನು ಕೊಟ್ಟಿದ್ದೇವೆ. 3.56 ಕೋಟಿ ಜನರಿಗೆ ಲಸಿಕೆ ನೀಡುವ ಉದ್ದೇಶವಿದೆ. ಲಸಿಕೆಗೆ ಸೇವಾ ಶುಲ್ಕ 100 ರೂ. ನಿಗದಿ ಮಾಡಿದ್ದೇವೆ. 100 ರೂ.ಗಿಂತ ಹೆಚ್ಚು ಹಣ ಪಡೆದರೆ ಕಠಿಣ ಕ್ರಮ ಕೈಗೊಳ್ಳುತ್ತೇವೆ - ಬೆಂಗಳೂರಿನಲ್ಲಿ ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿಕೆ

  • TV9 Web Team
  • Published On - 11:49 AM, 1 May 2021
ಲಸಿಕೆಯೇ ನಮ್ಮ ಸುರಕ್ಷಾ ಕವಚ: 18 ವರ್ಷ ಮೇಲ್ಪಟ್ಟವರಿಗಾಗಿ ಲಸಿಕಾ ಅಭಿಯಾನಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಚಾಲನೆ
ಲಸಿಕೆಯೇ ನಮ್ಮ ಸುರಕ್ಷಾ ಕವಚ: 18 ವರ್ಷ ಮೇಲ್ಪಟ್ಟವರಿಗಾಗಿ ಲಸಿಕಾ ಅಭಿಯಾನಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಚಾಲನೆ

ಬೆಂಗಳೂರು: ರಾಜ್ಯದಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಕೊರೊನಾ ಸೋಂಕಿನ ವಿರುದ್ಧ ನೀಡುವ ಲಸಿಕಾ ಅಭಿಯಾನಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸಾಂಕೇತಿಕ ಚಾಲನೆ ನೀಡಿದ್ದಾರೆ. ಬೆಂಗಳೂರಿನ ಶಿವಾಜಿನಗರದ ವಾಜಪೇಯಿ ಮೆಡಿಕಲ್ ಕಾಲೇಜಿನಲ್ಲಿ ಈ ಮಹತ್ವಪೂರ್ಣ ಲಸಿಕೆ ಅಭಿಯಾನಕ್ಕೆ ಚಾಲನೆ ನೀಡಿದ್ದಾರೆ. ಈ ವೇಳೆ ಮಾತನಾಡಿದ ಚಅವರು 4 ಲಕ್ಷ ಲಸಿಕೆಗಳನ್ನು 18 ವರ್ಷ ಮೇಲ್ಪಟ್ಟವರಿಗೆ ನೀಡುತ್ತೇವೆ. ಕರ್ನಾಟಕ ರಾಜ್ಯಕ್ಕೆ ಕೇಂದ್ರದಿಂದ 3 ಲಕ್ಷ ಲಸಿಕೆ ಬಂದಿದೆ. 1 ಲಕ್ಷ ಲಸಿಕೆ ನಮ್ಮಲ್ಲಿಯೇ ಸಂಗ್ರಹವಿದೆ. ಹೀಗಾಗಿ 4 ಲಕ್ಷ ಲಸಿಕೆ 18 ವರ್ಷ ಮೇಲ್ಪಟ್ಟವರಿಗೆ ನೀಡ್ತೇವೆ ಎಂದು ಸ್ಪಷ್ಟಪಡಿಸಿದರು.

ಇಂದಿನಿಂದಲೇ 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡುತ್ತೇವೆ. ಲಸಿಕೆ ನೀಡುವ ಅಭಿಯಾನ ನಿರಂತರವಾಗಿ ನಡೆಯುತ್ತದೆ. ಬಂದಿರುವ ಲಸಿಕೆಯನ್ನು ಮನೆಯಲ್ಲಿ ಇಟ್ಟುಕೊಳ್ಳಲು ಆಗಲ್ಲ. ಹೀಗಾಗಿ ಲಸಿಕೆಯನ್ನು ನೀಡುವ ಕೆಲಸ ಮಾಡುತ್ತಿದ್ದೇವೆ, 45 ವರ್ಷ ಮೇಲ್ಪಟ್ಟವರಿಗೆ ಕೊವಿಡ್ ಲಸಿಕೆ ನೀಡುತ್ತೇವೆ. ಎಲ್ಲ ಸಮಸ್ಯೆಗಳಿಗೂ ಪರಿಹಾರ ಕಂಡುಕೊಳ್ಳುತ್ತೇವೆ ಎಂದು ಸಿಎಂ ಯಡಿಯೂರಪ್ಪ ಭರವಸೆಯ ಮಾತುಗಳನ್ನಾಡಿದರು.

2 ಕೋಟಿ ಲಸಿಕೆ ಖರೀದಿಗೆ ನಾವು ಹಣವನ್ನು ಕೊಟ್ಟಿದ್ದೇವೆ. 3.56 ಕೋಟಿ ಜನರಿಗೆ ಲಸಿಕೆ ನೀಡುವ ಉದ್ದೇಶವಿದೆ. ಲಸಿಕೆಗೆ ಸೇವಾ ಶುಲ್ಕ 100 ರೂ. ನಿಗದಿ ಮಾಡಿದ್ದೇವೆ. 100 ರೂ.ಗಿಂತ ಹೆಚ್ಚು ಹಣ ಪಡೆದರೆ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದು ಬೆಂಗಳೂರಿನಲ್ಲಿ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ಫೇಸ್​ಬುಕ್​ ಮೂಲಕ ಸಿಎಂ ಯಡಿಯೂರಪ್ಪ ಮನವಿ:

ಕೊರೊನಾ ವಿರುದ್ಧ ಲಸಿಕೆಯೇ ನಮ್ಮ ಸುರಕ್ಷಾ ಕವಚ. ಆದ್ಯತೆಯ ಮೇರೆಗೆ ಕೊವಿಡ್ ಲಸಿಕೆ ನೀಡಲಾಗುತ್ತಿದೆ. ಅರ್ಹರು ಲಸಿಕೆ ಪಡೆಯಲು ನೋಂದಣಿ ಮಾಡಿಕೊಳ್ಳಿ. ತಮ್ಮ ಸರದಿ ಬಂದಾಗ ತಪ್ಪದೆ ಲಸಿಕೆಯನ್ನು ಪಡೆಯಿರಿ. ಸರ್ಕಾರದೊಂದಿಗೆ ಸಹಕರಿಸಿ, ಸುರಕ್ಷತಾ ನಿಯಮ ಪಾಲಿಸಿ ಎಂದು ಫೇಸ್​ಬುಕ್​ ಸಂದೇಶದ ಮೂಲಕ ಸಿಎಂ ಯಡಿಯೂರಪ್ಪ ಮನವಿ ಮಾಡಿದ್ದಾರೆ.

https://www.facebook.com/CMofKarnataka/posts/3907047266010375

(chief minister bs yediyurappa inaugurates Karnataka Vaccination Drive in bengaluru)

Also Read:
ದೇಶಾದ್ಯಂತ ಇಂದು ಶುರುವಾಗಿಲ್ಲ 3ನೇ ಹಂತದ ಕೊರೊನಾ ಲಸಿಕೆ ವಿತರಣೆ; ವ್ಯಾಕ್ಸಿನ್ ಇಲ್ಲ ಅಂದ್ರೂ ಕರ್ನಾಟಕದಲ್ಲಿ ಕ್ಯೂ ನಿಂತ ಜನ !